ದಕ್ಷಿಣ ಕನ್ನಡ
Congress Karavali Dwani Yatra | ಬಿಜೆಪಿ ಭದ್ರಕೋಟೆಯಲ್ಲಿ ಬಿಲ್ಲವ, ಓಬಿಸಿ ಮತಗಳತ್ತ ಕಾಂಗ್ರೆಸ್ ಚಿತ್ತ – ಬಿ.ಕೆ ಹರಿಪ್ರಸಾದ್ ನೇತೃತ್ವದಲ್ಲಿ ‘ಕಾಂಗ್ರೆಸ್ ಕರಾವಳಿ ಧ್ವನಿ ಯಾತ್ರೆ’ ಆರಂಭ – ಫೆ.5ಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ 4 ಕಡೆ ಸಮಾವೇಶ : ಹಲವು ನಾಯಕರು ಭಾಗಿ – ಜಿಲ್ಲಾಧ್ಯಕ್ಷ ಹರೀಶ್ ಕುಮಾರ್
ಬೆಂಗಳೂರು: ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಭದ್ರಕೋಟೆ ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಲ್ಲವ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ಪ್ಲ್ಯಾನ್ ಮಾಡುತ್ತಿದ್ದು, ಇದರ ಅಂಗವಾಗಿ ಫೆಬ್ರವರಿ 5 ರಿಂದ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ನೇತೃತ್ವದಲ್ಲಿ ಸುಳ್ಯದಿಂದ ‘ಕಾಂಗ್ರೆಸ್ ಕರಾವಳಿ ಧ್ವನಿ ಯಾತ್ರೆ’ (Congress Karavali Dwani Yatra) ಆರಂಭಗೊಳ್ಳಲಿದೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಯಶಸ್ವಿಯಾಗಿ ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ಕರಾವಳಿ ಭಾಗದ ಐದು ಜಿಲ್ಲೆಗಳಲ್ಲಿ ಕರಾವಳಿ ಪ್ರಜಾಧ್ವನಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಫೆ.5ರಂದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ ನಡೆಸಲು ಯಾತ್ರೆ ತಿರ್ಮಾನಿಸಲಾಗಿದೆ ಎಂದು ಕಾಂಗ್ರೆಸ್ ದ.ಕ.ಜಿಲ್ಲಾ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಳ್ಯ ವಿಧಾನ ಸಭಾ ಕ್ಷೇತ್ರದ ಜಿಲ್ಲಾಪಂಚಾಯಿತಿ ವ್ಯಾಪ್ತಿಗಳನ್ನು ಒಳಗೊಂಡಂತೆ 4 ಕಡೆ ಕಾರ್ಯಕ್ರಮ ನಡೆಯಲಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಮಧು ಬಂಗಾರಪ್ಪ ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ.
ಸುಳ್ಯದಲ್ಲಿ ಎಲ್ಲಿ ?
ಬೆಳಗ್ಗೆ 10 ಗಂಟೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ನೆಲ್ಯಾಡಿಯಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. 12 ಗಂಟೆಗೆ ಬೆಳ್ಳಾರೆಯಲ್ಲಿ, 3 ಗಂಟೆಗೆ ಗುತ್ತಿಗಾರಿನಲ್ಲಿ ಸಂಜೆ 5ಕ್ಕೆ ಸುಳ್ಯ ನಗರದಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರತಿ ಬೂತ್ ಮಟ್ಟದ ಕಾರ್ಯಕರ್ತರಿಗೆ ಕಾಂಗ್ರೆಸ್ ಆಶಯಗಳನ್ನು ತಲುಪಿಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.
ಅಡಕೆಯ ಹಳದಿ ರೋಗ, ಎಲೆ ಚುಕ್ಕಿ ರೋಗದ ಸಮಸ್ಯೆಯ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆ ನಡೆದಿದೆ. ಅಡಕೆ ಹಳದಿ ರೋಗ, ಎಲೆ ಚುಕ್ಕಿ ರೋಗದ ಸಂಶೋಧನೆ ಹಾಗೂ ಪರಿಹಾರ ಕ್ರಮದ ಬಗ್ಗೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ. ಕರಾವಳಿ ಜಿಲ್ಲೆಗೆ ಕಾಂಗ್ರೆಸ್ ಪ್ರತ್ಯೇಕ ಪ್ರಣಾಳಿಕೆಯನ್ನು ತಯಾರಿಸಲಾಗಿದ್ದು ಮೊನ್ನೆ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಬಿಡುಗಡೆಯಾಗಿದೆ ಎಂದು ಹರೀಶ್ ಕುಮಾರ್ ಹೇಳಿದರು.
ಕೋಮು ಸೂಕ್ಷ್ಮ ಪ್ರದೇಶ ಕರಾವಳಿ ಹಾಗೂ ಮಲೆನಾಡಿನಲ್ಲಿ ತಳಮಟ್ಟದಲ್ಲಿ ಪ್ರಚಾರ ನಡೆಸುವ ನಿಟ್ಟಿನಲ್ಲಿ ಮೊದಲ ಹಂತದಲ್ಲಿ ಐದು ದಿನಗಳ ಕಾಲ ಯಾತ್ರೆ ನಡೆಯಲಿದೆ. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಎರಡನೇ ಹಂತದ ಯಾತ್ರೆ ಫೆಬ್ರವರಿ 15 ರಿಂದ ಆರಂಭಗೊಳ್ಳಲಿದೆ. ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತ್ಯೇಕ ಬಸ್ ಯಾತ್ರೆಗಳು ನಡೆಯುತ್ತಿದ್ದರೆ, ಮತ್ತೊಂದು ಕಡೆಯಲ್ಲಿ ಕಾಂಗ್ರೆಸ್ ಪಾಲಿಗೆ ಸವಾಲಾಗಿರುವ ಈ ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮಟ್ಟದಲ್ಲೇ ಪ್ರಚಾರ ಸಭೆಗಳು, ಸೌಹಾರ್ದ ಸಭೆಗಳನ್ನು ಹಮ್ಮಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡು ಭಾಗಗಳು ಬಿಜೆಪಿ ಭದ್ರಕೋಟೆಯಾಗಿದೆ. ಕಳೆದ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಉಳ್ಳಾಲ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಐದು ಕ್ಷೇತ್ರಗಳ ಪೈಕಿ ಐದೂ ಕೂಡಾ ಬಿಜೆಪಿಗೆ ಪಾಲಾಗಿತ್ತು. ಇನ್ನು ಚಿಕ್ಕಮಗಳೂರಿನ 5 ಕ್ಷೇತ್ರಗಳ ಪೈಕಿ 4 ಬಿಜೆಪಿ ಹಾಗೂ ಒಂದು ಕಾಂಗ್ರೆಸ್ ಇದೆ. ಶಿವಮೊಗ್ಗದಲ್ಲಿ 7 ರಲ್ಲಿ 6 ಬಿಜೆಪಿ ಇದೆ. ಒಟ್ಟು ಮಲೆನಾಡು ಹಾಗೂ ಕರಾವಳಿಯಲ್ಲಿ 2018 ರ ಚುನಾವಣೆ ಕಾಂಗ್ರೆಸ್ ಪಾಲಿಗೆ ಹೀನಾಯ ಸೋಲಾಗಿತ್ತು.
ಇದೀಗ ಕರಾವಳಿಯಲ್ಲಿ ತಮ್ಮ ಸಾಮರ್ಥ್ಯ ಬಲಪಡಿಸಿಕೊಳ್ಳಲು ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕವಾಗಿ ಕರಾವಳಿ ಹಾಗೂ ಮಲೆನಾಡಿನ ಯಾತ್ರೆ ಮಹತ್ವ ಪಡೆದುಕೊಂಡಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಬಿಲ್ಲವ ಸಮುದಾಯದ ಮತಗಳು ಬಿಜೆಪಿಗೆ ದೊಡ್ಡ ಶಕ್ತಿಯಾಗಿದೆ. ಮತ್ತೊಂದು ಕಡೆಯಲ್ಲಿ ಎಸ್‌ಡಿಪಿಐ ಕಾರಣದಿಂದ ಅಲ್ಪಸಂಖ್ಯಾತ ಮತಗಳು ವಿಭಜನೆ ಆಗುವ ಅಪಾಯವೂ ಇದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಬಿ.ಕೆ ಹರಿಪ್ರಸಾದ್ ನೇತೃತ್ವದಲ್ಲಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಯಾತ್ರೆಯ ಮೂಲಕ ಪ್ರತ್ಯೇಕ ಕಾರ್ಯತಂತ್ರ ರೂಪಿಸಲಾಗುತ್ತಿದೆ. ಸಂಘಪರಿವಾರದ ವಿರುದ್ಧ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿರುವ ಬಿ.ಕೆ ಹರಿಪ್ರಸಾದ್ ಅವರಿಗೆ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.
ಕರಾವಳಿ ಧ್ವನಿ ಯಾತ್ರೆಯ ವಿವರ ಹೀಗಿದೆ :
*ಫೆಬ್ರವರಿ 5 ಯಾತ್ರೆ ಆರಂಭ
*ಫೆಬ್ರವರಿ- 5 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳದ (ನೆಲ್ಯಾಡಿ, ಬೆಳ್ಳಾರೆ, ಗುತ್ತಿಗಾರು, ಸುಳ್ಯದಲ್ಲಿ ಸಾರ್ವಜನಿಕ ಸಭೆ)
*ಫೆಬ್ರವರಿ -6 ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ( ಮುಲ್ಕಿ, ಬಜ್ಪೆ, ಅಳಿಯಾರಿಯಲ್ಲಿ ಸಾರ್ವಜನಿಕ ಸಭೆ)
*ಫೆಬ್ರವರಿ – 7 : ಉಡುಪಿ ಜಿಲ್ಲೆಯ ಕಾಪು (ಹೆಜಮಾಡಿಯಿಂದ ಯಾತ್ರೆ ಆರಂಭಗೊಂಡು ಪಡುಬಿದಿರೆ, ಶಿರ್ವಾ, ಕಟಪಾಡಿ, ಉದ್ಯಾವರ, ಅತ್ರಾಡಿ, ಹಿರಿಯಡ್ಕದಲ್ಲಿ ಸಾರ್ವಜನಿಕ ಸಭೆ)
*ಫೆಬ್ರವರಿ – 8: ಉಡುಪಿ ಜಿಲ್ಲೆಯ ಕುಂದಾಪುರ (ಕೋಟಾ ಅಮೃತೇಶ್ವರಿ ದೇವಸ್ಥಾನದಿಂದ ಆರಂಭಗೊಂದು ಕೋಟಾ ಮಾಂಗಲ್ಯ ಸಭಾಭವನ, ಹುಣಸೇಮಕ್ಕಿ, ಶಾಸ್ತ್ರಿ ಸರ್ಕಲ್ ನಲ್ಲಿ ಸಾರ್ವಜನಿಕ ಸಭೆ)
ಫೆಬ್ರವರಿ – 9: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ (ಶೃಂಗೇರಿ ತಾಲ್ಲೂಕಿನ ಎರಡು ಹೋಬಳಿ ಮಟ್ಟದಲ್ಲಿರುವ ರೈತರ ಸಮಸ್ಯೆಗಳ ಬಗ್ಗೆ ಸಭೆ. ಎನ್ ಆರ್ ಪುರದಲ್ಲಿ ಕಸಬಾ ಮತ್ತು ಹರಿಹರಪುರ ಹೊಬಳಿ ಮಟ್ಟದ ಅಲ್ಪಸಂಖ್ಯಾತ ಸಮುದಾಯಗಳ ಪ್ರಮುಖರ ಜೊತೆಗೆ ಸಹಬಾಳ್ವೆ ಸದ್ವಿಚಾರ ಸಮಾವೇಶ)
ರಾಜಕೀಯ
Sanjeev Mathandur-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ; ‘ಷಡ್ಯಂತ್ರ, ಭ್ರಷ್ಟಾಚಾರದ ಶಂಕೆ’ – ಸಂಜೀವ ಮಠಂದೂರು
ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಅ.8ರಂದು ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ತಾಲೂಕುಗಳ ರೈತರು ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಸುಮಾರು ₹840 ಕೋಟಿ ಪರಿಹಾರ ಬರಬೇಕಿದ್ದು, ವಾಸ್ತವವಾಗಿ ರೈತರಿಗೆ ಎಷ್ಟು ಮೊತ್ತ ವಿತರಿಸಲಾಗಿದೆ ಎಂಬುದನ್ನು ಸರಕಾರ ಹಾಗೂ ವಿಮಾ ಕಂಪನಿಗಳು ಅಂಕಿ-ಅಂಶಗಳ ಸಹಿತ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ರೈತರು ಪಾವತಿಸಿದ ವಿಮಾ ಮೊತ್ತಕ್ಕೆ ಅನುಗುಣವಾಗಿ ಎಷ್ಟು ಪರಿಹಾರ ನೀಡಲಾಗಿದೆ? ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಮೊತ್ತದಲ್ಲಿ ವ್ಯತ್ಯಾಸವಾಗಲು ಕಾರಣವೇನು? ಯಾವ ವೈಜ್ಞಾನಿಕ ಮಾನದಂಡದ ಆಧಾರದಲ್ಲಿ ಪರಿಹಾರ ನಿಗದಿಪಡಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.
ಟರ್ಮ್‌ಶೀಟ್ ಬದಲಾದ ಬಳಿಕ ಸಮಸ್ಯೆ
2023-24ನೇ ಸಾಲಿನವರೆಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಪರಿಹಾರ ವಿತರಣೆಯಲ್ಲಿ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಸಮಸ್ಯೆ ಇರಲಿಲ್ಲ. ಆದರೆ ಬಳಿಕ ಟರ್ಮ್‌ಶೀಟ್ ಬದಲಾವಣೆಯಾದ ನಂತರ ಸಮಸ್ಯೆಗಳು ಆರಂಭವಾಗಿವೆ ಎಂದು ಮಠಂದೂರು ಆರೋಪಿಸಿದರು.
ಒಂದೇ ತಾಲೂಕು, ಹೋಬಳಿ ಹಾಗೂ ಒಂದೇ ರೀತಿಯ ಭೌಗೋಳಿಕ ಪರಿಸ್ಥಿತಿಯಲ್ಲಿರುವ ಗ್ರಾಮಗಳ ನಡುವೆ ಪರಿಹಾರ ಮೊತ್ತದಲ್ಲಿ ಭಾರಿ ವ್ಯತ್ಯಾಸ ಕಂಡುಬರುತ್ತಿದೆ. ಕೆಲವೆಡೆ ಕೇವಲ 100 ಮೀಟರ್ ಅಂತರದಲ್ಲಿರುವ ರೈತರಿಗೂ ₹10 ಸಾವಿರದಿಂದ ₹15 ಸಾವಿರದವರೆಗೆ ವ್ಯತ್ಯಾಸವಾಗುತ್ತಿದೆ. ಪಂಚಾಯಿತಿಯಿಂದ ಪಂಚಾಯಿತಿಗೆ, ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಬದಲಾಗುತ್ತಿರುವುದರ ಹಿಂದಿನ ಕಾರಣವನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರಕಾರವೂ ವಿಮಾ ಮೊತ್ತದ ಶೇ.20ರಷ್ಟು ಪಾಲು ಪಾವತಿಸುತ್ತಿರುವುದರಿಂದ ವಿಮಾ ಕಂಪನಿಗಳ ಕಾರ್ಯವೈಖರಿ ಕುರಿತು ರಾಜ್ಯ ಸರಕಾರವೇ ತನಿಖೆ ನಡೆಸಬೇಕು. ರೈತರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ಕಣ್ಮುಚ್ಚಿ ಕುಳಿತಿದೆ ಎಂದು ಅವರು ಆರೋಪಿಸಿದರು.
274 ಗ್ರಾಮ ಪಂಚಾಯಿತಿಗಳ ಪೈಕಿ 231 ಮಳೆ ಮಾಪಕ ಮಾತ್ರ ಕಾರ್ಯನಿರ್ವಹಣೆ
ಬಿಜೆಪಿ ಸತ್ಯಶೋಧನ ಸಮಿತಿ ಜಿಲ್ಲೆಯ ಒಂಬತ್ತು ತಾಲೂಕುಗಳಲ್ಲಿ ನಡೆಸಿದ ಅಧ್ಯಯನದಲ್ಲಿ ಹಲವು ಕಡೆ ಮಳೆ ಮಾಪಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಬಳಿಕ ಕೆಲವು ಮಳೆ ಮಾಪಕಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ 274 ಗ್ರಾಮ ಪಂಚಾಯಿತಿಗಳಲ್ಲಿ ಮಳೆ ಮಾಪಕಗಳನ್ನು ಅಳವಡಿಸಲಾಗಿದ್ದು, 231 ಮಾತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. 20 ಹೋಬಳಿ ಮಟ್ಟದಲ್ಲಿ ಉಷ್ಣಾಂಶ ಮಾಪಕಗಳಿವೆ. ಮಳೆ ಹಾಗೂ ಉಷ್ಣಾಂಶದ ದಾಖಲೆಗಳ ಆಧಾರದಲ್ಲಿ ಟರ್ಮ್‌ಶೀಟ್ ಪ್ರಕಾರ ವಿಮಾ ಪರಿಹಾರ ನಿರ್ಧರಿಸಲಾಗುತ್ತದೆ ಎಂದು ವಿವರಿಸಿದರು.
‘ಗ್ರಾಮಕ್ಕೊಂದು ಮಾನದಂಡ ಸಲ್ಲ’
ತಾಲೂಕಿನ ಎಲ್ಲ ಗ್ರಾಮಗಳ ರೈತರಿಗೆ ಒಂದೇ ಮಾನದಂಡದಲ್ಲಿ ವಿಮಾ ಪರಿಹಾರ ನೀಡಬೇಕು. ಒಂದು ಗ್ರಾಮಕ್ಕೆ ಗರಿಷ್ಠ ಪರಿಹಾರ ನೀಡಲು ಅನ್ವಯಿಸುವ ಮಾನದಂಡವಿದ್ದರೆ, ಅದೇ ಮಾನದಂಡವನ್ನು ಇತರ ಗ್ರಾಮಗಳಿಗೂ ಅನ್ವಯಿಸಬೇಕು. ಪಂಚಾಯಿತಿ, ಹೋಬಳಿ ಹಾಗೂ ಗ್ರಾಮವಾರು ಪ್ರತ್ಯೇಕ ಮಾನದಂಡಗಳಿಂದ ಪರಿಹಾರ ನೀಡಿದರೆ ರೈತರು ಬೆಳೆ ವಿಮಾ ಯೋಜನೆಯ ಮೇಲಿನ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಮಠಂದೂರು ಹೇಳಿದರು.
2025-26ನೇ ಸಾಲಿನಲ್ಲಿ ರೈತರು ಶೇ.5, ರಾಜ್ಯ ಸರಕಾರ ಶೇ.20 ಹಾಗೂ ಕೇಂದ್ರ ಸರಕಾರ ಶೇ.10ರಷ್ಟು ಪಾಲನ್ನು ಪಾವತಿಸಿವೆ. ಜಿಲ್ಲೆಯ ರೈತರಿಂದ ₹42.03 ಕೋಟಿ, ಕೇಂದ್ರದಿಂದ ₹84.07 ಕೋಟಿ ಹಾಗೂ ರಾಜ್ಯದಿಂದ ₹168.14 ಕೋಟಿ ಸೇರಿದಂತೆ ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಯಾಗಿದೆ ಎಂದರು.
ರೈತರು ಪ್ರತಿ ಹೆಕ್ಟೇರ್ ಅಡಿಕೆಗೆ ₹6,475 ಹಾಗೂ ಕಾಳುಮೆಣಸಿಗೆ ₹2,377ರಂತೆ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಬಜತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ₹45 ಸಾವಿರ ವಿಮಾ ಮೊತ್ತ ಪಾವತಿಸಿದ್ದರೂ ಕೆಲ ರೈತರಿಗೆ ಪ್ರತಿ ಹೆಕ್ಟೇರ್‌ಗೆ ಕನಿಷ್ಠ ₹10,800 ಮಾತ್ರ ಪರಿಹಾರ ದೊರೆತಿದೆ. ಅದೇ ಪ್ರದೇಶದ ಕೆಲವು ರೈತರ ಖಾತೆಗೆ ₹51,824 ಪರಿಹಾರ ಜಮೆಯಾಗಿರುವುದಾಗಿ ಅವರು ತಿಳಿಸಿದರು.
‘ರಾಜ್ಯ ಸರಕಾರ ರೈತ ವಿರೋಧಿ’
ಅಡಿಕೆ ಬೆಳೆಗಾರರು ವಿಮಾ ಮೊತ್ತ ಪಾವತಿಸಿದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಮತ್ತೊಂದೆಡೆ ಅಡಿಕೆ ಧಾರಣೆಯಲ್ಲೂ ಕುಸಿತವಾಗಿದೆ. ಹಿಂದಿನ ಅವಧಿಯಲ್ಲಿ ರೈತರಿಗೆ ದೊರೆಯುತ್ತಿದ್ದ ಕಿಸಾನ್ ಸನ್ಮಾನ್ ಹಾಗೂ ವಿದ್ಯಾನಿಧಿ ಯೋಜನೆಗಳನ್ನು ಈಗಿನ ಸರಕಾರ ಸ್ಥಗಿತಗೊಳಿಸಿದೆ. ರೈತರಿಗೆ ಒಂದಲ್ಲೊಂದು ರೀತಿಯಲ್ಲಿ ತೊಂದರೆ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಠಂದೂರು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಹಾಗೂ ರೈತ ಮೋರ್ಚಾ ಅಧ್ಯಕ್ಷ ಶರತ್ನಂದ ಬೈಪಾಡಿತ್ತಾಯ ಉಪಸ್ಥಿತರಿದ್ದರು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.
-
Uncategorized19 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್13 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು17 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized17 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ17 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ18 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ17 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್18 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















