ಅಪರಾಧ
ಕಡಬ : ಬಸ್ಸು ಹಾಗೂ ಕಾರಿನ ಮಧ್ಯೆ ಡಿಕ್ಕಿ – ನವ ದಂಪತಿಗಳ ಜೀವ ಉಳಿಸಿದ ಸೀಟ್ ಬೆಲ್ಟ್
ಕಡಬ : ನ 17 : ಬಸ್ಸು ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ನವ ದಂಪತಿಗಳು ಯಾವುದೇ ಗಾಯಗಳು ಇಲ್ಲದೆ, ಪವಾಡ ಸದೃಶ್ಯವಾಗಿ ಪಾರಾದ ಘಟನೆ ಕಡಬದ ಕೋಡಿಂಬಾಳ ಎಂಬಲ್ಲಿ ನ .17 ರಂದು ಸಂಜೆ ನಡೆದಿದೆ.
ಕೆ.ಎಸ್‌ಅರ್ ಟಿಸಿ ಬಸ್ಸು ಹಾಗೂ ಸ್ವಿಪ್ಟ್ ಕಾರಿನ ಮಧ್ಯೆ ಕೋಡಿಂಬಾಳ ಎಂಬಲ್ಲಿ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿ 6-7 ತಿಂಗಳ ಹಿಂದೆ ವಿವಾಹವಾಗಿದ್ದ ನವ ದಂಪತಿಗಳು ಪ್ರಯಾಣಿಸುತ್ತಿದ್ದು ಇಬ್ಬರು ಸೀಟ್ ಬೆಲ್ಟ್ ಧರಿಸಿದ್ದರು. ನವ ದಂಪತಿಗಳು ಕಡಬದ ನಿವಾಸಿಗಳು ಎಂದು ತಿಳಿದು ಬಂದಿದೆ
ಅಪಘಾತದ ಸಂದರ್ಭ ಕಾರಿನ ಮುಂಭಾಗದ ಎರಡು ಏರ್ ಬ್ಯಾಗ್ ಒಪನ್ ಆಗಿದ್ದು, ಹೀಗಾಗಿ ದಂಪತಿಗಳು ಯಾವುದೇ ಗಾಯಗಳಿಲ್ಲದೇ ಪಾರಾಗಿದ್ದಾರೆ. ಕಾರನ್ನು ಪತಿ ಚಲಾಯಿಸುತ್ತಿದ್ದರು ಎನ್ನಲಾಗಿದು, ಇನ್ನೇನು ಕಾರು ಬಸ್ಸಿಗೆ ಡಿಕ್ಕಿ ಹೊಡೆಯುವ ಸಾಧ್ಯತೆಯಿದೆ ಎನ್ನುವಾಗ ಆತ ಕಾರಿನ ಸ್ಟೇರಿಂಗನ್ನು ತಿರುಗಿಸಿದ್ದು, ಅದೇ ವೇಳೆ ಪತ್ನಿ ಏಕಾಏಕಿ ಹ್ಯಾಂಡ್ ಬ್ರೇಕ್ ಎಳೆದ ಕಾರಣ ಕಾರು ಇದ್ದಕ್ಕಿದಂತೆ ತಿರುಗಿ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ಮೂಲಗಳು ತಿಳಿಸಿವೆ.

ದಂಪತಿಗಳು ಮಡಿಕೇರಿಯಿಂದ ತನ್ನ ಮನೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಯಾವುದೇ ಅಪಾಯ ಸಂಭವಿಸದ ಹಿನ್ಲೆಯಲ್ಲಿ ಕಾರು ಚಾಲಾಕ ಹಾಗೂ ಬಸ್ಸು ಚಾಲಕ ಯಾವುದೇ ಪ್ರಕರಣ ದಾಖಲಿಸದೇ ರಾಜಿ ಮಾತುಕತೆಯಲ್ಲಿ ಪ್ರಕರಣ ಮುಗಿಸಿದ್ದಾರೆ ಎಂದು ತಿಳಿದು ಬಂದಿದೆ.



ಸುಳ್ಯ
Sullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸುಳ್ಯ, ಅ.11: ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೇರಳದ ಕೋಝಿಕ್ಕೋಡ್ ನಿವಾಸಿ ಮಹಮ್ಮದ್ ಅಲಿ (67) ಬಂಧಿತ ಆರೋಪಿ.
