ದಕ್ಷಿಣ ಕನ್ನಡ
ಪುತ್ತೂರು : ಪ್ರಿಯತಮೆಗಾಗಿ ಗ್ಯಾಂಗ್ ಹಿಡ್ಕೊಂಡು ಬಂದು ಪ್ರಿಯಕರನಿಗೆ ಬಡಿದ ಭಗ್ನ ಪ್ರೇಮಿ
ಪುತ್ತೂರು: ತನ್ನ ಪ್ರಿಯತಮೆಯನ್ನು ಪ್ರೀತಿಸಬಾರದೆಂದು ಒತ್ತಾಯಿಸಿ ಯುವತಿಯ ಮಾಜಿ ಪ್ರಿಯಕರ ಯುವಕ ಹಾಗೂ ಆತನ ಸ್ನೇಹಿತನ ಮೇಲೆ ನಡೆಸಿರುವುದಾಗಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಂಗಳೂರು ಬಾಪೂಜಿ ನಗರದ ಸಾಗರ್ (23) ಹಾಗೂ ದುರ್ಗಾ ಪ್ರಸಾದ್ ಹಲ್ಲೆಗೊಳಗಾದವರಾಗಿದ್ದಾರೆ.
ಕೌಶಿಕ್, ಯಜ್ಞೇಶ್, ಕೇಶವ, ಸೃಜನ್, ವಿನೀತ್, ಲತೇಶ್, ಮನ್ವಿತ್, ಮೋಹಿತ್ ಮತ್ತು ಹೇಮಂತ್ ಆರೋಪಿಗಳು.
ಜ.29ರಂದು ಸಾಗರ್ ತನ್ನ ಪ್ರಿಯತಮೆ ವೇರಿನಾ ಎಂಬಾಕೆಯ ಜತೆ ಪುತ್ತೂರಿನ ಸಾರ್ವಜನಿಕ ಸ್ಥಳವೊಂದರಲ್ಲಿದ್ದ ಸಂಭಾಷಣೆಯಲ್ಲಿ ನಿರತರಾಗಿದ್ದಾಗ ಕೌಶಿಕ್ ಎಂಬಾತ ಆಗಮಿಸಿ ಆಕ್ಷೇಪಿಸಿದ್ದಾನೆ. ವೇರಿನಾಳನ್ನು ತಾನು ಪ್ರೀತಿಸುತ್ತಿದ್ದು, ಆಕೆಯ ಸಹವಾಸವನ್ನು ತೊರೆಯಬೇಕೆಂದು ಕೌಶಿಕ್
ಈ ವೇಳೆ ಸಾಗರ್ ಗೆ ತಾಕೀತು ಮಾಡಿದ್ದಾನೆ.
ಹಾಗೂ ಈ ಕುರಿತು ಚರ್ಚಿಸಲು ಏಳ್ಮುಡಿಗೆ ಬರುವಂತೆ ಸೂಚಿಸಿದ್ದಾನೆ.
ಅದರಂತೆ ಸಾಗರ್ ಮತ್ತು ದುರ್ಗಾಪ್ರಸಾದ್ ವೇರಿನಾಳ ಜತೆ ಅಲ್ಲಿಗೆ ಹೋಗಿದ್ದು ಅಲ್ಲಿ ಸುಮಾರು 6-7 ಜನ ಇವರಿಗೆ ಕಾಯುತ್ತಿದ್ದರು. ಅಲ್ಲು ಕೆಲ ಹೊತ್ತು ಮಾತಿನ ಚಕಮಕಿ ನಡೆದ ಬಳಿಕ ಎಲ್ಲರೂ ಬಲ್ನಾಡಿನ ನಿರ್ಜನ ಸ್ಥಳವೊಂದರಲ್ಲಿ ಚರ್ಚಿಸಲು ಮುಂದಾಗಿದ್ದಾರೆ.
ಅದರಂತೆ ಆಲ್ಟೋ ಕಾರು, ಎರಡು ದ್ವಿಚಕ್ರ ವಾಹನದಲ್ಲಿ ಬಲ್ನಾಡಿಗೆ ಹೋಗಿದ್ದು, ಅಲ್ಲಿ ಹಲ್ಲೆ ನಡೆಸಿ ವೇರಿನಾಳನ್ನು ಪ್ರೀತಿಸಬಾರೆಂದು ಬೆದರಿಸಿದ್ದು, ಬಿಡಿಸಲು ಬಂದ ದುರ್ಗಾ ಪ್ರಸಾದ್ ರವರಿಗೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ
ಕಾರ್ಯಕ್ರಮಗಳು
Medland Cup-2026-ಮೆಡ್ಲ್ಯಾಂಡ್ ಆಸ್ಪತ್ರೆಯ ವಾರ್ಷಿಕ ಸಂಭ್ರಮ: ನ.29ರಂದು ‘ಮೆಡ್ಲ್ಯಾಂಡ್ ಕಪ್-2026’ ಕ್ರಿಕೆಟ್ ಪಂದ್ಯಾಟ
ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ವಿವಿಧ ಇಲಾಖೆಗಳ ಎಂಟು ತಂಡಗಳ ನಡುವಿನ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ‘ಮೆಡ್ಲ್ಯಾಂಡ್ ಕಪ್-2026’ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ.
ಪುತ್ತೂರು: ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ವಿವಿಧ ಇಲಾಖೆಗಳ ಎಂಟು ತಂಡಗಳ ನಡುವಿನ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ‘ಮೆಡ್ಲ್ಯಾಂಡ್ ಕಪ್-2026’ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ.

ಪುತ್ತೂರಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡ ಎಂಟು ತಂಡಗಳು ಈ ಕ್ರೀಡಾಕೂಟದಲ್ಲಿ ಸೆಣಸಾಡಲಿವೆ. ಪುತ್ತೂರು ಪೊಲೀಸ್ ಎಲೆವೆನ್, ಫಾರೆಸ್ಟ್ ಎಲೆವೆನ್, ಮೆಡ್ಲ್ಯಾಂಡ್ ಫಾಲ್ಕನ್ಸ್, ಪುತ್ತೂರು ಬಾರ್ ಅಸೋಸಿಯೇಷನ್, ಮೆಸ್ಕಾಂ ಪುತ್ತೂರು ಪರ್ಲ್ಸ್, ಕ್ಯಾಂಪ್ಕೋ ಪುತ್ತೂರು, ಕೆಎಸ್ಆರ್ಟಿಸಿ ಪುತ್ತೂರು ಹಾಗೂ ಸಿಎಂಸಿ ಎಲೆವೆನ್ ಪುತ್ತೂರು ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಲಿವೆ.
ಆಸ್ಪತ್ರೆಯ ಒಂದು ವರ್ಷದ ವೈದ್ಯಕೀಯ ಸೇವೆಯ ಸಂಭ್ರಮವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ವಿವಿಧ ಇಲಾಖೆಗಳ ನಡುವೆ ಪರಸ್ಪರ ಬಾಂಧವ್ಯ ವೃದ್ಧಿಸುವುದರ ಜತೆಗೆ ಕ್ರೀಡಾಸ್ಫೂರ್ತಿ, ತಂಡದ ಒಗ್ಗಟ್ಟು ಹಾಗೂ ಸ್ನೇಹಭಾವವನ್ನು ಉತ್ತೇಜಿಸುವುದು ಪಂದ್ಯಾಟದ ಆಶಯವಾಗಿದೆ.
ಈ ಕುರಿತು ಮಾಹಿತಿ ನೀಡಿದ ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯ ಡಾ. ವಿಶಾಲ್ ಅವರು, ಆಸ್ಪತ್ರೆಯ ಪ್ರಥಮ ವರ್ಷದ ಸಂಭ್ರಮವನ್ನು ಕ್ರೀಡಾಕೂಟದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಬಿಗ್ ನ್ಯೂಸ್
Rain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ನ.25ರ ರಾತ್ರಿ ಕಡಬ ತಾಲೂಕಿನ ಕಾಣಿಯೂರು , ಪಂಜ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರಿನ ಹಲವು ಕಡೆ ಸಾಧಾರಣ ಮಳೆಯಾಗಿದೆ.
ಪುತ್ತೂರು : ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.
ನ.25ರ ರಾತ್ರಿ ಕಡಬ ತಾಲೂಕಿನ ಕಾಣಿಯೂರು , ಪಂಜ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರಿನ ಹಲವು ಕಡೆ ಸಾಧಾರಣ ಮಳೆಯಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ ಕೋಲಾರ ರಾಮನಗರ ಬೆಂಗಳೂರು ತುಮಕೂರು ಜಿಲ್ಲೆಗಳ ಹಲವೆಡೆ ಮಳೆಯಾಗಿದೆ.
ಇವತ್ತಿನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು ದ.ಕ. ಉಡುಪಿ ಉ.ಕ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮಳೆ ಬರುವ ಸಾಧ್ಯತೆ ಇದೆ. ರಾತ್ರಿ ಗುಡುಗು ಮಳೆಯ ಮುನ್ಸೂಚನೆ ಇದ್ದರೂ ವಾತಾವರಣದ ಹ್ಯುಮಿಡಿಟಿ ಕಡಿಮೆ ಆದರೇ ಮಳೆ ಪ್ರಮಾಣ ಕಡಿಮೆ ಆಗಿ ಮೋಡದ ವಾತಾವರಣ ಮುಂದುವರೆಯಬಹುದು ಎನ್ನಲಾಗಿದೆ. ನವೆಂಬರ್ 28 ತನಕ ಸಂಜೆ ಮೋಡ – ಮಳೆಯ ಸಾಧ್ಯತೆ ಮುಂದುವರೆಯಬಹುದು ಎಂದು ಹವಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಮಲೆನಾಡಿನಲ್ಲಿ ಸಂಜೆಯ ಮೋಡ ಬರಲಿದ್ದು ಕೊಡಗು ಹಾಸನ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ತುಂತುರು – ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 27 ತನಕ ಸಂಜೆ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಕೋಲಾರ ಚಿಕ್ಕಬಳ್ಳಾಪುರ ಬೆಂಗಳೂರು – ಗ್ರಾಮಾಂತರ ರಾಮನಗರ ಚಾಮರಾಜನಗರ ಮೈಸೂರು ಮಂಡ್ಯ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ತುಮಕೂರು ಚಿತ್ರದುರ್ಗ ದಾವಣಗೆರೆ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯಾಗಬಹುದು. ನ 28 ರಿಂದ ಮಳೆ ಪೂರ್ತಿ ಕಡಿಮೆ ಆಗಬಹುದು.
ಉತ್ತರ ಒಳನಾಡಿನಲ್ಲಿ ಮೋಡದ ವಾತಾವರಣ ಬರಬಹುದು.ಬಳ್ಳಾರಿ ರಾಯಚೂರು ಹಾವೇರಿ ಗದಗ ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ತುಂತುರು/ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೋಡ ಮಧ್ಯ ಕರ್ನಾಟಕ ಚಲಿಸುವ ಕಾರಣ ಒಂದೆರಡು ದಿನ ಸಣ್ಣ ಮಳೆಯಾಗಲಿದ್ದು ನಂತರ ಚಳಿ ಮುಂದುವರೆಯಬಹುದು.
ಬಂಗಾಳಕೊಲ್ಲಿಯಿಂದ ಬೀಸುವ ಪೂರ್ವದ ಮಾರುತಗಳಿಂದ ತಮಿಳುನಾಡು ಕೇರಳ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು ಮುಂದಿನ 3-4 ದಿನ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಡಿಸೆಂಬರ್ ಮೊದಲ ವಾರ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತವಾಗಿ ದಕ್ಷಿಣ ಶ್ರೀಲಂಕಾ ಮೂಲಕ ಅರಬ್ಬೀಸಮುದ್ರದತ್ತ ಚಲಿಸುವ ಸಾಧ್ಯತೆಯೂ ಇದೆ.
ದಕ್ಷಿಣ ಕನ್ನಡ
ಡಿ. 8ರ ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು: ಕಾರ್ಯಾಲಯ ಉದ್ಘಾಟನೆ -ಅದ್ದೂರಿ ದೀಪೋತ್ಸವಕ್ಕೆ ಭಕ್ತರ ಸಹಕಾರ ಅಗತ್ಯ: ಎಸ್. ರವೀಂದ್ರ ಶೆಟ್ಟಿ

ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಸಿದ್ಧತೆಗಳು ಚುರುಕುಗೊಂಡಿದ್ದು, ಇದರ ಅಂಗವಾಗಿ ದೇವಸ್ಥಾನದ ಮುಂಭಾಗದಲ್ಲಿ ದೀಪೋತ್ಸವದ ಕಾರ್ಯಾಲಯ ಉದ್ಘಾಟನೆಗೊಂಡಿತು.
ಮಂಗಳೂರಿನ ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ ಅವರು ಕಾರ್ಯಾಲಯವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೀಪೋತ್ಸವ ಸಮಿತಿಯ ಅಧ್ಯಕ್ಷ ಎಸ್. ರವೀಂದ್ರ ಶೆಟ್ಟಿ ನುಳಿಯಾಲು ಮಾತನಾಡಿ, ಪುತ್ತೂರಿನಲ್ಲಿ ಅದ್ದೂರಿ ಹಾಗೂ ವಿಶಿಷ್ಟ ದೀಪೋತ್ಸವಕ್ಕೆ ಸಾಕ್ಷಿಯಾಗಬೇಕು ಎಂಬ ಆಶಯದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ದೀಪೋತ್ಸವದ ಯಶಸ್ಸಿಗೆ ಪ್ರತಿಯೊಬ್ಬರ ಸಹಕಾರ ಮತ್ತು ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮಿತಿಯು ನಿರಂತರವಾಗಿ ಶ್ರಮಿಸುತ್ತಿದ್ದು, ಪುತ್ತೂರಿನ ಭಕ್ತರನ್ನು ಸಂಪರ್ಕಿಸಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ. ದೀಪೋತ್ಸವಕ್ಕೆ ಸಂಬಂಧಿಸಿದ ಎಲ್ಲ ಸಿದ್ಧತೆಗಳು ವ್ಯವಸ್ಥಿತವಾಗಿ ನಡೆಯುತ್ತಿವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರಿನ ಉದ್ಯಮಿಗಳಾದ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲು, ವೇಣುಗೋಪಾಲ ಪಿ.ಎಲ್., ವಿಜಯ ಬ್ಯಾಂಕ್ನ ನಿವೃತ್ತ ಎಜಿಎಂ ಜಗಜೀವನದಾಸ್ ರೈ, ನಿವೃತ್ತ ಮ್ಯಾನೇಜರ್ ಜೈರಾಜ್ ಭಂಡಾರಿ ನೋಣಾಲು ಹಾಗೂ ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಿತಿಯ ಗೌರವ ಸಲಹೆಗಾರರಾದ ಹರಿಣಾಕ್ಷಿ ಜೆ. ಶೆಟ್ಟಿ ಉಪಸ್ಥಿತರಿದ್ದರು.
ಸ್ವಾಗತ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪ್ರಸ್ತಾವನೆಗೈದು, ದೀಪೋತ್ಸವದ ಕಾರ್ಯಕ್ರಮಗಳ ರೂಪುರೇಷೆ, ಸ್ವಯಂಸೇವಕರ ನಿಯೋಜನೆ ಹಾಗೂ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಾಗಲಿರುವ ರಥದ ಕುರಿತು ಮಾಹಿತಿ ನೀಡಿದರು. ಕೋಶಾಧಿಕಾರಿ ಎಸ್. ದಾಮೋದರ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು. ಡಾ. ರಾಜೇಶ್ ಬೆಜ್ಜಂಗಳ ಹಾಗೂ ಸುಜೀರ್ ಕುಮಾರ್ ಶೆಟ್ಟಿ ನುಳಿಯಾಲು ಸಹಕರಿಸಿದರು.
-
ಕ್ರೈಂ24 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ಸ್ಥಳೀಯ18 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ನಿಧನ ವಾರ್ತೆ24 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ22 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಅಪರಾಧ18 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಬಿಗ್ ನ್ಯೂಸ್24 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಕ್ರೀಡೆ22 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















