ಅಪರಾಧ
ಉಪ್ಪಿನಂಗಡಿ: ರಿಕ್ಷಾ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಢಿಕ್ಕಿ – ಸವಾರ ಗಂಭೀರ
ಉಪ್ಪಿನಂಗಡಿ : ಫೆ 2 : ರಿಕ್ಷಾ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಢಿಕ್ಕಿ ಸಂಭವಿಸಿ ಸವಾರ ತೀವ್ರ ಗಾಯಗೊಂಡ ಘಟನೆ 34 ನೆಕ್ಕಿಲಾಡಿಯಲ್ಲಿ ಫೆ.1ರಂದು ನಡೆದಿದೆ. ಉಪ್ಪಿನಂಗಡಿಯ ಕ್ಲಿನಿಕ್ವೊಂದರಲ್ಲಿ ಕಾಂಪೌಂಡರ್ ಆಗಿ ಕಾರ್ಯ ನಿರ್ವಹಿಸುವ ಉಪ್ಪಿನಂಗಡಿ ಗ್ರಾಮದ ಆರ್ತಿಲ ನಿವಾಸಿ ಶೀನಪ್ಪ ನಾಯ್ಕ (55 ವ.) ಗಾಯಗೊಂಡವರು.
ನೆಕ್ಕಿಲಾಡಿಯ ಲ್ಯಾಂಪ್ಸ್ ಸೊಸೈಟಿ ಸಮೀಪ ರಸ್ತೆಯ ಬದಿ ಸರ್ವಿಸ್ ಸ್ಟೇಶನ್ವೊಂದಿದ್ದು, ಅದರ ಮುಂಭಾಗ ಅಪಘಾತ ನಡೆದಿದೆ. ರಿಕ್ಷಾ ನೆಕ್ಕಿಲಾಡಿಯಿಂದ ಶಾಂತಿನಗರ ಕಡೆಗೆ ಸಂಚರಿಸುತ್ತಿದ್ದು, ಅದರ ಚಾಲಕ ಏಕಾಏಕಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿರುವ ಸರ್ವಿಸ್ ಸ್ಟೇಶನ್ಗೆ ರಿಕ್ಷಾವನ್ನು ತಿರುಗಿಸಿದ್ದಾನೆ ಎನ್ನಲಾಗುತ್ತಿದೆ. ಇದೆ ವೇಳೆ ಶಾಂತಿನಗರ ಕಡೆಯಿಂದ ನೆಕ್ಕಿಲಾಡಿ ಕಡೆಗೆ ದ್ವಿಚಕ್ರ ವಾಹನ ಬಂದಿದ್ದು ಪರಸ್ಪರ ಢಿಕ್ಕಿ ಹೊಡೆದುಕೊಂಡಿದೆ.
ಅಪಘಾತದಿಂದ ದ್ವಿಚಕ್ರ ವಾಹನ ಸವಾರ ರಸ್ತೆಗೆಸೆಯಲ್ಪಟ್ಟು ಗಾಯಗೊಂಡಿದ್ದಾರೆ. ಗಾಯಾಳು ಶೀನಪ್ಪ ನಾಯ್ಕರವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಅಪರಾಧ
Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Punacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
ಪುಣಚದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪುತ್ತೂರು: ಪುಣಚದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.
ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.
ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.
ಅಪರಾಧ
Punacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
2024ರ ಡಿಸೆಂಬರ್ 11ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಸಂಜೀವ ನಾಯ್ಕ ತನ್ನ ಪತ್ನಿಗೆ ಹೃದಯಾಘಾತವಾಗಿದೆ ಎಂದು ನೆರೆಮನೆಯವರನ್ನು ನಂಬಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು.
ಮೃತದೇಹದ ಮೇಲೆ ಅನುಮಾನಾಸ್ಪದ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ನಿರೀಕ್ಷಕ ಹೆಚ್.ಇ. ನಾಗರಾಜ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎನ್ಎಸ್ ಕಲಂ 105 ಭಾಗ-2ರ ಅಡಿಯಲ್ಲಿ ಆರೋಪಿಗೆ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.
ಅಲ್ಲದೆ, ಬಿಎನ್ಎಸ್ ಕಲಂ 240ರ ಅಡಿಯಲ್ಲಿ ಸಾಕ್ಷ್ಯನಾಶ ಹಾಗೂ ಸುಳ್ಳು ಮಾಹಿತಿ ನೀಡಿದ ಅಪರಾಧಕ್ಕೆ 6 ತಿಂಗಳ ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ವಾದ ಮಂಡಿಸಿದ್ದರು.
-
ನಿಧನ ವಾರ್ತೆ22 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಬಿಗ್ ನ್ಯೂಸ್17 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಅಪರಾಧ22 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ22 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ22 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ಬಿಗ್ ನ್ಯೂಸ್17 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ರಾಜಕೀಯ22 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ20 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು















