ನಿಧನ ವಾರ್ತೆ
Sudden Death : ಬ್ರಹ್ಮವಾರ : ಯುವ ನಟ ಕಾರ್ತಿಕ್ ಕಾರ್ಯಕ್ರಮವೊಂದರಲ್ಲಿ ಕುಸಿದು ಬಿದ್ದು ಮೃತ್ಯು
ಉಡುಪಿ : ಜ 24 : ರಂಗ ಭೂಮಿ ಕಲಾವಿದ ಬ್ರಹ್ಮಾವರದ ಕಾರ್ತಿಕ್ ಕುಮಾರ್(31) ಎಂಬವರು ಕುಸಿದು ಬಿದ್ದು ಮೃತಪಟ್ಟ ಘಟನೆ ಜ.22ರಂದು ಮಧ್ಯಾಹ್ನ ವೇಳೆ ಬ್ರಹ್ಮಾವರ ಸಮೀಪದ ಕುಮ್ರಗೋಡು ಗ್ರಾಮದ ಜಂಬಾಡಿ ಎಂಬಲ್ಲಿ ನಡೆದಿದೆ.
ಇವರು ಸುಮಾರು 1 ತಿಂಗಳಿನಿಂದ ವಿಪರೀತ ಕೆಮ್ಮು ಕಾಯಿಲೆಯಿಂದ ಬಳಲುತ್ತಿದ್ದು, ಅಕ್ಕನ ಮನೆಯ ದೈವದ ಮನೆಯಲ್ಲಿ ದರ್ಶನ ಆಗುತ್ತಿರುವಾಗ ಕುರ್ಚಿಯಲ್ಲಿ ಕುಳಿತಿದ್ದ ಕಾರ್ತಿಕ್ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಸಂಜೆ ವೇಳೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಂಗಭೂಮಿ ನಟರಾದ ಇವರು, ಮಂದಾರ ಬೈಕಾಡಿ, ಭೂಮಿಕಾ ರಂಗ ತಂಡ ಹಾರಾಡಿ, ದುರ್ಗಾ ಕಲಾ ತಂಡ ಸೇರಿದಂತೆ ವಿವಿಧ ತಂಡಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು, ಹಾಸ್ಯ ಹಾಗೂ ಕಿರುಚಿತ್ರಗಳಲ್ಲಿ ಅಭಿನಯಿಸಿದ್ದರು. ಮೃತರು ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ

ನಿಧನ ವಾರ್ತೆ
Boat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
ಬಿಹಾರದ ವೈಶಾಲಿ ಜಿಲ್ಲೆಯ ಹಾಜಿಪುರ ಸಮೀಪ ಗಂಗಾ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ. ಐವರನ್ನು ರಕ್ಷಿಸಲಾಗಿದೆ ಎಂದು ವೈಶಾಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.
ಹಾಜಿಪುರ: ಬಿಹಾರದ ವೈಶಾಲಿ ಜಿಲ್ಲೆಯ ಹಾಜಿಪುರ ಸಮೀಪ ಗಂಗಾ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ. ಐವರನ್ನು ರಕ್ಷಿಸಲಾಗಿದೆ ಎಂದು ವೈಶಾಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.
ರಘೋಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಮ್ಪುರ್ ಶ್ಯಾಮ್ಚಂದ್ ಗ್ರಾಮದ ಸಮೀಪ ಈ ದುರಂತ ಸಂಭವಿಸಿದೆ. ಸುಮಾರು 15ರಿಂದ 20 ಮಂದಿಯನ್ನು ಹೊತ್ತೊಯ್ಯುತ್ತಿದ್ದ ದೋಣಿಯಲ್ಲಿದ್ದವರು ಔತಣಕೂಟವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ದೋಣಿ ನದಿಯಲ್ಲಿ ಮಗುಚಿ ಬಿದ್ದಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಆರಂಭದಲ್ಲಿ ಐದರಿಂದ ಎಂಟು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಬಳಿಕ ಸಾವಿನ ಸಂಖ್ಯೆ 11ಕ್ಕೆ ಏರಿರುವುದು ದೃಢಪಟ್ಟಿದೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ವರದಿಯಾಗಿದೆ.
ದೋಣಿ ಮಗುಚಿ ಬೀಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಮೃತಪಟ್ಟವರ ಗುರುತು ಹಾಗೂ ದೋಣಿಯಲ್ಲಿದ್ದವರ ನಿಖರ ಸಂಖ್ಯೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ದೋಣಿ ದುರಂತಕ್ಕೆ ತೇಜಸ್ವಿ ಯಾದವ್ ಸಂತಾಪ
ಈ ದುರಂತದ ಬಗ್ಗೆ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಘೋಪುರ್ ದಿಯಾರಾ ಪ್ರದೇಶದಲ್ಲಿ ದೋಣಿ ಮಗುಚಿ ಬಿದ್ದಿರುವ ಆತಂಕಕಾರಿ ಸುದ್ದಿ ಬಂದಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಮಕ್ಕಳು ಎಂದು ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಸ್ಥಳೀಯ ನಿವಾಸಿಗಳು, ಆಡಳಿತ ಮಂಡಳಿ ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ಚುರುಕುಗೊಳಿಸುವುದರ ಜೊತೆಗೆ ಗಾಯಾಳುಗಳಿಗೆ ತ್ವರಿತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನಿಧನ ವಾರ್ತೆ
Subramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆಗಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ಮೃತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿ ದೇವೇಗೌಡ ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆಗಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿ ದೇವೇಗೌಡ ಎಂದು ಗುರುತಿಸಲಾಗಿದೆ.
ಅನಾರೋಗ್ಯದಿಂದ ವಸತಿಗೃಹದಲ್ಲೇ ವಿಶ್ರಾಂತಿ
ದೇವೇಗೌಡ ಅವರು ತುರುವೇಕೆರೆಯಿಂದ ಇತರ ಯಾತ್ರಾರ್ಥಿಗಳೊಂದಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಬಂದಿದ್ದರು ಎನ್ನಲಾಗಿದೆ. ದೂರದ ಪ್ರಯಾಣದ ಬಳಿಕ ಅನಾರೋಗ್ಯಕ್ಕೆ ಒಳಗಾದ ಅವರು, ಪೂಜಾ ಸ್ಥಳಕ್ಕೆ ತೆರಳದೆ ತಾವು ತಂಗಿದ್ದ ವಸತಿಗೃಹದಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ನದಿಯಲ್ಲಿ ತೇಲುತ್ತಿದ್ದ ಮೃತದೇಹ ಪತ್ತೆ
ಮಂಗಳವಾರ ಮುಂಜಾನೆ ಸುಬ್ರಹ್ಮಣ್ಯದ ಕುಲ್ಕುಂದ ಕಾಲನಿ ರಸ್ತೆಯಿಂದ ಕುಮಾರಧಾರ ನದಿಗೆ ಸಂಪರ್ಕ ಕಲ್ಪಿಸುವ ಸ್ಥಳದ ಸಮೀಪ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ತೇಲುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ.
ಇದೇ ವೇಳೆ, ವಸತಿಗೃಹದಲ್ಲಿದ್ದ ದೇವೇಗೌಡ ಅವರು ಕಾಣೆಯಾಗಿರುವುದನ್ನು ಗಮನಿಸಿದ ಕುಟುಂಬಸ್ಥರು ಹಾಗೂ ಅವರೊಂದಿಗೆ ಬಂದಿದ್ದವರು ಹುಡುಕಾಟ ನಡೆಸಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಲು ತೆರಳಿದಾಗ ನದಿಯಲ್ಲಿ ಮೃತದೇಹ ಪತ್ತೆಯಾಗಿರುವ ಮಾಹಿತಿ ಲಭಿಸಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮೃತದೇಹ ದೇವೇಗೌಡ ಅವರದ್ದೇ ಎಂಬುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಸಾವಿನ ಸುತ್ತ ಹಲವು ಅನುಮಾನ
ಅನಾರೋಗ್ಯದಿಂದ ವಸತಿಗೃಹದಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ದೇವೇಗೌಡ ಅವರು ನದಿಯ ಬಳಿಗೆ ತೆರಳಿದ್ದು ಹೇಗೆ? ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿದ್ದಾರೆಯೇ ಅಥವಾ ಬೇರೆ ಯಾವುದಾದರೂ ಕಾರಣದಿಂದ ಮೃತಪಟ್ಟಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Kalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.
ಕಲ್ಮಡ್ಕ: ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.
ಕಲ್ಮಡ್ಕದ ಬೊಮ್ಮೆಟ್ಟಿ ನಿವಾಸಿಗಳಾದ ಬಾಬು–ಸೀತಾ ದಂಪತಿಯ ಪುತ್ರ ಭರತ್ (28) ಹಾಗೂ ಭರತ್ ಅವರ ಸಹೋದರಿ ಭವ್ಯಾ ಅವರ ಪತಿ, ಬೆಳ್ತಂಗಡಿ ತಾಲೂಕಿನ ಮುಂಗೆಲು ನಿವಾಸಿಗಳಾದ ವೀರಪ್ಪ–ಸೀತಮ್ಮ ದಂಪತಿಯ ಪುತ್ರ ರಮೇಶ್ (34) ಮೃತಪಟ್ಟವರು. ಗಾಯಗೊಂಡ ಯುವಕನನ್ನು ಅವರ ಸಂಬಂಧಿ ಸಿಂಚನ್ ಎಂದು ಗುರುತಿಸಲಾಗಿದೆ.
ಅ.12ರಂದು ರಾತ್ರಿ ಸುಮಾರು 10.30ರ ವೇಳೆಗೆ ಭರತ್, ರಮೇಶ್ ಹಾಗೂ ಸಿಂಚನ್ ಅವರು ಮನೆಯಿಂದ ಸುಮಾರು ಒಂದೂವರೆ ಕಿ.ಮೀ. ದೂರದಲ್ಲಿರುವ ತೋಡಿಗೆ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ. ತೋಡಿನ ಮೇಲ್ಭಾಗದಲ್ಲಿ ತಂತಿ ಅಳವಡಿಸಿ ಅದಕ್ಕೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು ಎಂದು ತಿಳಿದುಬಂದಿದೆ.
ಈ ತಂತಿಯನ್ನು ದಾಟುವ ವೇಳೆ ಭರತ್ ಮತ್ತು ರಮೇಶ್ ಅವರಿಗೆ ವಿದ್ಯುತ್ ಸ್ಪರ್ಶಿಸಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರೊಂದಿಗೆ ಇದ್ದ ಸಿಂಚನ್ ಅವರಿಗೂ ವಿದ್ಯುತ್ ತಗುಲಿ ಎಸೆಯಲ್ಪಟ್ಟಿದ್ದು, ಕೈ, ಎದೆ ಹಾಗೂ ಕಾಲುಗಳಿಗೆ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
-
ನಿಧನ ವಾರ್ತೆ22 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
Uncategorized20 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಶಿಕ್ಷಣ21 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
-
ಮಂಗಳೂರು21 hours agoRaghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
-
ಬಿಗ್ ನ್ಯೂಸ್22 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ರಾಜಕೀಯ19 hours agoSiddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
-
ನಿಧನ ವಾರ್ತೆ20 hours agoSubramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ
-
ಬಿಗ್ ನ್ಯೂಸ್21 hours agoPuttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು


















