Connect with us

ಸುಳ್ಯ

Sullia | 20 ವರ್ಷಗಳಿಂದ ಮನವಿ ಸಲ್ಲಿಸಿದರೂ ಪ್ರಯೋಜನವಿಲ್ಲ: ಅಂಗಾರರ ವಿರುದ್ದ ಬಲ್ಯದ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ತವರು ಗ್ರಾಮ ಕುಂತೂರಿನಲ್ಲಿ ಮತದಾನ ಬಹಿಷ್ಕಾರಕ್ಕೆ ನಿರ್ಧಾರ

Published

on



Ad Widget

Ad Widget

Ad Widget

Ad Widget

ಕಡಬ: ಸುಳ್ಯ ಶಾಸಕ (Sullia) ಸಚಿವ ಅಂಗಾರರಿಗೆ ರಸ್ತೆ ಅಭಿವೃದ್ದಿ ವಿಷಯದಲ್ಲಿ ಬಿಜೆಪಿ ಕಾರ್ಯಕರ್ತರಿಂದಲೇ ಪ್ರತಿರೋಧ ವ್ಯಕ್ತವಾದ ಬೆನ್ನಲ್ಲೆ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ಜಿ ಅವರ ತವರು ಗ್ರಾಮ ಪೆರಾಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂತೂರು ಗ್ರಾಮದಲ್ಲಿ ಮತದಾನ ಬಹಿಷ್ಕಾರದ ನಿರ್ಧಾರಕ್ಕೆ ಊರವರು ಬಂದಿದ್ದಾರೆ.

Ad Widget

Ad Widget

Ad Widget

Ad Widget

ಕಡಬ ತಾಲೂಕಿನ ಕುಂತೂರು ಒಂದನೇ ವಾರ್ಡ್‌ನಲ್ಲಿ ಬರುವ ಮಾಪಲ-ಬೋಳ್ತಿಮಾರು-ಪುಳಿತ್ತಡಿ ರಸ್ತೆಯನ್ನು ಕಾಂಕ್ರೀಟ್ ಅಥವಾ ಡಾಂಬರು ಕಾಮಗಾರಿ ನಡೆಸಬೇಕು ಎಂದು ಒತ್ತಾಯಿಸಿ ಮಾಪಲದಲ್ಲಿ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು. ಒಂದು ವೇಳೆ ಬೇಡಿಕೆ ಈಡೇರದಿದ್ದಲ್ಲಿ ಮುಂಬರುವ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget
ಬಲ್ಯದಲ್ಲಿ ಸಚಿವ ಅಂಗಾರರ ವಿರುದ್ದ ತಿರುಗಿ ಬಿದ್ದ ಬಿಜೆಪಿ ಕಾರ್ಯಕರ್ತರು

ಮಾಪಲದಲ್ಲಿ 30 ಮನೆಗೂ ಹೆಚ್ಚು ರಸ್ತೆ ಫಲಾನುಭವಿಗಳು ಪ್ರತಿಭಟನೆ ನಡೆಸಿ ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಿದರು. ಮಾಪಲ-ಬೋಳ್ತಿಮಾರು-ಪುಳಿತ್ತಡಿ ರಸ್ತೆ ತೀರ ಹದಗೆಟ್ಟಿದೆ. ರಸ್ತೆಯುದ್ದಕ್ಕೂ ಅಲ್ಲಲ್ಲಿ ದೊಡ್ಡ ದೊಡ್ಡ ಹೊಂಡಗಳು ನಿರ್ಮಾಣವಾಗಿದ್ದು, ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಇದರಿಂದ ವಾಹನ ಸಂಚಾರ ಕಷ್ಟವಾಗಿದೆ. ಮಳೆಗಾಲದಲ್ಲಿ ರಸ್ತೆಯಲ್ಲಿ ನಡೆದಾಡಲೂ ಸಾಧ್ಯವಾಗುತ್ತಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು 20 ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಿದ್ದರೂ ಪ್ರಯೋಜನವಾಗಿಲ್ಲ. ಬದಲಿ ರಸ್ತೆಯೂ ಇಲ್ಲದಿರುವುದರಿಂದ ಈ ಭಾಗದ ಕೃಷಿಕರು, ಶಾಲಾ ಮಕ್ಕಳು, ಹೈನುಗಾರರು ಇದೇ ರಸ್ತೆಯಲ್ಲಿ ಬಿದ್ದು ಎದ್ದು ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ಉಂಟಾಗಿದೆ.

