ಪುತ್ತೂರು
JEE Result | ಜೆ.ಇ.ಇ. ಪರೀಕ್ಷೆ: ಅಂಬಿಕಾ ಪದವಿಪೂರ್ವ ವಿದ್ಯಾರ್ಥಿಗಳಿಂದ ದಾಖಲೆ : ಶ್ರೀಶ ಶರ್ಮ 99.03, 14 ವಿದ್ಯಾರ್ಥಿಗಳಿಂದ 90% ಅಧಿಕ ಸಾಧನೆ
ಪುತ್ತೂರು: ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ (NEA) ನಡೆಸಿದ ರಾಷ್ಟ್ರಮಟ್ಟದ ಜೆಇಇ (JEE Result) ಮೈನ್ಸ್ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ಕೃಷ್ಟ ಸಾಧನೆ ಮೆರೆದಿದ್ದಾರೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ 7 ಮಂದಿ ವಿದ್ಯಾರ್ಥಿಗಳು 95 ಪರ್ಸೆಂಟೈಲ್ಗಿಂತ ಅಧಿಕ, 14 ಮಂದಿ ವಿದ್ಯಾರ್ಥಿಗಳು 90ಕ್ಕಿಂತ ಅಧಿಕ ಹಾಗೂ 19 ಮಂದಿ ವಿದ್ಯಾರ್ಥಿಗಳು 85ಕ್ಕಿಂತ ಅಧಿಕ ಪರ್ಸೆಂಟೈಲ್ ಗಳಿಸಿ ಸಾಧನೆ ಮೆರೆದಿದ್ದಾರೆ.
ಕೊಕ್ಕಡದ ಕೃಷ್ಣಮೂರ್ತಿ ಕೆ ಮತ್ತು ಅನುಪಮಾ ಕೆ ದಂಪತಿಯ ಪುತ್ರ ಶ್ರೀಶ ಶರ್ಮ (99.033), ಬೆಳ್ಳಾರೆಯ ಬಿ.ಕೆ ಸೂರ್ಯನಾರಾಯಣ ಮತ್ತು ವಿದ್ಯಾ ಕುಮಾರಿ ದಂಪತಿಯ ಪುತ್ರ ಆಶಿಶ್ ಗೋವಿಂದ (98.81), ಪಡೀಲಿನ ಸಂಜಿತ್ ಕುಮಾರ್ ಮತ್ತು ಕುಮಾರಿ ಬಿನಿಟಾ ಸಿನ್ಹ ದಂಪತಿಯ ಪುತ್ರಿ ಖುಷಿ (99.37), ಬೆಟ್ಟಂಪಾಡಿಯ ದಿನೇಶ್ ಮರಡಿತಾಯ ಮತ್ತು ಸಂಧ್ಯಾ ದಂಪತಿಯ ಪುತ್ರಿ ಶ್ರಾವಣಿ ಪಿ (97.30), ಶಿರಸಿಯ ವಸಂತ್ ಕೃಷ್ಣಮೂರ್ತಿ ಹೆಗ್ಡೆ ಮತ್ತು ರೇಖ ದಂಪತಿಯ ಪುತ್ರ ತೇಜಸ್ವಿ ವಸಂತ ಹೆಗ್ಡೆ (96.15), ಪಾಲ್ತಾಡಿಯ ಬಿ ಸತ್ಯನಾರಾಯಣ ನಿಡ್ವಣ್ಣಾಯ ಮತ್ತು ಅಶ್ವಿನಿ ಬಿ ಎಸ್ ದಂಪತಿಯ ಪುತ್ರ ಸಿದ್ಧಾರ್ಥ ಬಿ.ಎಸ್ (96.15),
ಬದಿಯಡ್ಕದ ಸುಬ್ರಹ್ಮಣ್ಯ ಪ್ರಸಾಧ್ ಮತ್ತು ಸುಧಾ ದಂಪತಿಯ ಪುತ್ರ ಅನಂತರಾಮ (95.16), ಮಡಿಕೇರಿಯ ಜಿ.ಪಿ ಚಿನ್ನಪ್ಪ ಮತ್ತು ಜಿ.ಸಿ ಗಿರಿಜ ದಂಪತಿಯ ಪುತ್ರ ಜಿ. ಸಿ. ನಿಖಿಲ್ (94.07), ಕಾಸರಗೋಡಿನ ಕೇಶವ ಶರ್ಮ ಮತ್ತು ಶ್ರೀವತ್ಸಲ ದಂಪತಿಯ ಪುತ್ರಿ ಪ್ರಣಮ್ಯ ಬಿ (93.78), ಸುಳ್ಯದ ಸೀತಾರಾಮ ಎನ್ ಜಿ ಮತ್ತು ಜಯಲಕ್ಷ್ಮೀ ಕೆ ದಂಪತಿಯ ಪುತ್ರ ಧೀರಜ್ ಬಿ.ಎಸ್ (93.03), ಬಲ್ನಾಡಿನ ಮಹಾಬಲೇಶ್ವರ ಭಟ್ ವೈ ಮತ್ತು ಗೀತಾ ಕುಮಾರಿ ದಂಪತಿಯ ಪುತ್ರಿ ದಿಶಾಕಾ ವೈ ಭಟ್ (92.84), ನೆಟ್ಲಮುಡ್ನೂರಿನ ಕೆ ಗೋಪಾಲ ಗೌಡ ಮತ್ತು ಶೀಲಾವತಿ ಎನ್ ದಂಪತಿಯ ಪುತ್ರ ಸುಜಿತ್ ಕೆ ಜಿ (92.61), ದರ್ಬೆಯ ಯಶೋಧರ ಎಸ್ ಮತ್ತು ರಶ್ಮಿ ಟಿ.ಎಂ ದಂಪತಿಯ ಪುತ್ರಿ ಯಶಸ್ವಿ ಶೆಟ್ಟಿ ಎಸ್ (91.81),
ತಿಂಗಳಾಡಿಯ ರವಿನಾರಾಯಣ ಭಟ್ ಎನ್ ಮತ್ತು ವಿದ್ಯಾಸರಸ್ವತಿ ಎನ್ ಆರ್ ದಂಪತಿಯ ಪುತ್ರಿ ಚೈತ್ರ ಭಟ್ ವೈ (90.17), ಸುಳ್ಯದ ಪದ್ಮನಾಭ ಯು ಎಸ್ ಮತ್ತು ರತ್ನಾ ಕುಮಾರಿ ಕೆ ಎಚ್ ದಂಪತಿಯ ಪುತ್ರಿ ಪ್ರತೀಕ್ಷಾ ಯು ಪಿ (89.56), ಮಂಡ್ಯದ ಕುಮಾರ ಕೆ.ಬಿ ಮತ್ತು ರತ್ನಾ ದಂಪತಿಯ ಪುತ್ರ ವರುಣ್ ಕುಮಾರ್ ಕೆ (89.13), ಮಡಿಕೇರಿಯ ತಿಮ್ಮಯ್ಯ ಕೆ.ಎಂ ಮತ್ತು ಶಶಿ ಕೆ. ಓ ದಂಪತಿಯ ಪುತ್ರ ಬಿದ್ದಪ್ಪ ಕೆ ಟಿ (89.13), ಸಂಪ್ಯದ ಪ್ರಸನ್ನ ಕುಮಾರ್ ರೈ ಮತ್ತು ಜ್ಯೋತಿ ಪಿ ರೈ ದಂಪತಿಯ ಪುತ್ರಿ ತನಿಷಾ ರೈ (85.81), ಮಡಿಕೇರಿಯ ಕುಶಿಕರ ಬಿ ಎಸ್ ಮತ್ತು ಉದಯ ಕಲಾ ಎನ್ ಎಲ್ ದಂಪತಿಯ ಪುತ್ರ ಪ್ರಜ್ವಲ್ ಬಿ ಕೆ (85.65) ಇವರುಗಳು ಉತ್ತಮ ಸಾಧನೆಯೊಂದಿಗೆ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಬಿಗ್ ನ್ಯೂಸ್
G.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಜ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲೇ ನೀಡುವುದರ ಜೊತೆಗೆ, ಪ್ರತಿ ಕ್ಯಾರೆಟ್ ಗೆ ರೂ.8000 ವಿಶೇಷ ರಿಯಾಯಿತಿ ನೀಡಲಾಗುವುದು ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಆಭರಣ ಖರೀದಿಗೆ ಈ ಕೊಡುಗೆ ವಿಶೇಷ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಇತರೆ ಮಳಿಗೆಯ ಹಳೆಯ ಚಿನ್ನವನ್ನು 0% ರೇಟ್ ಡಿಡಕ್ಷನ್ನೊಂದಿಗೆ ಎಕ್ಸ್ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ.
ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಪುತ್ತೂರಿನಲ್ಲಿ ಆರಂಭಗೊಂಡಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು -ಮುನ್ನಡೆಯುತ್ತಿದೆ.ಗುಣಮಟ್ಟ,ಸೊಬಗು, ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ -ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.
ದಕ್ಷಿಣ ಕನ್ನಡ
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

ಪುತ್ತೂರು: ವಾಸವಿಲ್ಲದ ಮನೆಯೊಂದಕ್ಕೆ ಬೆಂಕಿ ಬಿದ್ದು ಸುಮಾರು ₹10 ಲಕ್ಷ ಮೌಲ್ಯದ ಸೊತ್ತು ಹಾನಿಯಾಗಿರುವ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಇದೇ ವೇಳೆ ಮನೆಯಲ್ಲಿದ್ದ ವಿದ್ಯುತ್ ತಂತಿ, ಸೀಲಿಂಗ್ ಫ್ಯಾನ್ ಸೇರಿದಂತೆ ಸುಮಾರು ₹30 ಸಾವಿರ ಮೌಲ್ಯದ ವಸ್ತುಗಳು ಕಳವಾಗಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಸರಗೋಡು ಮೂಲದ ರಶ್ಮಿ ಬಿ. ಭಟ್ ಅವರಿಗೆ ಸೇರಿದ ಪುತ್ತೂರಿನ ಮನೆಯಲ್ಲಿ ಯಾರೂ ವಾಸವಿರಲಿಲ್ಲ. ತಿಂಗಳಿಗೆ ಒಂದು ಅಥವಾ ಎರಡು ಬಾರಿ ಮಾತ್ರ ಅವರು ಮನೆಗೆ ಬಂದು ಹೋಗುತ್ತಿದ್ದರು. ಸೆ. 15ರಂದು ಮನೆಗೆ ಬಂದಿದ್ದ ಅವರು, ಬಳಿಕ ಅ. 11ರಂದು ಬೆಳಗ್ಗೆ 7 ಗಂಟೆಗೆ ಅವರ ದೊಡ್ಡಪ್ಪನ ಮಗ ಎನ್.ಟಿ. ಕಿಶೋರ್ ಅವರು ಮನೆಗೆ ಬೆಂಕಿ ಬಿದ್ದಿರುವುದಾಗಿ ಮಾಹಿತಿ ನೀಡಿದ್ದಾರೆ.
ಕೂಡಲೇ ಕಾಸರಗೋಡಿನಿಂದ ಪುತ್ತೂರಿಗೆ ಬಂದ ರಶ್ಮಿ ಭಟ್ ಅವರು ಮನೆ ಪರಿಶೀಲಿಸಿದಾಗ, ಮನೆಯ ಹಿಂಭಾಗದಲ್ಲಿದ್ದ ಎರಡು ಬೆಡ್ರೂಮ್ಗಳು, ಎರಡು ಬಾತ್ರೂಮ್ಗಳು ಹಾಗೂ ತೆರೆದ ಹಾಲ್ನಂತಹ ಛಾವಣಿಯ ಭಾಗ ಬೆಂಕಿಯಿಂದ ಸುಟ್ಟು ಕರಕಲಾಗಿರುವುದು ಕಂಡುಬಂದಿದೆ.
ಅಲ್ಲದೆ, ಮನೆಯ ಹಿಂಭಾಗದಲ್ಲಿರುವ ಅಡುಗೆಮನೆಯ ಬಾಗಿಲಿನ ಕೆಳಭಾಗದ ಒಂದು ಅಡ್ಡ ಹಲಗೆಯನ್ನು ತೆಗೆದಿರುವುದು ಕಂಡುಬಂದಿದೆ. ಮನೆಯ ಒಳಗಿನ ವಿದ್ಯುತ್ ಸ್ವಿಚ್ ಬೋರ್ಡ್ಗಳನ್ನು ಹಾನಿಗೊಳಿಸಿ, ವಿದ್ಯುತ್ ತಂತಿಗಳನ್ನು ತೆಗೆದುಕೊಂಡು ಹೋಗಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಐದು ಸೀಲಿಂಗ್ ಫ್ಯಾನ್ಗಳು ಹಾಗೂ ಬುಟ್ಟಿಯಲ್ಲಿಟ್ಟಿದ್ದ ದೇವರ ಪೂಜಾ ಸಾಮಗ್ರಿಗಳು ನಾಪತ್ತೆಯಾಗಿವೆ. ಫ್ರಿಡ್ಜ್ ಮತ್ತು ಮೈಕ್ರೋವೇವ್ಗಳನ್ನು ಕೂಡ ಕಳಚಿ ಪರಿಶೀಲಿಸಿರುವುದು ಕಂಡುಬಂದಿದೆ.
ಸೆ. 15ರಿಂದ ಅ. 11ರ ಬೆಳಗಿನ ಜಾವದ ನಡುವೆ ಯಾರೋ ಮನೆಯೊಳಗೆ ನುಗ್ಗಿ ವಸ್ತುಗಳನ್ನು ಕಳವು ಮಾಡಿ, ಬೆಂಕಿ ಹಚ್ಚಿರಬಹುದು ಎಂದು ರಶ್ಮಿ ಬಿ. ಭಟ್ ಅವರು ಶಂಕೆ ವ್ಯಕ್ತಪಡಿಸಿದ್ದಾರೆ. ಕಳವಾದ ವಸ್ತುಗಳ ಅಂದಾಜು ಮೌಲ್ಯ ₹30 ಸಾವಿರವಾಗಿದ್ದು, ಬೆಂಕಿಯಿಂದ ಸುಮಾರು ₹10 ಲಕ್ಷ ನಷ್ಟವಾಗಿರಬಹುದು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು: ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಘಟಕಗಳನ್ನೂ ಸ್ಥಾಪಿಸುವ ಮೂಲಕ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸಮಿತಿಯ ಆಶಯವಾಗಿದೆ.
ಈ ಕುರಿತು ಸೋಮವಾರ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅಭಿಯಾನದ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಯಿತು.
120 ಎಕರೆ ಸರ್ಕಾರಿ ಜಮೀನಿನತ್ತ ಗಮನ
ಆಸ್ಪತ್ರೆಗಳ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸುವ ಪ್ರಕ್ರಿಯೆಗೆ ಸಮಿತಿ ಆದ್ಯತೆ ನೀಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿರುವ ಸೇಡಿಯಾಪು ಪ್ರದೇಶದ ಸಮೀಪ ಸುಮಾರು 120 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಆರ್ಯಾಪು ಗ್ರಾಮದಲ್ಲಿಯೂ ಸುಮಾರು 88 ಎಕರೆ ಜಾಗ ಗುರುತಿಸಲಾಗಿದೆ. ಸೂಕ್ತ ಸ್ಥಳ ಆಯ್ಕೆ ಮಾಡಿ ಆಸ್ಪತ್ರೆಗಳ ಘಟಕಗಳಿಗೆ ಜಮೀನು ಮೀಸಲಿಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸಮಿತಿಯ ಸಂಚಾಲಕ ಅಮಳ ರಾಮಚಂದ್ರ ತಿಳಿಸಿದ್ದಾರೆ.
ಸಮನ್ವಯದ ಚಿಕಿತ್ಸೆಗೆ ಅವಕಾಶ
ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಸಾಮೆತ್ತಡ್ಕದ ಡಾ. ಸಂದೀಪ್ ನಾಯಕ್ ಮಾತನಾಡಿ, ‘ಒಂದೇ ಆವರಣದಲ್ಲಿ ಹಲವು ಸಂಸ್ಥೆಗಳು, ಸಮನ್ವಯದ ಚಿಕಿತ್ಸೆ’ ಎಂಬ ಪರಿಕಲ್ಪನೆಯೊಂದಿಗೆ ಅಭಿಯಾನ ರೂಪಿಸಲಾಗಿದೆ ಎಂದರು.
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಲು ಇಂತಹ ವ್ಯವಸ್ಥೆ ನೆರವಾಗಲಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ನಗರಗಳಿಗೆ ಕರೆದೊಯ್ಯುವ ಅಗತ್ಯವೂ ಕಡಿಮೆಯಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಣತಿ ಗಳಿಸಲು ಅವಕಾಶ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ವೈದ್ಯಕೀಯ ಕಾಲೇಜಿನೊಂದಿಗೆ ಸಂಶೋಧನಾ ಕೇಂದ್ರ, ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ವೃದ್ಧಾಪ್ಯ ಆರೈಕೆ ಕೇಂದ್ರಗಳನ್ನೂ ಸ್ಥಾಪಿಸಬೇಕು. ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಸೀಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.
ಸರ್ಕಾರಿ ಸ್ವಾಮ್ಯಕ್ಕೆ ಒತ್ತು
ವೈದ್ಯಕೀಯ ಕಾಲೇಜು ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಯಬೇಕು. ಅಗತ್ಯ ಅನುದಾನ, ವೈದ್ಯಕೀಯ ಸೌಲಭ್ಯ ಹಾಗೂ ಸಿಬ್ಬಂದಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಬೇಕು. ಹೋರಾಟ ರಾಜಕೀಯೇತರ ಮತ್ತು ಜಾತ್ಯತೀತ ನೆಲೆಯಲ್ಲಿ ಮುಂದುವರಿಯಬೇಕು ಎಂಬುದು ಸಮಿತಿಯ ನಿಲುವಾಗಿದೆ.
ಹಿರಿಯ ವೈದ್ಯಕೀಯ ಕಾಲೇಜು ಹೋರಾಟಗಾರ ದಿನೇಶ್ ಭಟ್ ಕೆ. ಮಾತನಾಡಿ, ಪುತ್ತೂರಿನಲ್ಲಿ ಉನ್ನತ ಆರೋಗ್ಯ ಸೇವೆಗಳ ಅಭಿವೃದ್ಧಿ ಅಗತ್ಯ ಎಂದರು. ಸುಳ್ಯ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ಭಾಗದ ಜನರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂಬುದು ಸಮಿತಿಯ ಆಶಯವಾಗಿದೆ.
ಸಭೆಯಲ್ಲಿ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
-
Uncategorized23 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ರಾಜಕೀಯ22 hours agoSiddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
-
ನಿಧನ ವಾರ್ತೆ23 hours agoSubramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ
-
ದಕ್ಷಿಣ ಕನ್ನಡ7 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಮಂಗಳೂರು23 hours agoDakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
-
ಅಂತರ ರಾಜ್ಯ5 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಸುಳ್ಯ7 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized6 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ


















