Connect with us

Uncategorized

Amit Shah Puttur Visit : ಚುನಾವಣೆಯೂ ಇರುವುದರಿಂದ ಶಾ ಭೇಟಿಯ ಲಾಭ ಪಡೆದುಕೊಳ್ಳಲು ಎಲ್ಲಾ ಪ್ರಯತ್ನ ಮಾಡಲಿದ್ದೇವೆ: ನಳಿನ್‌ ಕುಮಾರ್‌ ಕಟೀಲ್‌

Published

on



Ad Widget

Ad Widget

Ad Widget

Ad Widget

ಪುತ್ತೂರು :  2023ರಲ್ಲಿ ಚುನಾವಣೆಯೂ ಇರುವುದರಿಂದ ಅಮಿತ್ ಶಾ ಭೇಟಿಯ ಲಾಭ ಪಡೆದುಕೊಳ್ಳಲು ಎಲ್ಲಾ ಪ್ರಯತ್ನ ಮಾಡಲಿದ್ದೇವೆ. ಶಾ ಭೇಟಿಯಿಂದ ಮುಂದಿನ ಚುನಾವಣೆಯಲ್ಲಿ ನಮಗೆ ಅತಿ ಹೆಚ್ಚು ಬಲ ಬರುತ್ತದೆ. ಅಮಿತ್ ಶಾ, ಮೋದಿ ಹೋದಲ್ಲೆಲ್ಲಾ ಪಾರ್ಟಿ ಗೆದ್ದಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ದ.ಕ.ಜಿಲ್ಲೆಯ 8 ಕ್ಷೇತ್ರಗಳನ್ನೂ ನಮಗೆ ಗೆಲ್ಲಲು ಇದರಿಂದ ಲಾಭವಾಗಲಿದೆ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಕೇಂದ್ರ ಗೃಹ ಸಚಿವ ಹಾಗೂ  ಕೇಂದ್ರ ಸಹಕಾರ ಸಚಿವ  ಅಮಿತ್ ಶಾ ಫೆ.11ರಂದು ಪುತ್ತೂರಿಗೆ ಭೇಟಿ ನೀಡಿ ಸಾರ್ವಜನಿಕ ಸಭೆಯೊಂದರಲ್ಲಿ ಭಾಗಿಯಾಗಲಿರುವ  ಹಿನ್ನೆಲೆಯಲ್ಲಿ  ಅದಕ್ಕೆ ಬೇಕಾದ ಅಗತ್ಯ  ವ್ಯವಸ್ಥೆ  ಹಾಗೂ ಈಗಾಗಲೇ ನಡೆಸಲಾಗುತ್ತಿರುವ ಸಿದ್ದತೆಯ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮಗಳ ಜತೆ ಮಾತನಾಡಿದರು

Ad Widget

Ad Widget

Ad Widget alt="Ad Widget"/>

Ad Widget

 ಫೆ.11ರಂದು ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳಲು  ಅಮಿತ್ ಶಾ ಪುತ್ತೂರಿಗೆ ಆಗಮಿಸುತ್ತಿದ್ದಾರೆ. ಈ‌ ಬಗ್ಗೆ ಕ್ಯಾಂಪ್ಕೋ ಕಡೆಯಿಂದ ಸಂಪೂರ್ಣ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ.  50 ವರ್ಷಗಳ ಹಿಂದೆ ನಿರ್ಮಾಣವಾಗಿರುವ, 30 ವರ್ಷಗಳ ಹಿಂದೆ ಚಾಕೊಲೇಟ್ ಫ್ಯಾಕ್ಟರಿಯನ್ನು ನಿರ್ಮಿಸಿರುವ ದೇಶದ ಸಹಕಾರ ಸಂಸ್ಥೆಗಳಲ್ಲಿ ಅತೀದೊಡ್ಡ ಸಂಸ್ಥೆ ಕ್ಯಾಂಪ್ಕೋ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರೇ ಸುವರ್ಣ ಮಹೋತ್ಸವಕ್ಕೆ ಬರ್ತಿದ್ದಾರೆ ಎಂದು ಕಟೀಲ್ ಹೇಳಿದರು.

Ad Widget

Ad Widget <> Ad Widget

ಅವರನ್ನು ಪಕ್ಷದ ವತಿಯಿಂದ  ಆದರಪೂರ್ವಕವಾಗಿ ಸ್ವಾಗತಿಸಲು  ಎಲ್ಲಾ ತಯಾರಿಯನ್ನು ಮಾಡಿಕೊಂಡಿದ್ದೇವೆ. ಕಾರ್ಯಕ್ರಮಕ್ಕೆ ಎಲ್ಲಾ ಮತಗಟ್ಟೆಗಳಿಂದ ಕಾರ್ಯಕರ್ತರು ಬರುತ್ತಾರೆ. ಕಾರ್ಯಕ್ರಮಕ್ಕೆ ಬೇಕಾದ ವೇದಿಕೆ, ಸಭಾಂಗಣ ಎಲ್ಲಾ ವ್ಯವಸ್ಥೆಗಳನ್ನು ಕ್ಯಾಂಪ್ಕೋ ನೋಡಿಕೊಳ್ಳುತ್ತದೆ. ಹೊರಗಿನ ಎಲ್ಲಾ ವ್ಯವಸ್ಥೆಗಳನ್ನು ಭಾರತೀಯ ಜನತಾ ಪಕ್ಷವು ನೋಡಿಕೊಳ್ಳುತ್ತದೆ ಎಂದು ಹೇಳಿದರು.



Ad Widget

ಫೆ 2 ರಂದು ಸಮಾವೇಶ ನಡೆಯಲಿರುವ ಪುತ್ತೂರು ತೆಂಕಿಲ ವಿವೇಕಾನಂದ ಶಾಲೆಯ ಮೈದಾನಕ್ಕೆ ಆಗಮಿಸಿದ ಅವರು ಸ್ಥಳೀಯ ಜನ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಬಿಜೆಪಿ ಮುಖಂಡರ ಜತೆ ತಯಾರಿ ಕುರಿತು ಮಾತುಕತೆ ನಡೆಸಿದರು.

Ad Widget

Ad Widget

ಅಧಿಕಾರಿಗಳಿಗೆ ಕಿವಿಮಾತು

ಬಳಿಕ ನಿರೀಕ್ಷಣಾ ಮಂದಿರದಲ್ಲಿ ದಕ್ಷಿಣ ಕನ್ನಡ ಸಂಸದರ ನೇತ್ರತ್ವದಲ್ಲಿ  ಉನ್ನತಮಟ್ಟದ ಅಧಿಕಾರಿಗಳ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಶೆ ಕುರಿತು  ವಿಸ್ತೃತವಾಗಿ ಚರ್ಚಿಸಿದರು.ವೇದಿಕೆಯ ಸಿದ್ಧತೆ , ಭದ್ರತೆಯ ದೃಷ್ಟಿಯಿಂದ ವೇದಿಕೆ  ಮುಂಭಾಗದಲ್ಲಿ ಒದಗಿಸಬೇಕಾದ  ಸ್ಥಳಾವಕಾಶ ಹಾಗು ಸಭಿಕರ ಗ್ಯಾಲರಿಯ ಗೆ ಆಸನ ವ್ಯವಸ್ಥೆಯ ಬಗ್ಗೆ ಹಾಗೂ ಇದಕ್ಕಾಗಿ ಮೈದಾನವನ್ನು ಸಮತಟ್ಟು ಮಾಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಕಾರ್ಯಕ್ರಮದಲ್ಲಿ   ಎಲ್ಲಿಯೂ ಸಣ್ಣ ಲೋಪ ಕೂಡಾ ಆಗಬಾರದು. ಒಟ್ಟು ಕಾರ್ಯಕ್ರಮ ಸುವ್ಯವಸ್ಥಿತವಾಗಿ ನಡೆಯಬೇಕು. ಸಣ್ಣ ತೊಂದರೆ ಆದರೂ  ದೊಡ್ಡ ವಿವಾದವಾಗಬಹುದು. ಇದರಿಂದ ನಮಗೂ ನಿಮಗೂ ಕಪ್ಪು ಚುಕ್ಕೆ.  ಅಗತ್ಯ ಎಚ್ಚರಿಕೆ ವಹಿಸಿ ಎಂದು  ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.

 ಬಳಿಕ ಈಶ್ವರಮಂಗಲದ  ಹನುಮಗಿರಿಗೆ ಶಾಸಕ ಸಂಜೀವ ಮಠಂದೂರು, ಸಹಾಯಕ ಆಯುಕ್ತ  ಗಿರೀಶ್‌ನಂದನ್, ಡಿವೈಎಸ್ಪಿ ವೀರಯ್ಯ ಹಿರೇಮಠ್ ಜತೆ ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆ ನೀಡಿದರು

ಸಂಸದರ ಭೇಟಿಯ ವೇಳೆ  ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಸಹಾಯಕ ಕಮಿಷನರ್ ಗಿರೀಶ್‌ನಂದನ್, ತಹಸೀಲ್ದಾರ್ ನಿಸರ್ಗಪ್ರಿಯ, ಡಿವೈಎಸ್ಪಿ ವೀರಯ್ಯ ಹಿರೇಮಠ್, ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಜಯಶ್ರೀ ಎಸ್ ಶೆಟ್ಟಿ, ಯುವರಾಜ್ ಪೆರಿಯತ್ತೋಡಿ, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ್ ರಾವ್ ಬಪ್ಪಳಿಗೆ, ಹಿರಿಯರಾದ ಎಸ್ ಅಪ್ಪಯ್ಯ ಮಣಿಯಾಣಿ, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ಜಗದೀಶ್ ಅಧಿಕಾರಿ, ಅರುಣ್ ವಿಟ್ಲ, ಗೌರಿ ಬನ್ನೂರು, ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸಹಜ್ ಜೆ.ರೈ ಬಳೆಜ್ಜ, ಬಿಜೆಪಿ ನಗರ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಶೆಣೈ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಯಶವಂತ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಜಾರಾಮ್, ಮುಗೆರೋಡಿ ಕನ್‌ಸ್ಟ್ರಕ್ಷನ್‌ನ ಇಂಜಿನಿಯರ್ ದಾಮೋದರ್, ವಿವೇಕಾನಂದ ಶಾಲೆಯ ರವಿನಾರಾಯಣ್, ಆಂಗ್ಲಮಾಧ್ಯಮ ಶಾಲೆಯ ಪ್ರಾಂಶುಪಾಲ ಸತೀಶ್ ರೈ, ಸಂಪ್ಯ ಪೊಲೀಸ್ ಠಾಣೆಯ ಎಸ್.ಐ ಶ್ರೀನಾಥ್ ರೆಡ್ಡಿ, ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ವಿಶ್ವನಾಥ್ ಕುಲಾಲ್, ನಿತೀಶ್ ಕಲ್ಲೇಗ, ಪ್ರಸಾದ್ ಮಯ್ಯ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

Ad Widget
Click to comment

Leave a Reply

Uncategorized

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿಗೆ ‘ಅಂಬಿಯೋರ- 2026’; ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’  ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’  ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ  ಸ್ವಿನಿಕಾ ವಿಯೋಲಾ ಕ್ರಾಸ್ತಾ ಹಾಗೂ ಧ್ಯಾನ್ ಬಿ ಪ್ರಥಮ, ಪ್ರಾಡಕ್ಟ್ ಇನ್ನೊವೇಟಿವ್ ಚಾಲೆಂಜ್ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಿವಾನಿ ಹಾಗೂ ಗಾನವಿ ಪ್ರಥಮ, ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಅದ್ವಿತಿ ಜಿ ಹಾಗೂ ಎ ಜಿ ಕೃತಿಕಾ ಪ್ರಥಮ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ವೇದಿತಾ ಕೆ ಮತ್ತು ತನುಶ್ರೀ ಬಿ ದ್ವಿತೀಯ, ಬಿಸ್ನೆಸ್ ಮಾಡೆಲ್ ಸ್ಪರ್ಧೆಯಲ್ಲಿ ಹೆಫ್ಜಿಬಾ ಎಂ ರಿನ್ಸಾನ್ ಹಾಗೂ ಪ್ರೀತಾ ಎ ದ್ವಿತೀಯ, ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸಜ್ನಾಜ್ ಮತ್ತು ಹಲೀಮತ್ ಸೌಧ ದ್ವಿತೀಯ ಹಾಗೂ ಮಿನಿ ಮಿಲಿಟಿಯ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಹಾದ್ ಅಜಾರ್ ಮತ್ತು ಮೊಹಮ್ಮದ್ ರಫಾಜ್ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.



Ad Widget
Ad Widget
Continue Reading

Uncategorized

Vivekananda-ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ ಮೇಳ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಆಹಾರ ಮೇಳ ಕೇವಲ ಆಹಾರ ಮಾರಾಟದ ಬಗ್ಗೆ ಮಾತ್ರವಲ್ಲ. ಇಲ್ಲಿ ವಿದ್ಯಾರ್ಥಿಗಳು ಉದ್ಯಮ ನಡೆಸುವಾಗ ಇರಬೇಕಾದ ಕೌಶಲ್ಯಗಳು, ಗ್ರಾಹಕರ ಮನಸ್ಥಿತಿ ಮತ್ತು ಅವರೊಂದಿಗೆ ವ್ಯವಹರಿಸಬೇಕಾದ ರೀತಿಯನ್ನು ಮೇಳಗಳಿಂದ ತಿಳಿದುಕೊಳ್ಳಬಹುದು. ಇದರ ನಡುವೆ ಬರುವ ಸೋಲು-ಗೆಲುವುಗಳನ್ನು ವಿದ್ಯಾರ್ಥಿಗಳು ಸಮನಾಗಿ ಸ್ವೀಕರಿಸಬೇಕು ಎಂದು ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಗೌರವ ಅತಿಥಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಮಾತನಾಡಿ, ಉದ್ದಿಮೆಯ ಬಗ್ಗೆ ಸೈದ್ಧಾಂತಿಕವಾಗಿ ಕಲಿತ ವಿಚಾರಗಳು ಇಲ್ಲಿ ಪ್ರಾಯೋಗಿಕವಾಗಿ ನಡೆಯುತ್ತಿದೆ. ಒಂದು ಉದ್ದಿಮೆಯನ್ನು ನಡೆಸಬೇಕಾದರೆ ಅದರಲ್ಲಿರುವಂತಹ ಕಷ್ಟ-ಸುಖಗಳನ್ನು ಅರಿಯಲು ಇಂತಹ ಮೇಳಗಳು ಅಗತ್ಯ ಎಂದು ಹೇಳಿದರು.



Ad Widget

ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಪಿ. ಉಪಸ್ಥಿತರಿದ್ದರು.

Ad Widget

Ad Widget

ಸ್ವಾದಸಂಭ್ರಮ ಆಹಾರ ಮೇಳ-2026ರ ವಿಜೇತರು:

ವ್ಯವಹಾರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 14 ತಂಡಗಳು ಭಾಗವಹಿಸಿದ್ದು ಫ್ರೋಜನ್ ಡಿಲೈಟ್ ತಂಡ ಪ್ರಥಮ ಸ್ಥಾನ, ಬೈಟ್ ಬೈ ಬೈಟ್ ದ್ವಿತೀಯ ಸ್ಥಾನ ಪಡೆದುಕೊಂಡಿತು. ಉತ್ತಮ ನೈರ್ಮಲ್ಯ ಕಾಪಾಡುವಿಕೆ ವಿಭಾಗದಲ್ಲಿ ಸ್ವದೇಶೀ ಸ್ವಾದ್ ತಂಡ, ಗ್ರಾಹಕರೊಂದಿಗೆ ಉತ್ತಮ ಸಂವಹನ ವಿಭಾಗದಲ್ಲಿ ಫ್ಲೇವರ್ ತಂಡ, ಉತ್ತಮ ಪೋಸ್ಟರ್ ವಿಭಾಗದಲ್ಲಿ ಫ್ಲೇವರ್ ಹಂಟರ್ಸ್ ತಂಡ ಹಾಗೂ ಉತ್ತಮ ರೀಲ್ಸ್ ವಿಭಾಗದಲ್ಲಿ ಸ್ವದ್ಘಾಮ್ ತಂಡ ಪ್ರಶಸ್ತಿ ಪಡೆದಿಕೊಂಡಿದೆ.

ಕಾರ್ಯಕ್ರಮವನ್ನು ತೃತೀಯ ಕಲಾ ವಿಭಾಗದ ಕೆ. ಕೃತಿಕಾ ನಿರ್ವಹಿಸಿದರು.

Ad Widget
Continue Reading

Uncategorized

Ashok Rai-ಬದ್ಯಾರ್‌ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ

Published

on



Ad Widget

Ad Widget

Ad Widget

Ad Widget

ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಈ ಭಾಗದ ಜನರು ರಸ್ತೆಯಿಲ್ಲದೆ ಸುಮಾರು 50 ವರ್ಷಗಳಿಂದ ತೊಂದರೆಯಲ್ಲಿದ್ದರು, ಇಲ್ಲಿ ಸುಮಾರು ಹತ್ತು ಮನೆಗಳಿದೆ, ಮನೆ ಕಟ್ಟುವಾಗ ಇವರೆಲ್ಲಾ ಕಲ್ಲನ್ನು ಕಾಲು ದಾರಿಯ ಮೂಲಕ ಹೊತ್ತುಕೊಂಡೇ ಹೋಗಿದ್ದು, ವಾಹನ ಹತ್ತ ಬೇಕಾದರೆ ಒಂದಷ್ಟು ದೂರ ನಡೆದುಕೊಂಡೇ ಬರಬೇಕಾದ ಸ್ಥಿತಿ. ಇದು ಪೆರುವಾಯಿ ಗ್ರಾಮದ ಬದ್ಯಾರಿನ ಕಥೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ರಸ್ತೆಗಾಗಿ ಮನವಿ ಹಾಗೂ ಹೋರಾಟವನ್ನು ಮಾಡುತ್ತಲೇ ಇದ್ದರು. ಆದರೆ ರಸ್ತೆ ನಿರ್ಮಾಣವಾಗುವಲ್ಲಿ ಖಾಸಗಿ ಜಾಗದ ತಕರಾರಿತ್ತು. ಈ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸಲು ಅನೇಕ ಜನಪ್ರತಿನಿಧಿಗಳು ಪ್ರಯತ್ನ ಮಾಡಿದ್ದರು ಆದರೆ ಯಾರಿದಂಲೂ ಸಾಧ್ಯವಾಗಿಲ್ಲ, ಕೆಲವರು ಭರವಸೆಯನ್ನು ಮಾತ್ರ ಕೊಟ್ಟಿದ್ದರು.

Ad Widget

Ad Widget <> Ad Widget

ಶಾಸಕ ಅಶೋಕ್ ರೈ ಭೇಟಿ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.



Ad Widget

ಶಾಸಕರಿಗೆ ಸನ್ಮಾನ
ವಿವಾದ ಇತ್ಯರ್ಥಪಡಿಸಿ ೫೦ ವರ್ಷಗಳ ಹಿಂದಿನ ಬಹುದೊಡ್ಡ ಬೇಡಿಕೆಯನ್ನು ಈಡೇರಿಸಿದ ಶಾಸಕರಿಗೆ ಬದ್ಯಾರು ರಸ್ತೆ ಫಲಾನುಭವಿಗಳು ಸನ್ಮಾನವನ್ನು ಮಾಡಿದ್ದಾರೆ.

Ad Widget

Ad Widget

ಬದ್ಯಾರ್‌ನಿವಾಸಿಗಳು ತಮ್ಮ ಕಷ್ಟವನ್ನು ನನ್ನಲ್ಲಿ ಹೇಳಿಕೊಂಡಿದ್ದರು. ರಸ್ತೆ ಇಲ್ಲದೆ ಹತ್ತು ಕುಟುಂಬಗಳು ಸಂಕಷ್ಟದಲ್ಲಿತ್ತು ಮಾತ್ರವಲ್ಲದೆ ಪಕ್ಕದಲ್ಲೇ ಒಂದು ದೇವಸ್ಥಾನದ ಕಾಮಗಾರಿಯೂ ಅರ್ಧಕ್ಕೆ ನಿಂತಿತ್ತು. ಜಾಗ ಖಾಸಗಿ ವ್ಯಕ್ತಿಗೆ ಸೇರಿದ್ದರಿಂದ ರಸ್ತೆ ನಿರ್ಮಾಣಕ್ಕೆ ತೊಂದರೆಯಾಗಿತ್ತು. ಜಾಗದ ಮಾಲಿಕರನ್ನು ಕರೆಸಿ ಮಾತುಕತೆ ನಡೆಸಿದಾಗ ಅವರು ಮಾನವೀಯ ನೆಲೆಯಲ್ಲಿ ಒಪ್ಪಿಕೊಂಡು ರಸ್ತೆ ನಿರ್ಮಾಣಕ್ಕೆ ಅನುವು ಮಾಡಿಕೊಡುವ ಮೂಲಕ ದೊಡ್ಡ ಪುಣ್ಯದ ಕೆಲಸವನ್ನು ಮಾಡಿದ್ದಾರೆ. ಬೇಡಿಕೆ ಈಡೇರಿಸಿದ್ದೇನೆ, ಅನುದಾನವನ್ನು ನೀಡಿದ್ದೇನೆ ಮುಂದೆ ಅವರೆಲ್ಲರೂ ನನ್ನ ಜೊತೆ ಇರುತ್ತಾರೆ ಎಂಬ ನಂಬಿಕೆಯೂ ಇದೆ
ಅಶೋಕ್ ರೈ, ಶಾಸಕರು ಪುತ್ತೂರು

ರಸ್ತೆ ಸಂಪರ್ಕ ಇಲ್ಲದೆ 50 ವರ್ಷದಿಂದ ಪರದಾಡುತ್ತಿದ್ದೇವೆ, ನಾವು ಬಿಜೆಪಿ ಶಾಸಕರಿಗೆ, ಮುಖಂಡರಿಗಳಿಗೆ ಮನವಿ ಮಾಡಿದ್ದೆವು, ನಾವು ಬಿಜೆಪಿ ಕಾರ್ಯಕರ್ತರಾದರೂ ನಮ್ಮ ಬೇಡಿಕೆಯನ್ನು ಅವರು ಈಡೇರಿಸಿರಲಿಲ್ಲ. ನಾವು ಶಾಸಕ ಅಶೋಕ್ ರೈ ಕಚೇರಿಗೆ ಈ ವಿಚಾರವನ್ನು ತಿಳಿಸಲು ಹೋದಾಗ ಕೆಲವರು ನಮ್ಮನ್ನು ಛೇಡಿಸಿದ್ದರು. ನೀವು ಬಿಜೆಪಿ ಕಾರ್ಯಕರ್ತರಾದ ಕಾರಣ ನಿಮ್ಮ ಕೆಲಸ ಶಾಸಕರು ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಶಾಸಕರು ಪಕ್ಷ ರಾಜಕೀಯ ಮಾಡದೆ ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ, ನಾವು ಮುಂದೆ ಅಶೋಕ್ ರೈ ಜೊತೆ ಇರುತ್ತೇವೆ, ಶಾಸಕರು ಮಾಡಿದ ಈ ಉಪಕಾರವನ್ನು ಮರೆಯುವುದೇ ಇಲ್ಲ.
ಜಯರಾಮ, ಬದ್ಯಾರ್ ಫಲಾನುಭವಿ

ಯಾವ ಜನಪ್ರತಿನಿಧಿಯಿಂದಲೂ ಮಾಡಲಾಗದ ಕೆಲಸವನ್ನು ಶಾಸಕ ಅಶೋಕ್ ರೈ ಮಾಡಿದ್ದಾರೆ. ಪಕ್ಷ ಬೇದವಿಲ್ಲದೆ ಬೇಡಿಕೆಯನ್ನು ಈಡೇರಿಸಿದ್ದಾರೆ, ಇವರು ಮುಂದೆಯೂ ಶಾಸಕರಾಗಿ ಆಯ್ಕೆಯಾಗುವಲ್ಲಿ ನಾವು ಖಂಡಿತಾ ಕೆಲಸ ಮಾಡುತ್ತೇವೆ.
ಶೀಲಾ ರೈ , ಫಲಾನುಭವಿ

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading