ಜೀವನಶೈಲಿ
5G at Mangalore | ಮಂಗಳೂರು ಸೇರಿ ರಾಜ್ಯದ 3 ನಗರಗಳಲ್ಲಿ 5G ಸೇವೆ ಆರಂಭ ; ಈ ಸೇವೆಯ ಇಂಟರ್ನೆಟ್ ನ ವೇಗವೆಷ್ಟು ಗೊತ್ತೇ?
ಮಂಗಳೂರು, ಜ 12 : ಕಳೆದ ವರ್ಷ ಭಾರತದಲ್ಲಿ 5G ಸೇವೆ ಆರಂಭಗೊಂಡಿದ್ದು, ಬೆಂಗಳೂರು ನಗರ ಸೇರಿದಂತೆ ದೇಶದ ಪ್ರಮುಖ ನಗರದಲ್ಲಿ ಈ ಸೇವೆ ಆರಂಭಗೊಂಡಿತ್ತು. ಇದೀಗ ಮತ್ತಷ್ಟು ನಗರಗಳಲ್ಲಿ 5G (5G at Mangalore) ಸೇವೆ ಆರಂಭಗೊಂಡಿದೆ.
ರಾಜ್ಯದ ಪ್ರಮುಖ ನಗರಗಳಾದ ಮಂಗಳೂರು, ಹುಬ್ಬಳ್ಳಿ- ಧಾರವಾಡ ನಗರಗಳಲ್ಲಿ ರಿಲಯನ್ಸ್ ಜಿಯೋ ಟ್ರೂ 5ಜಿ ಸೇವೆ ಆರಂಭಿಸಲಾಗಿದೆ. 5ಜಿ ಸೇವೆಗಳನ್ನು ಆರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ರಿಲಯನ್ಸ್ ಜಿಯೋ ಆಗಿದೆ.
ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಇಂದಿನಿಂದ ಪಡೆಯಲು ಮಂಗಳೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿಯಲ್ಲಿ ಇರುವ ಜಿಯೋ ಬಳಕೆದಾರರನ್ನು ವೆಲ್ಕಮ್ ಆಫರ್ ಗೆ ಆಹ್ವಾನಿಸಲಾಗುತ್ತದೆ.
ಜಿಯೋ ಇಂಜಿನಿಯರ್ಗಳು ಟ್ರೂ-5ಜಿ ಪ್ರಯೋಜನಗಳನ್ನು ಪ್ರತಿಯೊಬ್ಬ ಭಾರತೀಯರಿಗೂ ತಲುಪಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ತಂತ್ರಜ್ಞಾನದ ಪರಿವರ್ತನಾ ಶಕ್ತಿ ಮತ್ತು ಅದ್ಭುತ ಪ್ರಯೋಜನಗಳನ್ನು ಅನುಭವಿಸಬಹುದು.
ಕರ್ನಾಟಕದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಅಲ್ಲದೇ, ಕೇರಳ್ ಚೇರ್ತಲ, ತೆಲಂಗಾಣದ ವಾರಂಗಲ್, ಕರೀಂನಗರ, ಅಸ್ಸಾಂ ನ ಗುವಾಹತಿ ಹಾಗೂ ಮಹಾರಾಷ್ಟ್ರ ಸೋಲಾಪುರ ಸೇರಿ ಒಟ್ಟು 5 ರಾಜ್ಯಗಳ ಎಂಟು ನಗರಗಳಲ್ಲಿ ಜಿಯೋ 5G ಸೇವೆ ಆರಂಭವಾಗಿದೆ. ಜಿಯೋ ವೆಲ್ಕಮ್ ಆಫರ್ ಮೂಲಕ ಗ್ರಾಹಕರು 1 ಜಿಬಿಪಿಎಸ್+ ವೇಗದಲ್ಲಿ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಅನಿಯಮಿತ ಡೇಟಾ ಅನುಭವಿಸಬಹುದಾಗಿದೆ.
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಲೇಖನಗಳು
Rahu-Ketu-18 ತಿಂಗಳ ಬಳಿಕ ರಾಹು-ಕೇತು ರಾಶಿ ಬದಲಾವಣೆ; 12 ರಾಶಿಗಳ ಭವಿಷ್ಯ ಹೇಗಿರಲಿದೆ?
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2026ರ ಡಿಸೆಂಬರ್ 5ರಂದು ರಾಹು ಮತ್ತು ಕೇತು ಗ್ರಹಗಳು ಸುಮಾರು 18 ತಿಂಗಳ ಬಳಿಕ ರಾಶಿ ಬದಲಾವಣೆ ಮಾಡಲಿವೆ. ಈ ಸಂಚಾರದ ವೇಳೆ ರಾಹು ಮಕರ ರಾಶಿಗೆ ಪ್ರವೇಶಿಸಿದರೆ, ಕೇತು ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಗ್ರಹಗಳ ಸಂಚಾರವು ವೃತ್ತಿಜೀವನ, ಆರ್ಥಿಕ ಸ್ಥಿತಿ, ಕುಟುಂಬ, ಸಂಬಂಧಗಳು ಹಾಗೂ ವೈಯಕ್ತಿಕ ಜೀವನದ ಮೇಲೆ ಪರಿಣಾಮ ಬೀರಲಿದೆ ಎಂದು ವೈದಿಕ ಜ್ಯೋತಿಷ್ಯದಲ್ಲಿ ಹೇಳಲಾಗುತ್ತದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2026ರ ಡಿಸೆಂಬರ್ 5ರಂದು ರಾಹು ಮತ್ತು ಕೇತು ಗ್ರಹಗಳು ಸುಮಾರು 18 ತಿಂಗಳ ಬಳಿಕ ರಾಶಿ ಬದಲಾವಣೆ ಮಾಡಲಿವೆ. ಈ ಸಂಚಾರದ ವೇಳೆ ರಾಹು ಮಕರ ರಾಶಿಗೆ ಪ್ರವೇಶಿಸಿದರೆ, ಕೇತು ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಗ್ರಹಗಳ ಸಂಚಾರವು ವೃತ್ತಿಜೀವನ, ಆರ್ಥಿಕ ಸ್ಥಿತಿ, ಕುಟುಂಬ, ಸಂಬಂಧಗಳು ಹಾಗೂ ವೈಯಕ್ತಿಕ ಜೀವನದ ಮೇಲೆ ಪರಿಣಾಮ ಬೀರಲಿದೆ ಎಂದು ವೈದಿಕ ಜ್ಯೋತಿಷ್ಯದಲ್ಲಿ ಹೇಳಲಾಗುತ್ತದೆ.
ಈ ಸಂಚಾರವು 2028ರ ಜೂನ್ವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ರಾಹುವನ್ನು ಮಹತ್ವಾಕಾಂಕ್ಷೆ, ಭೌತಿಕ ಆಸೆ ಮತ್ತು ಅನಿರೀಕ್ಷಿತ ಬೆಳವಣಿಗೆಗಳ ಸಂಕೇತವಾಗಿ ಪರಿಗಣಿಸಿದರೆ, ಕೇತುವನ್ನು ಆಧ್ಯಾತ್ಮಿಕತೆ, ವೈರಾಗ್ಯ ಮತ್ತು ಅಂತಃಪ್ರಜ್ಞೆಯ ಸಂಕೇತವೆಂದು ನಂಬಲಾಗಿದೆ. ಹಾಗಾದರೆ ಈ ಸಂಚಾರವು 12 ರಾಶಿಗಳ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ನೋಡೋಣ.
ಮೇಷ ರಾಶಿ
ಮೇಷ ರಾಶಿಯವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಉದ್ಯೋಗ ಬದಲಾವಣೆ, ಬಡ್ತಿ ಹಾಗೂ ವ್ಯಾಪಾರ ವಿಸ್ತರಣೆಗೆ ಅನುಕೂಲಕರ ಸಮಯವಾಗಬಹುದು. ಕೆಲಸದ ಜವಾಬ್ದಾರಿ ಹೆಚ್ಚಾದರೂ ಅದಕ್ಕೆ ತಕ್ಕ ಪ್ರತಿಫಲ ದೊರೆಯುವ ಸಾಧ್ಯತೆಯಿದೆ. ಮನೆ, ವಾಹನ ಮತ್ತು ಆಸ್ತಿ ಖರೀದಿಸುವ ಯೋಜನೆಗಳು ಕಾರ್ಯರೂಪಕ್ಕೆ ಬರಬಹುದು. ಹಳೆಯ ವಾಹನ ಬದಲಿಸಿ ಹೊಸ ವಾಹನ ಖರೀದಿಸುವ ಯೋಗವೂ ಇದೆ.
ವೃಷಭ ರಾಶಿ
ವೃಷಭ ರಾಶಿಯವರಿಗೆ ಧೈರ್ಯ ಮತ್ತು ಆತ್ಮವಿಶ್ವಾಸ ಹೆಚ್ಚಾಗಬಹುದು. ಬಹುಕಾಲದಿಂದ ಮುಂದೂಡಿದ್ದ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಬಹುದು. ಕುಟುಂಬದಲ್ಲಿ ಸಂತೋಷ ಮತ್ತು ಸಾಮರಸ್ಯ ನೆಲೆಸುವ ನಿರೀಕ್ಷೆಯಿದೆ. ಅನಿರೀಕ್ಷಿತ ಆರ್ಥಿಕ ಲಾಭದ ಅವಕಾಶಗಳು ಎದುರಾಗಬಹುದು. ದೂರದ ಪ್ರಯಾಣ, ಧಾರ್ಮಿಕ ಕಾರ್ಯಗಳು ಹಾಗೂ ಹೊಸ ಅನುಭವಗಳಿಗೆ ಅವಕಾಶ ದೊರೆಯಬಹುದು.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಜೀವನದಲ್ಲಿ ಕೆಲವು ಅನಿರೀಕ್ಷಿತ ಬದಲಾವಣೆಗಳು ಸಂಭವಿಸಬಹುದು. ವಿದೇಶಿ ಸಂಪರ್ಕಗಳು ಹೆಚ್ಚಾಗುವ ಜೊತೆಗೆ ಉದ್ಯೋಗ ಅಥವಾ ವ್ಯಾಪಾರದ ನಿಮಿತ್ತ ವಿದೇಶ ಪ್ರಯಾಣ ಮಾಡುವ ಅವಕಾಶ ಸಿಗಬಹುದು. ಆರ್ಥಿಕ ಲಾಭದ ಸಾಧ್ಯತೆಯೂ ಇದೆ. ಆದರೆ ಕೆಲವು ಕೆಲಸಗಳಲ್ಲಿ ವಿಳಂಬ ಮತ್ತು ಅಡೆತಡೆಗಳು ಎದುರಾಗಬಹುದು. ಕುಟುಂಬದ ವಿಚಾರದಲ್ಲಿ ಮಾತನಾಡುವಾಗ ಸಂಯಮ ಇರಲಿ. ಆರೋಗ್ಯದ ಕಡೆಗೂ ಗಮನ ನೀಡುವುದು ಅಗತ್ಯ.
ಕರ್ಕಾಟಕ ರಾಶಿ
ಕರ್ಕಾಟಕ ರಾಶಿಯವರಿಗೆ ಸಮಾಜದಲ್ಲಿ ಗೌರವ ಮತ್ತು ಸ್ಥಾನಮಾನ ಹೆಚ್ಚಾಗುವ ಸಾಧ್ಯತೆಯಿದೆ. ವ್ಯಕ್ತಿತ್ವದಲ್ಲಿ ಬದಲಾವಣೆ ಕಂಡುಬರಬಹುದು. ಹೊಸ ಸ್ನೇಹಿತರು ಮತ್ತು ಪರಿಚಯಗಳು ಬೆಳೆಯಲಿವೆ. ವಿದೇಶದಲ್ಲಿ ಉದ್ಯೋಗ ಅಥವಾ ವ್ಯಾಪಾರ ಆರಂಭಿಸಲು ಅವಕಾಶಗಳು ದೊರೆಯಬಹುದು. ಆದರೆ ವೈವಾಹಿಕ ಜೀವನ ಮತ್ತು ವ್ಯಾಪಾರ ಪಾಲುದಾರಿಕೆಯಲ್ಲಿ ಪರಸ್ಪರ ನಂಬಿಕೆ ಹಾಗೂ ಉತ್ತಮ ಸಂವಹನಕ್ಕೆ ಆದ್ಯತೆ ನೀಡಬೇಕು.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಕಳೆದ ಒಂದೂವರೆ ವರ್ಷಗಳಿಂದ ಎದುರಾಗುತ್ತಿದ್ದ ಸಮಸ್ಯೆಗಳು ಕ್ರಮೇಣ ಕಡಿಮೆಯಾಗಬಹುದು. ಉದ್ಯೋಗ ಮತ್ತು ವ್ಯಾಪಾರದಲ್ಲಿ ಯಶಸ್ಸು ದೊರೆಯುವ ಸಾಧ್ಯತೆಯಿದೆ. ವಿರೋಧಿಗಳು ಹಾಗೂ ಸ್ಪರ್ಧಿಗಳ ವಿರುದ್ಧ ಮೇಲುಗೈ ಸಾಧಿಸಬಹುದು. ಬಾಕಿ ಉಳಿದಿರುವ ಕಾನೂನು ವಿವಾದಗಳು ಮತ್ತು ಆಸ್ತಿ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ನಿರೀಕ್ಷಿಸಬಹುದು. ವಿದೇಶಿ ಉದ್ಯೋಗದ ಪ್ರಯತ್ನಗಳಿಗೂ ಉತ್ತಮ ಅವಕಾಶಗಳು ಸಿಗಬಹುದು.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಉದ್ಯೋಗ, ಆರ್ಥಿಕ ಸ್ಥಿತಿ ಮತ್ತು ಕುಟುಂಬದ ವಿಚಾರಗಳಲ್ಲಿ ಶುಭ ಬೆಳವಣಿಗೆಗಳು ಕಂಡುಬರಬಹುದು. ಉದ್ಯೋಗಾಕಾಂಕ್ಷಿಗಳಿಗೆ ಹೊಸ ಅವಕಾಶಗಳು ದೊರೆಯಬಹುದು. ಈಗಾಗಲೇ ಉದ್ಯೋಗದಲ್ಲಿರುವವರಿಗೆ ಬಡ್ತಿ ಅಥವಾ ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆಯಿದೆ. ಮಕ್ಕಳಿಂದ ಸಂತೋಷದ ಸುದ್ದಿ ಸಿಗಬಹುದು. ಬಹುಕಾಲದಿಂದ ಬಾಕಿ ಉಳಿದಿರುವ ಹಣಕಾಸು ಮತ್ತು ಆಸ್ತಿ ಸಂಬಂಧಿತ ವಿಚಾರಗಳು ಬಗೆಹರಿಯುವ ನಿರೀಕ್ಷೆಯಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಮನೆ, ವಾಹನ ಮತ್ತು ವೃತ್ತಿಜೀವನದಲ್ಲಿ ಬದಲಾವಣೆಗಳು ಸಂಭವಿಸಬಹುದು. ಸ್ವಂತ ಮನೆ ಖರೀದಿಸುವ ಅಥವಾ ಹೊಸ ಆಸ್ತಿ ಪಡೆಯುವ ಯೋಜನೆಗಳು ಈಡೇರಬಹುದು. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ಮತ್ತು ಹೊಸ ಜವಾಬ್ದಾರಿಗಳು ದೊರೆಯಬಹುದು. ಆದರೆ ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕುಟುಂಬದ ಅಗತ್ಯಗಳಿಗಾಗಿ ಹೆಚ್ಚುವರಿ ಖರ್ಚು ಎದುರಾಗುವ ಸಾಧ್ಯತೆಯಿದೆ.
ಧನು ರಾಶಿ
ಧನು ರಾಶಿಯವರಿಗೆ ಆರ್ಥಿಕವಾಗಿ ಪ್ರಗತಿ ಸಾಧಿಸುವ ಅವಕಾಶಗಳು ದೊರೆಯಬಹುದು. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಬಹುದು. ವಿದೇಶಿ ಸಂಪರ್ಕಗಳಿಂದ ಲಾಭವಾಗುವ ಸಾಧ್ಯತೆಯಿದೆ. ಉದ್ಯೋಗಿಗಳಿಗೆ ಬಡ್ತಿ ಅಥವಾ ವೇತನ ಹೆಚ್ಚಳದ ನಿರೀಕ್ಷೆಯಿದೆ. ವ್ಯಾಪಾರಸ್ಥರಿಗೆ ಹೊಸ ಗ್ರಾಹಕರು ದೊರೆಯಬಹುದು. ಕುಟುಂಬದಲ್ಲಿ ಸಂತೋಷ ಮತ್ತು ನೆಮ್ಮದಿ ಹೆಚ್ಚಾಗಲಿದ್ದು, ಶುಭಕಾರ್ಯಗಳು ನಡೆಯುವ ಸಾಧ್ಯತೆಯಿದೆ. ಮಾತಿನ ಮೇಲೆ ಹಿಡಿತವಿರಲಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಧೈರ್ಯ, ಆತ್ಮವಿಶ್ವಾಸ ಮತ್ತು ಕೆಲಸ ಮಾಡುವ ಉತ್ಸಾಹ ಹೆಚ್ಚಾಗಬಹುದು. ಉದ್ಯೋಗ ಹಾಗೂ ವ್ಯಾಪಾರದಲ್ಲಿ ಹೊಸ ಪ್ರಯತ್ನಗಳಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಬಹುಕಾಲದಿಂದ ಬಾಕಿ ಉಳಿದಿದ್ದ ಕೆಲಸಗಳು ಪೂರ್ಣಗೊಳ್ಳಬಹುದು. ಪ್ರಭಾವಿ ವ್ಯಕ್ತಿಗಳ ಪರಿಚಯದಿಂದ ವೃತ್ತಿಜೀವನದಲ್ಲಿ ಅನುಕೂಲವಾಗಬಹುದು. ರಾಜಕೀಯ ಕ್ಷೇತ್ರದಲ್ಲಿರುವವರಿಗೂ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆಯಿದೆ.
ಮಕರ ರಾಶಿ
ಮಕರ ರಾಶಿಯವರಿಗೆ ಈ ಸಂಚಾರದಲ್ಲಿ ಮಹತ್ವದ ಬದಲಾವಣೆಗಳು ಎದುರಾಗಬಹುದು. ಉದ್ಯೋಗ ಮತ್ತು ವೃತ್ತಿಜೀವನದ ಕಾರಣದಿಂದ ಸ್ಥಳಾಂತರಗೊಳ್ಳುವ ಸಂದರ್ಭ ಬರಬಹುದು. ಹೊಸ ಕೆಲಸ ಅಥವಾ ವೃತ್ತಿ ಆರಂಭಿಸುವ ಆಲೋಚನೆಗಳು ಮೂಡಬಹುದು. ಆರಂಭದಲ್ಲಿ ಕೆಲವು ಗೊಂದಲಗಳು ಎದುರಾದರೂ ಮುಂದಿನ ದಿನಗಳಲ್ಲಿ ಹೊಸ ಅವಕಾಶಗಳು ತೆರೆದುಕೊಳ್ಳಬಹುದು. ವ್ಯಾಪಾರ ಪಾಲುದಾರಿಕೆ ಮತ್ತು ವೈವಾಹಿಕ ಸಂಬಂಧಗಳಲ್ಲಿ ಎಚ್ಚರಿಕೆ ಹಾಗೂ ಪರಸ್ಪರ ತಿಳುವಳಿಕೆ ಅಗತ್ಯ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಕಳೆದ ಒಂದೂವರೆ ವರ್ಷಗಳಿಂದ ಎದುರಾಗುತ್ತಿದ್ದ ಸಮಸ್ಯೆಗಳು ಕಡಿಮೆಯಾಗುವ ಸಾಧ್ಯತೆಯಿದೆ. ಜಮೀನು ಅಥವಾ ನಿವೇಶನ ಖರೀದಿಸಿ ಮನೆ ನಿರ್ಮಿಸುವ ಯೋಜನೆಗಳು ಮುಂದುವರಿಯಬಹುದು. ವಾಹನ ಖರೀದಿಸುವ ಯೋಗವೂ ಇದೆ. ಮಕ್ಕಳಿಂದ ಸಂತೋಷದ ಸುದ್ದಿ ದೊರೆಯಬಹುದು. ದಾಂಪತ್ಯ ಜೀವನದಲ್ಲಿ ಸಾಮರಸ್ಯ ಹೆಚ್ಚಾಗುವ ನಿರೀಕ್ಷೆಯಿದೆ. ವಿದೇಶಿ ಉದ್ಯೋಗದ ಪ್ರಯತ್ನಗಳು ಮತ್ತು ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಹೊಸ ಅವಕಾಶಗಳು ಸಿಗಬಹುದು.
ಮೀನ ರಾಶಿ
ಮೀನ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ಬೆಳವಣಿಗೆಗಳು ಕಂಡುಬರಬಹುದು. ಅನಿರೀಕ್ಷಿತ ಮೂಲಗಳಿಂದ ಹಣ ಲಭಿಸುವ ಸಾಧ್ಯತೆಯಿದೆ. ಆಸ್ತಿ-ಪಾಸ್ತಿ ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಫಲಿತಾಂಶ ದೊರೆಯಬಹುದು. ವ್ಯಾಪಾರಸ್ಥರಿಗೆ ಹೊಸ ಗ್ರಾಹಕರು ಮತ್ತು ಸಂಪರ್ಕಗಳಿಂದ ಲಾಭವಾಗಬಹುದು. ಮಕ್ಕಳ ಸಾಧನೆಯಿಂದ ಸಂತೋಷ ಸಿಗಬಹುದು. ವಿದೇಶದಲ್ಲಿ ಉದ್ಯೋಗ ಪಡೆಯಲು ಪ್ರಯತ್ನಿಸುತ್ತಿರುವವರಿಗೆ ಹೊಸ ಅವಕಾಶಗಳು ಎದುರಾಗಬಹುದು.
-
ಮಂಗಳೂರು9 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್15 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ14 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ15 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ14 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ15 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ8 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ14 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















