ನಿಧನ ವಾರ್ತೆ
Big Breaking: Heeraben Modi | ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ನಿಧನ
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಗುಜರಾತ್ನ ಅಹಮದಾಬಾದ್ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರು.
ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ಮೋದಿ ಸರಣಿ ಟ್ವೀಟ್ ಮಾಡಿ, ತಮ್ಮ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಭವ್ಯವಾದ ಶತಮಾನವು ದೇವರ ಪಾದದ ಮೇಲೆ ನಿಂತಿದೆ.. ತಾಯಿಯಲ್ಲಿ ನಾನು ಯಾವಾಗಲೂ ಆ ತ್ರಿಮೂರ್ತಿಗಳನ್ನು ಅನುಭವಿಸಿದ್ದೇನೆ, ಅದು ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ಸಂಕೇತ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ಒಳಗೊಂಡಿದೆ ಅಂತ ಬರೆದುಕೊಂಡಿದ್ದಾರೆ.
ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿ, ಆಶೀರ್ವಾದ ಪಡೆದಿದ್ದರು. ತಾಯಿಯ ಪಾದ ತೊಳೆದು ಪೂಜಿಸಿದ್ದರು.
ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ, ಅವರನ್ನು ಡಿ.28 ರಂದು ಗುಜರಾತ್ನ ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶತಾಯುಷಿಯಾಗಿರುವ ಹೀರಾಬೆನ್ ಅವರನ್ನು ಈ ಹಿಂದೆಯೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭ ಮೋದಿ ತಾಯಿ ಆರೋಗ್ಯಕ್ಕಾಗಿ ರಾಹುಲ್ ಗಾಂಧಿ ಮಾಡಿರುವ ಟ್ವೀಟ್ ಭಾರಿ ವೈರಲ್ ಆಗಿತ್ತು.
ನಿಧನ ವಾರ್ತೆ
Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಅತ್ಯಂತ ದುಃಖದಾಯಕ ಹಾಗೂ ಹೃದಯವಿದ್ರಾವಕವಾಗಿದೆ ಎಂದು ಅವರು ತಿಳಿಸಿದ್ದಾರೆ.
ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾಮಿ ಸಂತಾಪ ಸೂಚಿಸಿದ್ದಾರೆ.
ಅಗಲಿದ ಆತ್ಮಕ್ಕೆ ಭಗವಾನ್ ಕೇದಾರನಾಥರು ಶಾಂತಿ ಕರುಣಿಸಲಿ. ತಾಯಿ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್ನ ಫುಟ್ಬೋರ್ಡ್ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ಶಿಕ್ಷಣ9 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಚಿನ್ನ-ಬೆಳ್ಳಿ ದರ7 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸ್ಥಳೀಯ8 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಸಿನೆಮಾ7 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ8 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಅಪರಾಧ8 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ2 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಆರೋಗ್ಯ7 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ















