ಪುತ್ತೂರು
Kallega Nemotsava | ಕಾರಣಿಕ ಕ್ಷೇತ್ರ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಸಂಪನ್ನ : ಕಾರ್ಜಲು ಗುತ್ತುನಿಂದ ಕಲ್ಕುಡ – ಕಲ್ಲುರ್ಟಿ ದೈವದ ಭಂಡಾರ ಆಗಮಿಸಿ ನೇಮೋತ್ಸವ
ಪುತ್ತೂರು: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ಶ್ರೀ ಕಲ್ಕುಡ ದೈವದ ವಾರ್ಷಿಕ ಜಾತ್ರೆ ನೇಮೋತ್ಸವ (Kallega Nemotsava) ಶನಿವಾರ (ಫೆ.4 – ಫೆ.5) ರಾತ್ರಿ ಪ್ರಾರಂಭವಾಗಿ ಭಾನುವಾರ ಬೆಳಗ್ಗೆ ತನಕ ನಡೆಯಿತು.
ಫೆ.4 ರಂದು ಬೆಳಗ್ಗೆ ಕಾರ್ಜಾಲು ಗುತ್ತಿನಲ್ಲಿ ಸ್ಥಳಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ ನಡೆದು 11.30 ಗಂಟೆಗೆ ಶ್ರೀ ದೈವಸ್ಥಾನದಲ್ಲಿ ಗಣಹೋಮ ಮತ್ತು ದೈವಗಳ ತಂಬಿಲ, ನಾಗತಂಬಿಲ ನಡೆಯಿತು. ರಾತ್ರಿ ಕಾರ್ಜಲು ಗುತ್ತುನಿಂದ ಭಂಡಾರ ಆಗಮಿಸಿ ರಾತ್ರಿ 7.30 ಕ್ಕೆ ಗೊಂದೊಲು ಪೂಜೆ, ರಾತ್ರಿ 12 ಗಂಟೆಗೆ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮ ಆರಂಭಗೊಂಡು ಫೆ.5 ರಂದು ಪೂರ್ವಾಹ್ನದ ತನಕ ನಡೆದು ಭಕ್ತರಿಗೆ ಪ್ರಸಾದ ವಿತರಿಸಲಾಯಿತು.
ಮಧ್ಯಾಹ್ನ ದೈವಸ್ಥಾನದ ವಠಾರದಲ್ಲಿ ಹತ್ತು ಸಾವಿರಕ್ಕೂ ಮಿಕ್ಕಿ ಭಕ್ತಾಧಿಗಳು ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡರು.
ನೆಹರುನಗರದಿಂದ ಕಾರ್ಜಾಲು ಗುತ್ತಿವಿನವರೆಗೆ ರಸ್ತೆಯುದ್ದಕ್ಕೂ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ, ಕೇಸರಿ ಬಂಟಿಂಗ್ಸ್ ಗಳಿಂದ ಪೇಟೆ ಶೃಂಗಾರಗೊಂಡಿತು.
ಭಾನುವಾರ ಪುತ್ತೂರು ಶಾಸಕ ಸಂಜೀವ ಮಠಂದೂರು ನೇಮದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅಜಿತ್ ಕುಮಾರ್ ಜೈನ್ ಕಲ್ಲೇಗ, ಸದಸ್ಯರಾದ ಕೆ. ಜಿನ್ನಪ್ಪ ಗೌಡ, ಮೀನಾಕ್ಷಿ ಗೌಡ, ಸುನೀತ, ಪ್ರಶಾಂತ್ ಎಸ್., ರಾಘವೇಂದ್ರ ಪ್ರಭು, ಮಾಧವ ಪೂಜಾರಿ ಪಟ್ಲ, ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ಪ್ರಮುಖರಾದ ಸಂಜೀವ ನಾಯಕ್ ಕಲ್ಲೇಗ, ಶಿವರಾಮ ಸಪಲ್ಯ, ವಿನಯ ಕಲ್ಲೇಗ, ಜಿನ್ನಪ್ಪ ಪೂಜಾರಿ ಮತ್ತಿತರರು ಭಾಗವಹಿಸಿದರು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಂತ್ರಜ್ಞಾನದ ಮಹಾಸಂಗಮ; IEEE ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಸಜ್ಜು; ಡಿಸ್ಕವರ್–2026: 1,071 ಪ್ರಬಂಧಗಳ ಪೈಕಿ 94ಕ್ಕೆ ಮಂಡನೆ ಅವಕಾಶ
ನೂತನ ತಂತ್ರಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆಗೆ ವೇದಿಕೆಯಾಗಿರುವ IEEE ಅಂತಾರಾಷ್ಟ್ರೀಯ ಸಮ್ಮೇಳನ ‘ಡಿಸ್ಕವರ್–2026’ ಅ.9 ಮತ್ತು 10ರಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಯಲಿದೆ.
ಪುತ್ತೂರು: ನೂತನ ತಂತ್ರಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆಗೆ ವೇದಿಕೆಯಾಗಿರುವ IEEE ಅಂತಾರಾಷ್ಟ್ರೀಯ ಸಮ್ಮೇಳನ ‘ಡಿಸ್ಕವರ್–2026’ ಅ.9 ಮತ್ತು 10ರಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಯಲಿದೆ.
ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, IEEE ಬೆಂಗಳೂರು ವಿಭಾಗ ಹಾಗೂ IEEE ಮಂಗಳೂರು ಉಪವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿರುವ ಸಮ್ಮೇಳನದಲ್ಲಿ ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ಕಮ್ಯುನಿಕೇಶನ್, ವಿಎಲ್‌ಎಸ್‌ಐ, ಇಲೆಕ್ಟ್ರಿಕಲ್ ಸರ್ಕ್ಯೂಟ್ಸ್, ರೊಬೋಟಿಕ್ಸ್ ಹಾಗೂ ಹೆಲ್ತ್‌ಕೇರ್ ಕ್ಷೇತ್ರಗಳ ಕುರಿತು ಚರ್ಚೆ ನಡೆಯಲಿದೆ.
ದೇಶ-ವಿದೇಶಗಳಿಂದ 1,071 ಸಂಶೋಧನಾ ಪ್ರಬಂಧಗಳು ಸಲ್ಲಿಕೆಯಾಗಿದ್ದು, ಗುಣಮಟ್ಟದ ಪರಿಶೀಲನೆಯ ಬಳಿಕ 94 ಪ್ರಬಂಧಗಳನ್ನು ಮಂಡನೆಗೆ ಆಯ್ಕೆ ಮಾಡಲಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವಿಕೃಷ್ಣ ಡಿ. ಕಲ್ಲಾಜೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅ.9ರಂದು ಬೆಳಿಗ್ಗೆ 9.30ಕ್ಕೆ ಸಾವರ್ಕರ್ ಸಭಾಭವನದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಐಐಎಸ್‌ಸಿ ಸೆಂಟರ್ ಆಫ್ ನ್ಯಾನೋ ಸೈನ್ಸಸ್ ಎಂಡ್ ಇಂಜಿನಿಯರಿಂಗ್‌ನ ಪ್ರೊ. ಡಾ. ನವಕಾಂತ ಭಟ್ ಮುಖ್ಯ ಅತಿಥಿಯಾಗಿ, ಟಿಸಿಎಸ್ ಹಿರಿಯ ವಿಜ್ಞಾನಿ ಹಾಗೂ IEEE ಬೆಂಗಳೂರು ವಿಭಾಗದ ಮುಖ್ಯಸ್ಥ ಡಾ. ಪ್ರಶಾಂತ್ ಮಿಶ್ರ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರವಿಕೃಷ್ಣ ಡಿ. ಕಲ್ಲಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ತಂತ್ರಜ್ಞಾನ ಕ್ಷೇತ್ರದ ದಿಗ್ಗಜರಿಂದ ವಿಚಾರ ಮಂಡನೆ
ಸಮ್ಮೇಳನದಲ್ಲಿ ಸೆಮಿಕಂಡಕ್ಟರ್ ವಿಎಲ್‌ಎಸ್‌ಐ ತಂತ್ರಜ್ಞಾನ, 6G ಸಂಪರ್ಕ ವ್ಯವಸ್ಥೆ ಹಾಗೂ ಎಐ ಆಧಾರಿತ ವಿಕೇಂದ್ರೀಕೃತ ಬುದ್ಧಿಮತ್ತೆ ಕುರಿತು ತಜ್ಞರಿಂದ ವಿಚಾರ ಮಂಡನೆ ನಡೆಯಲಿದೆ. ಡಾ. ನವಕಾಂತ ಭಟ್, ಸ್ಮಾರ್ಟ್‌ಬೀಮ್ ರೆಸೊನೆಟಿಕ್ಸ್‌ನ ಸಂಸ್ಥಾಪಕಿ ಡಾ. ಶ್ವೇತಾ ಅಮಿತ್ ಹಾಗೂ ಬ್ಲೂಟ್ ಟೆಕ್ನಾಲಜೀಸ್‌ನ ಸಂಸ್ಥಾಪಕ-ಸಿಟಿಒ ಸುದರ್ಶನ್ ಶೆನ್ವಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.
‘ಸಂಶೋಧನೆ ಮತ್ತು ನಾವೀನ್ಯತೆ: ಗುಣಮಟ್ಟ, ಪ್ರಮಾಣ ಮತ್ತು ನೈತಿಕ ಆಯಾಮಗಳು’ ಕುರಿತು ವಿಶೇಷ ಚರ್ಚೆಯೂ ನಡೆಯಲಿದೆ. ಡಾ. ಪ್ರಶಾಂತ್ ಮಿಶ್ರ, ಡಾ. ನವಕಾಂತ ಭಟ್, ಡೆಲ್ ಟೆಕ್ನಾಲಜೀಸ್‌ನ ಡೇಟಾ ಸೈನ್ಸ್ ನಿರ್ದೇಶಕ ಪಂಡಿತ್ ಕುಲದೀಪ್ ಡೋಂಗ್ರೆ ಹಾಗೂ ಡಾ. ಅಂಬರ್ ಬಾಜ್‌ಪಾಯ್ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಡಾ. ಅಜಿತ್ ಹೆಬ್ಬಾರ್ ಹೊಸಮಠ ಸಮನ್ವಯಕಾರರಾಗಿರುತ್ತಾರೆ.

ಅ.10ರಂದು ಸಂಜೆ 3.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸುದರ್ಶನ್ ಶೆನ್ವಿ ಮುಖ್ಯ ಅತಿಥಿಯಾಗಿ, IEEE ಬೆಂಗಳೂರು ವಿಭಾಗದ ಡಾ. ವಾಸುದೇವ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರಸನ್ನ ದರ್ಬೆ ಅಧ್ಯಕ್ಷತೆ ವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ಕೆ., ಡಾ. ಜೀವಿತಾ ಬಿ.ಕೆ., ಡಾ. ರಜನಿ ರೈ ಬಿ. ಹಾಗೂ ಡಾ. ಆಶ್ಲೆ ಡಿ. ಸೋಜ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಬಿಗ್ ನ್ಯೂಸ್
ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.
ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.
ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.
-
ಬಿಗ್ ನ್ಯೂಸ್19 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ನಿಧನ ವಾರ್ತೆ24 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಶಿಕ್ಷಣ22 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ24 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ23 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ಬಿಗ್ ನ್ಯೂಸ್24 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ
-
Uncategorized20 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ಅಂತರ ರಾಜ್ಯ23 hours agoYouTuber-89 ವರ್ಷದ ವೃದ್ಧನ 5 ಸವರನ್ ಚಿನ್ನದ ಸರ ಕಳವು ಆರೋಪ; 118 ಸವರನ್ ಚಿನ್ನ ಕಳವು ಪ್ರಕರಣದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲು


















