ರಾಜಕೀಯ
ರಾಜ್ಯ ವಿಧಾನಸಭಾ ಚುನಾವಣೆ ತಯಾರಿ : ಬಿಜೆಪಿಯಿಂದ 50 ಲಕ್ಷ ಮನೆಗಳಲ್ಲಿ ಪಕ್ಷದ ಧ್ವಜ ಹಾರಿಸುವ ಅಭಿಯಾನ – ನಾಳೆ ರಾಜ್ಯಕ್ಕೆ ಅಮಿತ್ ಶಾ ಭೇಟಿ – 2 ದಿನ ಠಿಕಾಣಿ | ಇಲ್ಲಿದೆ ಬಿಜೆಪಿ ಕಾರ್ಯತಂತ್ರದ ಮಾಹಿತಿ
karnataka assembly Election :ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ 2023 ಹತ್ತಿರ ಬರುತ್ತಿದ್ದು, ಆಡಳಿತಾಢ ಬಿಜೆಪಿ ಹಾಗೂ ಪ್ರತಿಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿವೆ. ಗುಜಾರತ್ ಚುನಾವಣೆಯ ಅಭೂತ ಪೂರ್ವ ಗೆಲುವಿನ ಬಳಿಕ ಅತ್ಯುತ್ಸಾಹದಲ್ಲಿರುವ ಬಿಜೆಪಿ ರಾಜ್ಯ ವಿಧಾನ ಸಭೆ ಚುನಾವಣೆಗೂ ಭರ ಪೂರ ತಯಾರಿಯಲ್ಲಿ ತೊಡಗಿಸಿಕೊಂಡಿದೆ.
ರಾಜ್ಯ ಬಿಜೆಪಿ ವತಿಯಿಂದ ಜನವರಿ 2 ರಿಂದ ಜನವರಿ 12ರ ವರೆಗೆ ‘ಬೂತ್ ವಿಜಯ ಅಭಿಯಾನ’ವನ್ನು ಆಯೋಜಿಸಲಾಗಿದೆ. ಪಕ್ಷವು ಈಗಾಗಲೇ ಜನಸಂಕಲ್ಪ ಯಾತ್ರೆಗಳ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನೋಪಯೋಗಿ, ಜನಪರ ಕಾರ್ಯಗಳನ್ನು ಜನರಿಗೆ ಮನದಟ್ಟು ಮಾಡಿದೆ.
ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ರಾಜ್ಯದಲ್ಲಿರುವ ಪಕ್ಷದ ಕಾರ್ಯಕರ್ತರ ಹಾಗೂ ಮತದಾರರ 50 ಲಕ್ಷ ಮನೆಗಳ ಮೇಲೆ ಬಿಜೆಪಿ ಧ್ವಜ ಹಾರಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯ, ಜಿಲ್ಲಾ, ತಾಲ್ಲೂಕು ಮಾತ್ರವಲ್ಲದೆ ಪಕ್ಷದ ಎಲ್ಲಾ ಘಟಕಗಳು, ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ಯುವ ಅರ್ಹ ಮತದಾರರನ್ನು ಮತಪಟ್ಟಿಯಲ್ಲಿ ಸೇರಿಸಲಾಗುವುದು, ಪ್ರತಿ ಬೂತ್‍ಗಳಲ್ಲಿ ಶೇ.100 ಮತದಾನ ಆಗುವ ರೀತಿಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದು ಹೇಳಿದರು.
20 ಲಕ್ಷ ಕಾರ್ಯಕರ್ತರು ‘ಬೂತ್ ವಿಜಯ ಅಭಿಯಾನ’ದಲ್ಲಿ ಭಾಗವಹಿಸಲಿದ್ದು, ಪ್ರಧಾನಿ ಮೋದಿ “ಮನ್ ಕೀ ಬಾತ್” ವೆಬ್ ಲಿಂಕ್‌ನ್ನು 60 ಸಾವಿರ ಗುಂಪುಗಳು ಡೌನ್‍ಲೋಡ್ ಮಾಡಿಸುವಂತೆ ಪ್ರೇರೇಪಿಸಲಾಗುವುದು. ಅಲ್ಲದೇ ಪ್ರತಿ ಬೂತ್‍ನಲ್ಲಿ ಮತದಾರರಿಗೆ ಜಾಗೃತಿ ಮೂಡಿಸುವ ಸಭೆಯನ್ನು ಮಾಡಲಿದ್ದೇವೆ. 58,156 ಬೂತ್‍ಗಳು, 11,642 ಶಕ್ತಿ ಕೇಂದ್ರಗಳು, 1,445 ಮಹಾ ಶಕ್ತಿ ಕೇಂದ್ರಗಳು, 312 ಮಂಡಲಗಳು, 39 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಈ ಅಭಿಯಾನ ನಡೆಯಲಿದೆ ಎಂದು ಸಚಿವರು ತಿಳಿಸಿದರು.
ಈ ನಡುವಲ್ಲೇ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಎರಡು ದಿನಗಳ ಕಾಲ ರಾಜ್ಯಕ್ಕೆ ಭೇಟಿ ಕೊಡುತ್ತಿದ್ದು, ಸಂಪುಟ ವಿಸ್ತರಣೆ ಕುರಿತು ಸ್ಪಷ್ಟ ಚಿತ್ರಗಳು ಸಿಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಅಮಿತ್ ಶಾ ಭೇಟಿ ಕುರಿತು ಮಾಹಿತಿ ನೀಡಿರುವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 30 ಮತ್ತು 31ರಂದು ರಾಜ್ಯಕ್ಕೆ ಭೇಟಿ ಕೊಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ನವೋತ್ಸಾಹ ತುಂಬಲಿದೆ ಎಂದು ಹೇಳಿದ್ದಾರೆ.
ಅಮಿತ್ ಶಾ ಅವರ ಈ ಭೇಟಿಯು ಪಕ್ಷದ ಗೆಲುವಿನ ಓಟಕ್ಕೆ ಮತ್ತಷ್ಟು ಶಕ್ತಿ ತುಂಬಲಿದೆ. ಮೈಸೂರು ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದಲ್ಲಿ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಅವರ ಭೇಟಿ ಅತ್ಯಂತ ಮಹತ್ವದ್ದಾಗಲಿದೆ ಎಂದು ತಿಳಿಸಿದ್ದಾರೆ.
ಅಮಿತ್ ಶಾ ಕಾರ್ಯಕ್ರಮದ ವೇಳಾಪಟ್ಟಿ:
ಡಿಸೆಂಬರ್ 30ರಂದು ಮಧ್ಯಾಹ್ನ 12.30ಕ್ಕೆ ಅವರು ಮಂಡ್ಯದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದು ಮೈಸೂರು ಭಾಗದಲ್ಲಿ ಪಕ್ಷವನ್ನು ಹೆಚ್ಚು ಸದೃಢಗೊಳಿಸುವ ವಿಶ್ವಾಸವಿದೆ. ಎಂ. ಸಿ. ರಸ್ತೆಯ ಪ್ರವಾಸಿ ಮಂದಿರದ ಸಮೀಪದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿ ಈ ಸಮಾವೇಶ ನಡೆಯಲಿದೆ. ಈ ಸಮಾವೇಶದ ಯಶಸ್ಸಿಗಾಗಿ ಸಚಿವರಾದ ಗೋಪಾಲಯ್ಯ, ನಾರಾಯಣ ಗೌಡ, ಡಾ. ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಡಿಸೆಂಬರ್ 31ರಂದು ಬಿಎಲ್ 2 ಮತ್ತು ಬೂತ್ ಅಧ್ಯಕ್ಷರ ಮೇಲ್ಪಟ್ಟ ಕಾರ್ಯಕರ್ತರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಅಮಿತ್ ಶಾ ಅವರು ಈ ಸಮಾವೇಶದಲ್ಲಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಿದ್ದಾರೆ. ರಾಜ್ಯದಲ್ಲಿ 150ಕ್ಕೂ ಹೆಚ್ಚು ಶಾಸಕ ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೇರುವ ಪಕ್ಷದ ವಿಜಯ ಯಾತ್ರೆಗೆ ಹೆಚ್ಚಿನ ಬಲ ತುಂಬಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
ರಾಜಕೀಯ
U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್
ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಬಿಚ್ಚಿಟ್ಟಿದ್ದಾರೆ
ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ
ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548
ಅಂತರ ರಾಜ್ಯ
Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್
ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.
ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.
ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.
ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.
ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.
ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.
ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.
ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.
-
Uncategorized7 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized6 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ
-
ದಕ್ಷಿಣ ಕನ್ನಡ14 minutes ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು


















