ಮಂಗಳೂರು
Mangalore Drug Racket Busted : ಮಂಗಳೂರು : ವೈದ್ಯರು ಹಾಗೂ ವೈದಕೀಯ ವಿದ್ಯಾರ್ಥಿಗಳಿಂದ ಡ್ರಗ್ ಮಾರಾಟ ಪ್ರಕರಣ : ಮತ್ತಿಬ್ಬರ ಬಂಧನ – ಒಟ್ಟು ಬಂಧಿತರ ಸಂಖ್ಯೆ 15 ಕ್ಕೆ
Mangalore Drug Racket Busted ಮಂಗಳೂರು: ಮಂಗಳೂರಿನ ಎರಡು ಪ್ರತಿಷ್ಟಿತ ವೈದಕೀಯ ಕಾಲೇಜಿನ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಳಗೊಂಡ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಶುಕ್ರವಾರ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ 15ಕ್ಕೆರಿದೆ.
ಶುಕ್ರವಾರ ಬಂಧಿತರಾದವರನ್ನು ಆಂಧ್ರ ಪ್ರದೇಶದ ಅನಂತಪುರದ ನಿವಾಸಿ ಹಾಗೂ ಹಾಲಿ ಅತ್ತಾವರದ ಅಪಾರ್ಟ್ ಮೆಂಟ್‌ನಲ್ಲಿ ವಾಸವಿರುವ ಡಾ| ರಾಘವ ದತ್ತಾ (28), ಇನ್ನೋರ್ವ ಆರೋಪಿ ಬೆಂಗಳೂರು ಹಲ್ಸೂರು ಜೋಡುಪಾಲ್ಯದ ನಿವಾಸಿ ಹಾಗೂ ಹಾಲಿ ಮಂಗಳೂರಿನ ಫಳ್ನೀರ್ ನಲ್ಲಿ ವಾಸವಿರುವ ಡಾ.ಬಾಲಾಜಿ (29) ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ 13 ಮಂದಿ ಆರೋಪಿಗಳನ್ನು ಈ ಹಿಂದೆಯೇ ಬಂಧಿಸಲಾಗಿತ್ತು. ಮೊದಲಿಗೆ ಈ ಪ್ರಕರಣಕ್ಕೆ ಸಂಬಂದಿಸಿದಂತೆ 10 ಮಂದಿಯನ್ನು ಬುಧವಾರ ಬಂಧಿಸಿದರು . ಗುರುವಾರ ಮೂವರನ್ನು ಹಾಗು ಶುಕ್ರವಾರ ಇಬ್ಬರನ್ನು ಬಂಧಿಸಿದ್ದಾರೆ.
ಹಣ್ಣಿನಂಗಡಿಯಲ್ಲಿ ಕೆಲಸ ಮಾಡುವ 23 ವರ್ಷದ ಮೊಹಮ್ಮದ್ ಅಫ್ರಾರ್, ಖಾಸಗಿ ಕಾಲೇಜಿನ ಅಂತಿಮ ವರ್ಷದ ಫಾರ್ಮಾ ಡಿ ವಿದ್ಯಾರ್ಥಿ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಅಂತಿಮ ವರ್ಷದ ಪತಾಲಜಿ ಎಂಡಿ ವಿದ್ಯಾರ್ಥಿ ತುಮಕೂರು ಮೂಲದ ಹರ್ಷ ಕುಮಾರ್ ಗುರುವಾರ ಬಂಧಿತರಾದವರು.
ವೈದ್ಯಕೀಯ (ಬಿಡಿಎಸ್) ವಿದ್ಯಾರ್ಥಿ ಸಾಗರೋತ್ತರ ಭಾರತೀಯ ಪ್ರಜೆ ನೀಲ್ ಕಿಶೋರಿಲಾಲ್ ರಾಮ್‌ಜಿ ಶಾ (38), ಮೆಡಿಕಲ್ ಆಫೀಸರ್ ಕೇರಳದ ಡಾ| ಸಮೀರ್ (32), ಎಂಬಿಬಿಎಸ್ ಇಂಟರ್ನ್ ಶಿಪ್ ಮಾಡುತ್ತಿದ್ದ ಡಾ| ನಾದಿಯಾ ಸೀರಜ್ (24), ಆಂಧ್ರಪ್ರದೇಶದ ಡಾ| ವರ್ಷಿಣಿ ಪ್ರತಿ (26), ಮೆಡಿಕಲ್ ಸರ್ಜನ್ ತಮಿಳುನಾಡಿನ ಡಾ| ಮಣಿಮಾರನ್ ಮುತ್ತು (28), ಸೈಕಿಯಾಟ್ರಿ ಎಂಡಿ ತೃತೀಯ ವರ್ಷದ ಚಂಡೀಗಢದ ಡಾ| ಭಾನು ಧನಿಯಾ (27), ಬಿಡಿಎಸ್ ನಾಲ್ಕನೇ ವರ್ಷದ ಚಂಡೀಗಢದ ಡಾ| ರಿಯಾ ಚಡ್ಡಾ (22), ಆರ್ಥೋ ಎಂಎಸ್ ತೃತೀಯ ವರ್ಷದ ಡಾ| ಕ್ಷಿತಿಜ್ ಗುಪ್ತ (25), ಎಂಬಿಬಿಎಸ್ ನಾಲ್ಕನೇ ವರ್ಷದ ಪುಣೆಯ ಡಾ| ಐರಾ ಬಾಸಿನ್ (23) ಮತ್ತು ಖಾಸಗಿ ವೃತ್ತಿ ಮಾಡುತ್ತಿದ್ದ ಬಂಟ್ವಾಳ ಮಾರಿಪಳ್ಳದ ಮೊಹಮ್ಮದ್ ರವೂಫ್ ಆಲಿಯಾಸ್ ಗೌಫ್ (34) ಮಂಗಳವಾರ ಬಂಧಿಸಲ್ಪಟ್ಟವರು.
ಬಾಯಿಬಿಟ್ಟ ಯು.ಕೆ. ಪ್ರಜೆ
ನೀಲ್ ಕಿಶೋರಿಲಾಲ್ ರಾಮ್‌ಜಿ ಶಾ ಯನೈಟೆಡ್ ಕಿಂಗ್‌ಡಮ್ ರಾಷ್ಟ್ರದ ಪ್ರಜೆಯಾಗಿದ್ದು 15 ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದಾನೆ. ಈತ ಡೆಂಟಲ್ ಕಾಲೇಜಿನ ನಾಲ್ಕನೇ ವರ್ಷದ ವಿದ್ಯಾರ್ಥಿಯಾಗಿದ್ದು ಕೋರ್ಸ್ ಪೂರ್ಣಗೊಳಿಸಿಲ್ಲ. ಈತ ನಗರದ ಫ್ಲ್ಯಾಟ್‌ನಲ್ಲಿ ಗಾಂಜಾ ಹೊಂದಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಸಿಸಿಬಿ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದರು. ಆತನಿಂದ 2 ಕೆಜಿ ಗಾಂಜಾ ಸ್ವಾಧೀನಪಡಿಸಿಕೊಂಡಿದ್ದರು.
ಆತನನ್ನು ವಿಚಾರಣೆಗೊಳಪಡಿಸಿದಾಗ ಉಳಿದ ಆರೋಪಿಗಳ ಮಾಹಿತಿ ಲಭಿಸಿದೆ. ಉಳಿದ ಆರೋಪಿಗಳನ್ನು ವಿವಿಧ ಹಾಸ್ಟೆಲ್, ಪಿಜಿ ಹಾಗೂ ಖಾಸಗಿ ನಿವಾಸಗಳಿಂದ ವಶಕ್ಕೆ ಪಡೆದು, ಗಾಂಜಾ ಹಾಗೂ 9 ಮೊಬೈಲ್ ಪೋನ್ ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ನೀಲ್ ಕಿಶೋರಿ ಲಾಲ್‌ನಿಂದ 2 ಕೆಜಿಗೂ ಅಧಿಕ ಗಾಂಜಾ, ಆಟಿಕೆ ಪಿಸ್ತೂಲು, ಒಂದು ಡ್ರ್ಯಾಗನ್, ಮೊಬೈಲ್ ಮತ್ತಿತರ ಕೆಲವು ಪರಿಕರಗಳು ದೊರೆತಿವೆ.
ಪ್ರಕರಣದ ತನಿಖೆ ಮುಂದವರಿಸಲಾಗಿದ್ದು, ಮತ್ತಷ್ಟು ಜನರ ಬಂಧನದ ಸಾಧ್ಯತೆ ಇದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಕಳೆದ 10 ದಿನಗಳಲ್ಲಿ ಡ್ರಗ್ಸ್ ಮಾರಾಟ ಜಾಲದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ಸುಮಾರು 100 ಕೆಜಿಗೂ ಅಧಿಕ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ವಿವಿಧ ಪ್ರಕರಣಗಳಲ್ಲಿ 20ಕ್ಕೂ ಅಧಿಕ ಮಂದಿಯ ಬಂಧನವಾಗಿದೆ ಎಂದು ಅವರು ಹೇಳಿದ್ದಾರೆ.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಮಂಗಳೂರು21 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ20 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು21 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ15 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ20 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
Uncategorized22 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ22 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು16 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















