ದಕ್ಷಿಣ ಕನ್ನಡ
ಇಂದಿನಿಂದ ಕೃಷಿಯಂತ್ರ ಮೇಳ-2023 ಮತ್ತು ಕನಸಿನ ಮನೆ : ಹೇಗೆ ಸಿದ್ದಗೊಂಡಿದೆ ವಿವೇಕಾನಂದ ಇಂಜಿನೀಯರಿಂಗ್ ಕಾಲೇಜಿನ ಮೈದಾನ ? ಇಲ್ಲಿದೆ ಸಂಪೂರ್ಣ ಮಾಹಿತಿ
ಪುತ್ತೂರು: ಕೃಷಿಕರಿಗೆ ಹೊಸ ತಂತ್ರಜ್ಞಾನದ ಮಾಹಿತಿಯನ್ನು ನೀಡುವ ನಿಟ್ಟಿನಲ್ಲಿ ಕ್ಯಾಂಪ್ಕೋ ಸಂಸ್ಥೆ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಪುತ್ತೂರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಫೆ.10 ರಿಂದ 12 ರವರೆಗೆ ನಡೆಯುವ 5 ನೇ ಬೃಹತ್ ಕೃಷಿಯಂತ್ರ ಮೇಳ-2023 ಮತ್ತು ಕನಸಿನ ಮನೆ ಪ್ರದರ್ಶನಕ್ಕೆ ಎಲ್ಲ ಸಿದ್ಧತೆಗಳು ನಡೆಯುತ್ತಿದೆ.
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆವರಣದಲ್ಲಿ 224 ಸಾವಿರ ಚದರ ಅಡಿಯ ಮೈದಾನದಲ್ಲಿ 300 ಕ್ಕೂ ಅಧಿಕ ಮಳಿಗೆಗಳನ್ನು ಹಾಕಲಾಗಿದೆ. ಯಂತ್ರ ಮೇಳಕ್ಕೆ ಸಂಬಂಧಿಸಿದಂತೆ 140 ಮಳಿಗೆಗಳು ಮತ್ತು ಕನಸಿನ ಮನೆಗೆ ಸಂಬಂಧಪಟ್ಟ 83 ಮಳಿಗೆಗಳಿರಲಿದೆ. 10 ಅಟೋಮೊಬೈಲ್, 4 ನರ್ಸರಿ, 20 ಆಹಾರ ಮಳಿಗೆಗಳು ಮತ್ತು 20ವ್ಯಾಪಾರ ಮಳಿಗೆಗಳು ಸಿದ್ದವಾಗಿದೆ. ಸರ್ಕಾರದ ವಿವಿಧ ಇಲಾಖೆಗಳ ಬಗ್ಗೆ ಮಾಹಿತಿ ನೀಡುವ ಮಳಿಗೆಗಳು, ಬ್ಯಾಂಕ್ ಸಾಲಸೌಲಭ್ಯಗಳ ಮಳಿಗೆ, ಕ್ಯಾಂಪ್ಕೋ ಸಂಸ್ಥೆಯು ನಡೆದು ಬಂದ ದಾರಿಯನ್ನು ಪ್ರತಿಬಿಂಬಿಸುವ ವಿಶೇಷ ಮಳಿಗೆ ಇರಲಿದೆ.
ಜಿಲ್ಲೆಯ ಕೃಷಿ ಇಲಾಖೆ ಹಾಗೂ ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರ ಟ್ರಸ್ಟ್ ಇದರ ಸಂಯುಕ್ತಾಶ್ರಯದಲ್ಲಿ 20 ಸಾವಯವ ಸಿರಿ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಡ್ರೋನ್ ಮೂಲಕ ಅಡಿಕೆ ಮರಕ್ಕೆ ಮದ್ದು ಸಿಂಪಡಿಸುವುದನ್ನು ರೈತರಿಗೆ ಪ್ರಾತ್ಯಕ್ಷಿಕೆ ಮೂಲಕ ತೋರಿಸಲು ಕನಿಷ್ಟ 55 ಅಡಿ ಎತ್ತರದ ಅಡಿಕೆ ಮರಗಳನ್ನು ನೆಡಲಾಗುತ್ತದೆ. ಮಂಗಳೂರು ವಿಶ್ವವಿದ್ಯಾನಿಲಯ ಪ್ರಾಯೋಜಕತ್ವದಲ್ಲಿ ಪಾರಂಪರಿಂಕ ಮಾದರಿ ಗ್ರಾಮಗಳನ್ನು ನಿರ್ಮಾಣ ಮಾಡಿ ಇಲ್ಲಿ ಬುಟ್ಟಿ, ಮಣ್ಣಿನ ಮಡಿಕೆ, ಕತ್ತಿ ತಯಾರಿಕೆಯನ್ನು ಮಾಡಿ ಮಾರಾಟ ಮಾಡುವ ಕಾರ್ಯ ವಿಶೇಷವಾಗಿ ನಡೆಯಲಿದೆ.

ಅಡಿಕೆ ತೋಟದ ಒಳಗೆ ಸಾಮಾಗ್ರಿ ಸಾಗಣೆಗೆ ಬಳಸುವ ಬೈಕ್, ಬ್ಯಾಟರಿ ಚಾಲಿತ ಕೃಷಿ ಪರಿಕರಗಳು, ಸೋಲಾರ್ ಪಂಪ್, ಹೊಸ ಮನೆ ನಿರ್ಮಾಣ ಮಾಡುವ ಸಂದರ್ಭ ಬೇಕಾಗುವ ಎಲ್ಲಾ ಸಾಮಾಗ್ರಿಗಳ ಪ್ರದರ್ಶನ, ನೂತನವಾಗಿ ಕೃಷಿಕರು ಅವಿಷ್ಕಾರ ಮಾಡಿದ ಪರಿಕರಗಳು, ಕೃಷಿ ಚಟುವಟಿಕೆಯಲ್ಲಿ ಬಳಕೆಯಾಗುವ ನೂತನ ಯಂತ್ರಗಳ ಪರಿಚಯ ಜನರಿಗೆ ಯಂತ್ರಮೇಳದ ಮೂಲಕ ನಡೆಯಲಿದೆ.
ಪರಿಸರ ಸ್ನೇಹಿ ಅಲಂಕಾರ!
ಕೃಷಿ ಮೇಳದ ವೇದಿಕೆಯ ಸುತ್ತ ಮುತ್ತ ಪರಿಸರ ಸ್ನೇಹಿಯಾದ ವಸ್ತುಗಳಾದ ಅಡಿಕೆ ಹಾಳೆ, ತೆಂಗಿನ ಗರಿಗಳನ್ನು ಬಳಸಿಕೊಂಡು ಅಲಂಕಾರಿಕಾ ವಸ್ತುಗಳಿಂದ ಸಿಂಗರಿಸಲಾಗುತ್ತಿದೆ. ಗೂಡು ದೀಪ ಸೇರಿ ವಿವಿಧ ರೂಪಗಳನ್ನು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಸಿದ್ಧಪಡಿಸಿದ್ದು, ಇದು ವೇದಿಕೆಯ ಮೆರುಗು ಹೆಚ್ಚಿಸಲಿದೆ.

ಎರಡು ಗೋಷ್ಠಿ:
ಫೆ. 11 ರಂದು ಬೆಳಗ್ಗೆ 11 ಕ್ಕೆ ಅಡಿಕೆ ಬೆಳೆ ನಿರ್ವಹಣೆ ಮತ್ತು ರೋಗಗಳ ಹತೋಟಿ ಈ ವಿಷಯದ ಬಗ್ಗೆ ಐಸಿಎಆರ್-ಸಿಪಿಸಿಆರ್ಐ ಕಾಸರಗೋಡು ಬೆಳೆ ಸಂರಕ್ಷಣೆ ವಿಭಾಗ ಮುಖ್ಯಸ್ಥ ಡಾ.ವಿನಾಯಕ ಹೆಗ್ಡೆ ಮಾಹಿತಿಯನ್ನು ನೀಡಲಿದ್ದಾರೆ. ಫೆ. 12 ರಂದು ಬೆಳಗ್ಗೆ 11 ಕ್ಕೆ ಅಡಿಕೆ ಮತ್ತು ಇನ್ನಿತರ ತೋಟಗಾರಿಕಾ ಬೆಳೆಗಳೊಂದಿಗೆ ಅಂತರ ಬೆಳೆಯಾಗಿ ಔಷಧೀಯ ಸಸ್ಯಗಳು ಈ ವಿಚಾರವಾಗಿ ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಕಾರ್ಕಳ ಇದರ ಸಂಚಾಲಕ ಡಾ.ಸತ್ಯನಾರಾಯಣ ಭಟ್ ಕಾರ್ಕಳ ಮಾಹಿತಿ ನೀಡಲಿದ್ದಾರೆ.
