ಮಂಗಳೂರು
ಅಡಿಕೆ ಬೆಳೆಗಾರರ ಕಾವಲುಗಾರ ಕ್ಯಾಂಪ್ಕೊಗೆ ಸುವರ್ಣ ಸಂಭ್ರಮ – ಇಲ್ಲಿದೆ ನಡೆದು ಬಂದ ಹಾದಿ
ಪುತ್ತೂರು : ಫೆ 10 ; ನ್ಯಾಯಯುತ ವ್ಯವಹಾರ(Fair Deal)ಎಂಬ ಘೋಷವಾಕ್ಯ ಇಟ್ಟುಕೊಂಡು ಕರ್ನಾಟಕ ಮತ್ತು ಕೇರಳ ಅಡಿಕೆ ಬೆಳೆಗಾರರಿಗೆ ಅವರ ಸಂಕಷ್ಟದ ಕಾಲದಲ್ಲಿ ಆಶಾಕಿರಣವಾಗಿ ಮೂಡಿಬಂದ ಬಹು ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ. 1973 ರ ಜುಲೈ 11 ರಂದು ಸಹಕಾರಿ ರತ್ನ ಸುಬ್ರಾಯ ಭಟ್ಟರು ನೆಟ್ಟ ಸಸಿ ಇಂದು ಹೆಮ್ಮರವಾಗಿ ಬೆಳೆದಿದೆ. ಅಡಿಕೆ ಬೆಳೆಗಾರರ ಹಿತ ರಕ್ಷಣೆಯೇ ಕ್ಯಾಂಪ್ಕೋದ ಮುಖ್ಯ ಉದ್ದೇಶ, ಅದಕ್ಕಾಗಿಯೇ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನವನ್ನು ಸ್ಥಾಪಿಸಿ ಅಡಿಕೆಯ ಪರ್ಯಾಯ ಉಪಯೋಗದ ಅನ್ವೇಷನೆಗೆ ಶ್ರಮಿಸುತ್ತಿದೆ.
ಕೊಕ್ಕೊ ಖರೀದಿಯನ್ನು ಬಹುರಾಷ್ಟ್ರೀಯ ಕಂಪೆನಿಗಳು ನಿಲ್ಲಿಸಿದಾಗ ಕ್ಯಾಂಪ್ಕೊ ಕೊಕ್ಕೊ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಲು 1979ರಲ್ಲಿ ಕೊಕ್ಕೊ ಖರೀದಿ ಪ್ರಾರಂಭಿಸಿತು. ಮುಂದೆ1986ರಲ್ಲಿ ಪುತ್ತೂರಿನಲ್ಲಿ ಚಾಕಲೇಟ್ ಕಾರ್ಖಾನೆಯನ್ನು ಸ್ಥಾಪಿಸಿ ಕೊಕ್ಕೊ ಬೆಳೆಗಾರರ ಹಿತ ರಕ್ಷಣೆ ಮಾಡುವುದರ ಮೂಲಕ ಬಹುರಾಷ್ಟ್ರೀಯ ಕಂಪೆನಿಗಳ ಏಕಸೌಮ್ಯಕ್ಕೆ ಬಲವಾದ ಪೆಟ್ಟು ನೀಡಿದೆ ̤ .2010ರಲ್ಲಿ ರಬ್ಬರ್ ಬೆಳೆಗಾರರಿಗಾಗಿ ರಬ್ಬರ್ ಖರೀದಿ ಪ್ರಾರಂಬಿಸಿ ರೈತರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಶ್ರಮಿಸುತ್ತಿದೆ.2016 ರಲ್ಲಿ ಕಾಳುಮೆಣಸು ಖರೀದಿ ಮತ್ತು ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ತೆಂಗಿನಕಾಯಿ ಎಣ್ಣೆಯ ಉತ್ಪಾದನೆಯನ್ನು ಪ್ರಾರಂಭ ಮಾಡಿದೆ.
ಹೀಗೆ ತನ್ನ ಕೊಂಬೆಗಳನ್ನು ವಿವಿಧ ಮಗ್ಗುಲಗಳಿಗೆ ವಿಸ್ತರಿಸುವ ಮೂಲಕ ಕ್ಯಾಂಪ್ಕೋ ರೈತರ ಬಾಳಿನ ಕಲ್ಪವೃಕ್ಷವಾಗಿ ಅವರ ಹಿತವನ್ನು ಕಾಪಾಡುವಲ್ಲಿ ಯಶಸ್ಸು ಕಂಡಿದೆ. ಅಡಿಕೆ ಬೆಳೆಗಾರರನ್ನು ಮಿಶ್ರಬೆಳೆ ಕೃಷಿಯಲ್ಲಿ ತೊಡಗಿಸಲು ಪ್ರೇರಣೆ ನೀಡುವುದರ ಮೂಲಕ ರೈತರನ್ನು ಆರ್ಥಿಕ ಸದೃಢರನ್ನಾಗಿಸಿದೆ. 2005ರಲ್ಲಿ ಸರಕಾರದ ಷೇರನ್ನು ಹಿಂತಿರುಗಿಸಿದ ನಂತರ ಸದೃಢವಾಗಿ ಬೆಳೆಯುತ್ತಿರುವ ಸಂಸ್ಥೆ ಸುಮಾರು 1.32 ಲಕ್ಷ ಸದಸ್ಯರ ಹಿತ ಕಾಯುವ ಕಾವಲುಗಾರ.

ಪ್ರಾರಂಭದಲ್ಲಿ ಮಂಗಳೂರಿನಲ್ಲಿ ಖರೀದಿ ಕೇಂದ್ರ ಆರಂಭಿಸಿದ ಸಂಸ್ಥೆ, ಇಂದು ಕರ್ನಾಟಕ ಮತ್ತು ಕೇರಳದಲ್ಲಿ 100ಕ್ಕಿಂತಲೂ ಹೆಚ್ಚು ಶಾಖೆಗಳನ್ನು ತೆರದು ಅಡಿಕೆ,ಕೊಕ್ಕೊ,ರಬ್ಬರ್ ಮತ್ತು ಕಾಳು ಮೆಣಸು ಖರೀದಿಸುತ್ತಿದೆ. ಉತ್ತರ ಭಾರತದಲ್ಲಿ 16 ಮಾರಾಟ ಮಳಿಗೆಗಳನ್ನು ನಡೆಸುತ್ತಿರುವ ಮೂಲಕ ರೈತರು ಮತ್ತು ಗ್ರಾಹಕರ ಮಧ್ಯೆ ಬೆಸುಗೆಯನ್ನು ಬೆಸೆದು ಇಬ್ಬರಿಗೂ ದರ ಮತ್ತು ಗುಣಮಟ್ಟದಲ್ಲಿ ಭರವಸೆಯ ಭಾವ ಮೂಡಿಸಿದ. ಉತ್ತಮ ಗುಣಮಟ್ಟದ ಕೊಕ್ಕೊ ಉತ್ಪನ್ನಗಳನ್ನು ತಯಾರಿಸಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆದಿದೆ.ಅದಕ್ಕಾಗಿ ಹತ್ತು ಹಲವು ಪ್ರಶಸ್ತಿಗಳನ್ನು ತನ್ನ ಮುಡಿಗೆರಿಸಿದೆ.
ಸಂಸ್ಥೆಯೂ ಸ್ಥಳೀಯ ಯುವಕರಿಗೆ ಉದ್ಯೋಗವನ್ನು ನೀಡಿ ಆತ್ಮ ನಿರ್ಭರ ಭಾರತ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ.ಉತ್ತರ ಕರ್ನಾಟಕಲ್ಲಿ ಪವನಯಂತ್ರ ಮತ್ತು ಪುತ್ತೂರಿನಲ್ಲಿ ಸೌರ ಶಕ್ತಿಯ ಮೂಲಕ ಗ್ರೀನ್ ಎನರ್ಜಿಗೆ ಒತ್ತು ನೀಡಿದೆ. ಕಾರ್ಖಾನೆಗೆ ಬೇಕಾದ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದ ಕ್ಯಾಂಪ್ಕೊ ಪರಿಸರ ಸ್ನೇಹಿ ಸಂಸ್ಥೆ. ಬಹುಕೋಟಿ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಲ್ಪಟ್ಟ ಆಡಳಿತ ಕಚೇರಿಯನ್ನು ಹೊಂದಿರುವ ಚಾಕಲೇಟ್ ಕಾರ್ಖಾನೆ, ಬಹುರಾಷ್ಟ್ರೀಯ ಕಂಪೆನಿ ಶೈಲಿಯಲ್ಲಿ ಕಾರ್ಯನಿರ್ವಹಿಸುವ ರೈತರಿಂದ ಸ್ಥಳಿಯವಾಗಿ ಪ್ರಾರಂಭವಾದ ಒಂದು ಹೆಮ್ಮೆಯ ಸ್ವದೇಶಿ ಸಹಕಾರಿ ಸಂಸ್ಥೆ.

ಕಾರ್ಖಾನೆ ಪ್ರಾರಂಭದ ದಿನಗಳಲ್ಲಿ ನಿಯೋಜಿಸಿರುವ ಯಂತ್ರಗಳಿಂದಲೇ ಪ್ರಸ್ತುತ ಉತ್ಪನ್ನಗಳ ಉತ್ಪಾದನೆಯನ್ನು ನಡೆಸುತ್ತಿದೆ. ಸ್ಥಾಪಕ ಅಧ್ಯಕ್ಷರು ತುಂಬಾ ಗುಣಮಟ್ಟದ ಯಂತ್ರಗಳನ್ನು ವಿದೇಶದಿಂದ ಆಮದು ಮಾಡಿ ನಿಯೋಜನೆ ಮಾಡಲಾಗಿತ್ತು.ಆದ್ದರಿಂದಲೇ ಮಾನ್ಯತೆ ಸಮಯ ಮೀರಿದರೂ ಯಾವುದೇ ತಾಂತ್ರಿಕ ತೊಂದರೆ ಇಲ್ಲದೆ ಅದು ಕಾರ್ಯನಿರ್ವಹಿಸುತ್ತಿದೆ. ಮುಂದಿನ 5 ವರ್ಷಗಳಲ್ಲಿ ಸುಮಾರು 100 ಕೋಟಿಗಳಷ್ಟು ಹಣ ಹೂಡಿಕೆ ಮಾಡಿ ಹಳೆಯ ಯಂತ್ರಗಳನ್ನು ಬದಲಿಸಿ ಹೊಸ ಯಂತ್ರಗಳನ್ನು ನಿಯೋಜಿಸುವ ಕ್ರಾಂತಿಕಾರಕ ಯೋಜನೆಯನ್ನು ಆಡಳಿತ ಮಂಡಳಿ ಕೈಗೆತ್ತಿಕೊಂಡಿದೆ.
ಅಡಿಕೆ ಮತ್ತು ಕಾಳುಮೆಣಸುಗಳ ಶೇಖರಣೆ ಮತ್ತು ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ದೃಷ್ಟಿಯಿಂದ ಪುತ್ತೂರಿನ ಕಾವು,ಸಾಗರ ಮತ್ತು ಭದ್ರಾವತಿಗಳಲ್ಲಿ ಬಹು ಉದ್ದೇಶ ಮತ್ತು ಬಹು ಸೌಲಭ್ಯಗಳುಳ್ಳ ಸರ್ವ ಋತುಗಳಲ್ಲೂ ಕಾರ್ಯನಿರ್ವಹಿಸಲು ಯೋಗ್ಯವಾದ ಗೋದಾಮ್ ಗಳನ್ನು ನಿರ್ಮಾಣ ಮಾಡಲಾಗಿದೆ.
ಕ್ಯಾಂಪ್ಕೊದ ಚಿತ್ತ ಸದಸ್ಯರ ಆರೋಗ್ಯದತ್ತ ಯೋಜನೆಯಲ್ಲಿ ಆನಾರೋಗ್ಯ ಪೀಡಿತ ಸಕ್ರೀಯ ಸದಸ್ಯರ ಚಿಕಿತ್ಸಗೆ ಧನ ಸಹಾಯ ಹಾಗೂ ಮೃತ ಸದಸ್ಯ ಮತ್ತು ಕೂಲಿಗಾರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಮೂಲಕ ರೈತ ಕುಟುಂಬಕ್ಕೆ ಆರ್ಥಿಕ ಭದ್ರತೆ ನೀಡುತ್ತಿದೆ.

ಕ್ಯಾಂಪ್ಕೊ ಓನ್ ವ಼ೀಲ್ ಮೂಲಕ ಮನೆ ಮನೆಯಿಂದ ಅಡಿಕೆ ಖರೀದಿಸುವ ಯೋಜನೆ,ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ,ಕೌಶಲ್ಯ ತರಬೇತಿ ಕಾರ್ಯಾಗಾರದ ಮೂಲಕ ರೈತರ ತಾಂತ್ರಿಕ ಉನ್ನತೀಕರಣ,ಕೃಷಿ ಯಂತ್ರಮೇಳದ ಮೂಲಕ ಯಾಂತ್ರೀಕರಣಕ್ಕೆ ಉತ್ತೇಜನ,ಅಡಿಕೆಯ ಪರ್ಯಾಯ ಉಪಯೋಗದ ಸಂಶೋಧನೆಗೆ ಪ್ರೋತ್ಸಾಹ,ಗಳಿಸಿದ ಲಾಭದ ವಿತರಣೆ ಮತ್ತು ಮಾರಾಟ ಮಾಡಿದ ಉತ್ಪನ್ನಕ್ಕೆ ಪ್ರೋತ್ಸಾಹ ಧನದ ಘೋಷಣೆ ಮೂಲಕ ರೈತರಿಗೆ ಉತ್ತಮ ಸೇವೆ ನೀಡುವ ಕಾರ್ಯವನ್ನು ಸಂಸ್ಥೆ ಮಾಡುತ್ತಿದೆ.ಉದ್ಯೋಗಿಗಳಿಗೆ ಉತ್ತಮವಾದ ಬೋನಸ್ ಘೋಷಣೆ ಮಾಡುವ ಮೂಲಕ ಸಂಸ್ಥೆಯ ಬೆಳವಣಿಗೆಯಲ್ಲಿ ಅವರ ಕೊಡುಗೆಯನ್ನು ಗುರುತಿಸಿ ಪ್ರೋತ್ಸಾಹಿಸಿದೆ.ಕೋರೋನಾ ಮತ್ತು ಇತರ ಪ್ರಕೃತಿ ವಿಕೋಪಗಳ ಸಂದರ್ಭಗಳಲ್ಲಿ ಕ್ಯಾಂಪ್ಕೋ ಸರಕಾರದ ಸೇವಾ ಕಾರ್ಯಕ್ರಮಗಳಲ್ಲಿ ಕೈಜೋಡಿಸುವ ಮೂಲಕ ತನ್ನ ಸಾಮಾಜಿಕ ಬದ್ಧತೆಯನ್ನು ಮೆರೆದಿದೆ.
ಕೊಳೆರೋಗ,ಹಳದಿ ಎಲೆ ರೋಗದ ಸಮಸ್ಯೆ,ಎಲೆಚುಕ್ಕಿ ರೋಗ ಮುಂತಾದ ಹತ್ತು ಹಲವು ಸಮಸ್ಯೆಗಳು ಅಡಿಕೆ ಕೃಷಿ ಮತ್ತು ಕೃಷಿಕರನ್ನು ಬಾಧಿಸುತ್ತಿದೆ.ಮಾರುಕಟ್ಟೆಗೆ ಸಂಬಂಧಿಸಿದಂತೆ ಬೆಲೆಯ ಏರಿಳಿತ,ವಿದೇಶಿ ಅಡಿಕೆಯ ಆಮದು,ಅಡಿಕೆ ವಿರದ್ಧದ ಕಪೋಲ ಕಲ್ಪಿತ ಲೇಖನಗಳು ,ಕಾಳಸಂತೆ ದಂಧೆ,ಪಾನ್ ಮಸಾಲೆ ನಿಷೇಧದ ಭೀತಿ ಮುಂತಾದ ಸಮಸ್ಯೆಗಳನ್ನು ಎದುರಿಸುವ ಜೊತೆಗೆ ಕಾನೂನಾತ್ಮಕ ಹೋರಾಟ ನಡೆಸಿ ರೈತರನ್ನು ಕಾಪಾಡುವ ಮಹತ್ತರ ಜವಾಬ್ಧಾರಿ ಕ್ಯಾಂಪ್ಕೊದ ಮೇಲಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
ಮಂಗಳೂರು
Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ
ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ
ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.
ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?
ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.
ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.
ಅಪರಾಧ
Mangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅ.8ರಂದು ರಾತ್ರಿ ಸುಮಾರು 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಸಮೀಪ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳು:
ಅಬ್ದುಲ್ ಹಾಪೀಲ್ (25) ಮಂಗಳಪಾಡಿ, ಕಾಸರಗೋಡು
ಜಿಯಾವುಲ್ ಹಕ್ (30) ಕಸಬಾ ಬೆಂಗ್ರೆ, ಕೂಳೂರು, ಮಂಗಳೂರು
ಅಲ್ತಾಫ್ (28) ಪಾಂಡೇಶ್ವರ, ಮಂಗಳೂರು
ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಬಚ್ಚಿಟ್ಟು ಸಾಗಾಟಕ್ಕೆ ಸಂಚು
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಂಜಾಬ್‌ನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್‌ನ ನೀರು ಸಂಗ್ರಹಿಸುವ ಭಾಗದಲ್ಲಿ ಭದ್ರವಾಗಿ ಬಚ್ಚಿಡುತ್ತಿದ್ದರು. ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ಇಲ್ಲಿಂದ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಿರುದ್ಧ ಈ ಹಿಂದೆಯೂ ಪ್ರಕರಣ
ಬಂಧಿತ ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಜಿಯಾವುಲ್ ಹಕ್ ದುಬೈನ ರಾಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಅಲ್ತಾಫ್ ವಿರುದ್ಧವೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
-
ಮಂಗಳೂರು11 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ14 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ16 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್16 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಬಿಗ್ ನ್ಯೂಸ್9 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ9 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು10 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ16 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು


















