ದಕ್ಷಿಣ ಕನ್ನಡ
ಪುತ್ತೂರಿನಲ್ಲಿ ಬ್ಯಾಂಕ್ ಆಫ್ ಬರೋಡಾದ ಪ್ರಾದೇಶಿಕ ಕಚೇರಿ ಶುಭಾರಂಭ
ಪುತ್ತೂರು:ಪ್ರಸ್ತುತ ಖಾಸಗಿ ಬ್ಯಾಂಕ್‍ಗಳ ಧಾವಂತದಿಂದ ರಾಷ್ಟ್ರೀಯ ಬ್ಯಾಂಕ್‍ಗಳ ಅಧಿಕಾರಿಗಳಿಂದ ತೊಡಗಿ ಸಿಬ್ಬಂದಿಗಳಿಗಿರುವ ಒತ್ತಡ ಕಡಿಮೆಯಾಗಿದೆ. ಈ ನಿಟ್ಟಿನಲ್ಲಿ ಗ್ರಾಹಕರು ಬ್ಯಾಂಕ್‍ನವರ ಕಷ್ಟಗಳನ್ನು ಅರ್ಥ ಮಾಡಿಕೊಂಡಾಗ ಉತ್ತಮ ಸೇವೆ ನೀಡಲು ಸಾಧ್ಯ ಎಂದು ಧರ್ಮಸ್ಥಳ ಎಸ್‍ಕೆಡಿಆರ್‍ಡಿಪಿ ಪ್ರಾದೇಶಿಕ ವ್ಯವಸ್ಥಾಪಕ ಡಾ.ಎಲ್.ಎಚ್.ಮಂಜುನಾಥ ಅಭಿಪ್ರಾಯಪಟ್ಟರು.
ಅವರು ಇಲ್ಲಿಯ ದರ್ಬೆಯಲ್ಲಿರುವ ರೈ ಎಸ್ಟೇಟ್ ಬಿಲ್ಡಿಂಗ್‍ನಲ್ಲಿ ಬ್ಯಾಂಕ್ ಆಫ್ ಬರೋಡಾದ ಪ್ರಾದೇಶಿಕ ಕಚೇರಿಯನ್ನು ಉದ್ಘಾಟಿಸಿ, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಡೀ ಬ್ಯಾಂಕಿಂಗ್ ಸೆಕ್ಟರ್‍ನಲ್ಲಿ ಬಲ್ಕ್ ಅಕೌಂಟ್ ವ್ಯವಸ್ಥೆಯನ್ನು ಪ್ರಪ್ರಥಮ ಬಾರಿಗೆ ಬ್ಯಾಂಕ್ ಆಫ್ ಬರೋಡಾ ಮಾಡಿರುವುದನ್ನು ಶ್ಲಾಘಿಸಿದ ಅವರು, ಪ್ರಸ್ತುತ ಎಸ್‍ಕೆಡಿಆರ್‍ಡಿಪಿ ಬಿಸಿಎ ಕೇಂದ್ರದ ಮೂಲಕ ಸುಮಾರು 51 ಲಕ್ಷ ಗ್ರಾಹಕರನ್ನು ಹೊಂದಿದ್ದು, 40 ಸಾವಿರ ಸಿಬ್ಬಂದಿಗಳು ವಿವಿಧ ವಿಭಾಗಗಳಲ್ಲಿ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ. ಆದರೆ ಬ್ಯಾಂಕ್‍ನಲ್ಲಿ ಬೆರಳೆಣಿಕೆ ಸಿಬ್ಬಂದಿಗಳು ಸಾವಿರಾರು ಗ್ರಾಹಕರನ್ನು ಮ್ಯಾನೇಜ್ ಮಾಡುವ ಪರಿಸ್ಥಿತಿಯಿದೆ. ಈ ನಿಟ್ಟಿನಲ್ಲಿ ಉತ್ತಮ ಸೇವೆ ನೀಡಲು ಗ್ರಾಹಕರ ಸಹಕಾರ ಅಗತ್ಯ ಎಂದರು.
ಮುಖ್ಯ ಅತಿಥಿಯಾಗಿ ಬ್ಯಾಂಕ್ ಆಫ್ ಬರೋಡಾದ ವಲಯ ವ್ಯವಸ್ಥಾಪಕಿ ಗಾಯತ್ರಿ ಆರ್. ಮಾತನಾಡಿ, ಪ್ರಸ್ತುತ ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೇವೆಯನ್ನು ಒದಗಿಸುತ್ತಿದ್ದು, ಧರ್ಮಸ್ಥಳ ಎಸ್‍ಕೆಡಿಆರ್‍ಡಿಪಿ ಬ್ಯಾಂಕ್‍ನ ಬೆನ್ನೆಲುಬಾಗಿ ಎಲ್ಲಾ ರೀತಿಯ ಸಹಕಾರ ನೀಡುತ್ತಿದೆ. ಮುಖ್ಯವಾಗಿ ಹಳ್ಳಿಗಳಲ್ಲಿರುವ ಗ್ರಾಹಕರಲ್ಲಿ ಬ್ಯಾಂಕ್‍ನ ಕುರಿತು ಒಲವು ಜಾಸ್ತಿಯಿದ್ದು, ಬ್ಯಾಂಕ್ ವತಿಯಿಂದ ಇರುವ ವಿವಿಧ ರೀತಿಯ ವಿಮೆ ಸೇರಿದಂತೆ ಇನ್ನಿತರ ಮಾಹಿತಿಗಳನ್ನು ಬ್ಯಾಂಕ್ ಪ್ರಬಂಧಕರಲ್ಲಿ ತಿಳಿದುಕೊಳ್ಳಿ ಎಂದು ಹೇಳಿ ಗ್ರಾಹಕರ ಸಹಕಾರ ಕೋರಿದರು.
ಈ ಸಂದರ್ಭದಲ್ಲಿ ಸಾಲದ ಮಂಜೂರಾತಿ ಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಡಾಎಲ್.ಎಚ್.ಮಂಜುನಾಥ ಅವರನ್ನು ಬ್ಯಾಂಕ್ ವತಿಯಿಂದ ಅಭಿನಂದಿಸಲಾಯಿತು.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ಸ್ಥಳೀಯ9 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಮಂಗಳೂರು4 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ8 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಬಿಗ್ ನ್ಯೂಸ್9 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಸಿನೆಮಾ8 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್8 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
-
ಅಪರಾಧ9 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಅಪರಾಧ4 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















