ಬಿಗ್ ನ್ಯೂಸ್
ಪುತ್ತೂರು : ಪೊಕ್ಸೋ ಪ್ರಕರಣದ ಬಂಧಿತ ಆರೋಪಿ ಕಟ್ಟ ನಾರಾಯಣ ರೈಯವರಿಗೆ ಜಾಮೀನು
ಪುತ್ತೂರು: ನ 20 : ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾದ ಆರೋಪದಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವೂ ನ.20 ರಂದು ಶರತುಬದ್ಧ ಜಾಮೀನು ಮಂಜೂರು ಮಾಡಿದೆ.
ಪುತ್ತೂರು ತಾಲೂಕಿನ ಬಡಗನ್ನೂರು 17 ರ ಹರೆಯದ ಬಾಲಕಿ ಸಂತ್ರಸ್ತೆ. ಪುತ್ತೂರು ತಾಲೂಕು ಪಡವನ್ನೂರು ಗ್ರಾಮದ ಕಟ್ಟಾ ನಿವಾಸಿ ನಾರಾಯಣ ರೈ ಹಾಗೂ ಸ್ಥಳೀಯ ನಿವಾಸಿ ಸತೀಶ್ ಪ್ರಕರಣದಡಿ ಬಂಧಿತರಾಗಿದ್ದ ಆರೋಪಿಗಳು . ಇದೀಗ ಇವರಿಬ್ಬರಿಗೂ ಜಾಮೀನು ಮಂಜೂರು ಆಗಿದೆ
ಸಂತ್ರಸ್ತೆಯೂ ಸೆ. 5 ರಂದು ಮಗುವಿಗೆ ಜನ್ಮ ನೀಡಿದ್ದೂ ನಂತರ ಪ್ರಕರಣ ಬೆಳಕಿಗೆ ಬಂದಿತ್ತು. ಈ ಬಗ್ಗೆ ಅದೇ ದಿನ ಸಂತ್ರಸ್ತೆಯ ದೂರು ನೀಡಿದ ಬಳಿಕ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಯಿತು. ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಈ ಪೈಕಿ ಸತೀಶ್ ಎಂಬಾತನನ್ನು ಬಂಧಿಸಿದ್ದರು. ಮತ್ತೂರ್ವನನ್ನು ಪ್ರಕರಣಕ್ಕೂ ಆತನಿಗೆ ಸಂಬಂಧವಿಲ್ಲ ಎನ್ನುವ ನೆಲೆಯಲ್ಲಿ ಪೊಲೀಸರು ಬಿಟ್ಟು ಕಳುಹಿಸಿದ್ದರು ಎನ್ನಲಾಗಿದೆ. ಮೂಲಗಳ ಪ್ರಕಾರ, ಸಂತ್ರಸ್ತೆಯೂ ಮೊದಲಿಗೆ ಪೊಲೀಸರು ವಿಚಾರಣೆ ನಡೆಸಿ ಬಿಡುಗಡೆಗೊಳಿಸಿದ ಯುವಕನ ಹೆಸರನ್ನು ಹೇಳಿದ್ದರು. ಅದಾದ ಒಂದು ದಿನದ ಬಳಿಕ ಆರೋಪಿ ಸತೀಶ್ ಹೆಸರು ಮುನ್ನಲೆಗೆ ಬಂದಿತ್ತು ಎನ್ನಲಾಗುತ್ತಿದೆ.
ಅದಾಗಿ 15 ದಿನಗಳ ಬಳಿಕ ಸಂತ್ರಸ್ತೆಯೂ ತಾನು ಕೆಲಸಕ್ಕೆ ಹೋಗುತ್ತಿದ್ದ ತೋಟದ ಮಾಲಕ ಕಟ್ಟ ನಾರಾಯಣ ರೈ ಹೆಸರನ್ನು ನ್ಯಾಯಾಧೀಶರ ಎದುರು ನೀಡಿದ್ದ ಹೇಳಿಕೆಯಲ್ಲಿ ಉಲ್ಲೇಖಿಸಿದ್ದರು. ಇದರ ಮಾಹಿತಿ ಪಡೆದ ನಾರಾಯಣ ರೈ ವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಇದನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿತ್ತು
ಈ ಹಂತದಲ್ಲಿ ಪ್ರಕರಣದ ನೈಜ ಆರೋಪಿಯಾಗಿರುವ ನಾರಾಯಣ ರೈಯವರನ್ನು ಬಂಧಿಸಬೇಕು ಎಂಬ ಕೂಗು ದಲಿತ ಸಂಘಟನೆಗಳ ಮುಖಂಡರು ಎಬ್ಬಿಸಿದ್ದು, ಅವರ ಬಂಧನವಾಗದಿದ್ದಾಗ ನ್ಯಾಯಕ್ಕೆ ಅಗ್ರಹಿಸಿ ಸಂಘಟನೆಗಳು ಸಂಪ್ಯ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದರು.
ಇದಾದ ಎರಡು – ಮೂರು ದಿನಗಳ ಬಳಿಕ, ಹಾಗೂ ಪ್ರಕರಣ ದಾಖಲಾದ ಸುಮಾರು ಒಂದೂವರೆ ತಿಂಗಳ ನಂತರ ನಾಟಕೀಯ ಬೆಳವಣಿಗೆಯೊಂದರಲ್ಲಿ ಆರೋಪಿ ನಾರಾಯಣ ರೈ ಅವರು ನ್ಯಾಯಾಲಯಕ್ಕೆ ಶರಣಾಗಿ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೇ ಆ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯವೂ ಆರೋಪಿಯನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು. ಅದೇ ದಿನ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಪೊಲೀಸ್ ಕಸ್ಟಡಿ ಅವಧಿಯಲ್ಲಿಯೇ ನಾರಾಯಣ ರೈ ಯವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಬಳಿಕ ನ್ಯಾಯಾಲಯವೂ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ಈ ಹಂತದಲ್ಲಿ ಮತ್ತೆ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು .ಅದನ್ನು ಮತ್ತೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು.
ಇತ್ತೀಚೆಗೆ ತನಿಖೆ ಪೂರ್ಣಗೊಳಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿ ಸಲ್ಲಿಸಿದರು . ಈ ಹಂತದಲ್ಲಿ ಮತ್ತೆ ತಮ್ಮ ವಕೀಲರ ಮೂಲಕ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಇದನ್ನು ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನ .19 ರಂದು ಪುರಸ್ಕರಿಸಿ ಜಾಮೀನು ಮಂಜೂರು ಮಾಡಿದೆ. ಇದೇ ಸಂದರ್ಭದಲ್ಲಿ ಇನ್ನೋರ್ವ ಬಂಧಿತ ಅರೋಪಿ ಸತೀಶ್ ರವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ.
ನಾರಾಯಣ ರೈ ಪರ ವಾದಿಸಿದ ವಕೀಲರಾದ ಮಹೇಶ್ ಕಜೆ ಅವರು, ‘ ತನಿಖೆಯನ್ನು ಪೂರ್ಣಗೊಂಡು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿದೆ. ಆರೋಪಿ ನಾರಾಯಣ ರೈ ಅವರಿಗೆ 73 ವರ್ಷವಾಗಿದ್ದು ಅವರ ಮೇಲೆ ಹೊರಿಸಲಾಗಿರುವ ಅತ್ಯಾಚಾರದ ಆರೋಪವನ್ನು ಸಾಬೀತುಪಡಿಸುವಂತಹ ಸಾಮರ್ಥ್ಯ ಮೇಲ್ನೋಟಕ್ಕೆ ಅವರಲ್ಲಿ ಕಂಡು ಬಾರದ ಹಿನ್ನಲೆಯಲ್ಲಿ ಸಂತ್ರಸ್ತೆಯೂ ನ್ಯಾಯಾದೀಶರ ಎದುರು ನೀಡಿದ ಹೇಳಿಕೆಯೂ ವಿರೋಧಭಾಸದಂತೆ ಕಾಣಿಸುತ್ತಿದೆ ಎಂಬಿತ್ಯಾದಿ ವಾದವನ್ನು ನ್ಯಾಯಾಲಯದ ಮುಂದೆ ಮಂಡಿಸಿದ್ದಾರೆಂದು ವರದಿಯಾಗಿದೆ
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
ನಿಧನ ವಾರ್ತೆ8 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು7 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ8 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ8 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ8 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಮಂಗಳೂರು4 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
Uncategorized10 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP
-
ಅಂತರ ರಾಜ್ಯ9 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