ಬಾಲಕೃಷ್ಣ ಎಂಬವರ ಮನೆಗೆ ಬೆಳಗ್ಗೆ ಬಂದ ಆರೋಪಿ, ಮನೆಯ ಬೀಗ ಮುರಿದು ಒಳನುಗ್ಗಿದ್ದಾನೆ. ಮನೆಯವರು ಕೆಲಸಕ್ಕೆ ತೆರಳುವಾಗ ಶಾಲೆಗೆ ರಜೆ ಇದ್ದ ಕಾರಣ ತಮ್ಮ ಮೂವರು ಮಕ್ಕಳನ್ನು ಮನೆಯೊಳಗೆ ಇರಿಸಿ ಹೊರಗಿನಿಂದ ಬೀಗ ಹಾಕಿ ಹೋಗಿದ್ದರು ಎನ್ನಲಾಗಿದೆ.
ಕಳ್ಳತನದ ಉದ್ದೇಶದಿಂದ ಮನೆಗೆ ನುಗ್ಗಿದ ವ್ಯಕ್ತಿಗೆ ಒಳಗಿದ್ದ ಮಕ್ಕಳು ಕಾಣಿಸಿಕೊಂಡಿದ್ದಾರೆ. ಇದರಿಂದ ಗಾಬರಿಗೊಂಡ ಆತ, ಮನೆಯ ಬಾಗಿಲಿನ ಚಿಲಕವನ್ನು ಹೊರಗಿನಿಂದ ಹಾಕಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಮಕ್ಕಳು ತಕ್ಷಣ ತಂದೆ ಬಾಲಕೃಷ್ಣ ಅವರಿಗೆ ಫೋನ್ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ಬಂದ ಬಾಲಕೃಷ್ಣ ಅವರು ಮಕ್ಕಳಿಂದ ಸಂಪೂರ್ಣ ಮಾಹಿತಿ ಪಡೆದು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಸುಳ್ಯ ಪೊಲೀಸರು ತನಿಖೆ ನಡೆಸಿ, ಆಲೆಟ್ಟಿ ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅಪರಾಧ
Udupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಪೊಲೀಸರು, ಬೆದರಿಕೆ ಕರೆಗಳ ಹಿಂದೆ ಹೇಮಂತ್ ಪೂಜಾರಿಯ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಉಡುಪಿ, ಅ.11: ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಪೊಲೀಸರು, ಬೆದರಿಕೆ ಕರೆಗಳ ಹಿಂದೆ ಹೇಮಂತ್ ಪೂಜಾರಿಯ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಕರೆ ಮಾಡಿ ಹಣಕ್ಕಾಗಿ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಎರಡು, ಕಾಪು, ಶಿರ್ವ ಹಾಗೂ ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದ್ದು, ಇನ್ನೂ ಎರಡು-ಮೂರು ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ದೂರುಗಳು ಲಭಿಸಿವೆ ಎಂದು ತಿಳಿದುಬಂದಿದೆ.
ಈ ಪ್ರಕರಣಗಳ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಸಂಬಂಧಪಟ್ಟ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ತನಿಖೆಯ ಪ್ರಗತಿ ಕುರಿತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ವರದಿಗಳನ್ನು ಸಲ್ಲಿಸಲಾಗುತ್ತಿದೆ.
ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಈ ಹಿಂದೆ ಉಡುಪಿ ಜಿಲ್ಲಾ ಪೊಲೀಸರು ಹೇಮಂತ್ ಪೂಜಾರಿಗಾಗಿ ಬಾಂಗ್ಲಾದೇಶದ ಗಡಿಯವರೆಗೂ ಶೋಧ ನಡೆಸಿದ್ದರು. ಆದರೆ, ಆ ಕಾರ್ಯಾಚರಣೆಯಲ್ಲಿ ಆತನ ಪತ್ತೆಯಾಗಿರಲಿಲ್ಲ. ಇದೀಗ ಬೆದರಿಕೆ ಕರೆಗಳ ಪ್ರಕರಣಗಳಲ್ಲಿನ ಸಾಕ್ಷ್ಯಗಳನ್ನು ಆಧರಿಸಿ ತನಿಖೆ ಮುಂದುವರಿಸಲಾಗಿದೆ.
ಕಾಪು ಪೊಲೀಸರ ವಶಕ್ಕೆ ಅನುಜ್ ಪಾಟೀಲ್
ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಶಾರ್ಪ್ ಶೂಟರ್‌ಗಳನ್ನು ಕಳುಹಿಸಿದ್ದ ಆರೋಪ ಎದುರಿಸುತ್ತಿರುವ ಮುಂಬೈ ಮೂಲದ ಗ್ಯಾಂಗ್‌ಸ್ಟರ್, ಬಿಹಾರದ ನಳಂದ ಜಿಲ್ಲೆಯ ಅನುಜ್ ಪಾಟೀಲ್ (35)ನನ್ನು ಕಾಪು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ಈ ಹಿಂದೆ ಬೈಂದೂರು ಹಾಗೂ ಹೆಬ್ರಿ ಪೊಲೀಸರು ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು. ಇದೀಗ ಕಾಪು ಪೊಲೀಸರು ವಶಕ್ಕೆ ಪಡೆದು, ಹೇಮಂತ್ ಪೂಜಾರಿಯೊಂದಿಗಿನ ಆತನ ಸಂಪರ್ಕ ಹಾಗೂ ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.
ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಬಂದಿರುವ ಬೆದರಿಕೆ ಕರೆಗಳ ಆಡಿಯೋಗಳನ್ನು ಪರಿಶೀಲಿಸಲಾಗುತ್ತಿದೆ. ಈ ಕರೆಗಳನ್ನು ಹೇಮಂತ್ ಪೂಜಾರಿಯೇ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರಿನಲ್ಲಿ ಬೇರೆ ಯಾರಾದರೂ ಬೆದರಿಕೆ ಹಾಕುತ್ತಿದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.
ಪೊಲೀಸ್ ಆಯುಧ ಕಸಿದು ಗುಂಡು ಹಾರಿಸಲು ಯತ್ನಿಸಿದ್ದ ಆರೋಪ
2017ರಿಂದ ತಲೆಮರೆಸಿಕೊಂಡಿದ್ದ ಅನುಜ್ ಪಾಟೀಲ್ ಮುಂಬೈ ಕೇಂದ್ರವಾಗಿಸಿಕೊಂಡು ಕಾರ್ಯಾಚರಿಸುತ್ತಿದ್ದ ಎನ್ನಲಾಗಿದೆ. ಆತನ ವಿರುದ್ಧ ಮಹಾರಾಷ್ಟ್ರದಲ್ಲಿ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಒಟ್ಟು 11 ಕ್ರಿಮಿನಲ್ ಪ್ರಕರಣಗಳು ಆತನ ವಿರುದ್ಧ ದಾಖಲಾಗಿದ್ದು, ಅವುಗಳಲ್ಲಿ 10 ಪ್ರಕರಣಗಳು ಶಸ್ತ್ರಾಸ್ತ್ರ ಕಾಯ್ದೆಗೆ ಸಂಬಂಧಿಸಿದ್ದಾಗಿವೆ ಎಂದು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತ್‌ನಲ್ಲಿ ಐದು, ದಮನ್ ಮತ್ತು ದಿಯುನಲ್ಲಿ ಒಂದು ಹಾಗೂ ಕರ್ನಾಟಕದಲ್ಲಿ ಒಂದು ಪ್ರಕರಣ ದಾಖಲಾಗಿತ್ತು.
ಉಡುಪಿ ಜಿಲ್ಲಾ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿ ಕರೆತರುತ್ತಿದ್ದಾಗ, ಹೆಬ್ರಿ ತಾಲೂಕಿನ ಸೋಮೇಶ್ವರದಲ್ಲಿ ಮೂತ್ರ ವಿಸರ್ಜನೆಗೆಂದು ಪೊಲೀಸ್ ವಾಹನದಿಂದ ಕೆಳಗಿಳಿದಿದ್ದ ಅನುಜ್ ಪಾಟೀಲ್, ಕೊಲ್ಲೂರು ಪೊಲೀಸ್ ಠಾಣೆಯ ಪಿಎಸ್‌ಐ ವಿನಯ್ ಅವರ ಸೇವಾ ಆಯುಧವನ್ನು ಕಸಿದು ಗುಂಡು ಹಾರಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಆತ್ಮರಕ್ಷಣೆಗಾಗಿ ಪಿಎಸ್‌ಐ ನಂಜ ನಾಯಕ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದರು. ಗಾಯಗೊಂಡ ಆತನನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಚಿಕಿತ್ಸೆಯ ಬಳಿಕ ತನಿಖೆ ಮುಂದುವರಿಸಿರುವ ಪೊಲೀಸರು, ಬೈಂದೂರು ಮತ್ತು ಹೆಬ್ರಿ ಠಾಣೆಗಳ ನಂತರ ಇದೀಗ ಕಾಪು ಪೊಲೀಸರ ವಶದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಅನುಜ್ ಪಾಟೀಲ್‌ನ ಅಪರಾಧ ಚಟುವಟಿಕೆಗಳು, ಹೇಮಂತ್ ಪೂಜಾರಿಯೊಂದಿಗಿನ ಸಂಪರ್ಕ ಹಾಗೂ ಬೆದರಿಕೆ ಕರೆಗಳ ಹಿಂದಿನ ಜಾಲದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಅಂತರ ರಾಜ್ಯ
Kasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
ಮದುವೆಯಿಂದ ಹಿಂದೆ ಸರಿದ ಯುವತಿ ಹಾಗೂ ಆಕೆಯ ಕುಟುಂಬದವರ ವಿರುದ್ಧ ವರನ ಮನೆಯವರು ನೀಡಿದ ದೂರಿನ ಮೇರೆಗೆ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿಶ್ಚಿತಾರ್ಥದ ಸಂದರ್ಭದಲ್ಲಿ ನೀಡಿದ್ದ ಚಿನ್ನಾಭರಣ, ಐಫೋನ್, ನಗದು ಸೇರಿದಂತೆ ಸುಮಾರು ₹7.57 ಲಕ್ಷ ಮೌಲ್ಯದ ಉಡುಗೊರೆಗಳನ್ನು ಹಿಂದಿರುಗಿಸದೆ ವಂಚಿಸಿದ್ದಾರೆ ಎಂಬುದು ಆರೋಪವಾಗಿದೆ.
