ದಕ್ಷಿಣ ಕನ್ನಡ
ಒಂದು ವಾರಗಳ ಕಾಲ ಪುತ್ತೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ – ಸದಸ್ಯರ ಸಂಖ್ಯೆ 50 ಸಾವಿರಕ್ಕೆರಿಸುವ ಗುರಿ : ಸಾಜಾ ರಾಧಾಕೃಷ್ಣ ಆಳ್ವಾ
ಪುತ್ತೂರು: ಜ 19 : ರಾಜ್ಯದಾದ್ಯಂತ ನಡೆಯುತ್ತಿರುವವ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನವರಿ 21ರಿಂದ 29ರರವೆಗೆ ನಡೆಯಲಿದೆ ವಾರಗಳ ಕಾಲ ನಡೆಯುವ ಈ ಅಭಿಯಾನ ಮುಕ್ತಾಯವಾಗುವ ವೇಳೆ ಪುತ್ತೂರು ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷದ ಸದಸ್ಯರ ಸಂಖ್ಯೆಯನ್ನು 50 ಸಾವಿರಕ್ಕೆ ಏರಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವಾ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಭಿಯಾನದ ವೇಳೆ 54 ಶಕ್ತಿ ಕೇಂದ್ರ ವ್ಯಾಪ್ತಿಯ 220 ಬೂತ್‌ಗಳ 55 ಸಾವಿರ ಮನೆಗಳನ್ನು ತಲುಪುವ ಗುರಿ ಹೊಂದಲಾಗಿದೆ. ಪೇಜ್ ಪ್ರಮುಖರು ಸಾಥ್ ನೀಡಲಿದ್ದಾರೆ. ಈ ಸಂದರ್ಭ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಕೆಲಸವೂ ನಡೆಯಲಿದೆ. ಮಿಸ್ಡ್ ಕಾಲ್ ಮೆಂಬರ್‌ಶಿಪ್ ಅಭಿಯಾನ ನಡೆಯಲಿದೆ ಎಂದರು.
ಜ.2ರಿಂದ 12ರವರೆಗೆ ಬೂತ್ ಅಭಿಯಾನವನ್ನು ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಸಲಾಗಿದೆ. ಈ ಸಂದರ್ಭ ಪ್ರತೀ ಬೂತ್ ವ್ಯಾಪ್ತಿಯಲ್ಲಿ ಕನಿಷ್ಠ 25 ಮನೆಗಳಲ್ಲಿ ಪಕ್ಷದ ಧ್ವಜ ಅಳವಡಿಸಲಾಗಿದೆ. 220 ಬೂತ್ ವ್ಯಾಪ್ತಿಯಲ್ಲಿ ಸರಿ ಸುಮಾರು 5500 ಬಿಜೆಪಿ ಕಾರ್ಯಕರ್ತರ ಮನೆಗಳಲ್ಲಿ ಪಕ್ಷದ ಧ್ವಜ ಅಳವಡಿಸಲಾಗಿದೆ.
3 ವರ್ಷಗಳ ಹಿಂದೆ ಪುತ್ತೂರು ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 43 ಸಾವಿರ ಸದಸ್ಯತ್ವ ಮಾಡಲಾಗಿತ್ತು. ಅದನ್ನೀಗ 50 ಸಾವಿರಕ್ಕೆ ಏರಿಸುವ ಗುರಿ ಇದೆ. 29ರಂದು ಅಭಿಯಾನ ಮುಕ್ತಾಯಗೊಳ್ಳಲಿದ್ದು, ಅಂದು ಪ್ರಧಾನಿ ನರೇಂದ್ರ ಮೋದಿ ನಡೆಸುವ ಮನ್ ಕೀ ಬಾತ್ ಕಾರ್ಯಕ್ರಮವನ್ನು ಕಾರ್ಯರ್ತರು ಬೂತ್ ಮಟ್ಟದ ಒಂದು ಮನೆಯಲ್ಲಿ ಕುಳಿತು ಆಲಿಸಲಿದ್ದಾರೆ ಎಂದು ವಿವರಿಸಿದರು.
ವಿಧಾನಸಭಾ ಚುನಾವಣೆಗೆ 80 ದಿನಗಳಿದ್ದು, ಇದೀಗ ವಿಜಯ ಸಂಕಲ್ಪ ಅಭಿಯಾನ ನಡೆಯಲಿದೆ. ರಾಜ್ಯ ಮಟ್ಟದ ಕಾರ್ಯಕ್ರಮವನ್ನು ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ 21ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಉದ್ಘಾಟಿಸಲಿದ್ದಾರೆ. ಕ್ಷೇತ್ರ ವ್ಯಾಪ್ತಿಯ ಕಾರ್ಯಕ್ರಮವನ್ನು ಉಪ್ಪಿನಂಗಡಿಯಲ್ಲಿ ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ ಎಂದರು.
ಕಾರ್ಯಕ್ರಮಗಳು
Saptaka Foundation-ಬೆಂಗಳೂರಿನ ಸಪ್ತಕ ಸಂಸ್ಥೆ ವತಿಯಿಂದ ವಿಟ್ಲ ಬಸ್ ನಿಲ್ದಾಣದಲ್ಲಿ ಕುಡಿಯುವ ತಂಪು ನೀರಿನ ವ್ಯವಸ್ಥೆ ಉದ್ಘಾಟನೆ; ಅಳಿಕೆ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

ವಿಟ್ಲ: ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.
ನೂತನ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಹಾಗೂ ವಿಟ್ಲದ ಸಾರ್ವಜನಿಕರಿಗೆ ಈ ವ್ಯವಸ್ಥೆಯಿಂದ ಅನುಕೂಲವಾಗಲಿದೆ.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ರಮಾನಾಥ್ ವಿಟ್ಲ, ರಾಮದಾಸ್ ಶೆಣೈ, ರವೀಶ್ ವಿಟ್ಲ, ಅಶ್ರಫ್, ಚಿರಂತನದ ಭಾರವಿ ದೇರಾಜೆ ಹಾಗೂ ಶಿವಾನಂದ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅಳಿಕೆಯ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಇದೇ ವೇಳೆ, ಬೆಂಗಳೂರಿನ ಸಪ್ತಕ ಸಂಸ್ಥೆಯ ವತಿಯಿಂದ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಅಳಿಕೆಯ ಶ್ರೀ ಸತ್ಯ ಸಾಯಿ ಆಸ್ಪತ್ರೆಗೆ ಬಿಸಿ ನೀರು ಹಾಗೂ ತಂಪು ನೀರಿನ ಡಿಸ್ಪೆನ್ಸರ್‌ಗಳನ್ನು ಒದಗಿಸಲಾಗಿದೆ.
ನಿಧನ ವಾರ್ತೆ
Sullia-Big Breaking: ಸುಳ್ಯ: ವಿದ್ಯುತ್ ಶಾಕ್‌ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುಳ್ಯ: ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಬೊಮ್ಮೆಟ್ಟಿ ನಿವಾಸಿಗಳಾದ ಗಣೇಶ್ ಹಾಗೂ ಭರತ್ ಎಂದು ಗುರುತಿಸಲಾಗಿದೆ. ತಡರಾತ್ರಿ ಸಂಭವಿಸಿದ ಈ ದುರಂತದಿಂದ ಸ್ಥಳೀಯರಲ್ಲಿ ಆತಂಕ ಹಾಗೂ ಶೋಕದ ವಾತಾವರಣ ನಿರ್ಮಾಣವಾಗಿದೆ.
ವಿದ್ಯುತ್ ಶಾಕ್ ತಗುಲಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಶಿಕ್ಷಣ
Ambika-ಅಂಬಿಕಾ ಪ.ಪೂ.ವಿದ್ಯಾಲಯಗಳ ಪ್ರತಿಭಾ ದಿನಾಚರಣೆ – ಮಾನಸೋಲ್ಲಾಸ; ಉದ್ದೇಶ ಸ್ಪಷ್ಟತೆ ಇರುವವರಿಗೆ ಯಾವುದೇ ಅಡೆತಡೆಗಳಿಲ್ಲ: ಪಿ. ಪ್ರದೀಪ್ ಕುಮಾರ್
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಪ್ರತಿಭಾ ದಿನಾಚರಣೆ – ಮಾನಸೋಲ್ಲಾಸ ಕಾರ್ಯಕ್ರಮವನ್ನು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಉದ್ಘಾಟಿಸಿ ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಪಿ. ಪ್ರದೀಪ್ ಕುಮಾರ್ ಮಾತನಾಡಿದರು.

ಪುತ್ತೂರು: ಪ್ರತಿಭೆಯಿಲ್ಲದ ವ್ಯಕ್ತಿಯಿಲ್ಲ. ಆದರೆ ನಮ್ಮೊಳಗಿರುವ ಪ್ರತಿಭೆಗಳನ್ನು ಗುರುತಿಸುವುದು, ಬೆಳೆಸುವುದು ಹಾಗೂ ಆ ಪ್ರತಿಭೆಯನ್ನು ಸತ್ಕಾರ್ಯಗಳಿಗಾಗಿ ಬಳಸುವುದು ಅತ್ಯಂತ ಮುಖ್ಯ. ಸಮರ್ಪಿತ ಹಾಗೂ ಉದ್ದೇಶಸ್ಪಷ್ಟತೆ ಹೊಂದಿರುವ ವ್ಯಕ್ತಿಯ ಬೆಳವಣಿಗೆಗೆ ಯಾವುದೇ ಅಡೆತಡೆಗಳಿಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಪಿ. ಪ್ರದೀಪ್ ಕುಮಾರ್ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಪ್ರತಿಭಾ ದಿನಾಚರಣೆ – ಮಾನಸೋಲ್ಲಾಸ ಕಾರ್ಯಕ್ರಮವನ್ನು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಉದ್ಘಾಟಿಸಿ ಶನಿವಾರ ಮಾತನಾಡಿದರು.

ಈ ದೇಶದ ದೊಡ್ಡ ದೊಡ್ಡ ವಿಜ್ಞಾನಿಗಳು, ವೈದ್ಯರು, ಇಂಜಿನಿಯರ್‌ಗಳು, ದೊಡ್ಡ ದೊಡ್ಡ ಸಾಧಕರಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶಗಳಿಂದ ಬಂದವರೇ ಆಗಿದ್ದಾರೆ. ಹಾಗಾಗಿ ಗ್ರಾಮೀಣ ಭಾಗದಲ್ಲಿ ಅವಕಾಶಗಳು ಕಡಿಮೆ ಎಂಬ ಭಾವನೆಯನ್ನು ಇಟ್ಟುಕೊಳ್ಳಬೇಕಿಲ್ಲ. ನಾವು ಎಲ್ಲಿಂದ ಬಂದಿದ್ದೇವೆ, ಯಾವ ಹಿನ್ನೆಲೆಯಿಂದ ಬಂದಿದ್ದೇವೆ ಎಂಬುದು ಮುಖ್ಯವಲ್ಲ. ಸಾಧನೆಯೆಡೆಗೆ ಮುಖ ಮಾಡಿ ನಿರಂತರ ಕಾರ್ಯಪ್ರವೃತ್ತರಾದರೆ ಅಂದುಕೊಡ ಗಮ್ಯವನ್ನು ತಲಪುವುದಕ್ಕೆ ಸಾಧ್ಯವಿದೆ ಎಂದರು.
ಕನಸು ಕಾಣುವುದಕ್ಕೆ ಎಲ್ಲರಿಗೂ ಸಾಧ್ಯವಿದೆ. ಆದರೆ ಕಂಡ ಕನಸುಗಳನ್ನು ನನಸು ಮಾಡುವುದಕ್ಕೆ ಶಿಸ್ತು, ಪ್ರಾಮಾಣಿಕತೆ, ನಿರಂತರ ಪ್ರಯತ್ನ ಹಾಗೂ ಎದುರಾಗುವ ಅಡೆತಡೆಗಳನ್ನು ಮೀರಿ ಮುನ್ನಡೆಯುವ ಸಾಮರ್ಥ್ಯಗಳಿರಬೇಕು. ಆಕಾಂಕ್ಷೆ ಹಾಗೂ ಸಾಧನೆಗಳ ಮಧ್ಯೆ ಬಹುದೊಡ್ಡ ಅಂತರವಿದೆ. ಆ ಅಂತರದ ನಡುವಣ ಸೇತುವೆಯಲ್ಲಿ ನಡೆಯಲು ಕಠಿಣ ಪರಿಶ್ರಮವೊಂದೇ ದಾರಿ. ಯಶಸ್ಸಿಗೆ ಯಾವುದೇ ಅಡ್ಡದಾರಿಗಳಿಲ್ಲ. ನಮ್ಮ ವ್ಯಕ್ತಿತ್ವವನ್ನು ತಂತ್ರಜ್ಞಾನ ರೂಪಿಸಲಾರದು, ಸ್ವತಃ ನಾವೇ ರೂಪಿಸಿಕೊಳ್ಳಬೇಕು ಎಂದು ನುಡಿದರು.

ಮತ್ತೋರ್ವ ಅತಿಥಿ, ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಹಾಗೂ ಬೆಂಗಳೂರಿನ ಭಾರತ್ ಇಲೆಕ್ಟಾçನಿಕ್ಸ್ನ ಡೆಪ್ಯೂಟಿ ಇಂಜಿನಿಯರ್ ಅನುಜ್ಞಾ ಪಳ್ಳತ್ತಡ್ಕ ಮಾತನಾಡಿ ನಾವು ಉಸಿರಾಡುವ ಗಾಳಿ, ತಿನ್ನುವ ಆಹಾರ ಈ ದೇಶದ್ದು. ಹಾಗಾಗಿ ಈ ದೇಶದ ಸೇವೆಯನ್ನು ಮಾಡಿ ನಮ್ಮ ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕು. ನಮ್ಮ ಬದುಕಿನಲ್ಲಿ ಒಂದು ಸರಿಯಾದ ಉದ್ದೇಶವನ್ನಿಟ್ಟುಕೊಂಡು ಮುಂದುವರೆಯಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ನಮ್ಮ ಹಿರಿಯರ ಪರಿಶ್ರಮದ ಫಲವಾಗಿ ನಮ್ಮ ಭಾರತೀಯ ಕಲೆ, ಸಂಸ್ಕೃತಿಗಳು ಬೆಳೆದು ಬಂದಿವೆ. ಅವುಗಳನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಅಂಬಿಕಾ ಸಂಸ್ಥೆಗಳು ಸದಾ ತೊಡಗಿಕೊಂಡಿವೆ. ದೇಶ ಮೊದಲು ಎಂಬ ಭಾವನೆಯಡಿ ವಿದ್ಯಾರ್ಥಿಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ, ಆಡಳಿತ ಮಂಡಳಿ ಸದಸ್ಯರಾದ ವಿಶ್ರಾಂತ ಪ್ರಾಚಾರ್ಯ ಡಾ.ಎಚ್.ಮಾಧವ ಭಟ್, ಬಾಲಕೃಷ್ಣ ಬೋರ್ಕರ್, ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆ ಸಂಸ್ಥೆಗಳ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರುಗಳಾದ ಅವಿನಾಶ ಕೊಡೆಂಕಿರಿ ಹಾಗೂ ತಿಲಕ್ ಬಿ.ಸಿ, ಅಂಬಿಕಾ ನೀಟ್ ಅಕಾಡೆಮಿಯ ಪ್ರಾಚಾರ್ಯ ಕಿಶೋರ್ ಭಟ್, ವಿದ್ಯಾರ್ಥಿ ಸಂಘದ ನಾಯಕರಾದ ಅವನಿ ನಾಯಕ್, ಎಚ್.ವಿ.ಭವಿತ್ ಗೌಡ, ರಿಧಿ ಗೌಡ ಹಾಗೂ ಇಂದಿವರ್ ಪಿ.ಪಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶೈಕ್ಷಣಿಕ ಸಾಧಕರು, ಕ್ರೀಡಾ ಸಾಧಕರು, ವಿದ್ಯಾಭಾರತಿ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ದತ್ತಿನಿಧಿ ಬಹುಮಾನಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿನಿ ಅಮೃತಾ ರಾವ್ ಶಂಖನಾದಗೈದರು. ವಿದ್ಯಾರ್ಥಿನಿ ಶ್ರೀವಿಭಾ ಹಾಗೂ ತಂಡದವರು ಪ್ರಾರ್ಥಿಸಿದರು. ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿ, ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ.ಎಸ್. ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಅವರಿಂದ ವಿಡಿಯೋ ಪ್ರಾತ್ಯಕ್ಷಿಕೆ ಸಹಿತ ವರದಿ ವಾಚನ ನಡೆಯಿತು. ವಿದ್ಯಾರ್ಥಿನಿಯರಾದ ಸೋನಾ ನಾರ್ಕೋಡ್ ಹಾಗೂ ಉರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಆನ್ಯಾ ಹಾಗೂ ಚಿನ್ಮಯೋ ಶೆಟ್ಟಿ ಅತಿಥಿ ಪರಿಚಯ ನಡೆಸಿಕೊಟ್ಟರು.
-
ಮಂಗಳೂರು19 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್20 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
ಸುಳ್ಯ23 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಅಪರಾಧ23 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
Uncategorized16 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ಅಂತರ ರಾಜ್ಯ23 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್
-
ಮಂಗಳೂರು20 hours agoABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ
-
ಕ್ರೀಡೆ19 hours agoMCC:ಎಂಸಿಸಿಯಿಂದ ಕ್ರಿಕೆಟ್ ನಿಯಮಗಳ ಪರಿಷ್ಕರಣೆ: ಅ.1ರಿಂದ ಹೊಸ ಬದಲಾವಣೆಗಳು ಜಾರಿ




















