ಸುಳ್ಯ
S Angara | ‘ಜೀವಮಾನದುದ್ದಕ್ಕೂ ಬಿಜೆಪಿಗೆ ಮತ ಹಾಕಿದ್ದರೂ ಯಾವುದೇ ಸ್ಪಂದನ ಇಲ್ಲ. ಮುಂದಕ್ಕೆ ಓಟು ಕೇಳಲು ಬನ್ನಿ’ ಸಚಿವ ಅಂಗಾರರಿಗೆ ಸ್ವಕ್ಷೇತ್ರದಲ್ಲೇ ಬಿಜೆಪಿ ಕಾರ್ಯಕರ್ತರ ಆಕ್ರೋಶ
ಕಡಬ (ಜ.3) : ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮತದಾರರ ಆಕ್ರೋಶ ಅಲ್ಲಲ್ಲಿ ಪ್ರಕಟವಾಗತೊಡಗಿದ್ದು, ಗುದ್ದಲಿಪೂಜೆಗೆಂದು ಆಗಮಿಸಿದ ಸುಳ್ಯ ಶಾಸಕ , ಸಚಿವ ಎಸ್.ಅಂಗಾರ (S Angara) ಅವರಿಗೆ ‘ಮೊದಲು ಸಮಸ್ಯೆ ಬಗೆಹರಿಸಿ, ಬಳಿಕ ಗುದ್ದಲಿ ಪೂಜೆ ಮಾಡಿ’ ಎಂದು ತಾಕೀತು ಮಾಡಿದ ಘಟನೆ ಕಡಬ ಸಮೀಪದ ಬಲ್ಯ ಎಂಬಲ್ಲಿ ಸೋಮವಾರ ನಡೆದಿದೆ.
ಅಂಗಾರ(S angara) ಅವರು ಪ್ರಮುಖರೊಡಗೂಡಿ 85 ಲಕ್ಷ ರು. ವೆಚ್ಚದ ವಿವಿಧ ಕಾಮಗಾರಿಗಳ ಶಿಲಾನ್ಯಾಸಕ್ಕೆ ಬಲ್ಯಕ್ಕೆ ಆಗಮಿಸಿದ್ದರು. ಬಲ್ಯದ ರಸ್ತೆಯೊಂದರ ಅಭಿವೃದ್ಧಿಗೆಂದು ಸತತ ಮನವಿ ಸಲ್ಲಿಸುತ್ತಿದ್ದರೂ, ಯಾವುದೇ ಸ್ಪಂದನ ತೋರದ ಜನಪ್ರತಿನಿಧಿಗಳ ಮೇಲಿನ ಆಕ್ರೋಶವನ್ನು ಎದುರಿಸಿದರು. ಮೊದಲು ಚುನಾವಣೆ ಬಹಿಷ್ಕಾರದ ಬ್ಯಾನರ್ ಅಳವಡಿಸಿ ಅಂತರ ಕಾಯ್ದುಕೊಂಡಿದ್ದ ಅಲ್ಲಿನ ನಿವಾಸಿಗರು ಬಳಿಕ ಶಿಲಾನ್ಯಾಸದ ಸ್ಥಳಕ್ಕೆ ಬಂದು ತಮ್ಮ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.
ಈ ವೇಳೆ ಉತ್ತರಿಸಿದ ಸಚಿವ ಅಂಗಾರ, ಯಾರು ಮನವಿ ಕೊಟ್ಟರೂ, ಕೊಡದಿದ್ದರೂ ನಾನೇನು ಮಾಡಬೇಕೋ ಅದನ್ನು ಮಾಡುವೆ. ನೀವು ಮನವಿ ಕೊಟ್ಟಮಾತ್ರಕ್ಕೆ ಕಾಮಗಾರಿಯ ಕೆಲಸ ಮಾಡಲು ಹಣ ಯಾರು ಕೊಡಬೇಕು? ಸರ್ಕಾರ ತಾನೆ? ಸರ್ಕಾರ ದುಡ್ಡು ಕೊಟ್ಟರೆ ಕಾಮಗಾರಿ ಮಾಡಿಸುವೆ ಎಂದು ಉತ್ತರಿಸಿದರು. ಆಗ ಅಲ್ಲಿ ಜಮಾಯಿಸಿದ ಮಂದಿ ವಾಗ್ವಾದ ನಡೆಸಿ, ಜೀವಮಾನದುದ್ದಕ್ಕೂ ಬಿಜೆಪಿಗೆ ಮತ ಹಾಕಿದ್ದರೂ ಯಾವುದೇ ಸ್ಪಂದನ ಇಲ್ಲ. ಮುಂದಕ್ಕೆ ಓಟು ಕೇಳಲು ಬನ್ನಿ ಎಂದು ಎಚ್ಚರಿಸಿ ಹೇಳುತ್ತಾ ಸ್ಥಳದಿಂದ ನಿರ್ಗಮಿಸಿದರು.
ಬಳಿಕ ಬಿಜೆಪಿ(BJP) ಮುಖಂಡ ಕೃಷ್ಣ ಶೆಟ್ಟಿ ಅಸಮಾಧಾನಿತ ಮಂದಿಯನ್ನು ಕರೆದು ಸಮಾಧಾನ ಪಡಿಸಲು ಯತ್ನಿಸಿದರು.
ಆಗ ಮುಖಂಡರೊಬ್ಬರು ನೀವು ಬಿಜೆಪಿಗೆ ಓಟ್ ಹಾಕಿದ್ದೀರಿ ಎನ್ನುವುದಕ್ಕ ಏನೂ ಗ್ಯಾರಂಟಿ ಎಂದು ಹೇಳಿದಾಗ ಮತ್ತೊಮ್ಮೆ ತೀವ್ರ ಆಕ್ರೋಶ ಬುಗಿಲೆದ್ದಿತು. ಗಣಪತಿ ಸ್ವಸ್ತಿಕದೆದುರು ಹೀಗೆ ಮಾತನಾಡಿದ್ದು ತಪ್ಪು ಎಂದು ಕಾರ್ಯಕರ್ತರಿಗೆ ಬುದ್ದಿ ಹೇಳಿದರು.
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಳ್ಯ
Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.
-
ದಕ್ಷಿಣ ಕನ್ನಡ16 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
Uncategorized22 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ಸಿನೆಮಾ23 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ23 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ15 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಅಪರಾಧ23 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಬಿಗ್ ನ್ಯೂಸ್21 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು22 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