ಕಾಸರಗೋಡು: ಮದುವೆಯಿಂದ ಹಿಂದೆ ಸರಿದ ಯುವತಿ ಹಾಗೂ ಆಕೆಯ ಕುಟುಂಬದವರ ವಿರುದ್ಧ ವರನ ಮನೆಯವರು ನೀಡಿದ ದೂರಿನ ಮೇರೆಗೆ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿಶ್ಚಿತಾರ್ಥದ ಸಂದರ್ಭದಲ್ಲಿ ನೀಡಿದ್ದ ಚಿನ್ನಾಭರಣ, ಐಫೋನ್, ನಗದು ಸೇರಿದಂತೆ ಸುಮಾರು ₹7.57 ಲಕ್ಷ ಮೌಲ್ಯದ ಉಡುಗೊರೆಗಳನ್ನು ಹಿಂದಿರುಗಿಸದೆ ವಂಚಿಸಿದ್ದಾರೆ ಎಂಬುದು ಆರೋಪವಾಗಿದೆ.
ನ್ಯಾಯಾಲಯದ ಆದೇಶದ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮದುವೆ ರದ್ದಾದ ಬಳಿಕ ಉಡುಗೊರೆಗಳನ್ನು ಹಿಂದಿರುಗಿಸದ ಕಾರಣ ತಮ್ಮ ಕುಟುಂಬಕ್ಕೆ ₹7,57,037 ನಷ್ಟವಾಗಿದೆ ಎಂದು ವರನ ಕಡೆಯವರು ದೂರಿನಲ್ಲಿ ತಿಳಿಸಿದ್ದಾರೆ.
ಪಡನ್ನಕ್ಕಾಡ್ ಸಮೀಪದ ಯುವಕನಿಗೆ ಉದುಮ ಸಮೀಪದ ಯುವತಿಯೊಂದಿಗೆ ವಿವಾಹ ನಡೆಸಲು 2026ರ ಏಪ್ರಿಲ್‌ನಲ್ಲಿ ನಿಶ್ಚಯಿಸಲಾಗಿತ್ತು. ಈ ಸಂದರ್ಭದಲ್ಲಿ ನಿಶ್ಚಿತಾರ್ಥದ ಭಾಗವಾಗಿ ವಧುವಿಗೆ ಐಫೋನ್, ಚಿನ್ನಾಭರಣ, ವಿವಿಧ ಉಡುಗೊರೆಗಳು ಹಾಗೂ ನಗದು ಸೇರಿದಂತೆ ಸುಮಾರು ₹7.5 ಲಕ್ಷ ಮೌಲ್ಯದ ವಸ್ತುಗಳನ್ನು ವರನ ಕುಟುಂಬದವರು ನೀಡಿದ್ದರು ಎನ್ನಲಾಗಿದೆ.
ಆದರೆ, ಬಳಿಕ ಯುವತಿ ಮದುವೆಯಿಂದ ಹಿಂದೆ ಸರಿದಿದ್ದು, ಆಕೆಯ ತಾಯಿ ಹಾಗೂ ಮಾವನೊಂದಿಗೆ ಸೇರಿ ಮದುವೆ ರದ್ದುಗೊಳಿಸಲು ಸಂಚು ರೂಪಿಸಿದ್ದಾರೆ ಎಂದು ವರನ ಕಡೆಯವರು ಆರೋಪಿಸಿದ್ದಾರೆ. ಅಲ್ಲದೆ, ನಿಶ್ಚಿತಾರ್ಥದ ವೇಳೆ ನೀಡಿದ್ದ ಐಫೋನ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಹಿಂದಿರುಗಿಸಲು ನಿರಾಕರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
-
Uncategorized19 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized22 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized21 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized22 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized23 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
ಅಂತರ ರಾಜ್ಯ5 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
Uncategorized21 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಬಿಗ್ ನ್ಯೂಸ್5 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ


