Ad Widget

Ad Widget <> Ad Widget

ಕುಂತೂರಿನಲ್ಲಿ ರಸ್ತೆಗಾಗಿ ಪ್ರತಿಭಟನೆ

ಆಲಂಕಾರಿನಲ್ಲಿ ನಡೆದ ದ.ಕ. ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಸಂದರ್ಭ ಈ ರಸ್ತೆ ಸಮಸ್ಯೆ ವೇಳೆ ಜಿಲ್ಲಾಧಿಕಾರಿ ಸೂಚನೆಯಂತೆ ಪಿಡಬ್ಲ್ಯುಡಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ರಸ್ತೆ ವೀಕ್ಷಣೆ ಮಾಡಿದ್ದು, ಮುಂದಿನ ಪ್ರತಿಕ್ರಿಯೆ ಸಿಕ್ಕಿಲ್ಲ. ಸಚಿವರು, ಶಾಸಕರು, ಜಿಲ್ಲಾ ಪಂಚಾಯಿತಿ, ತಾಪಂ, ಗ್ರಾಪಂ ಸದಸ್ಯರಿಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. 30ಕ್ಕೂ ಹೆಚ್ಚು ಮನೆಯವರು ಈ ರಸ್ತೆಯನ್ನು ಬಳಸುತ್ತಿದ್ದಾರೆ. ಜನಪ್ರತಿನಿಧಿಗಳು ಇನ್ನಾದರೂ ಎಚ್ಚೆತ್ತುಕೊಂಡು ಈ ರಸ್ತೆ ಅಭಿವೃದ್ಧಿಗೆ ಮುಂದಾಗಬೇಕು. ಇಲ್ಲದಿದ್ದಲ್ಲಿ ಮುಂಬರುವ ಮತದಾನ ಬಹಿಷ್ಕರಿಸುವ ನಿರ್ಧಾರಕ್ಕೆ ಬಂದಿರುವ ಗ್ರಾಮಸ್ಥರು ಈ ಬಗ್ಗೆ ಮಾಪಲದಲ್ಲಿ ಬ್ಯಾನರ್ ಅಳವಡಿಸಿದ್ದಾರೆ.



Ad Widget

ಗ್ರಾಮಸ್ಥ ಶಿವಕುಮಾರ್‌ ಭಟ್ ಮಾತನಾಡಿ, ಸಮರ್ಪಕ ರಸ್ತೆ ಆಗುವ ತನಕ ಮತದಾನ ಮಾಡದಿರುವ ನಿರ್ಧಾರಕ್ಕೆ ಬಂದಿದ್ದೇವೆ. ಜನಪ್ರತಿನಿಧಿಗಳ ಸ್ಪಂಧನೆಯೇ ಇಲ್ಲವಾಗಿದೆ ಎಂದರು. ಯಾವೂದೇ ಆಶ್ವಾಸನೆಗೂ ಬಗ್ಗುವುದಿಲ್ಲ ಎಂದರು.

Ad Widget

Ad Widget

ಗ್ರಾಮಸ್ಥರಾದ ಪ್ರಭಾಕರ ಗೌಡ, ಚೋಮ ನಾಯ್ಕ, ರಾಜೇಶ್ ಶೆಟ್ಟಿ, ಶಂಕರ, ಚಂದ್ರಶೇಖರ, ಗಣೇಶ್ ಶೆಟ್ಟಿ, ಲಲಿತಾ, ಶೋಭಾ, ರಮಾನಂದ ರೈ, ಬಾಲಕೃಷ್ಣ ರೈ, ಮಹಾಬಲ ರೈ, ದಿನೇಶ್, ಯೋಗೀಶ್, ಕಮಲ್ ಮಾಪಲ, ಗೋಪಾಲಕೃಷ್ಣ ರೈ, ರಾಧಾಕೃಷ್ಣ, ಲಕ್ಷ್ಮೀಶ ಶೆಟ್ಟಿ, ಕಮಲಾಕ್ಷ ಶೆಟ್ಟಿ, ಸುರೇಶ್, ಬಾಲಕ, ಸುಶೀಲಾ, ಜತ್ತಪ್ಪ ರೈ, ಅಕ್ಷತಾ, ದಾಮೋದರ, ಸರಸ್ವತಿ, ಉಮಾವತಿ ಮತ್ತಿತರರು ಉಪಸ್ಥಿತರಿದ್ದರು.

ಮತದಾನ ಬಹಿಷ್ಠಾರ: ಮಾಪಲ-ಬೋಳ್ತಿಮಾರು-ಪುಳಿತ್ತಡಿ ರಸ್ತೆಗೆ ಈ ತನಕ ಯಾವುದೇ ಅನುದಾನ ನೀಡಿಲ್ಲ. ಬೇಸಿಗೆಯಲ್ಲಿ 3-4 ತಿಂಗಳು ಮಾತ್ರ ರಸ್ತೆಯಲ್ಲಿ ಸಂಚಾರ ಸಾಧ್ಯವಾಗಿದೆ. ಮಳೆಗಾಲದಲ್ಲಿ ರಸ್ತೆಯಲ್ಲಿಯೇ ನೀರು ಹರಿದು ಸಂಚಾರಕ್ಕೆ ತೊಂದರೆಯಾಗುತ್ತಿದೆ. ಗ್ರಾಪಂನಿಂದ ಕಳೆದ ಸಲ 5 ಸಾವಿರ ಹಾಗೂ ಈ ಸಲ 15 ಸಾವಿರ ರೂ.ಅನುದಾನ ಇಟ್ಟು ದುರಸ್ತಿ ಮಾಡಲಾಗಿದೆ. ಕೂಡಲೇ ಶಾಶ್ವತ ಪರಿಹಾರವಾಗಬೇಕು. ಆದ್ದರಿಂದ ರಸ್ತೆ ಸರಿಯಾಗುವ ತನಕ ಮತದಾನ ಮಾಡದಿರುವ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಗ್ರಾಮಸ್ಥರಾದ ಪ್ರಭಾಕರ ಶೆಟ್ಟಿ ಹೇಳಿದರು.

ಸಂಕ, ಮೋರಿ ರಸ್ತೆ ಕೇಳಬಾರದು – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ರಸ್ತೆ, ಮೋರಿ, ಗುಂಡಿಮುಚ್ಚುವ ಯೋಗ್ಯತೆ ಅರ್ಹತೆ ಬಿಜೆಪಿ ಸರಕಾರಕ್ಕಿಲ್ಲ : ಶಾಸಕ ಯು ಟಿ ಖಾದರ್‌
Ad Widget
Click to comment

Leave a Reply

ಸುಳ್ಯ

Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.

Ad Widget

Ad Widget

Ad Widget

Ad Widget

ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Ad Widget

Ad Widget <> Ad Widget

ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.



Ad Widget

ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.

Ad Widget

Ad Widget

ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.

ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.

ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.

ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.

Ad Widget
Continue Reading

ಸುಳ್ಯ

ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.



Ad Widget

ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Continue Reading

ಸುಳ್ಯ

Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ

Published

on



Ad Widget

Ad Widget

Ad Widget

Ad Widget

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.

Ad Widget

Ad Widget

Ad Widget

Ad Widget

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading