ಸ್ಥಳೀಯ
Uppinangady Kambala | ಅಶೋಕ್ ಕುಮಾರ್ ರೈಯಿಂದ ಉಪ್ಪಿನಂಗಡಿ ಕಂಬಳ ಹೈಜೆಕ್ ಆರೋಪ ತಳ್ಳಿಹಾಕಿದ ಗೌರವಾಧ್ಯಕ್ಷ , ಬಿಜೆಪಿ ಮುಖಂಡ ಉಮೇಶ್ ಶೆಣೈ – ತುಳುನಾಡಿನ ಕಂಬಳ ಕ್ರೀಡೆಗೆ ರಾಜಕೀಯ ಬಣ್ಣ ಕೊಡಬೇಡಿ ಎಂದು ಮನವಿ
ಉಪ್ಪಿನಂಗಡಿ: ಉಪ್ಪಿನಂಗಡಿ ಕಂಬಳ (Uppinangady Kambala) ಅಧ್ಯಕ್ಷ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರ ವಿರುದ್ಧ ಉಪ್ಪಿನಂಗಡಿ ಕಂಬಳಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಪಪ್ರಚಾರಕ್ಕೆ ಉಪ್ಪಿನಂಗಡಿ ವಿಜಯ್- ವಿಕ್ರಮ ಜೋಡುಕರೆ ಬಯಲು ಕಂಬಳ ಸಮಿತಿಯ ಗೌರವಾಧ್ಯಕ್ಷ, ಬಿಜೆಪಿ ಮುಖಂಡ ಎನ್. ಉಮೇಶ್ ಶೆಣೈ ಕಂಬಳ ಸಮಿತಿ ಸಭೆಯಲ್ಲೇ ಉತ್ತರ ಕೊಟ್ಟಿದ್ದಾರೆ.
ಕಂಬಳವು ತುಳುನಾಡಿನ ಜನಪದ ಕ್ರೀಡೆಯಾಗಿದ್ದು, ಇದಕ್ಕೆ ರಾಜಕೀಯ ಬಣ್ಣ ಕೊಡುವುದು ಸರಿಯಲ್ಲ. ಎಲ್ಲರೂ ಕ್ರೀಡೆ ಮನೋಭಾವದಿಂದ ಪರಸ್ಪರ ಸಹಕಾರ ನೀಡಿದಾಗ ಮಾತ್ರ ಕಂಬಳ ಕ್ರೀಡೆಯು ಯಶಸ್ವಿಯಾಗಿ ನಡೆಯುವುದರೊಂದಿಗೆ ಈ ಮಣ್ಣಿನ ಕ್ರೀಡೆಯು ಉಳಿದು ಬೆಳೆಯಲು ಸಾಧ್ಯ ಎಂದು ಉಪ್ಪಿನಂಗಡಿ ವಿಜಯ್- ವಿಕ್ರಮ ಜೋಡುಕರೆ ಬಯಲು ಕಂಬಳ ಸಮಿತಿಯ ಗೌರವಾಧ್ಯಕ್ಷ ಎನ್. ಉಮೇಶ್ ಶೆಣೈ ತಿಳಿಸಿದರು.
‘ 25 ವರ್ಷದಿಂದ ಅಧ್ಯಕ್ಷರಾಗಿ ರಾತ್ರಿ ಹಗಲೆನ್ನದೆ ದುಡಿದು ಉಪ್ಪಿನಂಗಡಿ ಕಂಬಳ ಉಳಿಸಿರುವ ಬರಿಗಾಲ ವ್ಯಕ್ತಿಯಾದ ಉಮೇಶ್ ಶೆಣೈಮಾಮರ ಕೈಯಿಂದ ಹೈಜೆಕ್ ಮಾಡಿದ ಅಶೋಕ್ ರೈ ಯನ್ನು ಉಪ್ಪಿನಂಗಡಿ ಕಂಬಳದಿಂದಲೇ ಮುಕ್ತಿ ನೀಡಿ ಉಮೇಶ್ ಶೆಣೈ ನೇತೃತ್ವದಲ್ಲೇ ನಡೆಯುವಂತಾಗಲಿ ‘ ಎಂಬ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಇತ್ತಿಚೆಗೆ ಹರಿದಾಡುತಿತ್ತು.
ಹಳೆಗೇಟು ಬಳಿಯ ನೇತ್ರಾವತಿ ನದಿ ಕಿನಾರೆಯ ಕಂಬಳ ಕರೆಯ ಬಳಿ ಫೆ.2 ರಂದು ನಡೆದ ಕಂಬಳ ಸಮಿತಿಯ ಸಭೆಯಲ್ಲಿ ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಪಪ್ರಚಾರಕ್ಕೆ ಸಂಬಂಧಿಸಿ ಮಾತನಾಡಿದ ಉಮೇಶ್ ಶೆಣೈ ಅವರು, ನಿಂತು ಹೋಗಿದ್ದ ಉಪ್ಪಿನಂಗಡಿಯ ವಿಜಯ- ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಹೊಸ ಚೈತನ್ಯ ನೀಡಿ ಮರು ಆರಂಭವಾಗಲು ಕಾರಣರಾದವರು ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು. ಅವರ ಅಧ್ಯಕ್ಷತೆಯಲ್ಲಿ ಅಂದಿನಿಂದ ಇಂದಿನವರೆಗೆ ಸುಸೂತ್ರವಾಗಿ ಕಂಬಳ ನಡೆದುಕೊಂಡು ಬರುತ್ತಿದೆ.
ಬೆಳ್ಳಿ ಹಬ್ಬ ಆಚರಣೆಯ ಬಳಿಕ ಉಪ್ಪಿನಂಗಡಿಯ ವಿಜಯ- ವಿಕ್ರಮ ಜೋಡುಕರೆ ಕಂಬಳ ಒಂದು ವರ್ಷ ನಿಂತು ಹೋಗಿತ್ತು. ಬಳಿಕ ಉದ್ಯಮಿ ಕುಶಾಲಪ್ಪ ಗೌಡ ಪೂವಾಜೆಯವರು ನನ್ನಲ್ಲಿಗೆ ಬಂದು ಕಂಬಳ ನಿಲ್ಲಿಸಬಾರದು ಎಂದರಲ್ಲದೆ, ಅವರದ್ದೇ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚನೆ ಮಾಡಿ ಎರಡು ವರ್ಷ ಕಂಬಳ ನಡೆಸಿದರು, ಬಳಿಕ ಸಮಿತಿಯ ಅಧ್ಯಕ್ಷರನ್ನು ಬದಲಾಯಿಸೋಣ ಎಂಬ ಪ್ರಸ್ತಾಪ ಕುಶಾಲಪ್ಪ ಗೌಡರಿಂದ ಬಂದಾಗ ನಾವೆಲ್ಲರೂ ಒಮ್ಮತದಿಂದ ಅಶೋಕ್ ಕುಮಾರ್ ರೈಯವರನ್ನು ಕಂಬಳ, ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದೆವು. ಅಂದಿನಿಂದ ಇಂದಿನವರೆಗೆ ಸುಸೂತ್ರವಾಗಿ ಕಂಬಳ.
ನಮ್ಮೊಳಗೆ ಯಾವುದೇ ಭಿನ್ನಾಭಿಪ್ರಾಯಗಳಾಗಲಿ, ನಡೆದುಕೊಂಡು ಬರುತ್ತಿದೆ. ಇಲ್ಲಿಯವರೆಗೆ ರಾಜಕೀಯ ಭೇದಗಳಾಗಲಿ ಬಂದಿಲ್ಲ. ಮುಂದೆಯೂ ಬರುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.
ಕಂಬಳಾಭಿಮಾನಿಗಳ, ಊರಿನವರ ಸಹಕಾರ, ನಾವೆಲ್ಲ ಒಂದೇ ಎನ್ನುವ ಮನೋಭಾವದಿಂದ ಒಟ್ಟು ಸೇರಿ ಪರಸ್ಪರ ಕೈಜೋಡಿಸಿರುವುದರಿಂದ ಉಪ್ಪಿನಂಗಡಿ ಕಂಬಳ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದೆ. ಮುಂದೆಯೂ ಕಂಬಳಾಭಿಮಾನಿಗಳು, ಊರವರು, ಕೋಣಗಳ ಯಜಮಾನರು ಇದೇ ರೀತಿಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರಲ್ಲದೆ, ಈ ಬಗ್ಗೆ ಅಪಪ್ರಚಾರವಾಗಲಿ, ತಲೆಬಿಸಿಯಾಗಲಿ ಯಾರಿಗೂ ಬೇಡ, ರಾಜಕೀಯದಿಂದ ದೂರವಿಟ್ಟು ಕಂಬಳ ಕ್ರೀಡೆಯನ್ನು ಉಳಿಸಿ, ಬೆಳೆಸಲು ಎಲ್ಲರೂ ಪ್ರೋತ್ಸಾಹಿಸಿ ಎಂದರು.
ಸಮಿತಿ ಸಭೆ :
2023ರ ಮಾ.11 ಮತ್ತು 12ರಂದು ಉಪ್ಪಿನಂಗಡಿ ಕಂಬಳ ನಡೆಯಲಿದ್ದು, ಮುಂದಿನ ವಾರದಿಂದಲೇ ಕರೆ ನಿರ್ಮಾಣ ಕೆಲಸಗಳಿಗೆ ಚಾಲನೆ ನೀಡಲು ಹಾಗೂ ಅತಿಥಿಗಳ ಪಟ್ಟಿ ತಯಾರಿಸಲು ಹಾಗೂ ಕಂಬಳಕ್ಕೆ ಪೂರ್ವಭಾವಿಯಾಗಿ ನಡೆಯಬೇಕಾದ ಕೆಲಸಗಳನ್ನು ಮುಂದಿನ ವಾರದಿಂದಲೇ ಆರಂಭಿಸಲು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಉಪ್ಪಿನಂಗಡಿ ವಿಜಯ್- ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಕೈಪ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು, ಉಪಾಧ್ಯಕ್ಷ ರಾಮಚಂದ್ರ ಮಣಿಯಾಣಿ, ಕಾರ್ಯದರ್ಶಿ ಚಂದ್ರಶೇಖರ ಮಡಿವಾಳ, ಜೊತೆ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ಕಂಗ್ವೆ, ಪದಾಧಿಕಾರಿಗಳಾದ ಯೋಗೀಶ್ ಸಾಮಾನಿ ಸಂಪಿಗೆದಡಿ, ಜಯಂತ ಪೊರೋಳಿ, ವಿದ್ಯಾಧರ ಜೈನ್, ಕೃಷ್ಣಪ್ರಸಾದ್, ಕೆ. ಜಯರಾಮ ಶೆಟ್ಟಿ ಕಡೆಕ್ಕಾರು, ಶಿವರಾಮ ಶೆಟ್ಟಿ ಗೋಳ್ತಮಜಲು, ಯತೀಶ್ ಶೆಟ್ಟಿ ಕೋಡಿಂಬಾಡಿ, ದಾಮೋದರ ಶೆಟ್ಟಿ ಮಠಂತಬೆಟ್ಟು, ವಿಜಯಕುಮಾರ್ ಚೀಮುಳ್ಳು, ರಾಕೇಶ್ ಶೆಟ್ಟಿ ಕೆಮ್ಮಾರ, ಬಿ. ಜಗದೀಶ್ ಕುಮಾರ್ ಪರಕ್ಕಜೆ ಮತ್ತಿತರರು ಉಪಸ್ಥಿತರಿದ್ದರು.
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
ನಿಧನ ವಾರ್ತೆ12 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು10 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು8 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ12 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ12 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ11 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ11 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ13 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















