Connect with us

ಪುತ್ತೂರು

ಅಡಿಕೆ ಕುರಿತು ಅರಗ ಜ್ಞಾನೇಂದ್ರ ಹೇಳಿಕೆ ವಾಸ್ತವಾಂಶದಿಂದ ಕೂಡಿದೆ – ಸಮರ್ಥಿಸಿದ ಶಾಸಕ ಮಠಂದೂರು | ರಸ್ತೆ ಮಧ್ಯೆ ಅಡಿಕೆ ಗೊನೆಯಿಟ್ಟು ಪ್ರತಿಭಟನೆ ಮಾಡುವವರಿಗೆ ಅಡಿಕೆ ಎಲ್ಲಿ ಆಗುತ್ತದೆ ಎಂದು ಗೊತ್ತಿದೆಯೋ ಇಲ್ಲವೋ ? ವ್ಯಂಗ್ಯ

Published

on



Ad Widget

Ad Widget

Ad Widget

Ad Widget

ಪುತ್ತೂರು : ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಗೃಹ ಸಚಿವ ಹಾಗೂ ಅಡಿಕೆ ಟಾಸ್ಕ್‌ ಪೊರ್ಸ್‌ ಸಮಿತಿ ಅಧ್ಯಕ್ಷರಾದ  ಅರಗ ಜ್ಞಾನೇಂದ್ರರವರು ಅಡಿಕೆ ಕುರಿತಾಗಿ ನೀಡಿದ ಹೇಳಿಕೆ ವಾಸ್ತವಾಂಶದಿಂದ ಕೂಡಿದೆ ಎಂದು ತಿಳಿಸಿರುವ ಪುತ್ತೂರು  ಶಾಸಕ ಸಂಜೀವ ಮಠಂದೂರು ಅವರು ಸಚಿವರ ಹೇಳಿಕೆಯನ್ನು ಸಮರ್ಥಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಿಕೆ ಆಹಾರದ ಬೆಳೆಯಲ್ಲ. ಅದು ಜಗಿದು ಉಗಿಯುವ ಪದಾರ್ಥ. ಇದರ ಉತ್ಪಾದನೆ ಜಾಸ್ತಿಯಾದಷ್ಟು ಅಪಾಯ ಇದೆ ಎಂದು  ಈ ಹಿಂದೆ ಕ್ಯಾಂಪ್ಕೂ ಅಧ್ಯಕ್ಷರಾಗಿದ್ದ  ರಾಮ್ ಭಟ್ ಆತಂಕ ವ್ಯಕ್ತಪಡಿಸಿದ್ದರು. ಅದೇ ರೀತಿಯ ಆತಂಕವನ್ನು ಇದೀಗ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವ್ಯಕ್ತಪಡಿಸಿದ್ದಾರೆ. ಅಡಿಕೆ ಬೆಳೆ ಜಾಸ್ತಿ ವಿಸ್ತರಣೆಯಾದಷ್ಟು ಕಷ್ಟ ಇದೆ. ರೈತರಿಗೆ ಮತ್ತು ಪಾರಂಪರಿಕ ಬೆಳೆಗಾರರಿಗೆ ಸಮಸ್ಯೆ ಬರಬಹುದು ಎಂದು ಹೇಳಿದ್ದಾರೆ ಹೊರತು ಅಡಿಕೆ ಬ್ಯಾನ್ ಆಗುತ್ತದೆ ಎಂದು ಹೇಳಿಲ್ಲ. ವಾಸ್ತವ ವಿಚಾರವನ್ನು ಅವರು ಜನರ ಮುಂದೆ ಇಟ್ಟಿದ್ದಾರೆ. ಎಂದು ತಿಳಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಕಳೆದ ವಾರ ಮುಕ್ತಾಯಗೊಂಡ ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಅಡಿಕೆ ಕುರಿತಾದ ಚರ್ಚೆಯ ಸಂದರ್ಭ ಮಧ್ಯೆ ಪ್ರವೇಶಿಸಿ ಮಾತನಾಡಿದ ಅಡಕೆ ಬೆಳೆಗಾರರೂ ಆಗಿರುವ ಅರಗ ಜ್ಞಾನೇಂದ್ರರವರು “ ಅಡಿಕೆಗೆ ಭವಿಷ್ಯವಿಲ್ಲ. ಅದಕ್ಕೆ ಸರಕಾರ ಪ್ರೋತ್ಸಾಹ ಕೊಡಬಾರದು. ಅಡಿಕೆ ಬೆಳೆ ಸಿಕ್ಕಾಪಟ್ಟೆ ವಿಸ್ತರಣೆಯಾಗುತ್ತಿದ್ದು, ಇದರಿಂದಾಗಿ ಅಡಿಕೆಯ ಬೆಲೆ ಕುಸಿದು ಅಡಿಕೆ ಬೆಳೆಗಾರರಿಗೆ ಮಾರಕವಾಗಿ ಪರಿಣಮಿಸಲಿದ್ದು ,ಬೆಳೆಗಾರರು ಮುಂದಿನ 5-10 ವರ್ಷಗಳಲ್ಲಿ ಬೀದಿಗೆ ಬೀಳುವ ಸಾಧ್ಯತೆಯಿದೆ ಎಂದು ಹೇಳಿದರು.  

Ad Widget

Ad Widget <> Ad Widget

ಇದರ ಕುರಿತಾಗಿ ಮಾತನಾಡಲು ಡಿ 2 ರಂದು ಪತ್ರಿಕಾಗೋಷ್ಟಿ ನಡೆಸಿದ ಶಾಸಕ ಮಠಂದೂರು “ಚುನಾವಣಾ ಜ್ವರ ಜಾಸ್ತಿಯಾಗುತ್ತಿದ್ದಂತೆ ಕಾಂಗ್ರೆಸಿನವರು ಅಡಿಕೆ ಬೆಳಗಾರರನ್ನು ಮತ ಬ್ಯಾಂಕಾಗಿ ವರ್ತಿಸುವ ಕಾರಣಕ್ಕಾಗಿ ಈಗ ರಸ್ತೆಗಿಳಿದಿದ್ದಾರೆ. ಅವರಿಗೆ ಅಡಿಕೆ ಬೆಳೆಗಾರರ ಮೇಲೆ ಆಸಕ್ತಿಯಿಲ್ಲ. ಅಡಿಕೆ ಬೆಳೆಗಾರರ ಮತದ ಮೇಲೆ ಆಸಕ್ತಿ . ಅಡಿಕೆ ಗೊನೆ ಮಾರ್ಗದಲಿಟ್ಟು  ಪ್ರತಿಭಟನೆ ಮಾಡುವವರಿಗೆ ಅಡಿಕೆ ಗೊನೆಯಲ್ಲಿ ಆಗುತ್ತದೆ ಎಂದು ಗೊತ್ತಿದೆಯೋ ಇಲ್ಲವೋ ? ಎಂದು ವ್ಯಂಗ್ಯವಾಡಿದರು  



Ad Widget

ಅಡಿಕೆ ಬೆಳೆಗಾರರ ಹಿತ ಕಾಯಲು ಬಿಜೆಪಿ ಸರ್ಕಾರಗಳು, ಕ್ಯಾಂಪ್ಕೋ ಸಂಸ್ಥೆ, ಸಹಕಾರಿ ಭಾರತಿ ಸೇರಿದಂತೆ ಬಿಜೆಪಿಯ ಸಹಕಾರಿ ಸಂಘಗಳು ಏನೆಲ್ಲಾ ಮಾಡಿವೆ, ಅಡಿಕೆ ಬೆಳೆಗಾರರು ಪ್ರಸ್ತುತ ಒಳ್ಳೆಯ ಪರಿಸ್ಥಿತಿಯಲ್ಲಿರಲು ಕಾರಣರು ಯಾರು ಎಂಬುವುದು ಎಲ್ಲಾ ಜನತೆಗೆ ಗೊತ್ತಿದೆ. ಆದರೆ ಚುನಾವಣಾ ಜ್ವರ ಜಾಸ್ತಿಯಾಗುತ್ತಿದ್ದಂತೆ ಕಾಂಗ್ರೆಸಿನವರು ಅಡಿಕೆ ಬೆಳಗಾರರನ್ನು ಮತ ಬ್ಯಾಂಕಾಗಿ ವರ್ತಿಸುವ ಕಾರಣಕ್ಕಾಗಿ ಈಗ ರಸ್ತೆಗಿಳಿದಿದ್ದಾರೆ ಎಂದು ಟೀಕಿಸಿದರು.

