Connect with us

ಸುಳ್ಯ

ಮದುವೆ ಹಾಲ್‌ ಗೆ ಆಗಮಿಸದ ಪುತ್ತೂರಿನ ಮದುಮಗ  – ವರನಿಲ್ಲದೇ ಸುಳ್ಯದ ಯುವತಿಯ ಮದುವೆ ರದ್ದು – ಅಷ್ಟಕ್ಕೂ ವರ ಕೊನೆ ಕ್ಷಣದಲ್ಲಿ ಕೈಕೊಟ್ಟದ್ದು ಯಾಕೇ ಗೊತ್ತೆ ?

Published

on



Ad Widget

Ad Widget

Ad Widget

Ad Widget

ಸುಳ್ಯ : ಫೆ 10  ಮೂಹೂರ್ತದ ವೇಳೆ ಮದು ಮಗ ಛತ್ರಕ್ಕೆ ಆಗಮಿದೇ ಕೈ ಕೊಟ್ಟು  ಪೂರ್ವ ನಿಗದಿಯಾಗಿದ್ದ ವಿವಾಹ ರದ್ದುಗೊಂಡ ಘಟನೆ ಫೆ 9 ರಂದು ಸುಳ್ಯದಲ್ಲಿ ನಡೆದಿದೆ. ವರನ ಮೊದಲ ಪತ್ನಿ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದೇ ವರ ಬಾರದಿರಲು ಕಾರಣ ಎಂದು ಹೇಳಲಾಗುತ್ತಿದೆ

Ad Widget

Ad Widget

Ad Widget

Ad Widget

ಪುತ್ತೂರು ತಾಲೂಕು ರೆಂಜ ಗ್ರಾಮದ ಗುಮ್ಮಟಗದ್ದೆಯ ಕೃಷ್ನ ಎಂಬ ಯುವಕನೊಂದಿಗೆ  ಸುಳ್ಯ ತಾಲೂಕಿನ ಉಬರಡ್ಕದ ಯುವತಿಯ ವಿವಾಹ ನಿಗದಿಯಾಗಿತ್ತು.  ಗುರುವಾರ  ಕೆವಿಜಿ ಪುರಭವನದಲ್ಲಿ ವಿವಾಹ ಕಾರ್ಯಕ್ರಮ ನಡೆಸಲು ಹಾಲ್‌ ಬುಕ್‌ ಮಾಡಲಾಗಿತ್ತು.

Ad Widget

Ad Widget

Ad Widget alt="Ad Widget"/>

Ad Widget

ವರನ ಕಡೆಯವರು ಬಂದು ಹಾಲ್‌ ಅಲಂಕರಿಸಿದ್ದರು. ವಧುವಿನ ಕಡೆಯವರು  ವಧುವಿನೊಂದಿಗೆ  ಹಾಲ್‌ ಆಗಮಿಸಿದ್ದರು . ಸುಮಾರು 500 ಜನಕ್ಕೆ ಊಟದ ವ್ಯವಸ್ಥೆ ಕೂಡ ಮಾಡಲಾಗಿತ್ತು. ಆದರೇ ಹಾಲ್‌ ಗೆ ಆಗಮಿಸಬೇಕಿದ್ದ ವರ ತನ್ನ ಕಡೆಯವರೆಗೂ ಸ್ಪಷ್ಟ ಮಾಹಿತಿ ಒದಗಿಸದೇ ನಾಪತ್ತೆಯಾಗಿದ್ದ.

Ad Widget

Ad Widget <> Ad Widget

ಆತನ ಮೊಬೈಲ್‌ ಕೂಡ ಸ್ವಿಚ್‌ ಆಫ್‌ ಆಗಿತ್ತು. ಹೀಗಾಗಿ ದಲಿತ ಮುಖಂಡೆ ಸರಸ್ವತಿಯವರ ಮೂಲಕ ಸುಳ್ಯ ಠಾಣೆಗೆ ವಿಷಯ ಮುಟ್ಟಿಸಲಾಯಿತು.ಈ ವೇಳೆ ವರನಿಗೆ ಮೊದಲೇ ವಿವಾಹ ವಾಗಿರುವ ವಿಚಾರ ಬೆಳಕಿಗೆ ಬಂದಿದೆ.



Ad Widget

 ವರನಿಗೆ ಈ ಹಿಂದೆ ಮದುವೆಯಾಗಿದ್ದು ಆತ ಎರಡನೇ ಮದುವೆಯಾಗುವ ಮಾಹಿತಿ ಪಡೆದ ಪತ್ನಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ವರ ನಾಪತ್ತೆಯಾಗಿದ್ದಾನೆಂದು ತಿಳಿದ ವಧುವಿನ ಕಡೆಯವರು ಸಭಾಂಗಣದಿಂದ ತೆರಳಿದ್ದಾರೆ ಸಿದ್ದಪಡಿಸಲಾಗಿದ್ದ ಊಟವನ್ನು ವಸತಿ ನಿಲಯಗಳಿಗೆ ನೀಡಲಾಯಿತು ಎಂದು ತಿಳಿದು ಬಂದಿದೆ

Click to comment

Leave a Reply

ಸುಳ್ಯ

ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget alt="Ad Widget"/>

Ad Widget

ನವದೆಹಲಿ: ನಿಷೇಧಿತ ಪ್ರದೇಶವಾದ ಜಂತರ್ ಮಂತರ್ ಪ್ರವೇಶಿಸಿ, ಪೊಲೀಸ್ ಬ್ಯಾರಿಕೇಡ್ ಉಲ್ಲಂಘಿಸಿದ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget <> Ad Widget


ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಾಯಕರು ಮಂಗಳವಾರ ಮುಂಜಾನೆ ಜಂತರ್ ಮಂತರ್ ಬಳಿ ಪ್ರತಿಭಟನೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ಭೇದಿಸಿ ಒಳಪ್ರವೇಶಿಸಿದ ಅವರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿತ್ತು.



Ad Widget


ಬಂಧಿತ ನಾಯಕರನ್ನು ಇಂದು (ಬುಧವಾರ) ವಿಶೇಷ ಕಾರ್ಯಕಾರಿ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಬಳಿಕ ಅವರನ್ನು ತಿಹಾರ್ ಜೈಲಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ad Widget

Ad Widget


ಪೊಲೀಸರ ವಿರುದ್ಧ ಸಿಜೆಪಿ ಆರೋಪ:
ಸಿಜೆಪಿ ಕಾನೂನು ಘಟಕದ ಮುಖ್ಯಸ್ಥೆ ರತ್ನಾ ಸಿಂಗ್ ಅವರು ‘ಎಕ್ಸ್’ (ಟ್ವಿಟರ್) ಮೂಲಕ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.


“ಜಂತರ್ ಮಂತರ್ ಘಟನೆಗೆ ಸಂಬಂಧಿಸಿದಂತೆ ನಮ್ಮ ನಾಯಕರಾದ ಸೌರವ್ ದಾಸ್, ಅಶುತೋಷ್ ಹಾಗೂ ಅಜಿಂಕ್ಯ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಅವರ ಮೇಲೆ ಅಕ್ರಮ ಪ್ರವೇಶ, ಬಾಂಡ್ ಉಲ್ಲಂಘನೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ತಡರಾತ್ರಿಯವರೆಗೂ ವಕೀಲರನ್ನು ಭೇಟಿ ಮಾಡಲು ಪೊಲೀಸರು ಅವಕಾಶ ನೀಡಿರಲಿಲ್ಲ.

ಮುಂಜಾನೆ 3 ಗಂಟೆ ಸುಮಾರಿಗೆ ಖಾಸಗಿ ವ್ಯಾನ್ ಮೂಲಕ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆಗೆ ಕರೆತರಲಾಗಿದೆ. ಈ ಎಲ್ಲ ಕಾನೂನುಬಾಹಿರ ಕ್ರಮಗಳ ನಡುವೆಯೂ ನಮ್ಮ ನಾಯಕರ ನೈತಿಕ ಸ್ಥೈರ್ಯ ಕುಗ್ಗಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಹಿನ್ನೆಲೆ ಏನು?
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಿಜೆಪಿ ಹಾಗೂ ಇತರ ಕೆಲವು ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆಗಳನ್ನು ತೀವ್ರಗೊಳಿಸಿವೆ. ಈ ಹಿನ್ನೆಲೆಯಲ್ಲಿ ರಾಜಧಾನಿಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.


ಕಳೆದ ಅಕ್ಟೋಬರ್ 11ರಂದು ನೂತನ ಆದೇಶ ಹೊರಡಿಸಿದ್ದ ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಅವರು, ಯಾವುದೇ ಧರಣಿ ಮತ್ತು ಪ್ರತಿಭಟನೆಗಳಿಗೆ ಕೇವಲ ರಾಮ್‌ಲೀಲಾ ಮೈದಾನ, ಬುರಾರಿ ಗ್ರೌಂಡ್ ಹಾಗೂ ಸಿಬಿಡಿ ಗ್ರೌಂಡ್‌ಗಳನ್ನು ಮಾತ್ರ ನಿಗದಿಪಡಿಸಿದ್ದರು. ಈ ಆದೇಶದ ಅನ್ವಯ ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಡಲಾಗಿದ್ದು, ಅಲ್ಲಿ ಜಮಾವಣೆಯನ್ನು ನಿಷೇಧಿಸಲಾಗಿದೆ. ನಿಷೇಧದ ನಡುವೆಯೂ ಪ್ರತಿಭಟನೆ ನಡೆಸಿದ್ದರಿಂದ ಈ ಬಂಧನ ಕಾರ್ಯಾಚರಣೆ ನಡೆದಿದೆ.

Ad Widget
Continue Reading

ನಿಧನ ವಾರ್ತೆ

Kalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು

Published

on



Ad Widget

Ad Widget

Ad Widget

Ad Widget

ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕಲ್ಮಡ್ಕ: ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕಲ್ಮಡ್ಕದ ಬೊಮ್ಮೆಟ್ಟಿ ನಿವಾಸಿಗಳಾದ ಬಾಬು–ಸೀತಾ ದಂಪತಿಯ ಪುತ್ರ ಭರತ್ (28) ಹಾಗೂ ಭರತ್ ಅವರ ಸಹೋದರಿ ಭವ್ಯಾ ಅವರ ಪತಿ, ಬೆಳ್ತಂಗಡಿ ತಾಲೂಕಿನ ಮುಂಗೆಲು ನಿವಾಸಿಗಳಾದ ವೀರಪ್ಪ–ಸೀತಮ್ಮ ದಂಪತಿಯ ಪುತ್ರ ರಮೇಶ್ (34) ಮೃತಪಟ್ಟವರು. ಗಾಯಗೊಂಡ ಯುವಕನನ್ನು ಅವರ ಸಂಬಂಧಿ ಸಿಂಚನ್ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅ.12ರಂದು ರಾತ್ರಿ ಸುಮಾರು 10.30ರ ವೇಳೆಗೆ ಭರತ್, ರಮೇಶ್ ಹಾಗೂ ಸಿಂಚನ್ ಅವರು ಮನೆಯಿಂದ ಸುಮಾರು ಒಂದೂವರೆ ಕಿ.ಮೀ. ದೂರದಲ್ಲಿರುವ ತೋಡಿಗೆ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ. ತೋಡಿನ ಮೇಲ್ಭಾಗದಲ್ಲಿ ತಂತಿ ಅಳವಡಿಸಿ ಅದಕ್ಕೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು ಎಂದು ತಿಳಿದುಬಂದಿದೆ.



Ad Widget

ಈ ತಂತಿಯನ್ನು ದಾಟುವ ವೇಳೆ ಭರತ್ ಮತ್ತು ರಮೇಶ್ ಅವರಿಗೆ ವಿದ್ಯುತ್ ಸ್ಪರ್ಶಿಸಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರೊಂದಿಗೆ ಇದ್ದ ಸಿಂಚನ್ ಅವರಿಗೂ ವಿದ್ಯುತ್ ತಗುಲಿ ಎಸೆಯಲ್ಪಟ್ಟಿದ್ದು, ಕೈ, ಎದೆ ಹಾಗೂ ಕಾಲುಗಳಿಗೆ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Ad Widget

Ad Widget

ಘಟನೆಯ ಬಳಿಕ ತಂತಿ ಅಳವಡಿಸಿದ್ದ ಮನೆಯವರಿಗೆ ವಿಷಯ ತಿಳಿದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಸಿಂಚನ್ ಅವರನ್ನು ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಷಯ ತಿಳಿದು ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

Ad Widget
Continue Reading

ನಿಧನ ವಾರ್ತೆ

Sullia-Big Breaking: ಸುಳ್ಯ: ವಿದ್ಯುತ್ ಶಾಕ್‌ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ

Published

on



Ad Widget

Ad Widget

Ad Widget

Ad Widget

ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget

Ad Widget

Ad Widget

Ad Widget

ಸುಳ್ಯ: ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಬೊಮ್ಮೆಟ್ಟಿ ನಿವಾಸಿಗಳಾದ ಗಣೇಶ್ ಹಾಗೂ ಭರತ್ ಎಂದು ಗುರುತಿಸಲಾಗಿದೆ. ತಡರಾತ್ರಿ ಸಂಭವಿಸಿದ ಈ ದುರಂತದಿಂದ ಸ್ಥಳೀಯರಲ್ಲಿ ಆತಂಕ ಹಾಗೂ ಶೋಕದ ವಾತಾವರಣ ನಿರ್ಮಾಣವಾಗಿದೆ.

Ad Widget

Ad Widget <> Ad Widget

ವಿದ್ಯುತ್ ಶಾಕ್ ತಗುಲಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading