Connect with us

ರಾಷ್ಟ್ರೀಯ

Caste Reservation | ಭಾರತದಲ್ಲಿ ಜಾತಿ ಮೀಸಲಾತಿ ಯಾವಾಗ ಪ್ರಾರಂಭವಾಯಿತು ಗೊತ್ತೇ ..? ಇಲ್ಲಿದೆ ಇತಿಹಾಸ

Published

on



Ad Widget

Ad Widget

Ad Widget

Ad Widget

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೀಸಲಾತಿ ಹೆಚ್ಚಳ ಕುರಿತು ಇಂದಿನ ಅಧಿವೇಶನದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾತನಾಡಿದರು. ಆ ಸಂದರ್ಭ ಭಾರತಕ್ಕೆ ಮೀಸಲಾತಿ (Caste Reservation) ಪ್ರವೇಶ ಆದ ಇಡೀ ಚಿತ್ರಣವೇ ಹೊರಬಂತು.

Ad Widget

Ad Widget

Ad Widget

Ad Widget

ಸಿದ್ದರಾಮಯ್ಯನವರ ಮಾತುಗಳು ಹೀಗಿವೆ : ಪರಿಶಿಷ್ಟ ಜಾತಿಗಳಿಗೆ ಈ ಮೊದಲು 15% ಮತ್ತು ಪರಿಶಿಷ್ಟ ವರ್ಗಕ್ಕೆ 3% ಮೀಸಲಾತಿ ಇತ್ತು. 2011ರ ಜನಗಣತಿ ಪ್ರಕಾರ ಪರಿಶಿಷ್ಟ ಜಾತಿಗಳ ಜನಸಂಖ್ಯೆ 17.15% ಮತ್ತು ಪರಿಶಿಷ್ಟ ವರ್ಗದ ಜನಸಂಖ್ಯೆ 6.95%. ಎರಡೂ ಒಟ್ಟು ಸೇರಿಸಿ 24.10% ಜನಸಂಖ್ಯೆ ಇದೆ. 1950ರಿಂದ ಸಂವಿಧಾನ ಜಾರಿಗೆ ಬಂದ ದಿನದಿಂದ ಈ ವರ್ಗಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂದಿದೆ ಮತ್ತು ಜನಸಂಖ್ಯೆಗೆ ಅನುಗುಣವಾಗಿ ನೀಡಬೇಕು ಎಂಬುದನ್ನು ನಾವೆಲ್ಲ ಒಪ್ಪಿಕೊಂಡು ನೀಡುತ್ತಾ ಬಂದಿದ್ದೇವೆ. ಈ ಕಾರಣಕ್ಕಾಗಿಯೇ ನಾನು ಅವರ ಜನಸಂಖ್ಯೆಗೆ ಅನುಗುಣವಾಗಿ ಖರ್ಚು ಮಾಡಬೇಕು ಎಂದು ಎಸ್‌,ಸಿ,ಪಿ/ಟಿ,ಎಸ್‌,ಪಿ ಯೋಜನೆಯನ್ನು ಬೆಳಗಾವಿ ಅಧಿವೇಶನದಲ್ಲಿ ಕಾನೂನು ಜಾರಿಗೆ ತಂದಿದ್ದೆ. ಈ ಕಾನೂನು ತಂದ ನಂತರ ನಮ್ಮ ಸರ್ಕಾರದ ಕೊನೆಯ ಬಜೆಟ್‌ ನಲ್ಲಿ ರೂ.30,000 ಆಗಿತ್ತು, ಅಂದಿನ ಬಜೆಟ್‌ ಗಾತ್ರ 2.02 ಲಕ್ಷ ಕೋಟಿ. ಈಗ ಈ ಯೋಜನೆಗೆ ನೀಡಿರುವ ಅನುದಾನ 28.324 ಕೋಟಿ ಇದೆ. ಈಗಿನ ಬಜೆಟ್‌ ಗಾತ್ರ 2,65,720 ಕೋಟಿ. ಬಜೆಟ್‌ ಗಾತ್ರ ಹೆಚ್ಚಾದಂತೆ ಈ ಯೋಜನೆಗೆ ನೀಡುವ ಅನುದಾನವೂ ಹೆಚ್ಚಾಗಬೇಕಿತ್ತು. 2008ರಿಂದ 2013ರ ವೆರೆಗೆ ಎಸ್‌,ಸಿ,ಪಿ/ಟಿ,ಎಸ್‌,ಪಿ ಯೋಜನೆಗೆ ಖರ್ಚಾಗಿದ್ದ ಹಣ 22,000 ಕೋಟಿ. ಕಾನೂನನ್ನು ಜಾರಿಗೆ ತಂದ ಮೇಲೆ ಅದು 88,000 ಕೋಟಿಗೆ ಹೆಚ್ಚಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಸ್ವಾತಂತ್ರ್ಯ ನಂತರದಿಂದ ನಮ್ಮ ಸರ್ಕಾರದ ಕೊನೆಯ ಬಜೆಟ್‌ ವೇಳೆಗೆ ಇದ್ದ ಒಟ್ಟು ಸಾಲ 2,42,000 ಕೋಟಿ. ಈಗ ಇರುವ ಒಟ್ಟು ಸಾಲ 5,28,000 ಕೋಟಿ. ಕಳೆದ 5 ವರ್ಷಗಳಲ್ಲಿ ಸುಮಾರು 3 ಲಕ್ಷ ಕೋಟಿ ಸಾಲ ಮಾಡಲಾಗಿದೆ. ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಒಟ್ಟು ಸಾಲ 1,18,000 ಕೋಟಿ ಇತ್ತು. ನಮ್ಮ ಸರ್ಕಾರದ 5 ವರ್ಷಗಳಲ್ಲಿ 1,24,000 ಕೋಟಿ ಆಗಿತ್ತು.

Ad Widget

Ad Widget <> Ad Widget

ಮೀಸಲಾತಿ ಮತ್ತು ಸಾಮಾಜಿಕಕ್ಕೆ ದೇಶದಲ್ಲಿ ಸುಮಾರು 100 ವರ್ಷಗಳ ಇತಿಹಾಸ ಇದೆ. ಮೀಸಲಾತಿ ಎಂಬುದು ಬ್ರಿಟೀಷರ ಅವಧಿಯಲ್ಲೇ ಆರಂಭವಾಯಿತು. 1932ರ ದುಂಡು ಮೇಜಿನ ಸಮ್ಮೇಳನದಲ್ಲಿ ಆರಂಭವಾಯಿತು, ಕೊಲ್ಲಾಪುರದ ಸಾಹು ಮಹಾರಾಜ್‌ ಅವರು ತಮ್ಮ ಪ್ರಾಂತ್ಯದಲ್ಲಿ 1902ರಲ್ಲೇ ಮೀಸಲಾತಿ ಜಾರಿಗೆ ತಂದರು. 50% ಮೀಸಲಾತಿಯನ್ನು ಬ್ರಾಹ್ಮಣೇತರರಿಗೆ ಮೀಸಲಾತಿ ನೀಡಿದರು. ಮೈಸೂರು ಪ್ರಾಂತ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಮೇಲೆ ಬಹಳಷ್ಟು ಒತ್ತಡ ಬಂದಿದ್ದರಿಂದ 1918ರಲ್ಲಿ ಜಸ್ಟೀಸ್‌ ಮಿಲ್ಲರ್‌ ಅವರ ಆಯೋಗವನ್ನು ರಚನೆ ಮಾಡಿದರು. ಈ ಆಯೋಗ 1919ರಲ್ಲಿ ವರದಿ ನೀಡಿತು, ಇದನ್ನು ಜಾರಿ ಮಾಡದಂತೆ ಬಹಳ ಒತ್ತಡ ಬಂದಿತು, ಆದರೂ ಕೂಡ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು 1921ರಲ್ಲಿ ಮೀಸಲಾತಿ ಜಾರಿಗೆ ನೀಡಿದರು. ಬ್ರಾಹ್ಮಣರಿಗೆ 25% ಹಾಗೂ ಬ್ರಾಹ್ಮಣೇತರರಿಗೆ 75% ಮೀಸಲಾತಿ ನೀಡಿದರು. ತಮಿಳುನಾಡಿನಲ್ಲಿ ಜಸ್ಟೀಸ್‌ ಪಕ್ಷದವರು ದಲಿತರಿಗೆ ಹಿಂದುಳಿದವರಿಗೆ ಮೀಸಲಾತಿ ನೀಡಿದರು, ನಂತರ ಬಾಂಬೆ ಪ್ರೆಸಿಡೆಸ್ನಿ ಅವರು ಮೀಸಲಾತಿ ನೀಡಿದರು. ಮೀಸಲಾತಿ ಎಂಬುದು ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭವಾದ ಒಂದು ಸಾಮಾಜಿಕ ಕಾರ್ಯಕ್ರಮ. ಸಮಾಜದಲ್ಲಿ ಜಾತಿ ವ್ಯವಸ್ಥೆ ಮತ್ತು ಚತುರ್ವಣ ವ್ಯವಸ್ಥೆ ಕಾರಣಕ್ಕೆ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಅಸಮಾನತೆ ನಿರ್ಮಾಣವಾಗಿದೆ.



Ad Widget

ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು 1949 ನವೆಂಬರ್‌ 25ರಂದು ಸಂವಿಧಾನ ಸಭೆಯಲ್ಲಿ ಮಾಡಿದ ಭಾಷಣದಲ್ಲಿ “ಸಂವಿಧಾನ ರಚನೆ ಆಗಿದೆ, 1950 ಜನವರಿ 26ರಿಂದ ಜಾರಿಗೆ ಕೊಡಬೇಕು ಎಂಬ ತೀರ್ಮಾನವಾಗಿದೆ. ಇದರ ಜಾರಿಯಾದ ನಂತರ ನಾವು ವೈರುಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ, ಇಲ್ಲಿ ಆರ್ಥಿಕವಾದ, ಸಾಮಾಜಿಕವಾದ ಅಸಮಾನತೆ ಇದೆ. ರಾಜಕೀಯ ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂದು ನೀಡುತ್ತಿದ್ದೇವೆ ಆದರೆ ಇದು ಸಾಮಾಜಿಕ ಮತ್ತು ಆರ್ಥಿಕ ಪ್ರಭುತ್ವದಲ್ಲಿ ಇಲ್ಲ. ನಾವು ಈ ಅಸಮಾನತೆಯನ್ನು ತೆಗೆದುಹಾಕದೆ ಹೋದರೆ ನಾವು ಕಟ್ಟಿರುವ ರಾಜಕೀಯ ಪ್ರಜಾಪ್ರಭುತ್ವದ ಸೌಧವನ್ನು ಅಸಮಾನತೆಯಿಂದ ನರಳುವ ಜನರೇ ದ್ವಂಸ ಮಾಡುತ್ತಾರೆ” ಎಂದಿದ್ದರು. ಈ ಅಸಮಾನತೆಯನ್ನು ಹೋಗಲಾಡಿಸಬೇಕಾದರೆ ಮೀಸಲಾತಿ ಬೇಕು. ಮೀಸಲಾತಿ ಭಿಕ್ಷೆಯಲ್ಲ, ಇದು ಸಂವಿಧಾನಾತ್ಮಕ ಹಕ್ಕು.

Ad Widget

Ad Widget

1945ರಲ್ಲಿ ಸ್ಥಾಪನೆಯಾದ ವಿಶ್ವಸಂಸ್ಥೆಯಲ್ಲಿ 1948ರಲ್ಲಿ ಮಾನವ ಹಕ್ಕುಗಳ ಘೋಷಣೆ ಆಯಿತು. ಮೀಸಲಾತಿ ಎಂಬುದು ಮಾನವ ಹಕ್ಕುಗಳ ರಕ್ಷಣೆ ಮಾಡಿದಂತೆ. ಮೀಸಲಾತಿ ಮೂಲಕವೇ ಅಸಮಾನತೆ, ಬಡತನ ಇವೆಲ್ಲವೂ ನಿರ್ಮೂಲನೆ ಆಗುತ್ತದೆ ಎಂದಲ್ಲ, ಆದರೆ ಇದೊಂದು ಮಾರ್ಗ. ಜಗತ್ತಿನ ಅನೇಕ ರಾಷ್ಟ್ರಗಳಲ್ಲಿ ಇಂಥಾ ವ್ಯವಸ್ಥೆ ಇದೆ. ನಮ್ಮಲ್ಲಿ ಸಂವಿಧಾನದ ಮೂಲಕ ರಾಜಕೀಯವಾಗಿ, ಶೈಕ್ಷಣಿಕವಾಗಿ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಿದ್ದೇವೆ.

ನಮ್ಮ ದೇಶದಲ್ಲಿ 49.5% ಮೀಸಲಾತಿ ಇದೆ. ಇದರಲ್ಲಿ 22.5% ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ, 27% ಹಿಂದುಳಿದ ಜಾತಿಗಳಿಗೆ ಮೀಸಲಾತಿ ಇದೆ. 2019ರಲ್ಲಿ ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ 10% ಮೀಸಲಾತಿಯನ್ನು ನೀಡಲಾಗಿದೆ. ಇದನ್ನು ಕೇಂದ್ರ ಸರ್ಕಾರ ಬಹಳಾ ತರಾತುರಿಯಲ್ಲಿ ಮಾಡಿದೆ. ಇದಕ್ಕೆ ಯಾವ ಯಾವ ಜಾತಿಗಳು ಸೇರುತ್ತವೆ ಎಂಬ ಬಗ್ಗೆ ನೋಟಿಷಿಕೇಷನ್‌ ಬಂದಿಲ್ಲ. ಈ ಮೀಸಲಾತಿ ಸಂವಿಧಾನದ 15(4), 16(4) ಪರಿಚ್ಛೇದಗಳಿಗೆ ವಿರುದ್ಧವಾಗಿದೆ. ಈ ಎರಡೂ ಆರ್ಟಿಕಲ್‌ ನಲ್ಲಿ ಯಾರು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರಿರುತ್ತಾರೆ ಅವರಿಗೆ ಮೀಸಲಾತಿ ನೀಡಬೇಕು ಎಂದು ಹೇಳಿದೆ, ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕು ಎಂದು ಹೇಳಿಲ್ಲ.


ಶಿನೋ ಕಮಿಷನ್‌ ನ ವರದಿ ಪ್ರಕಾರ 48.4% ಬಡವರು ಎಸ್‌,ಟಿ ಯಲ್ಲಿ, 38.7% ಎಸ್‌,ಸಿ ಯಲ್ಲಿ ಮತ್ತು 33% ಹಿಂದುಳಿದ ಜಾತಿಗಳಲ್ಲಿ ಬಡವರಿದ್ದಾರೆ. ಇದಕ್ಕೆ ಹೋಲಿಕೆ ಮಾಡಿದರೆ ಸಾಮಾನ್ಯ ವರ್ಗದಲ್ಲಿರುವ ಬಡವರ ಪ್ರಮಾಣ ಯಾವ ಲೆಕ್ಕವೂ ಅಲ್ಲ.

ಸಂವಿಧಾನವು ಎಲ್ಲರೂ ಕಾನೂನಿನ ಮುಂದೆ ಸಮಾನರು ಎಂದು ಹೇಳುತ್ತದೆ, ಆದರೆ ಮೀಸಲಾತಿ ಮೂಲಕ ಸಮಾಜದ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯನ್ನು ಹೋಗಲಾಡಿಸಲು ಪ್ರಯತ್ನ ಮಾಡಬೇಕಿದೆ. 1956ರಲ್ಲಿ ಜನಸಂಖ್ಯೆಗೆ ಅನುಗುಣವಾಗಿ ನೀಡಬೇಕು ಎಂದು ತೀರ್ಮಾನಿಸಲಾಯಿತು. ರಾಜ್ಯದಲ್ಲಿ ಮೀಸಲಾತಿ ಈಗ 50% ಇದೆ. 1992ರಲ್ಲಿ ಇಂದಿರಾ ಸಹಾನಿ ಪ್ರಕರಣದಲ್ಲಿ 9 ಮಂದಿ ನ್ಯಾಯಮೂರ್ತಿಗಳ ಪೀಠವು ಮಂಡಲ್‌ ಕಮಿಷನ್‌ ವರದಿಯನ್ನು ಒಪ್ಪಿಕೊಳ್ಳುವ ಜೊತೆಗೆ ಕೆಲವು ನಿಬಂಧನೆಗಳನ್ನು ಹಾಕಿದ್ದಾರೆ. ಸಂವಿಧಾನದಲ್ಲಿ ಮೀಸಲಾತಿ ಪ್ರಮಾಣ 50% ಮೀರಬಾರದು ಎಂದು ಹೇಳಿಲ್ಲವಾದರೂ ಸುಪ್ರೀಂ ಕೋರ್ಟ್‌ ಸ್ವಯಂಪ್ರೇರಣೆಯಿಂದ ಇದಕ್ಕೆ ಮಿತಿ ವಿಧಿಸಿದೆ.

ಈಗ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ವಿಧಿಸಿರುವ ಮಿತಿಗಿಂತ 6% ಹೆಚ್ಚು ಮೀಸಲಾತಿಯನ್ನು ನೀಡುತ್ತಿದೆ. ಇದರ ಜೊತೆ ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದ ಜನರಿಗೆ 10% ಮೀಸಲಾತಿ ನೀಡಬೇಕಾಗಿದೆ. ಇದರಿಂದ ಒಟ್ಟು ಮೀಸಲಾತಿ ಪ್ರಮಾಣ ಎಷ್ಟಾಗುತ್ತೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ. 1994ರಲ್ಲಿ ವೀರಪ್ಪ ಮೋಯಿಲಿ ಅವರು ಮುಖ್ಯಮಂತ್ರಿಯಾಗಿದ್ದಾಗ 73% ಮೀಸಲಾತಿಯನ್ನು ನೀಡಿದ್ದರು. ಇದನ್ನು ಸುಪ್ರೀಂ ಕೋರ್ಟ್‌ ನಲ್ಲಿ ಚಾಲೆಂಜ್‌ ಮಾಡಿದಾಗ ಕೋರ್ಟ್‌ ಈ ಮೀಸಲಾತಿಯನ್ನು ರದ್ದು ಮಾಡಿತು.

ಪರಿಶಿಷ್ಟ ವರ್ಗಕ್ಕೆ ಜನಸಂಖ್ಯೆಗೆ ಅನುಗುಣವಾಗಿ 7.5% ಮೀಸಲಾತಿ ನೀಡಬೇಕು ಮತ್ತು ಪರಿಶಿಷ್ಟ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ 17.15% ಮೀಸಲಾತಿ ನೀಡಬೇಕು ಎಂಬ ಬೇಡಿಕೆಯಿತ್ತು. 2019ರ ಜೂನ್‌ ತಿಂಗಳಲ್ಲಿ ನಮ್ಮ ಪಕ್ಷದ ಪ್ರಿಯಾಂಕ್‌ ಖರ್ಗೆ ಅವರು ಸಮಾಜ ಕಲ್ಯಾಣ ಸಚಿವರಾಗಿದ್ದಾಗ ನಾಗಮೋಹನ್‌ ದಾಸ್‌ ಅವರ ಅಧ್ಯಕ್ಷತೆಯಲ್ಲಿ ಒಂದು ಆಯೋಗ ರಚನೆ ಆಯಿತು, ಈ ಆಯೋಗ 2020ರ ಜುಲೈ ನಲ್ಲಿ ವರದಿ ನೀಡಿತು. ಈ ಸಮಿತಿಯ ಶಿಫಾರಸು ಏನೆಂದರೆ ಎಸ್‌,ಸಿ ಗಳಿಗೆ 15ರಿಂದ 17% ಗೆ ಹಾಗೂ ಎಸ್‌,ಸಿ ಗಳಿಗೆ 3ರಿಂದ 7% ಗೆ ಮೀಸಲಾತಿ ಹೆಚ್ಚಳ ಮಾಡಬೇಕು ಎಂದಿದೆ. ಇದರಿಂದ ಒಟ್ಟು ಮೀಸಲಾತಿ 56% ಆಯಿತು. ಸುಪ್ರೀಂ ಕೋರ್ಟ್‌ ವಿಧಿಸಿರುವ ಮಿತಿಯನ್ನು ದಾಟಿ ಮೀಸಲಾತಿ ನೀಡಲೇಬೇಕಾಗಿದೆ. ಈ ವರದಿ ಬಂದ ಕೂಡಲೇ ಮಾಡಿಲ್ಲ ಎರಡು ವರ್ಷ ಮೂರು ತಿಂಗಳ ನಂತರ ನಮ್ಮ ಪಕ್ಷದ ಶಾಸಕರು ಸದನದಲ್ಲಿ ಗಲಾಲೆ ಮಾಡಿದರು, ವಾಲ್ಮೀಕಿ ಸಮಾಜದ ಸ್ವಾಮೀಜಿಗಳು 257 ದಿನಗಳ ಕಾಲ ಧರಣಿ ಮಾಡಿದರು, ಆಗ ಅನಿವಾರ್ಯವಾಗಿ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಬೇಕಾಯಿತು. ಸರ್ಕಾರ ಯಾಕೆ ಇಷ್ಟು ವಿಳಂಬ ಮಾಡಿದ್ದು? ಧರಣಿ ಸ್ಥಳಕ್ಕೆ ನಾನು ಮೂರು ಬಾರಿ ಹೋಗಿದ್ದೆ, ಆಗ ಧರಣಿ ಕೈಬಿಡುವಂತೆ ಸ್ವಾಮೀಜಿಯವರ ಮನವೊಲಿಸುವ ಪ್ರಯತ್ನ ಮಾಡಿದ್ದೆ, ಆದರೆ ಶ್ರೀಗಳು ನನ್ನ ಮನವಿಯನ್ನು ಪುರಸ್ಕರಿಸಿಲ್ಲ.

ನಾಗಮೋಹನ್‌ ದಾಸ್‌ ಅವರ ಸಮಿತಿ ನೀಡಿರುವ ವರದಿಯ ಮೇಲೆ ನ್ಯಾ. ಸುಭಾಷ್‌ ಹಾಡಿ ಅವರ ಸಮಿತಿ ರಚನೆ ಮಾಡಿದರು. ಈ ಸಮಿತಿ ರಚನೆಗೆ ಕಾರಣ ನಾಗಮೋಹನ್‌ ದಾಸ್‌ ಅವರ ಸಮಿತಿ ನೀಡಿರುವ ವರದಿ ಅನುಷ್ಠಾನ ಮಾಡುವುದಕ್ಕೆ. ನಂತರ ಬಸವರಾಜ ಬೊಮ್ಮಾಯಿ, ಮಾಧುಸ್ವಾಮಿ, ಶ್ರೀರಾಮುಲು ಅವರನ್ನು ಒಳಗೊಂಡ ಸಂಪುಟ ಉಪಸಮಿತಿಯನ್ನು ರಚನೆ ಮಾಡಲಾಯಿತು. ಶ್ರೀರಾಮುಲು ಅವರು ತಾವು ಅಧಿಕಾರಕ್ಕೆ ಬಂದ 24 ಗಂಟೆಗಳ ಒಳಗೆ ಮೀಸಲಾತಿ ಹೆಚ್ಚಳ ಮಾಡುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದಿದ್ದರು. ಎರಡು ವರ್ಷ ಮೂರು ತಿಂಗಳು ಈ ಸರ್ಕಾರ ನಾಗಮೋಹನ್‌ ದಾಸ್‌ ಅವರ ಸಮಿತಿಯ ವರದಿಯನ್ನು ಇಟ್ಟುಕೊಂಡು ನಿದ್ರಾವಸ್ಥೆಯಲ್ಲಿ ಇತ್ತು.

ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿಲ್ಲ. ಬಿಜೆಪಿ ಯಾವಾಗಲಾದರೂ ಮೀಸಲಾತಿ ಬೇಕು ಎಂದು ಹೋರಾಟ ಮಾಡಿದೆ? ಮಂಡಲ್‌ ಕಮಿಷನ್‌ ವರದಿಯನ್ನು ವಿರೋಧ ಮಾಡಿದವರು ಯಾರು? ರಾಜೀವ್‌ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಸಂವಿಧಾನಕ್ಕೆ 73 ಹಾಗೂ 74ನೇ ತಿದ್ದುಪಡಿಯನ್ನು ತಂದು ಹಿಂದುಳಿದವರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರಿಗೆ ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ಮೀಸಲಾತಿ ನೀಡಿದಾಗ ಅದನ್ನು ವಿರೋಧ ಮಾಡಿದವರು ಯಾರು? ಬಿಜೆಪಿಯ ಉಪಾಧ್ಯಕ್ಷರು, ರಾಜ್ಯಸಭಾ ಸದಸ್ಯರು ಆಗಿದ್ದ ರಾಮಾಜೋಯಿಸ್‌ ಅವರು. ಸುಪ್ರೀಂಕೋರ್ಟ್‌ ನಲ್ಲಿ ಅವರು ಮನವಿ ಮಾಡಿದ ಹೊರತಾಗಿಯೂ ಕೋರ್ಟ್‌ ಅವರ ಮನವಿಯನ್ನು ತಿರಸ್ಕಾರ ಮಾಡಿತು, ಸ್ವತಂ ರಾಮಾಜೋಯಿಸ್‌ ಅವರೇ ಕೋರ್ಟ್‌ ನಲ್ಲಿ ವಾದ ಮಾಡಿದ್ದರು. ಉನ್ನತ ಶಿಕ್ಷಣದಲ್ಲಿ ಮೀಸಲಾತಿ ನೀಡಿದವರು ಅರ್ಜುನ್‌ ಸಿಂಗ್‌ ಅವರು, ಆಗಲೂ ವಿರೋಧ ಮಾಡಿದವರು ಯಾರು ಎಂಬುದು ನಮಗೆಲ್ಲ ಗೊತ್ತಿದೆ.

ಪರಿಶಿಷ್ಟ ಜಾತಿ ಮತ್ತು ವರ್ಗಗಳ ಜನರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು ಎಂಬುದಕ್ಕೆ ನಾವು ಬದ್ಧರಾಗಿದ್ದೇವೆ. ಇದೇ ಕಾರಣಕ್ಕೆ ನಾವು ನಾಗಮೋಹನ್‌ ದಾಸ್‌ ಅವರ ಸಮಿತಿ ರಚನೆ ಮಾಡಿದ್ದು. ಈ ವರ್ಗದ ಜನರಿಗೆ ಮೀಸಲಾತಿ ನೀಡಲೇಬೇಕು ಆದರೆ ಇದು ಸುಪ್ರೀಂ ಕೋರ್ಟ್‌ ನ ತೀರ್ಪಿನ ಉಲ್ಲಂಘನೆಯಾಗುತ್ತದೆ. ಮೀಸಲಾತಿ ಹೆಚ್ಚಳ ಊರ್ಜಿತವಾಗಬೇಕಾದರೆ ಸಂಸತ್ತಿನಲ್ಲಿ ಸಂವಿಧಾನ ತಿದ್ದುಪಡಿ ಆಗಬೇಕು. ಸಂವಿಧಾನದ 9ನೇ ಶೇಡ್ಯೂಲ್‌ ಗೆ ಸೇರಿಸಬೇಕು. ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮಾಡಿದ ಕೂಡಲೇ, ಕಾನೂನು ತಂದ ಕೂಡಲೇ ಇದು ಸಂವಿಧಾನಬದ್ಧವಾಗಲ್ಲ.

ನಮ್ಮ ಡಬ್ಬಲ್‌ ಇಂಜಿನ್‌ ಸರ್ಕಾರ ಎಂದು ಹೇಳುತ್ತೀರ, ನಾವು ನಿಮ್ಮೊಂದಿಗೆ ದೆಹಲಿಗೆ ಬರುತ್ತೇವೆ, ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರಿಸುವಂತೆ ಒತ್ತಾಯ ಮಾಡೋಣ.

ರಾಜ್ಯಸಭೆಯಲ್ಲಿ ಕೇಂದ್ರದ ರಾಜ್ಯ ಖಾತೆಯ ಸಮಾಜ ಕಲ್ಯಾಣ ಸಚಿವರಾದ ಪ್ರತಿಮಾ ಪೌಲಿಕ್‌ ಅವರು 7/12/2022ರಲ್ಲಿ ಉತ್ತರ ನೀಡುವಾಗ, ಮೀಸಲಾತಿಯನ್ನು 50% ಗಿಂತ ಹೆಚ್ಚಿಗೆ ಮಾಡುವ ಯಾವುದೇ ಪ್ರಸ್ತಾವ ನಮ್ಮ ಮುಂದೆ ಇಲ್ಲ ಎಂದು ಹೇಳಿದ್ದಾರೆ. ಅಂದರೆ ಸರ್ಕಾರ ಇವತ್ತಿನವರೆಗೆ ಬಿಲ್‌ ಅನ್ನೇ ಕೇಂದ್ರ ಸರ್ಕಾರಕ್ಕೆ ಕಳಿಸಿಲ್ಲ. ಈ ಸರ್ಕಾರ ಚುನಾವಣೆ ಬಂದಿರುವುದರಿಂದ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ.

ಲೋಕಸಭಾ ಸದಸ್ಯರಾದ ಎಸ್‌, ಮುನಿಸ್ವಾಮಿ ಪ್ರಶ್ನೆಗೆ 20/12/2022ರಲ್ಲಿ ಉತ್ತರ ನೀಡಿರುವ ಎ.ನಾರಾಯಣಸ್ವಾಮಿ ಅವರು, ಮೀಸಲಾತಿ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾಪಗಳಿಲ್ಲ ಎಂದಿದ್ದಾರೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ನಾವು ಮೀಸಲಾತಿ ಹೆಚ್ಚಳ ಮಾಡಿದ್ದೇವೆ, ನೀವು ಸಂವಿಧಾನಕ್ಕೆ ತಿದ್ದುಪಡಿ ಮಾಡಿ ಎಂದು ಒತ್ತಡ ಹಾಕಿದೆಯಾ? ರಾಜ್ಯದಿಂದ ಯಾರಾದರೂ ಕೇಂದ್ರ ಸಮಾಜ ಕಲ್ಯಾಣ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರ? ಕೇಂದ್ರಕ್ಕೆ ಈ ಬಗ್ಗೆ ಮನವಿ ಮಾಡಿದ್ದಾರ?

ಮೀಸಲಾತಿ ಹೆಚ್ಚಳಕ್ಕೆ ಕಾಂಗ್ರೆಸ್‌ ಪಕ್ಷದ ಪೂರ್ಣ ಬೆಂಬಲ ಇದೆ. ನೀವು ಸರ್ವಪಕ್ಷ ಸಭೆ ಕರೆದು ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗುವುದಾದರೆ ನಾವು ಸಿದ್ಧರಿದ್ದೇವೆ. ಮೀಸಲಾತಿ ಹೆಚ್ಚಳ ಆಗಬೇಕು ಎಂಬುದು ನಮ್ಮ ಕಳಕಳಿ. ನಾವು ಮೀಸಲಾತಿ ಪರವಾಗಿದ್ದೇವೆ ಎಂಬುದನ್ನು ಮತ್ತೊಮ್ಮೆ ಹೇಳಲು ಬಯಸುತ್ತೇನೆ.

ಈಗ ಸಂಸತ್‌ ಅಧಿವೇಶನ ನಡೆಯುತ್ತಿತ್ತು, ಅಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಪಾಸ್‌ ಮಾಡಿಕೊಳ್ಳದೆ ಹೋದರೆ ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನಾತ್ಮಕ ರಕ್ಷಣೆ ಸಿಗುವುದಿಲ್ಲ. ಕೇಂದ್ರ ಸರ್ಕಾರ ಇದಕ್ಕೆ ಒಪ್ಪದೇ ಹೋದರೆ ಸರ್ವ ಪಕ್ಷಗಳ ನಿಯೋಗವನ್ನು ತೆಗೆದುಕೊಂಡು ಹೋಗಿ ನಾವು ನಿಮ್ಮೊಂದಿಗೆ ಬರುತ್ತೇವೆ. ಈ ಅಧಿವೇಶನದ ಸಮಯದಲ್ಲೇ ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರಿಸುವ ಕೆಲಸ ಆಗಲಿ.

Ad Widget
Click to comment

Leave a Reply

ರಾಷ್ಟ್ರೀಯ

Cancer-ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಶೇ.70ರಷ್ಟು ಇಳಿಕೆ ಸಾಧ್ಯತೆ..! MRP ಮೇಲಿನ ಲಾಭಾಂಶ ಮಿತಿಗೆ ಕೇಂದ್ರ ಚಿಂತನೆ

Published

on



Ad Widget

Ad Widget

Ad Widget

Ad Widget

ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Ad Widget

Ad Widget

Ad Widget alt="Ad Widget"/>

Ad Widget

ಬ್ರಾಂಡೆಡ್, ಜೆನೆರಿಕ್ ಔಷಧಿಗಳಿಗೂ ಅನ್ವಯ
ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ (ನಾನ್‌-ಶೆಡ್ಯೂಲ್ಡ್) ಕ್ಯಾನ್ಸರ್ ಔಷಧಿಗಳಿಗೆ ಈ ಮಿತಿಯನ್ನು ಅನ್ವಯಿಸುವ ಪ್ರಸ್ತಾವನೆ ಸರಕಾರದ ಮುಂದಿದೆ. ಬ್ರಾಂಡೆಡ್, ಜೆನೆರಿಕ್, ದೇಶೀಯವಾಗಿ ತಯಾರಿಸಿದ ಹಾಗೂ ಆಮದು ಮಾಡಿಕೊಳ್ಳುವ ಕ್ಯಾನ್ಸರ್ ಔಷಧಿಗಳೂ ಇದರ ವ್ಯಾಪ್ತಿಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget <> Ad Widget

ಜೀವರಕ್ಷಕ ಔಷಧಿಗಳ ಬೆಲೆಯನ್ನು ಕಡಿಮೆ ಮಾಡಿ, ಸಾಮಾನ್ಯ ಜನರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ. ಪ್ರಸ್ತಾವಿತ ಬೆಲೆ ನಿಯಂತ್ರಣ ಜಾರಿಯಾದರೆ ಕ್ಯಾನ್ಸರ್ ಔಷಧಿಗಳ ಗರಿಷ್ಠ ಮಾರಾಟ ದರದಲ್ಲಿ ಶೇ.70ರಷ್ಟು ಇಳಿಕೆಯಾಗಬಹುದು ಎಂಬ ಅಂದಾಜು ವ್ಯಕ್ತವಾಗಿದೆ. ಇದರಿಂದ ಗ್ರಾಹಕರಿಗೆ ಒಟ್ಟಾರೆ ಸುಮಾರು ₹2,500 ಕೋಟಿ ಉಳಿತಾಯವಾಗುವ ನಿರೀಕ್ಷೆಯಿದೆ.



Ad Widget

ಅಂತಿಮ ನಿರ್ಧಾರದ ನಿರೀಕ್ಷೆ
ಕ್ಯಾನ್ಸರ್ ಔಷಧಿಗಳ ಮಾರಾಟದ ಮೇಲಿನ ಲಾಭಾಂಶಕ್ಕೆ ಮಿತಿ ವಿಧಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಕುರಿತು ಪರಿಶೀಲನೆ ನಡೆಸಲು ಕ್ಯಾನ್ಸರ್ ತಜ್ಞರನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

Ad Widget

Ad Widget

ಮುಂದಿನ ದಿನಗಳಲ್ಲಿ ಈ ಬೆಲೆ ನಿಯಂತ್ರಣ ಕ್ರಮವನ್ನು ಇನ್ನಷ್ಟು ಕ್ಯಾನ್ಸರ್ ಔಷಧಿಗಳು ಹಾಗೂ ಇತರ ಔಷಧಿಗಳಿಗೂ ವಿಸ್ತರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಸ್ತಾವನೆ ಜಾರಿಯಾದರೆ ಕ್ಯಾನ್ಸರ್ ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಮತ್ತು ರೋಗಿಗಳ ಆರ್ಥಿಕ ಹೊರೆಯನ್ನು ತಗ್ಗಿಸಲು ನೆರವಾಗಬಹುದು. ಆದರೆ ಬೆಲೆ ಇಳಿಕೆಯ ಪ್ರಮಾಣ ಹಾಗೂ ಕ್ರಮ ಜಾರಿಯಾಗುವ ದಿನಾಂಕದ ಕುರಿತು ಅಧಿಕೃತ ಘೋಷಣೆ ಹೊರಬಿದ್ದ ಬಳಿಕವೇ ಸ್ಪಷ್ಟ ಚಿತ್ರಣ ದೊರೆಯಲಿದೆ.

Ad Widget
Continue Reading

ಕ್ರೀಡೆ

India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ

Published

on



Ad Widget

Ad Widget

Ad Widget

Ad Widget

ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

Ad Widget

Ad Widget

ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

Ad Widget alt="Ad Widget"/>

Ad Widget

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

Ad Widget

Ad Widget <> Ad Widget

ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.



Ad Widget

ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.

ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.

ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.

ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.

ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.

ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.

Ad Widget
Continue Reading

ರಾಷ್ಟ್ರೀಯ

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ

Published

on



Ad Widget

Ad Widget

Ad Widget

Ad Widget

ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್‌ ಬಹಿರಂಗಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾ‌ರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.

Ad Widget

Ad Widget

Ad Widget alt="Ad Widget"/>

Ad Widget

‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Ad Widget

Ad Widget <> Ad Widget

2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾ‌ರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.



Ad Widget

ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Ad Widget

Ad Widget

ಥಾಮ್ಪನ್ ಹಾಗೂ ಜ್ಞಾನೇಶ್ ಕುಮಾರ್ ಇಬ್ಬರೂ ಕೇರಳಂ ಕೇಡರ್‌ನ ಐಎಎಸ್‌ ಅಧಿಕಾರಿಗಳು. ಥಾಮ್ರನ್ 1980ರ ಹಾಗೂ ಕುಮಾರ್ 1988ರ ಬ್ಯಾಚ್‌ನ ಅಧಿಕಾರಿ. ಕೇರಳಂನ ಲೋಕೋಪಯೋಗಿ ಕಾರ್ಯದರ್ಶಿಯಾಗಿಯೂ ಜ್ಞಾನೇಶ್ ಕುಮಾರ್ ಕಾರ್ಯನಿರ್ವಹಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading