ಸುಳ್ಯ
Pocso : ಸುಬ್ರಹ್ಮಣ್ಯ : ಬಾಲಕಿಯೊಂದಿಗೆ ಸುತ್ತಾಡುತ್ತಿದ್ದ ಅನ್ಯ ಕೋಮಿನ ಯುವಕನಿಗೆ ತಂಡದಿಂದ ಹಲ್ಲೆ – ಬಾಲಕಿಯ ತಂದೆಯಿಂದ ಮಾನಭಂಗ ಯತ್ನ ಪ್ರಕರಣ
ಸುಬ್ರಹ್ಮಣ್ಯ/ Subrahmanya :
ಸುಬ್ರಹ್ಮಣ್ಯ : ಜ 6 : ಹಿಂದೂ ವಿದ್ಯಾರ್ಥಿನಿಯೊಂದಿಗೆ ಮುಸ್ಲಿಂ ಹುಡುಗ ತಿರುಗಾಡುತ್ತಿದ್ದಾನೆಂದು ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಲ್ಲುಗುಂಡಿ ಯುವಕನೋರ್ವ ಸುಳ್ಯ ಆಸ್ಪತ್ರೆಯಲ್ಲಿ ದಾಖಲಾಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಇನ್ನೊಂದೆಡೆ ನನ್ನ ಮಗಳಿಗೆ ಪ್ರೀತಿಸುವಂತೆ ಒತ್ತಡ ಹಾಕಿ ಮಾನಭಂಗಕ್ಕೆ ಯತ್ನಿಸಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿಯ ತಂದೆ ಹಲ್ಲೆಗೊಳಗಾದ ಯುವಕನ ವಿರುದ್ಧ ದೂರು ನೀಡಿದ್ದು ಸುಬ್ರಹ್ಮಣ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ಜ.5ರಂದು ಸುಬ್ರಹ್ಮಣ್ಯ ಗ್ರಾಮದ ಕುಮಾರಧಾರ ಜಂಕ್ಷನ್ ಬಳಿ ನಡೆದಿದೆ.
ಸಂಪಾಜೆ ಗ್ರಾಮದ ಕಲ್ಲುಗುಂಡಿ ಹನೀಫ್ ಎಂಬವರ ಮಗ ಅಫೀದ್ (20) ಹಲ್ಲೆಗೊಳಗಾದ ಯುವಕ ಹಾಗೂ ಮಾನಭಂಗ ಪ್ರಕರಣದ ಆರೋಪಿ. 17ರ ಹರೆಯದ ಕುಕ್ಕೆ ಸುಬ್ರಹ್ಮಣ್ಯದ ಕಾಲೇಜೊಂದರ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಂತ್ರಸ್ತ ಬಾಲಕಿ.
ಅಫೀದ್ ಕೊಟ್ಟ ದೂರಿನಲ್ಲಿ ಏನಿದೆ?
ಅಫೀದ್ ಎಂಬಾತನಿಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ನಲ್ಲಿ ಸುಬ್ರಹ್ಮಣ್ಯದ ವಿದ್ಯಾರ್ಥಿನಿಯ ಪರಿಚಯವಾಗಿದ್ದು, ಆತ ಆಕೆಯನ್ನು ಈ ಹಿಂದೆ 2-3 ಸಲ ಸುಬ್ರಹ್ಮಣ್ಯಕ್ಕೆ ಬಂದು ಭೇಟಿಯಾಗಿದ್ದ. ಅದರಂತೆ ಗುರುವಾರವೂ ಸುಬ್ರಹ್ಮಣ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಕ್ದಾಣಕ್ಕೆ ಬಂದಿದ್ದು ಅವಳು ಕಾಲೇಜಿನಿಂದ ಸಂಜೆ ಬಸ್ ನಿಲ್ದಾಣಕ್ಕೆ ಬಂದ ವೇಳೆ ಆತ ಆಕೆಗೆ ಚಾಕಲೇಟ್ ನೀಡಿ ಮಾತನಾಡುತ್ತಿದ್ದ ವೇಳೆ ಪರಿಚಯವಿಲ್ಲದ 2-3 ಮಂದಿ ಬಂದು ಅಫೀದ್ ನನ್ನು ಎಳೆದುಕೊಂಡು ಜೀಪೊಂದರಲ್ಲಿ ಹಾಕಿದ್ದು, ಆಗ ಅಲ್ಲಿಗೆ 5-6 ಮಂದಿ ಬಂದು ಜೀಪಿನಲ್ಲಿ ಸುಬ್ರಹ್ಮಣ್ಯದ ಕುಮಾರಧಾರ ಜಂಕ್ಷನ್ ಬಳಿಯ ಹಳೆ ಕಟ್ಟಡದ ಕೋಣೆಯೊಳಗ ಕೂಡಿ ಹಾಕಿ 10-12 ಜನರು ಕೈಯಲ್ಲಿ ಮರದ ದೊಣ್ಣೆ, ಬೆತ್ತಗಳಿಂದ ಹೊಡಿದಿದ್ದು, ಒಬ್ಬಾತ ಚಾಕುವಿನಿಂದ ತಿವಿಯಲು ಪ್ರಯತ್ನಿಸಿದ್ದಾನೆ. ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಅಫೀದ್ ಸುಬ್ರಹ್ಮಣ್ಯ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾನೆ.
ಯುವಕನ ವಿರುದ್ಧ ಮಾನಭಂಗಕ್ಕೆ ಯತ್ನಿಸಿದ ಆರೋಪ
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ವಿರುದ್ಧ ಯುವತಿಯ ತಂದೆ ದೂರು ನೀಡಿದ್ದಾರೆ. ನನ್ನ ಮಗಳು ಮನೆಗೆ ಹಿಂತಿರುಗಲು ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೇಳೆ ಹಫೀದ್ ಎಂಬಾತ ಮಗಳನ್ನು ಪ್ರೀತಿಸುವಂತೆ ಒತ್ತಡ ಹಾಕಿ, ಮಗಳ ದೂರವಾಣಿ ಸಂಖ್ಯೆ ಕೇಳಿದ್ದು, ನಿರಾಕರಿಸಿದ ಸಂದರ್ಭದಲ್ಲಿ ಅವಳ ಕೈ ಹಿಡಿದು ಎಳದು ಮಾನಭಂಗಕ್ಕೆ ಯತ್ನಿಸಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಠಾಣೆಯಲ್ಲಿ ಎರಡೂ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.
ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
-
ನಿಧನ ವಾರ್ತೆ20 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಬಿಗ್ ನ್ಯೂಸ್15 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಅಪರಾಧ20 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ20 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ20 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ಬಿಗ್ ನ್ಯೂಸ್15 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ರಾಜಕೀಯ20 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ18 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು















