ಮಂಗಳೂರು
Accident : ಮಂಗಳೂರು : ಕಾರು ಢಿಕ್ಕಿ ಹೊಡೆದು ಶಾಲೆ ಮುಗಿಸಿ ಮನೆಗೆ ತೆರಳಲು ಬಸ್ಸಿಗೆ ಕಾಯುತ್ತಿದ್ದ ಬಾಲಕ ಮೃತ್ಯು – ಟ್ರಯಲ್ ನೋಡಲು ಸ್ನೇಹಿತನ ಕಾರು ಚಲಾಯಿಸುತ್ತಿದ್ದ ವೇಳೆ ಅಪಘಾತ.!
ಉಳ್ಳಾಲ : ಡಿಸೆಂಬರ್ 27: ಶಾಲೆ ಮುಗಿದ ಬಳಿಕ ಮನೆಗೆ ತೆರಳಲು ಬಸ್ ಗೆ ಕಾಯುತ್ತಿದ್ದ 14 ರ ಹರೆಯದ ವಿದ್ಯಾರ್ಥಿಗೆ ಮಾರುತಿ ಬ್ರಿಝಾ ಕಾರೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನಪ್ಪಿದ್ದ ಘಟನೆ ಇಂದು ಸಂಜೆ ಉಳ್ಳಾಲದಲ್ಲಿ ಸಂಭವಿಸಿದೆ. ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ. ಈತ ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿ.
ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾರು ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಅವರು ಆರೋಪಿಸಿದ್ದಾರೆ. ಬಸ್ಸೊಂದನ್ನು ಓವರ್ ಟೆಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದ್ದಾಗಿ ಆಕ್ರೋಶ ಭರಿತ ಸಾರ್ವಜನಿಕರು ಮಾಧ್ಯಮಗಳಿಗೆ ತಿಳಿಸಿದ್ದಾರೆ
ಸ್ಥಳೀಯರ ಆರೋಪಕ್ಕೆ ಪುಷ್ಟಿ ನೀಡುವಂತೆ ಬಾಲಕನಿಗೆ ಢಿಕ್ಕಿ ಹೊಡೆದ ಕಾರು ನಂತರ ಸಮೀಪದಲ್ಲೇ ಇದ್ದ ರಿಕ್ಷಾಗೂ ಢಿಕ್ಕಿ ಹೊಡೆದಿದೆ. ಕಾರು ಮಾಲಕ ಟ್ರಯಲ್ ನೋಡಲು ಇನ್ನೋರ್ವ ಗೆಳೆಯನಿಗೆ ಕಾರು ನೀಡಿದ್ದ ಸಂದರ್ಭ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಅಪಘಾತಕ್ಕಿಡಾದ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಹೊಸ ಕಾರು ಬ್ರಿಝಾ ಕಾರು ಬುಕ್ ಮಾಡಲು ನಿರ್ಧರಿಸಿದ್ದು ಅದಕ್ಕೂ ಮೊದಲು ಕಾರನ್ನು ಟ್ರಯಲ್ ನೋಡಲು ಸ್ನೇಹಿತ ಕಾರನ್ನು ಕೆಲ ಗಂಟೆಗಳ ಕಾಲ ಎರವಲು ಪಡೆದಿದ್ದ. ಈ ವೇಳೆ ಕಾರಿನ ಸ್ಪೀಡ್ ಟೆಸ್ಟ್ ಮಾಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮಂಗಳೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಅಪರಾಧ
Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್ ಅಧಿಕಾರಿ ಸಂದೀಪ್ ರಾವ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್ ಗೋಯಲ್ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.
ಬಳಿಕ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ವಾಟ್ಸ್‌ಆ್ಯಪ್ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್ ಪವಾರ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್ ಸೀಕ್ರೆಸಿ ಆ್ಯಕ್ಟ್’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.
ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.
ಸೈಬರ್ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
-
ಬಿಗ್ ನ್ಯೂಸ್22 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಬಿಗ್ ನ್ಯೂಸ್21 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್21 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ21 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ20 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ20 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ21 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
-
ಮಂಗಳೂರು19 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















