ರಾಜ್ಯ
Kunigal Stud farm | ಟಿಪ್ಪು ಸ್ಥಾಪಿಸಿದ ದೇಶದ ಅತಿ ದೊಡ್ಡ ಕುದುರೆ ಸಂತಾನೋತ್ಪತ್ತಿ ಕೇಂದ್ರದಲ್ಲಿ ಹೆಜ್ಜೇನು ದಾಳಿಗೆ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಎರಡು ಕುದುರೆ ಸಾವು – ಕರ್ನಾಟಕದಲ್ಲಿರುವ ಈ ಕುದುರೆ ಸ್ಟಡ್ ಫಾರಂನಲ್ಲಿ ಸತ್ತ ಕುದುರೆಗಳು ಯಾವಾ ದೇಶದ್ದು? ಅದರ ಮೌಲ್ಯ ಏನೂ ಗೊತ್ತೇ ..?
ಕುಣಿಗಲ್ : ಹೆಜ್ಜೇನು ದಾಳಿಗೆ ಕೋಟ್ಯಂತರ ರೂ. ಬೆಲೆ ಬಾಳುವ ಐರ್ಲ್ಯಾಂಡ್ ಹಾಗೂ ಅಮೆರಿಕದ ಎರಡು ಗಂಡು ತಳಿ ಕುದುರೆ ದಾರುಣವಾಗಿ ಕೊನೆಯುಸಿರೆಳೆದಿರುವ ಘಟನೆ ಕುಣಿಗಲ್ ಸ್ಟಡ್ ಫಾರಂನಲ್ಲಿ (Kunigal Stud farm) ನಡೆದಿದೆ.
ಎಂದಿನಂತೆ ಬುಧವಾರ ಏರ್ ಸಫೋರ್ಟ್, ಸನಸ್ ಪರ್ ಅಕ್ಚಮ್ ಎಂಬ ಎರಡು ಕುದುರೆಗಳನ್ನು ಸ್ಟಾಲಿನ್ ಪ್ಯಾಡಕ್‌ಗೆ ಮೇಯಲು ಬಿಡಲಾಗಿತ್ತು, ಆದರೆ ಮಧ್ಯಾಹ್ನ ಸುಮಾರು ಒಂದು ಗಂಟೆ ಸಮಯದಲ್ಲಿ ದಿಢೀರನೇ ಸಾವಿರಾರು ಹೆಜ್ಜೇನುಗಳು ಎರಡು ಕುದುರೆಗಳ ಮೇಲೆ ಏಕಾ ಏಕಿ ದಾಳಿ ಮಾಡಿದವು, ಜೇನು ಹುಳುಗಳ ದಾಳಿಗೆ ಎರಡು ಕುದುರೆಗಳು ಕಿರಿಚಿಕೊಂಡು ನೆಲಕ್ಕೆ ಬಿದ್ದು ಒದ್ದಾಡುತ್ತಿದ್ದವು ಇದನ್ನು ಗಮನಿಸಿದ ಇಲ್ಲಿನ ಕಾರ್ಮಿಕರು ವೈದ್ಯರಿಗೆ ಮಾಹಿತಿ ನೀಡಿದರು.
ತತ್ ಕ್ಷಣ ಘಟನೆ ಸ್ಥಳಕ್ಕೆ ತೆರಳಿದ ವೈದ್ಯರ ತಂಡ ದಾಳಿಯಲ್ಲಿ ಗಾಯಗೊಂಡ ಕುದುರೆಗಳಿಗೆ ಸ್ಟಡ್ ಫಾರಂ ನಲ್ಲಿ ಚಿಕಿತ್ಸೆ ನೀಡಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ 10 ಗಂಟೆ ವೇಳೆಯಲ್ಲಿ ಸನಸ್ ಪರ್ ಅಕ್ಚಮ್ ಕೊನೆಯುಸಿರೆಳೆದರೆ ಏರ್ ಸಫೋರ್ಟ್ ಕುದುರೇ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದೆ.
ಅಮೆರಿಕದ ಏರ್ ಸಫೋರ್ಟ್ ಕುದುರೆಯು ವರ್ಜಿನಿಯಾ ಡರ್ಬಿಯಲ್ಲಿ ಭಾಗಿಯಾಗಿದೆ, ಪಿಲ್ಗ್ರಮಾ ಸ್ಟೇಕ್ಸ್, ಟ್ರಾನ್ಸ್ಲೇನಿಯಾ ಸ್ಟೇಕ್ಸ್, ಎರಡನೇ ಯುನೈಟೆಡ್ ನೇಷನ್ಸ್ ಸ್ಟೇಕ್ಸ್, ಮೂರನೇ ಅಮೇರಿಕನ್ ಟರ್ಫ್ ಸ್ಟೇಕ್ಸ್, ಎರಡನೇ ಹಿಲ್ ಪ್ರಿನ್ಸ್ ಸ್ಟೇಕ್ಸ್ ರೇಸಿನಲ್ಲಿ ಜಯಗಳಿಸಿ ಕೋಟ್ಯಾಂತ ರೂ ಸಂಪಾದಿಸಿದೆ ಎನ್ನಲಾಗಿದೆ, ಐರಲ್ಯಾಂಡ್ ದೇಶದ ಹತ್ತು ವರ್ಷದ ಸನಸ್ ಪರ್ ಅಕ್ಚಮ್ ಕುದುರೆ ಐದು ಸ್ಟಾರ್ ಕುದುರೇ ರೇಸ್‌ನಲ್ಲಿ ಮೂರು ಭಾರಿ ಜಯಭೇರಿ ಭಾರಿಸಿ ಲಾಭ ತಂದು ಕೊಟ್ಟಿದೆ.
ಕುದುರೆ ತಳಿ ಉತ್ಪಾದನೆ: ಕುದುರೆ ರೇಸಿನಲ್ಲಿ ಉತ್ತಮ ಸಾಧನೆ ಮಾಡಿರುವ ಈ ಎರಡು ಕುದುರೆಗಳನ್ನು ಅಮೆರಿಕ ಹಾಗೂ ಐರ್ಲ್ಯಾಂಡ್ ದೇಶಗಳಿಂದ ಕಳೆದ ಆರು ವರ್ಷದ ಹಿಂದೆ ಯುಆರ್‌ಬಿಬಿ ತಲಾ ಒಂದು ಕೋಟಿ ರೂಗಳಂತೆ ಎರಡು ಕೋಟಿ ರೂಗಳಿಗೆ ಖರೀದಿಸಿ ಈ ಬೀಜದ ತಳಿಯ ಕುದುರೆಗಳಿಂದ ಕುದುರೆ ಮರಿ ತಳಿಗಳನ್ನು ಉತ್ಪಾದಿಸಲಾಗುತ್ತಿತು ಎನ್ನಲಾಗಿದೆ.ಈ ಕುದುರೆಗಳು ನೂರಾರು ಕುದುರೆ ಮರಿಗಳಿಗೆ ಜನ್ಮ ನೀಡಿವೆ, ಈ ಕುದುರೆ ಮರಿಗಳನ್ನು ಬೇರೆ ಬೇರೆ ರಾಜ್ಯಗಳು ಹಾಗೂ ದೇಶಗಳಿಂದ ಬಂದು ಲಕ್ಷಾಂತರ ರೂಗೆ ಖರೀದಿ ಮಾಡಿ ರೇಸ್‌ಗೆ ಬಳಸಿಕೊಳ್ಳುತ್ತಿದ್ದಾರೆ.
ಸ್ಟಡ್‌ಫಾರಂಗೆ ಅಘಾತ: ಸರ್ಕಾರವು 30 ವರ್ಷಗಳ ಅವಧಿಗೆ ಯುಆರ್‌ಬಿ’ ಬಿಗೆ ಗುತ್ತಿಗೆ ನೀಡಿತ್ತು. ಈ ಗುತ್ತಿಗೆ ಅವಧಿ ಕಳೆದ ಸೆಪ್ಟಂಬರ್‌ಗೆ ಮುಗಿದಿತ್ತಾದರೂ ಮತ್ತೆ ಯುಆರ್‌ಬಿಬಿ ಸ್ವಲ್ಪ ದಿವಸ ಕಾಲವಕಾಶ ತೆಗೆದುಕೊಂಡಿತ್ತು. ಇದೇ ವೇಳೆ ಎರಡು ಬೀಜದ ತಳಿ ಕುದುರೆಗಳು ಹೆಜ್ಜೇನು ದಾಳಿಗೆ ತುತ್ತಾಗಿದ್ದು ಸ್ಟಡ್ ಫಾರಂಗೆ ಏಕ ಕಾಲದಲ್ಲಿ ಎರಡು ಅಘಾತಗಳು ಉಂಟಾಗಿದೆ.
ಕೇಂದ್ರ ವಹಿಸಿಕೊಳ್ಳಬೇಕು: ಸಂಸದ – ಖಾಸಗಿಯವರ ಗುತ್ತಿಗೆ ಅವಧಿ ಮುಗಿದಿರುವ ಕುಣಿಗಲ್ ಸ್ಟಡ್ ಫಾರ್ಮ್ ಅಭಿವೃದ್ಧಿಯ ಹೊಣೆಯನ್ನು ಕೇಂದ್ರ ಸರ್ಕಾರ ವಹಿಸಿಕೊಳ್ಳಬೇಕು ಎಂದು ಮಾಜಿ ಸಂಸದ ಎಸ್ .ಪಿ.ಮುದ್ದಹನುಮೇಗೌಡ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ದೆಹಲಿಯಲ್ಲಿ ಇತ್ತೀಚೆಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿದ ಎಸ್‌ಪಿಎಂ, ಕುಣಿಗಲ್ ಸ್ಟಡ್ ಫಾರ್ಮ್ ವಿಶ್ವವಿಖ್ಯಾತ ಕುದುರೆ ಸಂತಾನೋತ್ಪತ್ತಿ ಕೇಂದ್ರವಾಗಿದೆ. 421 ಎಕರೆ ಪ್ರದೇಶದಲ್ಲಿರುವ ಸ್ಟಡ್ ಫಾರ್ಮ್‌ನ ನಿರ್ವಹಣೆಯನ್ನು ಕೇಂದ್ರ ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಪ್ರಸ್ತಾವನೆ ಸಲ್ಲಿಸಲು ಮನವಿ ಮಾಡಿದರು.
ಟಿಪ್ಪು ಸ್ಥಾಪಿಸಿದ ಕುದುರೆ ಸಂತಾನೋತ್ಪತ್ತಿ ಕೇಂದ್ರ: 1790 ರ ದಶಕದಲ್ಲಿ, ಬೆಂಗಳೂರು ನಗರದಿಂದ ಸುಮಾರು 72 ಕಿ.ಮೀ. ದೂರದಲ್ಲಿ, ಟಿಪ್ಪು ಸುಲ್ತಾನ್ ತನ್ನದೇ ಆದ ಕುದುರೆ ಸಂತಾನೋತ್ಪತ್ತಿ ಕೇಂದ್ರವನ್ನು ಸ್ಥಾಪಿಸಿದ ಎನ್ನಲಾಗಿದ. ಇಂದು, ಆ ಮೂಲ ಸಂತಾನೋತ್ಪತ್ತಿ ಕೇಂದ್ರವನ್ನು ಕುಣಿಗಲ್ ಸ್ಟಡ್ ಫಾರ್ಮ್ ಆಗಿ ವಿಸ್ತರಿಸಲಾಗಿದೆ. ಇದು ಆಗ್ನೇಯ ಏಷ್ಯಾದ ಅತಿದೊಡ್ಡ ಮತ್ತು ದೇಶದ ಟಾಪ್ ಐದು ಹಾರ್ಸ್ ಫಾರ್ಮ್ ಗಳಲ್ಲಿ ಒಂದಾಗಿದೆ.
ಇಲ್ಲಿನ ಮಣ್ಣಿನ ಸತ್ವ ವಿದೇಶದ ಕುದುರೆಗಳು ಫಾರ್ಮ್ ಹೌಸ್‌ನಲ್ಲಿ ಬಹಳಷ್ಟು ಆರೋಗ್ಯಾಪೂರ್ಣವಾಗಿ ಬೆಳೆಯುತ್ತದೆ. ಇಂದಿನವರೆಗೆ ಇಲ್ಲಿ ಕುದುರೆಗಳು ಸಾವನ್ನಪ್ಪಿದ ಘಟನೆ ನಡೆದಿರಲಿಲ್ಲ.
ಕುಣಿಗಲ್ ಸ್ಟಡ್ ಫಾರ್ಮ್ ಎಂದೇ ಜನಪ್ರಿಯವಾಗಿರುವ ಇದನ್ನು 1992 ರಲ್ಲಿ ಕರ್ನಾಟಕ ಸರ್ಕಾರವು ಕೈಗಾರಿಕೋದ್ಯಮಿ ವಿಜಯ್ ಮಲ್ಯ ಅವರ ರೇಸ್ ಹಾರ್ಸ್ ವಿಭಾಗಕ್ಕೆ ಗುತ್ತಿಗೆ ನೀಡಿದಾಗ, ಈ ಫಾರ್ಮ್ ಅನ್ನು ಯುನೈಟೆಡ್ ರೇಸಿಂಗ್ ಮತ್ತು ಬ್ಲಡ್ಸ್ಟಾಕ್ ಬ್ರೀಡರ್ಸ್ ಅಥವಾ ಯುಆರ್‌ಬಿಬಿ ಎಂದು ಹೆಸರಿಸಲಾಯಿತು.
ರಾಜ್ಯ
Robotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್‌ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
ಸ್ಪೇನ್‌ನ ಬಾರ್ಸಿಲೋನಾದಲ್ಲಿ ಕುಳಿತು ವೈದ್ಯರೊಬ್ಬರು 12 ಸಾವಿರ ಕಿ.ಮೀ.ಗೂ ಹೆಚ್ಚು ದೂರದಲ್ಲಿರುವ ಕರ್ನಾಟಕದ ಮುದ್ದೇನಹಳ್ಳಿಯ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಾಧ್ಯತೆಗಳನ್ನು ಮತ್ತೊಮ್ಮೆ ಸಾಬೀತುಪಡಿಸಲಾಗಿದೆ.
ಚಿಕ್ಕಬಳ್ಳಾಪುರ: ಸ್ಪೇನ್‌ನ ಬಾರ್ಸಿಲೋನಾದಲ್ಲಿ ಕುಳಿತು ವೈದ್ಯರೊಬ್ಬರು 12 ಸಾವಿರ ಕಿ.ಮೀ.ಗೂ ಹೆಚ್ಚು ದೂರದಲ್ಲಿರುವ ಕರ್ನಾಟಕದ ಮುದ್ದೇನಹಳ್ಳಿಯ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಾಧ್ಯತೆಗಳನ್ನು ಮತ್ತೊಮ್ಮೆ ಸಾಬೀತುಪಡಿಸಲಾಗಿದೆ.
ಮುದ್ದೇನಹಳ್ಳಿಯ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (SMSIMSR) ಈ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ.
ಭಾರತೀಯ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸಾ ಕ್ಷೇತ್ರದ ಪ್ರಮುಖ ತಜ್ಞ ಡಾ. ಸುಧೀರ್ ಶ್ರೀವಾಸ್ತವ ಅವರು ಬಾರ್ಸಿಲೋನಾದಲ್ಲಿ ನಡೆದ ಯುರೋಪಿಯನ್ ಅಸೋಸಿಯೇಷನ್ ಫಾರ್ ಕಾರ್ಡಿಯೋ-ಥೊರಾಸಿಕ್ ಸರ್ಜರಿ (EACTS) ವಾರ್ಷಿಕ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದಾಗಲೇ ದೂರದಿಂದ ರೋಬೋಟ್ ನಿಯಂತ್ರಿಸಿ ಶಸ್ತ್ರಚಿಕಿತ್ಸೆ ನಡೆಸಿದರು.
ಜನ್ಮಜಾತ ಹೃದಯ ಸಮಸ್ಯೆಗೆ ಚಿಕಿತ್ಸೆ
ಕೋಲಾರ ಜಿಲ್ಲೆಯ 26 ವರ್ಷದ ಮಹಿಳೆಯೊಬ್ಬರು ಹೃದಯದ ಮೇಲಿನ ಎರಡು ಕೋಣೆಗಳ ನಡುವಿನ ಗೋಡೆಯಲ್ಲಿ ಜನ್ಮಜಾತ ರಂಧ್ರವಿರುವ ಸಮಸ್ಯೆಯಿಂದ ಬಳಲುತ್ತಿದ್ದರು. ವೈದ್ಯಕೀಯ ಭಾಷೆಯಲ್ಲಿ ಇದನ್ನು ಆಟ್ರಿಯಲ್ ಸೆಪ್ಟಲ್ ಡಿಫೆಕ್ಟ್ (ASD) ಎಂದು ಕರೆಯಲಾಗುತ್ತದೆ.
ಬಾರ್ಸಿಲೋನಾದಲ್ಲಿ ಅಳವಡಿಸಲಾಗಿದ್ದ ರೋಬೋಟಿಕ್ ಶಸ್ತ್ರಚಿಕಿತ್ಸಾ ಕನ್ಸೋಲ್ ಮೂಲಕ ಡಾ. ಸುಧೀರ್ ಶ್ರೀವಾಸ್ತವ ಅವರು ಮುದ್ದೇನಹಳ್ಳಿಯ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿದ್ದ ‘ಎಸ್‌ಎಸ್‌ಐ ಮಂತ್ರ’ ರೋಬೋಟಿಕ್ ವ್ಯವಸ್ಥೆಯನ್ನು ನಿಯಂತ್ರಿಸಿದರು. ಸುಮಾರು ಮೂರರಿಂದ ನಾಲ್ಕು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಯಿತು.
ಮಣಿಪಾಲ್ ಆಸ್ಪತ್ರೆಯ ಜೈಪುರ ಘಟಕದ ಮುಖ್ಯ ಹೃದಯ ಶಸ್ತ್ರಚಿಕಿತ್ಸಕ ಹಾಗೂ ರೋಬೋಟಿಕ್ ಶಸ್ತ್ರಚಿಕಿತ್ಸಕ ಡಾ. ಲಲಿತ್ ಮಲಿಕ್ ಮತ್ತು ಮುದ್ದೇನಹಳ್ಳಿಯ ಸಂಸ್ಥೆಯ ಮುಖ್ಯ ಹೃದಯ ಶಸ್ತ್ರಚಿಕಿತ್ಸಕ ಡಾ. ಸಿ.ಎಸ್. ಹಿರೇಮಠ ಅವರು ಸ್ಥಳದಲ್ಲಿದ್ದು, ಶಸ್ತ್ರಚಿಕಿತ್ಸೆಗೆ ಅಗತ್ಯವಾದ ನೆರವು ನೀಡಿದರು. ರೋಗಿಯ ಆರೋಗ್ಯದ ಮೇಲೂ ನಿರಂತರ ನಿಗಾ ವಹಿಸಿದರು.
ಆರು ಗಂಟೆಗಳಲ್ಲಿ ಉಸಿರಾಟದ ಟ್ಯೂಬ್ ತೆರವು
ಶಸ್ತ್ರಚಿಕಿತ್ಸೆಯ ಬಳಿಕ ಮಹಿಳೆಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಸುಮಾರು ಆರು ಗಂಟೆಗಳ ನಂತರ ಉಸಿರಾಟಕ್ಕೆ ಅಳವಡಿಸಿದ್ದ ಟ್ಯೂಬ್ ಅನ್ನು ತೆಗೆದುಹಾಕಲಾಯಿತು ಎಂದು ಆಸ್ಪತ್ರೆ ತಿಳಿಸಿದೆ.
ಶಸ್ತ್ರಚಿಕಿತ್ಸೆ ವೇಳೆ ಮೂರು ಸಣ್ಣ ಛೇದನಗಳನ್ನು ಮಾಡಲಾಗಿದ್ದು, ಪ್ರತಿಯೊಂದೂ ಐದು ಮಿಲಿಮೀಟರ್‌ಗಿಂತ ಕಡಿಮೆ ಗಾತ್ರದ್ದಾಗಿತ್ತು. ಇದರಿಂದ ರಕ್ತಸ್ರಾವ ಮತ್ತು ಶಸ್ತ್ರಚಿಕಿತ್ಸೆಯ ನಂತರದ ನೋವು ಕಡಿಮೆಯಾಗಿತ್ತು ಎಂದು ಸಂಸ್ಥೆ ಹೇಳಿದೆ.
ದೂರದ ಅಂತರವನ್ನೂ ಮೀರಿದ ವೈದ್ಯಕೀಯ ತಂತ್ರಜ್ಞಾನ
ಇದೇ ಆಸ್ಪತ್ರೆಯಲ್ಲಿ ಈ ಹಿಂದೆ ಗುರುಗ್ರಾಮ್‌ನಿಂದ ರೋಬೋಟಿಕ್ ವ್ಯವಸ್ಥೆಯನ್ನು ನಿಯಂತ್ರಿಸಿ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಸ್ಪೇನ್‌ನ ಬಾರ್ಸಿಲೋನಾದಿಂದಲೇ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ದೂರಸ್ಥ ರೋಬೋಟಿಕ್ ವೈದ್ಯಕೀಯ ತಂತ್ರಜ್ಞಾನದ ಅಂತರರಾಷ್ಟ್ರೀಯ ಬಳಕೆಯ ಸಾಧ್ಯತೆಗಳನ್ನು ಪ್ರದರ್ಶಿಸಲಾಗಿದೆ.
ಇಂತಹ ತಂತ್ರಜ್ಞಾನವು ಭವಿಷ್ಯದಲ್ಲಿ ಗ್ರಾಮೀಣ ಪ್ರದೇಶಗಳು ಹಾಗೂ ಪರಿಣತ ವೈದ್ಯರ ಕೊರತೆಯಿರುವ ಸ್ಥಳಗಳಿಗೂ ಉನ್ನತ ಮಟ್ಟದ ವೈದ್ಯಕೀಯ ಸೇವೆ ತಲುಪಿಸಲು ನೆರವಾಗಬಹುದು. ವೈದ್ಯಕೀಯ ಶಿಕ್ಷಣ, ಶಸ್ತ್ರಚಿಕಿತ್ಸಾ ತರಬೇತಿ ಮತ್ತು ವಿವಿಧ ದೇಶಗಳ ತಜ್ಞ ವೈದ್ಯರ ಸಹಯೋಗಕ್ಕೂ ಇದು ಹೊಸ ಅವಕಾಶಗಳನ್ನು ಕಲ್ಪಿಸಬಹುದು.
ಆದರೆ ಇಂತಹ ಶಸ್ತ್ರಚಿಕಿತ್ಸೆಗಳನ್ನು ಸುರಕ್ಷಿತವಾಗಿ ನಡೆಸಲು ವಿಶ್ವಾಸಾರ್ಹ ಸಂವಹನ ವ್ಯವಸ್ಥೆ, ಸ್ಥಳೀಯ ವೈದ್ಯಕೀಯ ತಂಡದ ಸಮನ್ವಯ ಮತ್ತು ಸೂಕ್ತ ಸುರಕ್ಷತಾ ಕ್ರಮಗಳು ಅತ್ಯಗತ್ಯ.
ಬಡ ಕುಟುಂಬದ ಮಹಿಳೆಗೆ ಸಂಪೂರ್ಣ ಉಚಿತ ಚಿಕಿತ್ಸೆ
ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಇಬ್ಬರು ಮಕ್ಕಳ ತಾಯಿಯಾಗಿದ್ದು, ಅವರ ಪತಿ ಆಟೋರಿಕ್ಷಾ ಚಾಲಕರಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಈ ಕುಟುಂಬಕ್ಕೆ ದುಬಾರಿ ಹೃದಯ ಶಸ್ತ್ರಚಿಕಿತ್ಸೆಯ ವೆಚ್ಚ ಭರಿಸುವುದು ಕಷ್ಟವಾಗಿತ್ತು.
ಇದನ್ನು ಗಮನದಲ್ಲಿಟ್ಟುಕೊಂಡು ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಶಸ್ತ್ರಚಿಕಿತ್ಸೆ ಸೇರಿದಂತೆ ಸಂಪೂರ್ಣ ಚಿಕಿತ್ಸೆಯನ್ನು ಉಚಿತವಾಗಿ ಒದಗಿಸಿದೆ.
ಆಧುನಿಕ ರೋಬೋಟಿಕ್ ತಂತ್ರಜ್ಞಾನದ ನೆರವಿನಿಂದ ನಡೆದ ಈ ಶಸ್ತ್ರಚಿಕಿತ್ಸೆ, ದೂರದ ಅಂತರವನ್ನು ಮೀರಿಯೂ ಪರಿಣತ ವೈದ್ಯಕೀಯ ಸೇವೆಯನ್ನು ರೋಗಿಗಳಿಗೆ ತಲುಪಿಸಬಹುದೆಂಬುದಕ್ಕೆ ಮಹತ್ವದ ಉದಾಹರಣೆಯಾಗಿದೆ.
ರಾಜ್ಯ
Temperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಹಿಂಗಾರು ಅವಧಿಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಈ ಅವಧಿಯ ವಾಡಿಕೆ ಸರಾಸರಿ ಮಳೆ 182.2 ಮಿ.ಮೀ. ಆಗಿದ್ದು, ದಕ್ಷಿಣ ಒಳನಾಡಿನಲ್ಲಿ 201.9 ಮಿ.ಮೀ. ವಾಡಿಕೆ ಮಳೆಯಿದೆ. ಆದರೆ ಈ ಬಾರಿ ಈ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಕೊರತೆಯ ಮುನ್ಸೂಚನೆಯು ಕೃಷಿ ಹಾಗೂ ಜಲಾಶಯಗಳ ನೀರಿನ ನಿರ್ವಹಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ನೀರಿನ ಮಿತವ್ಯಯ ಹಾಗೂ ಪರ್ಯಾಯ ಬೆಳೆ ಯೋಜನೆಗಳತ್ತ ಗಮನಹರಿಸುವ ಅಗತ್ಯವಿದೆ.
ಮಳೆ ಕೊರತೆಗೆ ಕಾರಣವೇನು?
ಎಲ್ ನಿನೋ ಪ್ರಭಾವ: ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ ಪರಿಸ್ಥಿತಿ ಮುಂದುವರಿದಿದ್ದು, ಸಮುದ್ರದ ಮೇಲ್ಮೈ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಈ ಪರಿಸ್ಥಿತಿ ವರ್ಷಾಂತ್ಯದವರೆಗೂ ಮುಂದುವರಿಯುವ ಸಾಧ್ಯತೆಯಿದ್ದು, ಹಿಂಗಾರು ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ತಟಸ್ಥ ಐಒಡಿ: ಹಿಂದೂ ಮಹಾಸಾಗರದಲ್ಲಿನ ಇಂಡಿಯನ್ ಓಷನ್ ಡೈಪೋಲ್ (IOD) ಸದ್ಯ ತಟಸ್ಥ ಸ್ಥಿತಿಯಲ್ಲಿದ್ದು, ಹಿಂಗಾರು ಅವಧಿಯಲ್ಲೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.
ದಕ್ಷಿಣ ಭಾರತದಲ್ಲಿ ಹೇಗಿರಲಿದೆ ಮಳೆ?
ತಮಿಳುನಾಡು, ಪುದುಚೇರಿ-ಕಾರೈಕಲ್, ಕರಾವಳಿ ಆಂಧ್ರಪ್ರದೇಶ-ಯಾನಾಂ, ರಾಯಲಸೀಮೆ, ಕೇರಳ-ಮಾಹೆ ಸೇರಿದಂತೆ ದಕ್ಷಿಣ ಭಾರತದ ಕೆಲವು ಹವಾಮಾನ ಉಪವಿಭಾಗಗಳಲ್ಲಿ ಹಿಂಗಾರು ಮಳೆ ಸಾಮಾನ್ಯ ಅಥವಾ ವಾಡಿಕೆಯಷ್ಟಿರುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಮಳೆ ವಾಡಿಕೆಯಷ್ಟಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.
ದೇಶದ ಮಟ್ಟದಲ್ಲಿ ಅಕ್ಟೋಬರ್‌ನಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ವಾಯವ್ಯ ಭಾರತದ ಕೆಲವು ಭಾಗಗಳು, ದಕ್ಷಿಣ ಪರ್ಯಾಯ ದ್ವೀಪ ಹಾಗೂ ಪೂರ್ವ ಭಾರತದ ಕೆಲವೆಡೆ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.
ಮಳೆಯಷ್ಟೇ ಅಲ್ಲ, ತಾಪಮಾನವೂ ಏರಿಕೆ
ಹಿಂಗಾರು ಮಳೆಯ ಕೊರತೆಯೊಂದಿಗೆ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ.
ಈಶಾನ್ಯ ಮತ್ತು ವಾಯವ್ಯ ಭಾರತದ ಕೆಲವು ಭಾಗಗಳನ್ನು ಹೊರತುಪಡಿಸಿ, ದೇಶದ ಬಹುತೇಕ ಕಡೆ ಹಗಲಿನ ಗರಿಷ್ಠ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ರೀತಿ ಈಶಾನ್ಯ ಭಾರತ ಹೊರತುಪಡಿಸಿ ಬಹುತೇಕ ಪ್ರದೇಶಗಳಲ್ಲಿ ರಾತ್ರಿಯ ಕನಿಷ್ಠ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದ್ದು, ಸೆಕೆ ಮುಂದುವರಿಯುವ ಮುನ್ಸೂಚನೆ ಇದೆ.
ರಾಜ್ಯ
Lowest rainfall-ಎಲ್‌ನಿನೋ ಪ್ರಭಾವ: 11 ವರ್ಷಗಳಲ್ಲೇ ಅತಿ ಕಡಿಮೆ ಮಳೆ; ದೇಶಾದ್ಯಂತ ಶೇ.13, ಕರ್ನಾಟಕದಲ್ಲಿ ಶೇ.30ರಷ್ಟು ಮಳೆ ಕೊರತೆ
ಭಾರತದ ನೈರುತ್ಯ ಮುಂಗಾರು ಋತು ಬುಧವಾರ ಅಂತ್ಯಗೊಂಡಿದ್ದು, ಈ ಬಾರಿ ದೇಶಾದ್ಯಂತ ಒಟ್ಟಾರೆಯಾಗಿ ಶೇ.13ರಷ್ಟು ಮಳೆ ಕೊರತೆ ದಾಖಲಾಗಿದೆ. ಕಳೆದ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾದ ಮುಂಗಾರು ಇದಾಗಿದ್ದು, ದಕ್ಷಿಣ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಮಳೆ ಕೊರತೆಯ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕದಲ್ಲೂ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದ್ದು, ಹಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ.
ಹೊಸದಿಲ್ಲಿ: ಭಾರತದ ನೈರುತ್ಯ ಮುಂಗಾರು ಋತು ಬುಧವಾರ ಅಂತ್ಯಗೊಂಡಿದ್ದು, ಈ ಬಾರಿ ದೇಶಾದ್ಯಂತ ಒಟ್ಟಾರೆಯಾಗಿ ಶೇ.13ರಷ್ಟು ಮಳೆ ಕೊರತೆ ದಾಖಲಾಗಿದೆ. ಕಳೆದ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾದ ಮುಂಗಾರು ಇದಾಗಿದ್ದು, ದಕ್ಷಿಣ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಮಳೆ ಕೊರತೆಯ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕದಲ್ಲೂ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದ್ದು, ಹಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ.
ಯಾವ ಭಾಗದಲ್ಲಿ ಎಷ್ಟು ಮಳೆ ಕೊರತೆ?
ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಶೇ.25ಕ್ಕೂ ಅಧಿಕ ಮಳೆ ಕೊರತೆ ದಾಖಲಾಗಿದ್ದರೆ, ದಕ್ಷಿಣ ಭಾರತದ ಹಲವು ಪ್ರದೇಶಗಳಲ್ಲಿ ಶೇ.24ಕ್ಕೂ ಅಧಿಕ ಕೊರತೆ ಉಂಟಾಗಿದೆ.
ದೇಶಾದ್ಯಂತ ಈ ಮುಂಗಾರು ಅವಧಿಯಲ್ಲಿ ಒಟ್ಟು 759.4 ಮಿ.ಮೀ. ಮಳೆಯಾಗಿದೆ. 2001ರ ಬಳಿಕ ಇದು ನಾಲ್ಕನೇ ಅತಿ ಕಡಿಮೆ ಮುಂಗಾರು ಮಳೆಯಾಗಿದ್ದು, 1901ರಿಂದ ಲೆಕ್ಕ ಹಾಕಿದರೆ 13ನೇ ಅತಿ ಕಡಿಮೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್‌ನಿನೋ ಪ್ರಭಾವ
ದೇಶಾದ್ಯಂತ ಮಳೆ ಕೊರತೆಗೆ ಎಲ್‌ನಿನೋ ಪರಿಣಾಮವೂ ಪ್ರಮುಖ ಕಾರಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್‌ನಿನೋ ಪರಿಸ್ಥಿತಿಯಿಂದ ಮುಂಗಾರು ಮಳೆಯ ಮೇಲೆ ಪರಿಣಾಮ ಬೀರಿದ್ದು, ಹಲವು ರಾಜ್ಯಗಳಲ್ಲಿ ಮಳೆ ಅಭಾವ ಉಂಟಾಗಿದೆ.
ಕರ್ನಾಟಕದಲ್ಲಿ ಶೇ.30ರಷ್ಟು ಮಳೆ ಕೊರತೆ
ಕರ್ನಾಟಕದಲ್ಲಿ ಎಲ್‌ನಿನೋ ಪರಿಣಾಮ ತೀವ್ರವಾಗಿ ಕಂಡುಬಂದಿದ್ದು, ರಾಜ್ಯದಲ್ಲಿ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದೆ. ಈಗಾಗಲೇ ರಾಜ್ಯದ 100ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.
ದಕ್ಷಿಣ ಭಾರತದ ಇತರ ರಾಜ್ಯಗಳ ಪೈಕಿ ಕೇರಳದಲ್ಲಿ ಶೇ.28, ಆಂಧ್ರಪ್ರದೇಶದಲ್ಲಿ ಶೇ.25, ತಮಿಳುನಾಡಿನಲ್ಲಿ ಶೇ.20 ಹಾಗೂ ತೆಲಂಗಾಣದಲ್ಲಿ ಶೇ.18ರಷ್ಟು ಮಳೆ ಕೊರತೆ ದಾಖಲಾಗಿದೆ.
ಇತರ ರಾಜ್ಯಗಳಲ್ಲೂ ಮಳೆ ಅಭಾವ
ಮಣಿಪುರದಲ್ಲಿ ಶೇ.46ರಷ್ಟು ಮಳೆ ಕೊರತೆ ದಾಖಲಾಗಿದ್ದು, ಮಳೆ ಅಭಾವ ಎದುರಿಸುತ್ತಿರುವ ರಾಜ್ಯಗಳ ಪೈಕಿ ಇದು ಅತ್ಯಧಿಕವಾಗಿದೆ. ಅರುಣಾಚಲ ಪ್ರದೇಶದಲ್ಲಿ ಶೇ.44, ಪಂಜಾಬ್‌ನಲ್ಲಿ ಶೇ.41, ಬಿಹಾರದಲ್ಲಿ ಶೇ.32, ಅಸ್ಸಾಂನಲ್ಲಿ ಶೇ.28 ಹಾಗೂ ಹರಿಯಾಣದಲ್ಲಿ ಶೇ.23ರಷ್ಟು ಕೊರತೆ ದಾಖಲಾಗಿದೆ.
ದಶಕದಲ್ಲೇ ಒಣಹವೆಯ ಮುಂಗಾರು
ಎಲ್‌ನಿನೋ ಪರಿಣಾಮದಿಂದಾಗಿ ಈ ಬಾರಿ ದೇಶದಲ್ಲಿ ದಶಕದಲ್ಲೇ ಅತ್ಯಂತ ಒಣಹವೆಯ ಮುಂಗಾರು ದಾಖಲಾಗಿದೆ. 2015ರಲ್ಲಿ ಕೊನೆಯ ಬಾರಿಗೆ ಇದೇ ರೀತಿಯ ಮಳೆ ಕೊರತೆ ಕಂಡುಬಂದಿದ್ದು, ಆ ವರ್ಷವೂ ದೇಶಾದ್ಯಂತ ಸುಮಾರು ಶೇ.13ರಷ್ಟು ಮಳೆ ಕೊರತೆ ದಾಖಲಾಗಿತ್ತು.
ಜೂನ್‌ನಲ್ಲಿ ತೀವ್ರ ಮಳೆ ಕೊರತೆ
ಮುಂಗಾರು ಆರಂಭದ ಜೂನ್ ತಿಂಗಳಲ್ಲೇ ಮಳೆ ಕೊರತೆ ತೀವ್ರವಾಗಿತ್ತು. ಆ ತಿಂಗಳಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಸುಮಾರು ಶೇ.65ರಷ್ಟು ಮಾತ್ರ ಮಳೆಯಾಗಿತ್ತು. ಜುಲೈನಲ್ಲಿ ಮಳೆಯ ಪ್ರಮಾಣದಲ್ಲಿ ಕೊಂಚ ಚೇತರಿಕೆ ಕಂಡುಬಂದರೂ, ಆಗಸ್ಟ್‌ನಲ್ಲಿ ಮತ್ತೆ ಕೊರತೆ ಉಂಟಾಯಿತು. ಸೆಪ್ಟೆಂಬರ್‌ನಲ್ಲಿ ಮಳೆ ಪ್ರಮಾಣದಲ್ಲಿ ತುಸು ಸುಧಾರಣೆ ಕಂಡುಬಂದಿದೆ.
-
ಅಂತರ ರಾಜ್ಯ11 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
ಮಂಗಳೂರು5 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್11 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
-
ಅಪರಾಧ8 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
ಸುಳ್ಯ8 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಬಿಗ್ ನ್ಯೂಸ್6 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
ಸ್ಥಳೀಯ11 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಅಂತರ ರಾಜ್ಯ8 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್


















