ಅಪರಾಧ
ಮಂಗಳೂರು : ಚಿನ್ನದ ಅಂಗಡಿಯ ಸಿಬಂದಿಯ ಬರ್ಬರ ಹ*ತ್ಯೆ – ಪೊಲೀಸರಿಗೆ ಮಹತ್ವದ ಸುಳಿವು ಲಭ್ಯ
ಮಂಗಳೂರು : ಫೆ 4 : ಬಲ್ಮಠದ ಜುವೆಲ್ಲರಿ ಅಂಗಡಿಯೊಂದರಲ್ಲಿ ಹಾಡಹಗಲೇ ಸಿಬ್ಬಂದಿಯೊಬ್ಬನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಆರೋಪಿಯ ಪತ್ತೆಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರವಾದ ಮಂಗಳೂರು ನಗರದ ಹೃದಯ ಭಾಗದಲ್ಲಿ ಹಾಡುಹಗಲೇ ನಡೆದ ಕೃತ್ಯ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ.
ಶುಕ್ರವಾರ ಸಂಜೆ 3.30ರ ಸುಮಾರಿಗೆ ಅಪರಿಚಿತ ದುಷ್ಕರ್ಮಿಯೊಬ್ಬ ನಗರದ ಮಿಲಾಗ್ರಿಸ್ ಬಳಿ ಇರುವ ಮಂಗಳೂರು ಜ್ಯುವೆಲ್ಲರ್ಸ್ ಚಿನ್ನದ ಅಂಗಡಿಗೆ ಗ್ರಾಹಕ ಸೋಗಿನಲಿ ಬಂದು ಅಲ್ಲಿದ್ದ ಸಿಬ್ಬಂದಿಯನ್ನು ಹತ್ಯೆಗೈದಿದ್ದ. ಮಂಗಳೂರು ನಗರದ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (50) ಕೊಲೆಯಾದ ವ್ಯಕ್ತಿ.
ಕೃತ್ಯ ನಡೆದ ಅಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ದೃಶ್ಯಗಳು ರೆಕಾರ್ಡ್ ಆಗದ ಹಿನ್ನಲೆಯಲ್ಲಿ , ಅಕ್ಕಪಕ್ಕದ ಅಂಗಡಿ ಹಾಗೂ ರಸ್ತೆಯಲ್ಲಿ ಅಳವಡಿಸಿದ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಪರಿಶೀಲನೆ ವೇಳೆ ಮಹತ್ವದ ಸುಳಿವು ದೊರೆತಿದ್ದು, ಇದರ ಆಧಾರದಲ್ಲಿ ಆರೋಪಿಯ ಪತೆಗೆ ಬಲೆ ಬೀಸಿದ್ದಾರೆ
ಘಟನೆಯ ವಿವರ
ಜುವೆಲ್ಲರಿ ಮಾಲೀಕ ಕೇಶವ ಆಚಾರ್ಯ ಅವರು ಮಧ್ಯಾಹ್ನ ಊಟಕ್ಕೆ ತೆರಳಿ ಸಂಜೆ ವೇಳೆಗೆ ಅಂಗಡಿಗೆ ಆಗಮಿಸಿದ್ದರು. ಅಂಗಡಿ ಮುಂಭಾಗ ಕಾರು ನಿಲ್ಲಿಸುವ ಜಾಗದಲ್ಲಿ ಬೈಕ್ ನಿಂತಿತ್ತು. ಆಗ ಕೇಶವ ಆಚಾರ್ಯ ಬೈಕ್ ತೆಗೆಯುವಂತೆ ರಾಘವೇಂದ್ರ ಆಚಾರ್ಯಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ ರಾಘವೇಂದ್ರ ಆಚಾರ್ಯ, ತನಗೆ ಯಾರೋ ಚೂರಿ ಹಾಕಿದ್ದಾರೆ ಎಂದು ಬೊಬ್ಬೆ ಹಾಕಿದ್ದಾರೆ.
ತಕ್ಷಣ ಕೇಶವ ಆಚಾರ್ಯ ಕಾರು ನಿಲ್ಲಿಸಿ ಅಂಗಡಿಗೆ ಬಂದಾಗ ರಾಘವೇಂದ್ರ ಆಚಾರ್ಯ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮುಖಕ್ಕೆ ಮಾಸ್ಕ್ ಧರಿಸಿದ ಅಪರಿಚಿತ ವ್ಯಕ್ತಿಯೊಬ್ಬ ಅದೇ ವೇಳೆ ಅಲ್ಲಿಂದ ಪರಾರಿಯಾಗಿದ್ದಾನೆ. ರಾಘವೇಂದ್ರ ಅವರು ರಕ್ತದ ಮಡುವಿನಲ್ಲಿ ಬಿದ್ದುಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಅವರು ಅಸುನೀಗಿದ್ದಾರೆ.
ಜುವೆಲ್ಲರಿ ಅಂಗಡಿಗೆ ಕೊಲೆ ಕೃತ್ಯ ನಡೆಯುವುದಕ್ಕಿಂತ ಸುಮಾರು 20 ನಿಮಿಷ ಮೊದಲೇ ಅಪರಿಚಿತ ವ್ಯಕ್ತಿ ಬಂದಿರುವುದು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಕೇಶವ ಆಚಾರ್ಯ ಜುವೆಲ್ಲರಿ ಒಳಗೆ ಬರುವುದನ್ನು ಗಮನಿಸಿದ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಜುವೆಲ್ಲರಿ ಅಂಗಡಿಯಲ್ಲಿ ಪ್ರದರ್ಶನಕ್ಕೆ ಇರಿಸಲಾದ ಕೆಲವು ಚಿನ್ನಾಭರಣದಲ್ಲಿ ನಾಪತ್ತೆಯಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ದೂರು ನೀಡಲಾಗುವುದು ಎಂದು ಅಂಗಡಿ ಮಾಲೀಕ ಕೇಶವ ಆಚಾರ್ಯ ತಿಳಿಸಿದ್ದಾರೆ.
ಸಿಬ್ಬಂದಿ ರಾಘವೇಂದ್ರ ಆಚಾರ್ಯ ಅವರು ಏಳು ತಿಂಗಳ ಹಿಂದೆ ಇಲ್ಲಿ ಕೆಲಸಕ್ಕೆ ಸೇರಿದ್ದರು. ಘಟನೆ ವೇಳೆ ಆರೋಪಿ ಹೆಲೈಟ್ ಧರಿಸಿ ಮಾಸ್ಕ್ ಹಾಕಿಕೊಂಡು ಅಂಗಡಿ ಪ್ರವೇಶಿಸಿರುವುದು ಗೊತ್ತಾಗಿದೆ. ಆರೋಪಿ ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಅಂಗಡಿಯಲ್ಲಿ ಇದ್ದ ಬಗ್ಗೆ ಪಕ್ಕದ ಅಂಗಡಿಯ ಸಿಸಿಟಿವಿ ಪರಿಶೀಲನೆ ಸಂದರ್ಭ ಕಂಡುಕೊಳ್ಳಲಾಗಿದೆ. ಬಳಿಕ ಜುವೆಲ್ಲರಿಯಿಂದ ಹೊರಗೆ ಬಂದು ಪರಾರಿಯಾಗುವುದು ಅದೇ ಸಿಸಿಟಿವಿಯಲ್ಲಿ ದಾಖಲಾಗಿದೆ. ಅಂಗಡಿಯಲ್ಲಿ 16 ಗ್ರಾಂ ಚೈನ್ ಮತ್ತು ಉಂಗುರ ಕೊನೆಯದಾಗಿ ಬಿಲ್ಡಿಂಗ್ ಆಗಿದೆ. ಪುಸ್ತಕದಲ್ಲೂ ಇದರ ಲೆಕ್ಕಾಚಾರ ಇದೆ.ಆದರೆ ಇದು ಆರ್ಡರ್ ಕೊಟ್ಟಿರುವುದೇಅಥವಾ ಬೇರೆಯೇ ಎಂಬುದು ಸ್ಪಷ್ಟವಾಗಿಲ್ಲ.
ಸಿಸಿಯಲ್ಲಿ ಲೈವ್ ಸ್ಟೀಮಿಂಗ್ ಮಾತ್ರ…!
ಯಾವ ಉದ್ದೇಶದಿಂದ ಆರೋಪಿ ಕೊಲೆ ಮಾಡಿದ್ದಾನೆ? ಅಂಗಡಿಯಲ್ಲಿರುವ ಅಭರಣ ದರೋಡೆಗೆಂದು ಬಂದವ ಕೃತ್ಯ ಎಸಗಿದನೇ ಎಂಬ ಶಂಕೆ ತಲೆದೋರಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಜುವೆಲ್ಲರಿ ಕ್ಯಾಮೆರಾದಲ್ಲಿ ಲೈವ್ ಸ್ಟೀಮಿಂಗ್ ಮಾತ್ರ ಇದ್ದು, ಹೀಗಾಗಿ ಕೊಲೆ ಕೃತ್ಯ ರೆಕಾರ್ಡ್ ಆಗಿಲ್ಲ . ಆದರೇ ಈ ಬಗ್ಗೆ ಇನ್ನಷ್ಟು ಪರಿಶೀಲನೆ ನಡೆಸಬೇಕಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಡಿಸಿಪಿ ಅನ್ಸುಕುಮಾರ್, ಬಂದರು ಇನ್ಸ್ಪೆಕ್ಟರ್ ರಾಘವೇಂದ್ರ ಸ್ಥಳಕ್ಕೆ ಭೇಟಿ ನೀಡಿದ್ದರು
ಅತ್ತಾವರ ನಿವಾಸಿಯಾದ ರಾಘವೇಂದ್ರ ಆಚಾರ್ಯ (50) ನಾನಾ ಜುವೆಲ್ಲರ್ ಅಂಗಡಿಯಲ್ಲಿ ಕೆಲಸ ಮಾಡಿದ ಅನುಭವವಿಯಾಗಿದ್ದಾರೆ. ಇವರಿಗೆ ಇಬ್ಬರು ಪುತ್ರರಿದ್ದು, ಒಬ್ಬಾತ ದುಬೈನಲ್ಲಿದ್ದರೆ, ಇನ್ನೊಬ್ಬ ಮಂಗಳೂರಿನಲ್ಲಿದ್ದಾನೆ.
;
ಅಂತರ ರಾಜ್ಯ
Viral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ನವದೆಹಲಿ: ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ವೈರಲ್ ವಿಡಿಯೋದಲ್ಲಿ ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ಶಂಖ ಊದುತ್ತಾ ಆರತಿ ಮಾಡುತ್ತಿರುವುದು ಕಂಡುಬಂದಿದೆ. ಅವರ ಪಕ್ಕದಲ್ಲಿರುವ ಸಣ್ಣ ಟೇಬಲ್ ಮೇಲೆ ದೀಪ, ದೇವರ ಫೋಟೋ, ಹೂವು ಹಾಗೂ ಇತರ ಪೂಜಾ ಸಾಮಗ್ರಿಗಳನ್ನು ಇರಿಸಲಾಗಿದೆ. ಪಂಚೆ ಧರಿಸಿ, ಹಣೆಗೆ ವಿಭೂತಿ ಹಚ್ಚಿಕೊಂಡಿರುವ ವ್ಯಕ್ತಿ ರೈಲು ಚಲಿಸುತ್ತಿರುವಾಗಲೇ ಪೂಜಾ ವಿಧಿವಿಧಾನಗಳನ್ನು ನಡೆಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ.
ಮುಚ್ಚಿದ ಹಾಗೂ ಜನನಿಬಿಡ ರೈಲು ಬೋಗಿಯೊಳಗೆ ಬೆಂಕಿ ಹಚ್ಚಲು ಅವಕಾಶ ನೀಡಿರುವುದು ಹೇಗೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಧಾರ್ಮಿಕ ಆಚರಣೆ ವೈಯಕ್ತಿಕ ವಿಚಾರವಾದರೂ, ಹಲವು ಪ್ರಯಾಣಿಕರಿರುವ ಬೋಗಿಯೊಳಗೆ ತೆರೆದ ಜ್ವಾಲೆಯೊಂದಿಗೆ ದೀಪ ಹಚ್ಚುವುದು ಅಗ್ನಿ ಅವಘಡಕ್ಕೆ ಕಾರಣವಾಗುವ ಅಪಾಯವಿದೆ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.
ವೈರಲ್ ವಿಡಿಯೋಗೆ ಪ್ರತಿಕ್ರಿಯಿಸಿರುವ ಭಾರತೀಯ ರೈಲ್ವೆ, ಘಟನೆಯ ಬಗ್ಗೆ ಪರಿಶೀಲನೆ ನಡೆಸಲು ಹೆಚ್ಚಿನ ಮಾಹಿತಿಯನ್ನು ಕೇಳಿದೆ. ಪ್ರಯಾಣದ ದಿನಾಂಕ, ರೈಲು ಸಂಖ್ಯೆ ಹಾಗೂ ಪಿಎನ್ಆರ್ (PNR) ಸಂಖ್ಯೆಯಂತಹ ವಿವರಗಳನ್ನು ಹಂಚಿಕೊಳ್ಳುವಂತೆ ರೈಲ್ವೆಯ ಅಧಿಕೃತ ‘ರೈಲ್ವೆ ಸೇವಾ’ ಖಾತೆಯ ಮೂಲಕ ಮನವಿ ಮಾಡಲಾಗಿದೆ.
ಸ್ಥಳೀಯ
Arrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
ಕುಂದಾಪುರ: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
2026ರ ಸೆಪ್ಟೆಂಬರ್ 14ರಂದು ಬೈಂದೂರು ತಾಲೂಕಿನ ನಾಡ ಗುಡ್ಡೆಯಂಗಡಿ ನಿವಾಸಿ ಮುತ್ತು (75) ಅವರು ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ವೇಳೆ ಜನಸಂದಣಿಯ ನಡುವೆ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕೃತ್ಯದಲ್ಲಿ ಭಾಗಿಯಾಗಿದ್ದ ತಮಿಳುನಾಡು ಮೂಲದ ವಲ್ಲಿಯಮ್ಮ, ದೇವಿ ಯಾನೆ ತಿಲೋತ್ತಮ ಹಾಗೂ ಪೊನ್ನಿ ಎಂಬ ಮೂವರು ಮಹಿಳೆಯರನ್ನು ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿ ತಾಲೂಕಿನ ತಿರುನೆಲ್ಲಿ ಪೊಲೀಸರು ಬಂಧಿಸಿರುವ ಮಾಹಿತಿ ಕುಂದಾಪುರ ಪೊಲೀಸರಿಗೆ ಲಭ್ಯವಾಗಿತ್ತು.
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನಿರ್ದೇಶನದಂತೆ, ಕುಂದಾಪುರ ಪೊಲೀಸ್ ಠಾಣೆಯ ನಿರೀಕ್ಷಕರು ನ್ಯಾಯಾಲಯದ ಅನುಮತಿ ಪಡೆದು ಮಾನಂತವಾಡಿ ಜೈಲಿನಲ್ಲಿದ್ದ ಮೂವರು ಆರೋಪಿಗಳನ್ನು ಕುಂದಾಪುರಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ಅಪರಾಧ
Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.