Ad Widget

Ad Widget

ಪುತ್ತೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಿಕೆ ಮಾರುಕಟ್ಟೆಗೆ ಆತಂಕ ತರುವ ಪರಿಸ್ಥಿತಿಯನ್ನು ಕಾಂಗ್ರೆಸಿಗರು ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಅಡಿಕೆ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ. ಅಡಿಕೆ ಧಾರಣೆ ಕಡಿಮೆಯಾಗದಂತೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಅದಕ್ಕೆ ಬೇಕಾದ ಎಲ್ಲಾ ಕೆಲಸಗಳನ್ನು ಮಾಡಲಿದೆ ಎಂದರು.

ದ.ಕ. ಜಿಲ್ಲೆ ಆರ್ಥಿಕವಾಗಿ ಇಷ್ಟೊಂದು ಪ್ರಗತಿ ಸಾಧಿಸಲು ಇಲ್ಲಿನ ಆರ್ಥಿಕ ಬೆಳೆಯಾದ ಅಡಿಕೆಯೇ ಕಾರಣ. ಅಡಿಕೆಯನ್ನು ದ.ಕ, ಉಡುಪಿ, ಶಿವಮೊಗ್ಗ, ಕಾಸರಗೋಡು ಭಾಗದಲ್ಲಿ ಪಾರಂಪರಿಕ ಬೆಳೆಯಾಗಿ ಬೆಳೆಯಲಾಗುತ್ತಿದ್ದು, ಅಡಿಕೆ ತೋಟ ಮತ್ತು ಉತ್ಪಾದನೆ ಜಾಸ್ತಿಯಾದಲ್ಲಿ ಅಪಾಯವಿದೆ ಎಂಬ ವಿಚಾರವನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕರೂ, ಅಡಿಕೆ ಬೆಳೆಗಾರರೂ ಆಗಿದ್ದ ಮಾಜಿ ಶಾಸಕ ರಾಮ ಭಟ್ ಅವರು 25  ವರ್ಷಗಳ ಹಿಂದೆಯೇ ಹೇಳಿದ್ದರು. ಇದೀಗ ಅಡಿಕೆ ಕೃಷಿ ತುಮಕೂರು, ಚಿತ್ರದುರ್ಗ, ಬಳ್ಳಾರಿ ಸೇರಿದಂತೆ ಬಯಲು ಸೀಮೆಯಲ್ಲಿ ವಿಸ್ತರಿಸಿಕೊಂಡಿದೆ, ಈ ಹಿನ್ನಲೆಯಲ್ಲಿ ಅಡಿಕೆ ಟಾಸ್ಕ್‍ಫೋರ್ಸ್ ಸಮಿತಿಯ ರಾಜ್ಯಾಧ್ಯಕ್ಷರೂ ಆದ ರಾಜ್ಯದ ಗೃಹ ಸಚಿವರು ವಾಸ್ತವ ವಿಚಾರವನ್ನು ಮುಂದಿಟ್ಟಿದ್ದಾರೆ. ಅಡಿಕೆ ಬೆಳೆಗಾರರ ಭಾವನೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಇದನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುವ ಕೆಲಕ್ಕಿಳಿದಿದ್ದಾರೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೂರಕ್ಕೆ ನೂರರಷ್ಟು ಅಡಿಕೆ ಬೆಳೆಗಾರರ ಪರ ನಿಂತಿದೆ. ಅಡಿಕೆ ಆಮದು ನಿಲ್ಲಿಸುವ ಕೆಲಸ ಮಾಡಿದೆ. ಅಡಿಕೆ ಹಳದಿ ರೋಗ ಪರಿಹಾರವಾಗಿ ಪರ್ಯಾಯ ಬೆಳೆ ಪ್ರೋತ್ಸಾಹಿಸಲು 2020-21ನೇ ಸಾಲಿನ ಬಜೆಟ್‍ನಲ್ಲಿ ರಾಜ್ಯ ಸರ್ಕಾರ ರೂ. 25 ಕೋಟಿ ಇಟ್ಟಿದೆ. ಹಳದಿ ರೋಗದ ಸಂಶೋಧನೆಗಾಗಿ ಸಿಪಿಸಿಆರ್‍ಐಗೆ ರೂ.1.50 ಕೋಟಿ ನೀಡಿದೆ. ಅಡಿಕೆ ಎಲೆಚುಕ್ಕಿ ರೋಗಕ್ಕೆ ಪರಿಹಾರ ಕಂಡುಕೊಳ್ಳುವ ಕೆಲಸವನ್ನು ಸರ್ಕಾರ ಮಾಡಿದೆ. ಅಡಿಕೆ ಬೆಳೆಗಾರರಿಗೆ ಅನುಕೂಲವಾಗುವ ಉದ್ದೇಶದಿಂದ ಎಪಿಎಂಸಿ ತೆರಿಗೆಯನ್ನು ಶೇ.3ರಿಂದ 0.75ಕ್ಕೆ ಇಳಿಸಿದೆ. ಅಡಿಕೆ ಕೃಷಿ ತುಂತುರು ನೀರಾವರಿಗಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶೇ.90 ಮತ್ತು ಇತರರಿಗೆ ಶೇ.75 ಸಬ್ಸಿಡಿ, ಬೋರ್ಡೋ ಮಿಶ್ರಣಕ್ಕೆ ಸಬ್ಸಿಡಿ ನೀಡಿ ಪ್ರೋತ್ಸಾಹಿಸಲಾಗುತ್ತಿದೆ. ಅಡಿಕೆ ಬೆಳೆಗಾರರ ಹಿತ ಕಾಯುವ ಎಲ್ಲಾ ಕೆಲಸಗಳನ್ನು ಸರ್ಕಾರ ಮಾಡಿದೆ ಎಂದರು.

ಇದೀಗ ಅಡಿಕೆ ಬೆಳೆಗಾರರ ಬಗ್ಗೆ ಮೊಸಳೆ ಕಣ್ಣೀರಿಡುತ್ತಾ ಅಡಿಕೆ ವಿಚಾರದಲ್ಲಿ ಆತಂಕ ಸೃಷ್ಟಿಸುವ ಕೆಲಸ ಮಾಡುತ್ತಿರುವ ಕಾಂಗ್ರೆಸಿಗರು ಇದಕ್ಕೆ ಮೊದಲು ಅಡಿಕೆ ಬೆಳೆಗಾರರ ಪರವಾಗಿ ಎಷ್ಟು ಹೋರಾಟ ಮಾಡಿದ್ದಾರೆ ಎಂಬುವುದನ್ನು ಹೇಳಲಿ ಎಂದು ಸವಾಲು ಹಾಕಿದರು.

ಪುತ್ತೂರು ನಗರಸಭೆಯ ಅಧ್ಯಕ್ಷ ಕೆ.ಜೀವಂಧರ್ ಜೈನ್, ನಗರ ಯೋಜನಾಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ,ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿನೆ ಮತ್ತು ನಿತೀಶ್‍ಕುಮಾರ್ ಶಾಂತಿವನ, ನಗರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಶ್ರೀ ಶೆಟ್ಟಿ ಮತ್ತು ಯುವರಾಜ್ ಪೆರಿಯತ್ತೋಡಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Ad Widget
Click to comment

Leave a Reply

ಶಿಕ್ಷಣ

Ambika-ಅಂಬಿಕಾ ಪ.ಪೂ.ವಿದ್ಯಾಲಯಗಳ ಪ್ರತಿಭಾ ದಿನಾಚರಣೆ – ಮಾನಸೋಲ್ಲಾಸ; ಉದ್ದೇಶ ಸ್ಪಷ್ಟತೆ ಇರುವವರಿಗೆ ಯಾವುದೇ ಅಡೆತಡೆಗಳಿಲ್ಲ: ಪಿ. ಪ್ರದೀಪ್ ಕುಮಾರ್

Published

on



Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಪ್ರತಿಭಾ ದಿನಾಚರಣೆ – ಮಾನಸೋಲ್ಲಾಸ ಕಾರ್ಯಕ್ರಮವನ್ನು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಉದ್ಘಾಟಿಸಿ ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಪಿ. ಪ್ರದೀಪ್ ಕುಮಾರ್ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪ್ರತಿಭೆಯಿಲ್ಲದ ವ್ಯಕ್ತಿಯಿಲ್ಲ. ಆದರೆ ನಮ್ಮೊಳಗಿರುವ ಪ್ರತಿಭೆಗಳನ್ನು ಗುರುತಿಸುವುದು, ಬೆಳೆಸುವುದು ಹಾಗೂ ಆ ಪ್ರತಿಭೆಯನ್ನು ಸತ್ಕಾರ್ಯಗಳಿಗಾಗಿ ಬಳಸುವುದು ಅತ್ಯಂತ ಮುಖ್ಯ. ಸಮರ್ಪಿತ ಹಾಗೂ ಉದ್ದೇಶಸ್ಪಷ್ಟತೆ ಹೊಂದಿರುವ ವ್ಯಕ್ತಿಯ ಬೆಳವಣಿಗೆಗೆ ಯಾವುದೇ ಅಡೆತಡೆಗಳಿಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಪಿ. ಪ್ರದೀಪ್ ಕುಮಾರ್ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಪ್ರತಿಭಾ ದಿನಾಚರಣೆ – ಮಾನಸೋಲ್ಲಾಸ ಕಾರ್ಯಕ್ರಮವನ್ನು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಉದ್ಘಾಟಿಸಿ ಶನಿವಾರ ಮಾತನಾಡಿದರು.

Ad Widget

Ad Widget <> Ad Widget

ಈ ದೇಶದ ದೊಡ್ಡ ದೊಡ್ಡ ವಿಜ್ಞಾನಿಗಳು, ವೈದ್ಯರು, ಇಂಜಿನಿಯರ್‌ಗಳು, ದೊಡ್ಡ ದೊಡ್ಡ ಸಾಧಕರಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶಗಳಿಂದ ಬಂದವರೇ ಆಗಿದ್ದಾರೆ. ಹಾಗಾಗಿ ಗ್ರಾಮೀಣ ಭಾಗದಲ್ಲಿ ಅವಕಾಶಗಳು ಕಡಿಮೆ ಎಂಬ ಭಾವನೆಯನ್ನು ಇಟ್ಟುಕೊಳ್ಳಬೇಕಿಲ್ಲ. ನಾವು ಎಲ್ಲಿಂದ ಬಂದಿದ್ದೇವೆ, ಯಾವ ಹಿನ್ನೆಲೆಯಿಂದ ಬಂದಿದ್ದೇವೆ ಎಂಬುದು ಮುಖ್ಯವಲ್ಲ. ಸಾಧನೆಯೆಡೆಗೆ ಮುಖ ಮಾಡಿ ನಿರಂತರ ಕಾರ್ಯಪ್ರವೃತ್ತರಾದರೆ ಅಂದುಕೊಡ ಗಮ್ಯವನ್ನು ತಲಪುವುದಕ್ಕೆ ಸಾಧ್ಯವಿದೆ ಎಂದರು.



Ad Widget

ಕನಸು ಕಾಣುವುದಕ್ಕೆ ಎಲ್ಲರಿಗೂ ಸಾಧ್ಯವಿದೆ. ಆದರೆ ಕಂಡ ಕನಸುಗಳನ್ನು ನನಸು ಮಾಡುವುದಕ್ಕೆ ಶಿಸ್ತು, ಪ್ರಾಮಾಣಿಕತೆ, ನಿರಂತರ ಪ್ರಯತ್ನ ಹಾಗೂ ಎದುರಾಗುವ ಅಡೆತಡೆಗಳನ್ನು ಮೀರಿ ಮುನ್ನಡೆಯುವ ಸಾಮರ್ಥ್ಯಗಳಿರಬೇಕು. ಆಕಾಂಕ್ಷೆ ಹಾಗೂ ಸಾಧನೆಗಳ ಮಧ್ಯೆ ಬಹುದೊಡ್ಡ ಅಂತರವಿದೆ. ಆ ಅಂತರದ ನಡುವಣ ಸೇತುವೆಯಲ್ಲಿ ನಡೆಯಲು ಕಠಿಣ ಪರಿಶ್ರಮವೊಂದೇ ದಾರಿ. ಯಶಸ್ಸಿಗೆ ಯಾವುದೇ ಅಡ್ಡದಾರಿಗಳಿಲ್ಲ. ನಮ್ಮ ವ್ಯಕ್ತಿತ್ವವನ್ನು ತಂತ್ರಜ್ಞಾನ ರೂಪಿಸಲಾರದು, ಸ್ವತಃ ನಾವೇ ರೂಪಿಸಿಕೊಳ್ಳಬೇಕು ಎಂದು ನುಡಿದರು.

Ad Widget

Ad Widget

ಮತ್ತೋರ್ವ ಅತಿಥಿ, ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಹಾಗೂ ಬೆಂಗಳೂರಿನ ಭಾರತ್ ಇಲೆಕ್ಟಾçನಿಕ್ಸ್ನ ಡೆಪ್ಯೂಟಿ ಇಂಜಿನಿಯರ್ ಅನುಜ್ಞಾ ಪಳ್ಳತ್ತಡ್ಕ ಮಾತನಾಡಿ ನಾವು ಉಸಿರಾಡುವ ಗಾಳಿ, ತಿನ್ನುವ ಆಹಾರ ಈ ದೇಶದ್ದು. ಹಾಗಾಗಿ ಈ ದೇಶದ ಸೇವೆಯನ್ನು ಮಾಡಿ ನಮ್ಮ ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕು. ನಮ್ಮ ಬದುಕಿನಲ್ಲಿ ಒಂದು ಸರಿಯಾದ ಉದ್ದೇಶವನ್ನಿಟ್ಟುಕೊಂಡು ಮುಂದುವರೆಯಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ನಮ್ಮ ಹಿರಿಯರ ಪರಿಶ್ರಮದ ಫಲವಾಗಿ ನಮ್ಮ ಭಾರತೀಯ ಕಲೆ, ಸಂಸ್ಕೃತಿಗಳು ಬೆಳೆದು ಬಂದಿವೆ. ಅವುಗಳನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಅಂಬಿಕಾ ಸಂಸ್ಥೆಗಳು ಸದಾ ತೊಡಗಿಕೊಂಡಿವೆ. ದೇಶ ಮೊದಲು ಎಂಬ ಭಾವನೆಯಡಿ ವಿದ್ಯಾರ್ಥಿಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ, ಆಡಳಿತ ಮಂಡಳಿ ಸದಸ್ಯರಾದ ವಿಶ್ರಾಂತ ಪ್ರಾಚಾರ್ಯ ಡಾ.ಎಚ್.ಮಾಧವ ಭಟ್, ಬಾಲಕೃಷ್ಣ ಬೋರ್ಕರ್, ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆ ಸಂಸ್ಥೆಗಳ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರುಗಳಾದ ಅವಿನಾಶ ಕೊಡೆಂಕಿರಿ ಹಾಗೂ ತಿಲಕ್ ಬಿ.ಸಿ, ಅಂಬಿಕಾ ನೀಟ್ ಅಕಾಡೆಮಿಯ ಪ್ರಾಚಾರ್ಯ ಕಿಶೋರ್ ಭಟ್, ವಿದ್ಯಾರ್ಥಿ ಸಂಘದ ನಾಯಕರಾದ ಅವನಿ ನಾಯಕ್, ಎಚ್.ವಿ.ಭವಿತ್ ಗೌಡ, ರಿಧಿ ಗೌಡ ಹಾಗೂ ಇಂದಿವರ್ ಪಿ.ಪಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶೈಕ್ಷಣಿಕ ಸಾಧಕರು, ಕ್ರೀಡಾ ಸಾಧಕರು, ವಿದ್ಯಾಭಾರತಿ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ದತ್ತಿನಿಧಿ ಬಹುಮಾನಗಳನ್ನು ವಿತರಿಸಲಾಯಿತು.

ವಿದ್ಯಾರ್ಥಿನಿ ಅಮೃತಾ ರಾವ್ ಶಂಖನಾದಗೈದರು. ವಿದ್ಯಾರ್ಥಿನಿ ಶ್ರೀವಿಭಾ ಹಾಗೂ ತಂಡದವರು ಪ್ರಾರ್ಥಿಸಿದರು. ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿ, ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ.ಎಸ್. ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಅವರಿಂದ ವಿಡಿಯೋ ಪ್ರಾತ್ಯಕ್ಷಿಕೆ ಸಹಿತ ವರದಿ ವಾಚನ ನಡೆಯಿತು. ವಿದ್ಯಾರ್ಥಿನಿಯರಾದ ಸೋನಾ ನಾರ್ಕೋಡ್ ಹಾಗೂ ಉರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಆನ್ಯಾ ಹಾಗೂ ಚಿನ್ಮಯೋ ಶೆಟ್ಟಿ ಅತಿಥಿ ಪರಿಚಯ ನಡೆಸಿಕೊಟ್ಟರು.

Ad Widget
Continue Reading

ಬಿಗ್ ನ್ಯೂಸ್

Golithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ

Published

on



Ad Widget

Ad Widget

Ad Widget

Ad Widget

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು, ಅ.11: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ಕಾಂಚನ ಕ್ರಾಸ್ ಸಮೀಪದ ತೋಡಿನ ನೀರಿನಲ್ಲಿ ಸಣ್ಣಪುಟ್ಟ ಮೀನುಗಳು ಏಕಾಏಕಿ ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಡಿನಲ್ಲಿ ಸಾಕಷ್ಟು ದೂರದವರೆಗೆ ಮೀನುಗಳು ಸತ್ತಿರುವುದು ಸ್ಥಳೀಯರು ಚಿತ್ರೀಕರಿಸಿದ ವಿಡಿಯೋದಲ್ಲಿ ಕಾಣಿಸಿಕೊಂಡಿದೆ.

Ad Widget

Ad Widget <> Ad Widget

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.



Ad Widget

ಮೀನುಗಳ ಸಾವಿಗೆ ಯಾರಾದರೂ ರಾಸಾಯನಿಕ ಬಳಕೆ ಮಾಡಿರುವುದು ಕಾರಣವೇ ಅಥವಾ ನೀರಿನಲ್ಲಿ ವಿಷಕಾರಿ ಅಂಶ ಬೆರೆತಿರುವುದರಿಂದ ಈ ಘಟನೆ ಸಂಭವಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನೀರಿನ ಮಾದರಿಯನ್ನು ಪರೀಕ್ಷಿಸುವ ಮೂಲಕ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Continue Reading

ಬಿಗ್ ನ್ಯೂಸ್

Puttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ

Published

on



Ad Widget

Ad Widget

Ad Widget

Ad Widget

ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಉತ್ತರ ಭಾಗದಲ್ಲಿ ಪೂರ್ವ-ಪಶ್ಚಿಮ ದಿಕ್ಕಿನಲ್ಲಿ 30 ಅಡಿ ಅಗಲ ಹಾಗೂ ಸುಮಾರು 1,000 ಮೀಟರ್ ಉದ್ದದ ಸಾರ್ವಜನಿಕ ರಸ್ತೆ ನಿರ್ಮಿಸುವ ಯೋಜನೆಗೆ ಸಂಬಂಧಿಸಿ ಭಕ್ತರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

Ad Widget

Ad Widget <> Ad Widget

ಈ ಅರ್ಜಿಯ ವಿಚಾರವಾಗಿ ಸೆ.10ರಂದು ನೀಡಿದ ಆದೇಶದಲ್ಲಿ, ಅರ್ಜಿದಾರರ ಆಕ್ಷೇಪಗಳನ್ನು ಆಲಿಸಿ ನಿಯಮಾನುಸಾರ ವಿಚಾರಣೆ ನಡೆಸಿ ಮುಂದಿನ ಆದೇಶ ಹೊರಡಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.



Ad Widget

ರಸ್ತೆ ನಿರ್ಮಾಣಕ್ಕೆ ಇಲಾಖೆಯ ಆಯುಕ್ತರು ದೇವಸ್ಥಾನದ ಸಮಿತಿ ಅಥವಾ ಕಾರ್ಯನಿರ್ವಹಣಾಧಿಕಾರಿಗೆ ಈವರೆಗೆ ಅನುಮತಿ ನೀಡಿಲ್ಲ. ಆದರೂ, ದೇವಸ್ಥಾನದ ಬಳಿಯ ಹಿಂದಿನ ಗಣೇಶ್ ಪ್ರಸಾದ್ ಹೋಟೆಲ್‌ನಿಂದ ಮಡಿವಾಳಕಟ್ಟೆಯವರೆಗಿನ ನೂತನ ಕಾಂಕ್ರೀಟ್ ರಸ್ತೆಗೆ ಪೂರಕವಾಗಿ ನಿರ್ವಾತ ತಂತ್ರಜ್ಞಾನದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ನಗರಸಭೆ ಟೆಂಡರ್ ಪ್ರಕಟಿಸಿದೆ ಎಂದು ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.

Ad Widget

Ad Widget

ದೇವಸ್ಥಾನದ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಇಲಾಖೆಯ ಆಯುಕ್ತರ ಅನುಮತಿ ಕಡ್ಡಾಯವಾಗಿದ್ದು, ಈ ಸಂಬಂಧ ಭಕ್ತರ ಆಕ್ಷೇಪಗಳು ಹಾಗೂ ನ್ಯಾಯಾಲಯದ ನಿರ್ದೇಶನಗಳು ಇರುವಾಗ ಟೆಂಡರ್ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.

ರಸ್ತೆ ನಿರ್ಮಾಣದ ಕುರಿತ ಸಾರ್ವಜನಿಕ ದೂರು ಮತ್ತು ಆಕ್ಷೇಪಗಳ ವಿಚಾರಣೆ ಇಲಾಖೆಯ ಆಯುಕ್ತರ ಮುಂದೆ ಇತ್ಯರ್ಥವಾಗುವವರೆಗೆ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ದೇವಸ್ಥಾನದ ಸಂರಕ್ಷಣಾ ವೇದಿಕೆ ಪುತ್ತೂರು ನಗರಸಭೆ ಪೌರಾಯುಕ್ತರನ್ನು ಒತ್ತಾಯಿಸಿದೆ. ನ್ಯಾಯಾಲಯದ ನಿರ್ದೇಶನ ಉಲ್ಲಂಘಿಸಿ ಕಾಮಗಾರಿ ಮುಂದುವರಿಸಿದರೆ ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದೂ ಎಚ್ಚರಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading