ದಕ್ಷಿಣ ಕನ್ನಡ
ಪುತ್ತೂರಿಗೆ ಆಗಮಿಸುವ ಅಮಿತ್ ಶಾ ಕ್ಯಾಂಪ್ಕೋವನ್ನು ಗುಜರಾತಿನ ಅಡಿಕೆ ಮಂಡಿಗಳೊಂದಿಗೆ ಮರ್ಜ್ ಮಾಡದಿರಲಿ : ಎಂ. ಬಿ. ವಿಶ್ವನಾಥ ರೈ | ಅಡಿಕೆಗೆ ಭವಿಷ್ಯವಿಲ್ಲದಿದ್ದರೇ ಕ್ಯಾಂಪ್ಕೋ ಗೆ ಭವಿಷ್ಯವಿರಬಹುದೇ ? : ಮಹಮ್ಮದ್ ಆಲಿ
ಪುತ್ತೂರು: ಕೇಂದ್ರ ಗೃಹ ಸಚಿವರು, ಕೇಂದ್ರದ ಪ್ರಥಮ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಮೊದಲ ಬಾರಿಗೆ ಪುತ್ತೂರಿಗೆ ಬರುತ್ತಿರುವುದಾಗಿ ಬಿಜೆಪಿಯವರು ಹೇಳುತ್ತಿದ್ದು, ಅವರ ಬಂದ ಮೇಲೆ ಇಲ್ಲಿನ ಮಣ್ಣು ವಿಷಪೂರಿತವಾಗದಿರಲಿ. ಫಲವತ್ತಾಗಿಯೇ ಇರಲಿ. ಅವರು ಹೋದಲೆಲ್ಲ ವಿಷ ಬೀಜ ಬಿತ್ತುವುದಕ್ಕೆ ಪ್ರಸಿದ್ದಿ ಪಡೆದಿದ್ದಾರೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ತಿಳಿಸಿದರು.
ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮಂಡ್ಯಕ್ಕೆ ಭೇಟಿ ನೀಡಿದ ಶಾ ಕರ್ನಾಟಕದ ಕೆಎಂಎಫ್ ಅನ್ನು ಗುಜರಾತಿನ ಅಮೂಲ್ ನೊಂದಿಗೆ ಮರ್ಜ್ ಮಾಡುವುದಾಗಿ ತಿಳಿಸಿದ್ದು ಇನ್ನು ಪುತ್ತೂರಿಗೆ ಆಗಮಿಸುವ ಅವರು ಕ್ಯಾಂಪ್ಕೋವನ್ನು ಗುಜರಾತಿನ ಅಡಿಕೆ ಮಂಡಿಗಳೊಂದಿಗೆ ಮರ್ಜ್ ಮಾಡದಿರಲಿ ಎಂದು ವ್ಯಂಗ್ಯವಾಡಿದರು.
ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ರವರು ಎಲೆ ಚುಕ್ಕಿ ಹಾಗೂ ಹಳದಿ ರೋಗದಿಂದ ಬಳಲುತ್ತಿರುವ ಅಡಿಕೆ ಬೆಳೆಗಾರರಿಗೆ ಸಂಕಷ್ಟಕ್ಕೆ ಮಿಡಿಯಲಿ . ಬಿಜೆಪಿಯು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಕುಮ್ಕಿ ಹಕ್ಕನ್ನು ನೀಡಿಲ್ಲ. ಅದನ್ನು ಕೊಡಿಸಲಿ. ಪುತ್ತೂರು ಸರಕಾರಿ ಆಸ್ಫತ್ರೆಯನ್ನು ಮೇಲ್ದರ್ಜೆಗೇರಿಸುವ ಮೂಲಕ ಸರಕಾರ ವೈದ್ಯಕೀಯ ಕಾಲೇಜು ಇಲ್ಲಿ ನಿರ್ಮಿಸಲಿ. ಎಂದರು
ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಮಹಮ್ಮದ್ ಆಲಿ ಅವರು ಮಾತನಾಡಿ ಅಮಿತ್ ಶಾರವರ ಕ್ಯಾಂಪ್ಕೋ ಹಾಗೂ ಹನುಮಗಿರಿ ಭೇಟಿಯ ಕಾರ್ಯಕ್ರಮ ಖಾಸಗಿ ಕಾರ್ಯಕ್ರಮವಾಗಿದ್ದು , ಅವರ ಭಧ್ರತೆಗೆ ಮೂರುವರೆ ಸಾವಿರ ಪೊಲೀಸರನ್ನು ನಿಯೋಜಿಸುವ ಅಗತ್ಯವಿದೆಯೇ ? ದ.ಕ ಜಿಲ್ಲೆ ಸಂಘ ಪರಿವಾರ ಹಾಗೂ ಅರ್ ಎಸ್ ಎಸ್ ನ ಭಧ್ರ ಕೋಟೆ. ಇಲ್ಲಿ ಶಾ ಭದ್ರತೆಗೆ ಅವರ ಕಾರ್ಯಕರ್ತರು ಸಾಲದೇ? ಇದು ಸಂಘ ಪರಿವಾರಕ್ಕೆ ಮಾಡುವ ಅವಮಾನ. ಶಾ ಗೆ ಬಿಲ್ಡಪ್ ನೀಡುವ ಉದ್ದೇಶದಿಂದ ಇಷ್ಟು ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಗೃಹ ಸಚಿವರಿಗೆ ಭಧ್ರತೆ ನೀಡಲಿ.ಅದ್ರೆ ಅದು ಅಗ್ತಕ್ಕಿಂತ ಹೆಚ್ಚು ಆಗದಿರಲಿ ಎಂದರು
ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ , ಸಚಿವ ಅಂಗಾರ ಹಾಗೂ ಶಾಸಕ ಮಠಂದೂರು ಸೇರಿದಂತೆ ಬಿಜೆಪಿ ಮುಖಂಡರುಗಳು ಅಡಿಕೆಗೆ ಭವಿಷ್ಯವಿಲ್ಲ. ಪರ್ಯಾಯ ಬೆಳೆ ಬೆಳೆಯಿರಿ ಎಂದು ಸದನದಲ್ಲಿ ಹಾಗೂ ಹೊರಗೆ ನಿರಂತರವಾಗಿ ಹೇಳುತ್ತಿರುವಾಗ ಕ್ಯಾಂಪ್ಕೋಗೆ ಭವಿಷ್ಯ ಇರಲು ಹೇಗೆ ಸಾಧ್ಯ ? ಶಾ ಕಾರ್ಯಕ್ರಮ ಕ್ಯಾಂಪ್ಕೋದ ಕೊನೆಯ ಕಾರ್ಯಕ್ರಮ ಆಗಿರಬಹುದೇ ಎಂಬ ಸಂಶಯ ನಮ್ಮನ್ನು ಕಾಡುತ್ತಿದೆ ಎಂದು ವ್ಯಂಗ್ಯವಾಡಿದರು
ಭೂತನ್ ನಿಂದ ಅಡಿಕೆ ಆಮದು ಮಾಡಿಕೊಳ್ಳುವ ಮೂಲಕ ಕ್ಯಾಂಪ್ಕೋವನ್ನು ನಾಶ ಮಾಡುವ ಕಾರ್ಯಕ್ರಮವನ್ನು ಕೇಂದ್ರದ ಬಿಜೆಪಿ ಸರಕಾರ ಹಮ್ಮಿಕೊಂಡಿದೆ. ಅಮಿತ್ ಶಾ ನ ಪುತ್ರ ಭೂತನ್ ನಿಂದ ಅಡಿಕೆ ಆಮದು ಮಾಡಿಕೊಳ್ಳುವ ವ್ಯವಹಾರ ದಲ್ಲಿ ಭಾಗಿಯಾಗಿದ್ದು, ಅವರಿಗೆ ಲಾಭವಾಗಬೇಕಾದ್ರೆ ಕ್ಯಾಂಪ್ಕೋ ಸಂಸ್ಥೆ ನಾಶವಾಗಬೇಕಿದೆ. ಅದಕ್ಕೂಸ್ಕರ ಅಡಿಕೆಗೆ ಭವಿಷ್ಯವಿಲ್ಲ ಎಂದು ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದರು
ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರೋಶನ್ ರೈ, ನಗರ ಕಾಂಗ್ರೆಸ್ನ ಉಪಾಧ್ಯಕ್ಷ ಮೌರೀಸ್ ಮಸ್ಕರೇನ್ಹಸ್, ನಗರಸಭೆ ಮಾಜಿ ಸದಸ್ಯ ಮುಕೇಶ್ ಕೆಮ್ಮಿಂಜೆ ಉಪಸ್ಥಿತರಿದ್ದರು.
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
G.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಜ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲೇ ನೀಡುವುದರ ಜೊತೆಗೆ, ಪ್ರತಿ ಕ್ಯಾರೆಟ್ ಗೆ ರೂ.8000 ವಿಶೇಷ ರಿಯಾಯಿತಿ ನೀಡಲಾಗುವುದು ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಆಭರಣ ಖರೀದಿಗೆ ಈ ಕೊಡುಗೆ ವಿಶೇಷ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಇತರೆ ಮಳಿಗೆಯ ಹಳೆಯ ಚಿನ್ನವನ್ನು 0% ರೇಟ್ ಡಿಡಕ್ಷನ್ನೊಂದಿಗೆ ಎಕ್ಸ್ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ.
ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಪುತ್ತೂರಿನಲ್ಲಿ ಆರಂಭಗೊಂಡಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು -ಮುನ್ನಡೆಯುತ್ತಿದೆ.ಗುಣಮಟ್ಟ,ಸೊಬಗು, ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ -ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.
ಸುಳ್ಯ
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ

ನವದೆಹಲಿ: ನಿಷೇಧಿತ ಪ್ರದೇಶವಾದ ಜಂತರ್ ಮಂತರ್ ಪ್ರವೇಶಿಸಿ, ಪೊಲೀಸ್ ಬ್ಯಾರಿಕೇಡ್ ಉಲ್ಲಂಘಿಸಿದ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಾಯಕರು ಮಂಗಳವಾರ ಮುಂಜಾನೆ ಜಂತರ್ ಮಂತರ್ ಬಳಿ ಪ್ರತಿಭಟನೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್ಗಳನ್ನು ಭೇದಿಸಿ ಒಳಪ್ರವೇಶಿಸಿದ ಅವರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿತ್ತು.
ಬಂಧಿತ ನಾಯಕರನ್ನು ಇಂದು (ಬುಧವಾರ) ವಿಶೇಷ ಕಾರ್ಯಕಾರಿ ಮ್ಯಾಜಿಸ್ಟ್ರೇಟ್ (ಎಸ್ಇಎಂ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಬಳಿಕ ಅವರನ್ನು ತಿಹಾರ್ ಜೈಲಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೊಲೀಸರ ವಿರುದ್ಧ ಸಿಜೆಪಿ ಆರೋಪ:
ಸಿಜೆಪಿ ಕಾನೂನು ಘಟಕದ ಮುಖ್ಯಸ್ಥೆ ರತ್ನಾ ಸಿಂಗ್ ಅವರು ‘ಎಕ್ಸ್’ (ಟ್ವಿಟರ್) ಮೂಲಕ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.
“ಜಂತರ್ ಮಂತರ್ ಘಟನೆಗೆ ಸಂಬಂಧಿಸಿದಂತೆ ನಮ್ಮ ನಾಯಕರಾದ ಸೌರವ್ ದಾಸ್, ಅಶುತೋಷ್ ಹಾಗೂ ಅಜಿಂಕ್ಯ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಅವರ ಮೇಲೆ ಅಕ್ರಮ ಪ್ರವೇಶ, ಬಾಂಡ್ ಉಲ್ಲಂಘನೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ. ತಡರಾತ್ರಿಯವರೆಗೂ ವಕೀಲರನ್ನು ಭೇಟಿ ಮಾಡಲು ಪೊಲೀಸರು ಅವಕಾಶ ನೀಡಿರಲಿಲ್ಲ.
ಮುಂಜಾನೆ 3 ಗಂಟೆ ಸುಮಾರಿಗೆ ಖಾಸಗಿ ವ್ಯಾನ್ ಮೂಲಕ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆಗೆ ಕರೆತರಲಾಗಿದೆ. ಈ ಎಲ್ಲ ಕಾನೂನುಬಾಹಿರ ಕ್ರಮಗಳ ನಡುವೆಯೂ ನಮ್ಮ ನಾಯಕರ ನೈತಿಕ ಸ್ಥೈರ್ಯ ಕುಗ್ಗಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿನ್ನೆಲೆ ಏನು?
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಿಜೆಪಿ ಹಾಗೂ ಇತರ ಕೆಲವು ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆಗಳನ್ನು ತೀವ್ರಗೊಳಿಸಿವೆ. ಈ ಹಿನ್ನೆಲೆಯಲ್ಲಿ ರಾಜಧಾನಿಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಕಳೆದ ಅಕ್ಟೋಬರ್ 11ರಂದು ನೂತನ ಆದೇಶ ಹೊರಡಿಸಿದ್ದ ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಅವರು, ಯಾವುದೇ ಧರಣಿ ಮತ್ತು ಪ್ರತಿಭಟನೆಗಳಿಗೆ ಕೇವಲ ರಾಮ್ಲೀಲಾ ಮೈದಾನ, ಬುರಾರಿ ಗ್ರೌಂಡ್ ಹಾಗೂ ಸಿಬಿಡಿ ಗ್ರೌಂಡ್ಗಳನ್ನು ಮಾತ್ರ ನಿಗದಿಪಡಿಸಿದ್ದರು. ಈ ಆದೇಶದ ಅನ್ವಯ ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಡಲಾಗಿದ್ದು, ಅಲ್ಲಿ ಜಮಾವಣೆಯನ್ನು ನಿಷೇಧಿಸಲಾಗಿದೆ. ನಿಷೇಧದ ನಡುವೆಯೂ ಪ್ರತಿಭಟನೆ ನಡೆಸಿದ್ದರಿಂದ ಈ ಬಂಧನ ಕಾರ್ಯಾಚರಣೆ ನಡೆದಿದೆ.
-
Uncategorized23 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ರಾಜಕೀಯ22 hours agoSiddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
-
ನಿಧನ ವಾರ್ತೆ23 hours agoSubramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ
-
ದಕ್ಷಿಣ ಕನ್ನಡ7 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಮಂಗಳೂರು23 hours agoDakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
-
ಅಂತರ ರಾಜ್ಯ5 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಸುಳ್ಯ7 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized6 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ


