ಸ್ವಯಂಸೇವಕರು – ಪಾರ್ಕಿಂಗ್:
ಪ್ರದರ್ಶನ ಪ್ರದೇಶದ ಸುತ್ತ ಮುತ್ತ ಒಟ್ಟು8 ಮೈದಾನಗಳನ್ನು ವಾಹನ ನಿಲುಗಡೆಗಾಗಿ ಗುರುತಿಸಲಾಗಿದ್ದು, 800 ಕ್ಕೂ ಅಧಿಕ ದ್ವಿಚಕ್ರ, ಚತುಶ್ಚಕ್ರ ಹಾಗೂ ದೊಡ್ಡ ವಾಹನಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಆರಕ್ಷಕ ಇಲಾಖೆಯ ಜತೆಯಲ್ಲಿ ಸುಮಾರು 150ವಿದ್ಯಾರ್ಥಿ ಸ್ವಯಂಸೇವಕರು ಮತ್ತು ಸಿಬ್ಬಂದಿಗಳು ಇದರ ಮೇಲ್ವಿಚಾರಣೆಯನ್ನು ನೋಡಿಕೊಳ್ಳುತ್ತಾರೆ.

ಸಾಂಸ್ಕೃತಿಕ ಕಾರ್ಯಕ್ರಮ:
ಫೆ. 10 ಮಧ್ಯಾಹ್ನ 3 ಕ್ಕೆ ವಿವೇಕಾನಂದ ವಿದ್ಯಾ ಸಂಸ್ಥೆಗಳ ಉಪನ್ಯಾಸಕರಿಂದ ಯಕ್ಷಗಾನ, ಸಾಯಂಕಾಲ 5 ಕ್ಕೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಇಶಾ ಸುಲೋಚನ ಅವರಿಂದ ನೃತ್ಯ, 6 ರಿಂದ ವಿದುಷಿ ಶಾಲಿನಿ ಆತ್ಮಭೂಷಣ್ ಅವರಿಂದ ನೃತ್ಯ ವೈಭವ ಕಾರ್ಯಕ್ರಮ ನಡೆಯಲಿದೆ. ಫೆ. 11 ರಂದು ಸಾಯಂಕಾಲ 5 ರಿಂದ ವಿವೇಕಾನಂದ ಸಿಬಿಎಸ್ಸಿ ಮತ್ತು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ವಿವೇಕ ವೈಭವ ಕಾರ್ಯಕ್ರಮ ನಡೆಯುತ್ತದೆ. ಫೆ. 12 ರಂದು ಮಧ್ಯಾಹ್ನ 3.30 ರಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ವಿವೇಕ ವೈಭವ ನಡೆಯಲಿದೆ. ಸಾಯಂಕಾಲ 6 ರಿಂದ ಪೂರ್ಣಿಮಾ ರೈ ಮತ್ತು ಬಳಗದವರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ.
ಕಾರ್ಯಕ್ರಮ ವಿವರ:
ಫೆ.10ರಂದು ಬೆಳಿಗ್ಗೆ 11.30ಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಪುತ್ತೂರು ಶಾಸಕ ಸಂಜೀವ ಮಠಂದೂರು ಭಾಗವಹಿಸಲಿದ್ದಾರೆ. ಪಾರಂಪರಿಕ ಮಾದರಿ ಗ್ರಾಮದ ಉದ್ಘಾಟನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಪಿ.ಸುಬ್ರಮಣ್ಯ ಯಡಪಡಿತ್ತಾಯ ನೆರವೇರಿಸಲಿದ್ದು, ಕೃಷಿಯಂತ್ರಗಳ ಮಳಿಗೆಗಳನ್ನು ಐಸಿಎಆರ್-ಸಿಪಿಸಿಆರ್ಐ ಕಾಸರಗೋಡು ನಿರ್ದೇಶಕ ಡಾ.ಕೆ.ಬಿ.ಹೆಬ್ಬಾರ್ ಉದ್ಘಾಟಿಸಲಿದ್ದಾರೆ.

ಕನಸಿನ ಮನೆ ವಿಭಾಗದ ಮಳಿಗಳನ್ನು ಪುತ್ತೂರು ನಗರಸಭೆಯ ಅಧ್ಯಕ್ಷ ಜೀವಂಧರ್ ಜೈನ್ ಉದ್ಘಾಟಿಸಲಿದ್ದಾರೆ .







ಶಿಕ್ಷಣ
Bappalige-ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಾಳೆ (ಅ.16) ಸಾರ್ವಜನಿಕ ಅಕ್ಷರಾಭ್ಯಾಸ ಕಾರ್ಯಕ್ರಮ
ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಪುತ್ತೂರು: ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಆ ಪ್ರಯುಕ್ತ ಸಾರ್ವಜನಿಕರಿಗೆ ತಮ್ಮ ಮಕ್ಕಳ ಅಕ್ಷರಾಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಅಕ್ಷರಾಭ್ಯಾಸ ಕಾರ್ಯಕ್ರಮವು ಬಪ್ಪಳಿಗೆಯಲ್ಲಿ, ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಉದ್ಘಾಟಿಸಿದ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಆಸಕ್ತರು ಪಾರಂಪರಿಕ ಉಡುಗೆಗಳೊಂದಿಗೆ ತಮ್ಮ ಮಕ್ಕಳನ್ನು ಕರೆತಂದು ಅಕ್ಷರಾಭ್ಯಾಸ ನಡೆಸಬಹುದಾಗಿ ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮಗಳು
Piligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ನ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಮಂಗಳೂರು
Sudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ.
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಖಾಕಿ ತೊಡುವಾಗಲೇ ದೇಶದ ರಕ್ಷಣೆಗಾಗಿ ಪಣ ತೊಡುತ್ತೇವೆ. ಆದರೆ, ದೇಶಪ್ರೇಮ ಹಾಗೂ ‘ಭಾರತ್ ಮಾತಾ ಕೀ ಜೈ’ ಘೋಷಣೆಯನ್ನು ಗುರಾಣಿಯನ್ನಾಗಿ ಹಿಡಿದು ಯಾರು ಕೂಡ ಕಾನೂನು ವಿರೋಧಿ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ದೇಶದ ಪರ ಜೈಕಾರ ಹಾಕುವುದು ಹಾಗೂ ಆ ಮೂಲಕ ತಾವು ಮಾಡಿರುವ ತಪ್ಪನ್ನು ಮುಚ್ಚಿಹಾಕಲು ಯತ್ನಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವುದರಿಂದ ದೇಶಕ್ಕೆ ಯಾವುದೇ ಗೌರವ ಸಲ್ಲಿಸಿದಂತಾಗುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ನಡೆಸುವುದಕ್ಕೆ ನಾವು ಯಾವುದೇ ನಿಷೇಧ ಹೇರಿರಲಿಲ್ಲ. ಬದಲಿಗೆ ಸ್ಥಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕೆಲವು ಕಡ್ಡಾಯ ಷರತ್ತುಗಳನ್ನು ವಿಧಿಸಿದ್ದೆವು. ಆದರೆ ಸಂಬಂಧಪಟ್ಟ ವಿದ್ಯಾರ್ಥಿಗಳು ಪ್ರತಿಭಟನೆಗೆ ಪೂರ್ವಾನುಮತಿ ತೆಗೆದುಕೊಂಡಿರಲಿಲ್ಲ. ಅಥವಾ ಪೊಲೀಸರಿಗೆ ಯಾವುದೇ ಅಧಿಕೃತ ಮಾಹಿತಿಯನ್ನೂ ನೀಡಿರಲಿಲ್ಲ. ಆದರೂ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ವಿರುದ್ಧ ಯಾವುದೇ ಕಠಿಣ ಕ್ರಮ ಜರುಗಿಸಿರಲಿಲ್ಲ ಎಂದು ತಿಳಿಸಿದ್ದಾರೆ.
“ಆದರೆ ಸ್ಥಳೀಯರಲ್ಲದೆ ಹೊರಗಡೆಯಿಂದ ಬಂದ ವ್ಯಕ್ತಿಗಳು ಪ್ರತಿಭಟನೆಗೆ ಇಳಿದಾಗ ಮತ್ತು ಕಾಲೇಜು ಆಡಳಿತ ಮಂಡಳಿಯಿಂದ ಈ ಬಗ್ಗೆ ದೂರು ಬಂದಾಗ ಪೊಲೀಸರು ಸುಮ್ಮನಿರಲು ಸಾಧ್ಯವಿಲ್ಲ. ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರುವ ಆತಂಕವಿದ್ದ ಕಾರಣ ಅಲ್ಲಿದ್ದ ಕೆಲವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಮುಂದೆಯೂ ಇಂತಹ ಕೃತ್ಯಗಳಲ್ಲಿ ತೊಡಗಬಾರದೆಂದು ಮುನ್ನೆಚ್ಚರಿಕೆಗಾಗಿ ಬಾಂಡ್ ಬರೆದುಕೊಡುವಂತೆ ಕೋರಲಾಗಿತ್ತು. ಆದರೆ ವಿದ್ಯಾರ್ಥಿಗಳ ಮನವಿ ಹಾಗೂ ಅವರ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ಅಡಚಣೆಯಾಗಬಾರದೆಂಬ ಕಾರಣಕ್ಕೆ ಅಂತಿಮವಾಗಿ ಆ ರೀತಿಯ ಯಾವುದೇ ಬಾಂಡ್ ಪಡೆದಿರಲಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.
-
ಸ್ಥಳೀಯ12 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಪ್ರಕರಣ: ರವಿ ಪೂಜಾರಿ ಬಂಧನ, ಇಬ್ಬರು ಶಂಕಿತರ ವಿಚಾರಣೆ
-
ಅಪರಾಧ10 hours agoB.R. Shetty-ಬ್ಯಾಂಕ್ ಆಫ್ ಬರೋಡಾ ವಿರುದ್ಧ ಯುಎಇ ಎಕ್ಸ್ಚೇಂಜ್ ಸಂಸ್ಥೆಗಳ ಸ್ಥಾಪಕ ಬಿ.ಆರ್. ಶೆಟ್ಟಿ ಕಾನೂನು ಸಮರ; ₹1.25 ಲಕ್ಷ ಕೋಟಿ ಪರಿಹಾರ ಬೇಡಿಕೆ
-
ರಾಜಕೀಯ5 hours agoH.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ
-
ಅಪರಾಧ6 hours agoPuttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು
-
ಬಿಗ್ ನ್ಯೂಸ್12 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್
-
ಅಂತರ ರಾಜ್ಯ12 hours agoMurder case-ಮೀರತ್ ಬ್ಲೂ ಡ್ರಮ್ ಕೊಲೆ ಪ್ರಕರಣ: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ಗೆ ಗಲ್ಲು ಶಿಕ್ಷೆ..!
-
ಮಂಗಳೂರು6 hours agoSudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
-
ರಾಜಕೀಯ10 hours agoAmal Ramachandra-ಒಳ್ಳೆಯ ರೀತಿಯಲ್ಲಿ ಬೆಳೆವಿಮೆ ಬಂದರೆ ಮೋದಿಯಿಂದಾಗಿ ಎಂದು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಈಗ ಕಾಂಗ್ರೆಸ್ ನ್ನು ದೂರುತ್ತಿದೆ..! ಟರ್ಮ್ ಶೀಟ್ ಬದಲಾವಣೆ ಮಾಡಿದ್ದು ಬಿಜೆಪಿ ಈ ಬಗ್ಗೆ ದಾಖಲೆಯಿದೆ; ಅಶೋಕ್ ರೈ ಹುಟ್ಟಿಸಿದ ಲಿಸ್ಟ್ ಕೊಡ್ತೇನೆ 8 ವರ್ಷಗಳಲ್ಲಿ ಬೆಳ್ತಂಗಡಿಯಲ್ಲಿ ಪೂಂಜಾ ಹುಟ್ಟಿಸಿದ್ದೇನೂ..? ಪುಡಾ ಅಧ್ಯಕ್ಷ ಅಮಳ ರಾಮಚಂದ್ರ


















