Connect with us

ಮಂಗಳೂರು

 ಕ್ಯಾಂಪ್ಕೊ ನಿರ್ಮಿಸಲಿರುವ ʼಅಗ್ರಿಮಾಲ್‌ ʼ ಪರಿಕಲ್ಪನೆ ದೇಶದಲ್ಲೆ ಮೊದಲು – 50 ವರ್ಷ ಪೂರೈಸಿರುವುದೆ ಪ್ರಾಮಾಣಿಕತೆಗೆ ಸರ್ಟಿಫಿಕೆಟ್‌ – ದೇಶದಲ್ಲಿ 2 ಲಕ್ಷ ಪ್ಯಾಕ್ಸ್‌ ಸ್ಥಾಪನೆ : ಸುವರ್ಣ ಮಹೋತ್ಸವ ಉದ್ಘಾಟಿಸಿ ಅಮಿತ್‌ ಶಾ

Published

on



Ad Widget

Ad Widget

Ad Widget

Ad Widget

 ಪುತ್ತೂರು: ದೇಶದ ಸಹಕಾರಿ ಕ್ಷೇತ್ರದ ಚಿತ್ರಣವನ್ನು ಬದಲಾಯಿಸಲು ಮೋದಿ ಸರಕಾರ ಕಟಿ ಬದ್ದವಾಗಿದ್ದು, ಸಹಕಾರಿ ಸಚಿವಲಾಯದ ಮೂಲಕ ಬಹು ಆಯಾಮದ ಸಹಕಾರಿ ಪ್ಯಾಕ್ಸ್ ಗಳನ್ನು ಆರಂಭಿಸುವುದಾಗಿ ಬಜೆಟ್ ನಲ್ಲಿ  ಈಗಾಗಲೇ ಸರಕಾರ ಘೋಷಿಸಿದೆ.  ಮುಂದಿನ ಮೂರು ವರ್ಷಗಳಲ್ಲಿ 2 ಲಕ್ಷ ಪ್ರಾಥಮಿಕ  ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು (PACKS ) ಸ್ಥಾಪಿಸಲಾಗುವುದು. ಬಳಿಕ  ಪ್ರತಿ ಪಂಚಾಯತ್ ನಲ್ಲೂ  ಒಂದು ಪ್ಯಾಕ್ಸ್ ಇರಲಿದೆ.  ಇದರ ಮೂಲಕ ಗ್ರಾಮೀಣರ  ಬದುಕನ್ನು ಬದಲಿಸುವ ಪಣ ತೊಡಲಾಗಿದೆ ಎಂದು ತಿಳಿಸಿದರು. ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಷಾ ಹೇಳಿದರು.

Ad Widget

Ad Widget

Ad Widget

Ad Widget

ಅವರು ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಕ್ಯಾಂಪ್ಕೊ ಸುವರ್ಣ ಮಹೋತ್ಸವದ ಸಂಭ್ರಮಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Ad Widget

Ad Widget

Ad Widget alt="Ad Widget"/>

Ad Widget

 ಅಂತರಾಜ್ಯ  ಸಹಕಾರಿ ಸಂಸ್ಥೆ  ಕ್ಯಾಂಪ್ಕೊ 50 ವರ್ಷಗಳನ್ನು ಪೂರೈಸಿದೆ ಎನ್ನುವುದು ಅದು ತನ್ನ ಸದಸ್ಯರಿಗೆ ಹಾಗು ರೈತರಿಗೆ ಪ್ರಾಮಣಿಕವಾಗಿ ಸೇವೆ ಸಲ್ಲಿಸಿದೆ ಎನ್ನುವುದಕ್ಕೆ ಸರ್ಟಿಫಿಕೇಟ್. 3 ಸಾವಿರ ಸದಸ್ಯರಿಂದ ಆರಂಭಗೊಂಡ ಕ್ಯಾಂಪ್ಕೋ 1.38 ಲಕ್ಷ ಸದಸ್ಯರ ಸಹಕಾರಿ ಸಂಸ್ಥೆಯಾಗಿದೆ. ಇಲ್ಲಿ  ರೈತ  ನಾಯಕ ದಿ. ವಾರಣಾಸಿ ಸುಬ್ರಾಯ ಭಟ್ ಅವರ ಮೂಲಕ ಮೊಳಕೆಯೊಡೆದ ಈ ಸಂಸ್ಥೆಯಿಂದು ಹೆಮ್ಮರವಾಗಿದೆ. ಈ ಸಾಧನೆಗೆ ಇಡೀ ತಂಡಕ್ಕೆ ಅಭಿನಂದನೆಗಳು.  ಕ್ಯಾಂಪ್ಕೋ  ಪವನ ಶಕ್ತಿ ಹಾಗೂ ಸೋಲಾರ್ ಪ್ಯಾನಲ್ ಮೂಲಕ ವಿದ್ಯುತ್ ಉತ್ಪಾದಿಸುವ ಕಾರ್ಯ ಮಾಡುವ ಮೂಲಕ ಪರಿಸರ ಸ್ನೇಹಿ ಸಂಸ್ಥೆಯಾಗಿಯೂ ಬೆಳೆದು ನಿಂತಿದೆ  ಎಂದರು.

Ad Widget

Ad Widget <> Ad Widget

ದೀನದಯಾಲ್ ಉಪಾಧ್ಯಾಯರು ನೀಡಿದ ಮಾರ್ಗದರ್ಶನದಂತೆ ಬಿಜೆಪಿಯು ಗರೀಬಿ ಕಲ್ಯಾಣ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುತ್ತಿದೆ. ಅದರಂತೆ ಪ್ರತಿಯೊಬ್ಬ ಬಡವನಿಗೂ ಮನೆ, ಮನೆಯೊಳಗಡೆ, ವಿದ್ಯುತ್ , ನೀರು, ಗ್ಯಾಸ್ ಸಿಲಿಂಡರ್, ಶೌಚಾಲಯ, 5  ಲಕ್ಷದ ಆರೋಗ್ಯ ವಿಮೆ ,  ಉಚಿತ ಅಕ್ಕಿ ಹಾಗೂ ರೈತರಿಗೆ ಪ್ರತಿವರ್ಷ 6 ೦೦೦ ರೂ  ನೀಡಲು ಸರಕಾರ ಕಟಿಬದ್ದವಾಗಿದ್ದು ಅದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಶ್ರಮಿಸುತ್ತಿದೆ. ಸಮಗ್ರ ದೇಶದಲ್ಲಿ ಬಿಜೆಪಿಯ ಸರಕಾರವು ರಾಷ್ಟ್ರೀಯ ಸುರಕ್ಷತೆ, ರಾಷ್ಟ್ರದ ಸಮೃದ್ದಿ ಹಾಗೂ ಗರೀಬ್ ಕಲ್ಯಾಣ್ ವನ್ನು ಎಂಬ ಪ್ರಮುಖ ವಿಚಾರವನ್ನು  ಗಮನದಲ್ಲಿರಿಸಿ ಕಾರ್ಯ ನಿರ್ವಹಿಸುತ್ತಿದೆ.



Ad Widget

ಕ್ಯಾಂಪ್ಕೊದಲ್ಲಿ ಇಂದು ಶಿಲನ್ಯಾಸ ಮಾಡಿದ ಅಗ್ರಿ ಮಾಲ್ ಭಾರತದಲ್ಲಿ ಅತಿ ವಿಶಿಷ್ಟ ಎನಿಸಿದೆ. ಒಂದೂವರೆ ಲಕ್ಷ ಚದರ ಅಡಿಯ ಈ ಮಾಲ್ ನಲ್ಲಿ ಕೃಷಿ ಸಲಕರಣೆಗಳು, ಕೃಷಿ ಯಂತ್ರ, ಕೀಟನಾಶಕ, ರಸಗೊಬ್ಬರ, ಇಂಧನ ಹಾಗೂ ಸಂಗ್ರಹಕಾರ ಹೊಂದಿರುವ ದೇಶದ ಏಕೈಕ ಸಹಕಾರಿ  ಮಾಲ್ ಆಗಿದೆ. ಕೃಷಿಗೆ ಸಂಬಂಧಿಸಿದ ಎಲ್ಲ ಸಾಮಗ್ರಿಗಳು ಒಂದೇ ಸೂರಿನಡಿ ಸಿಗುವ ಪರಿಕಲ್ಪನೆ ದೇಶಕ್ಕೆ ಹೊಸತು ಎಂದರು.  ಕ್ಯಾಂಪ್ಕೂ ಉತ್ಪನಗಳ ಸೂಚಿಯಲ್ಲಿ  ನೂತನವಾಗಿ ಸೇರಿಸಿರುವ ತೆಂಗಿನ ಎಣ್ಣೆ ಹಾಗೂ ಭದ್ರಾವತಿಯಲ್ಲಿ  ನಿರ್ಮಿಸಿರುವ 13000 ಚದರ ಅಡಿ ವಿಸ್ತೀರ್ಣದ ಗೋದಾಮ ಕೂಡ ಇಂದು ಲೋಕಾರ್ಪಣೆಯಾಗಿರುತ್ತದೆ ಎಂದರು.

Ad Widget

Ad Widget

ಭಾರತ ಮಾತೆ ಮತ್ತು ಸಂಸ್ಥಾಪಕ ಅಧ್ಯಕ್ಷರಾದ ವಿ. ಸುಬ್ರಾಯ ಭಟ್ ಅವರಿಗೆ ಪುಷ್ಪಾರ್ಚನೆ ಮಾಡಲಾಯಿತು. ಡಿಜಿಟಲ್ ಲಾಂಚ್ ಮೂಲಕ ಪುತ್ತೂರಿನ ಕ್ಯಾಂಪ್ಕೋ ಅಗ್ರಿ ಮಾಲ್‌ಗೆ ಶಂಕುಸ್ಥಾಪನೆ, ತೆಂಗಿನಕಾಯಿ ಯೋಜನೆ ಕೊಬ್ಬರಿ ಎಣ್ಣೆ ಕಲ್ಪ ಪ್ರಾರಂಭ, ಭದ್ರಾವತಿ ಕ್ಯಾಂಪ್ಕೊ ಉಗ್ರಾಣ ಉದ್ಘಾಟನೆಯನ್ನು ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಮಾತನಾಡಿ ಐವತ್ತು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ವ್ಯವಹಾರಿಕ ಆರ್ಥಿಕ ರಂಗದಲ್ಲಿ ಪ್ರಗತಿಯಾಗುತ್ತಿರುವ ಕಾಂಪ್ಕೊ ಮಾದರಿಯ ಸಂಸ್ಥೆಯಾಗಿದೆ. ಕ್ಯಾಪಿಟಲಿಸಂ ಹಾಗೂ ಕಮ್ಯುನಿಟಿಸಂ ಇದೆರಡಕ್ಕೆ ಉತ್ತರ ನೀಡಬೇಕಾದರೆ, ಕೋಆಪರಿಟಿಸಂ ಬರಬೇಕಾಗಿದೆ. ಕೋಆಪರಿಟಿಸಂ ಯಾವ ರೀತಿಯಲ್ಲಿ ಇರಬೇಕೆಂಬುದನ್ನು ಕ್ಯಾಂಪ್ಕೊ ಮಾಡಿ ತೋರಿಸಿದೆ. ಕ್ಯಾಂಪ್ಕೊ ಅಡಿಕೆಗೆ ಮಾರುಕಟ್ಟೆ ರಕ್ಷಣೆಯನ್ನು ನೀಡುವ ಕಾರ್ಯ ಮಾಡಿದೆ. ಕೊಕೋ ಬೆಲೆ ಕುಸಿತದ ಸಂದರ್ಭ ಖರೀದೆಗೆ ಮುಂದಾದ ಕ್ಯಾಂಪ್ಕೊ ಚಾಕಲೇಟು ಕಾರ್ಖಾನೆಯನ್ನು ಸ್ಥಾಪನೆ ಮಾಡಿ, ಇವತ್ತು 29 ಸಾವಿರ ಮೆಟ್ರಿಕ್ ಟನ್ ಚಾಕಲೇಟು ಉತ್ಪಾದನೆ ಮಾಡುವ ಮೂಲಕ ದೇಶದ ಏಕೈಕ ಸಹಕಾರಿಯಾಗಿದೆ. ರೈತರ ಬೆಳೆಗಳ ಆರ್ಥಿಕ ವೃದ್ಧಿ ಮಾಡುವ ಕೆಲಸವನ್ನು ಕ್ಯಾಂಪ್ಕೊ ಮಾಡಿದೆ. ರೈತರಿಗೆ ತಾಯಿಯಾಗಿ ಕ್ಯಾಂಪ್ಕೊ ಮಾರ್ಗದರ್ಶನ ಮಾಡುತ್ತಿದೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಾತನಾಡಿ ಮೋದಿ ಹಾಗೂ ಅಮಿತ್ ಷಾ ಅವರ ಶಕ್ತಿಯ ಮುಂದೆ ಜಗತ್ತಿನ ಯಾವ ಶಕ್ತಿಯೂ ಸರಿ ಸಾಟಿಯಾಗಿಲ್ಲ. ದೇಶವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗುವ ವಿಚಾರದಲ್ಲಿ ಇವರಿಬ್ಬರ ಕೊಡುಗೆ ಅಪಾರವಾದದ್ದು. ಅಡಿಕೆ ಬೆಳೆಗಾರ ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ಆರಂಭವಾದ ಕ್ಯಾಂಪ್ಕೊ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದಿದೆ. ಬಹುರಾಷ್ಟ್ರೀಯ ಸಂಸ್ಥೆಗಳಿಗೆ ಕಡಿಮೆ ಇಲ್ಲದ ರೀತಿಯಲ್ಲಿ ವ್ಯವಹಾರ ನಡೆಸಿದ ಕ್ಯಾಂಪ್ಕೊ ಲಕ್ಷಾಂತರ ರೈತರ ಹಾಗೂ ಸಾವಿರಾರು ಕಾರ್ಮಿಕರಿಗೆ ನೆಲೆಯನ್ನು ಒದಗಿಸಿದೆ ಎಂದು ತಿಳಿಸಿದರು.

ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಇಂಧನ ಸಚಿವ ಸುನಿಲ್ ಕುಮಾರ್, ಗೃಹ ಸಚಿವ ಅರಗ ಜ್ಞಾನೇಂದ್ರ, ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಅಂಗಾರ ಎಸ್., ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಸಂಸದ, ಪುತ್ತೂರು ಶಾಸಕ ಸಂಜೀವ ಮಠಂದೂರು, ಬಂಟ್ವಾಳ ಶಾಸಕ ಯು. ರಾಜೇಶ್ ನಾಯ್ಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ನಗರಸಭೆ ಅಧ್ಯಕ್ಷ ಕೆ. ಜೀವಂಧರ್ ಜೈನ್, ಕ್ಯಾಂಪ್ಕೊ ನಿರ್ದೇಶಕರಾದ ಎಸ್. ಆರ್. ಸತೀಶ್ಚಂದ್ರ, ದಯಾನಂದ ಹೆಗ್ಡೆ, ಕೃಷ್ಣಪ್ರಸಾದ್ ಮಡ್ತಿಲ, ಶಂಬುಲಿಂಗ ಹೆಗ್ಡೆ ಜಿ. ನಾಡ್ಗೋಡ್,  ಕೆ. ಬಾಲಕೃಷ್ಣ ರೈ, ಜಯರಾಂ ಸರಳಾಯ, ಪದ್ಮರಾಜ್ ಪಟ್ಟಾಜೆ, ರಾಘವೇಂದ್ರ ಭಟ್, ರಾಧಾಕೃಷ್ಣ ಕೆ., ಸತ್ಯನಾರಾಯಣ ಪ್ರಸಾದ್, ಸುರೇಶ್ ಕುಮಾರ್ ಶೆಟ್ಟಿ ಪಿ., ರಾಘವೇಂದ್ರ ಎಚ್. ಎಂ. ಉಪಸ್ಥಿತರಿದ್ದರು.

ಪ್ರಿಯಾ ಭಟ್ ವಂದೇಮಾತರ ಹಾಡಿದರು. ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕ ಎಚ್. ಎಂ. ಕೃಷ್ಣಕುಮಾರ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಕ್ಯಾಂಪ್ಕೊ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ ವಂದಿಸಿದರು.

                                 ಆಧುನಿಕ ಪಟೇಲ್

ಆಧುನಿಕ ಸರ್ಧಾರ್ ವಲ್ಲಭಾಯಿ ಪಟೇಲ್ ಎಂದೇ ಕರೆಸಿಕೊಳ್ಳುವ ಅಮಿತ್ ಷಾ ಎಂದು ಮಾತು ಆರಂಭಿಸಿದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ದೇಶದ ಅನೇಕ ಜ್ವಲಂತ ಸಮಸ್ಯೆಗೆ ಪರಿಹಾರ ಹುಡುಕಿ ಜಗತ್ತು ಮೆಚ್ಚುವ ರೀತಿಯಲ್ಲಿ ಆಡಳಿತ ನಡೆಸುವ ಕಾರ್ಯವನ್ನು ಮಾನ್ಯ ಪ್ರಧಾನಿಗಳಾದ ಮೋದಿಜಿ ಹಾಗೂ ಅಮಿತ್ ಷಾ ಅವರು ಮಾಡಿದ್ದಾರೆ ಎಂದು ಯಡಿಯೂರಪ್ಪ ಸಿಎಂ ಬೊಮ್ಮಾಯಿ ತಮ್ಮ ರಾಷ್ಟ್ರೀಯ ನಾಯಕನ ಗುಣಗಾನ ಮಾಡಿದರು.

                                   ಬೆಲ್ಲ - ನೀರು:

ವಾಹನ ನಿಲುಗಡೆ ಸ್ಥಳದಿಂದ ತೆಂಕಿಲ ಮೈದಾನಕ್ಕೆ ನಡೆದು ಭರುವ ಹಾದಿಯ ದಣಿವು ನಿವಾರಿಸಿಕೊಳ್ಳುವ ನಿಟ್ಟಿನಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಬೆಲ್ಲ - ನೀರು ನೀಡುವ ಕಾರ್ಯವನ್ನು ಸ್ವಯಂ ಸೇವಕರು ಮಾಡುತ್ತಿದ್ದರು.

                      ಹರಿದು ಬಂದ ಜನ ಸಾಗರ:

ಕಾಸರಗೋಡು ಜಿಲ್ಲೆ, ಸುಳ್ಯ, ಬೆಳ್ತಂಗಡಿ, ಕಡಬ, ಬಂಟ್ವಾಳ, ಪುತ್ತೂರು ತಾಲೂಕು ಸೇರಿ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಆಗಮಿಸಿದ್ದರು. 17ಸಾವಿರ ಆಸನದ ವ್ಯವಸ್ಥೆ ಭರ್ತಿಯಾಗಿತ್ತು.
                    ಧ್ವಜ ಹಿಡಿದು ಬಂದರು..

ವಿವಿಧ ಭಾಗದಿಂದ ಸಮಾವೇಶಕ್ಕೆ ಬರುವ ಬಸ್ ಗಳಲ್ಲಿ ಬಿಜೆಪಿಯ ಧ್ವಜವನ್ನು ಹಾಕಲಾಗಿದೆ. ಬಸ್ ನಿಂದ ಸಭಾಂಗಣಕ್ಕೆ ಬರುವ ದಾರಿಯುದ್ದಕ್ಕೂ ಆಲಂಕಾರು ಉದಯ ಕುಮಾರ್ ಚಂದ್ರಶೇಖರ ಬಿಜೆಪಿ ಧ್ವಜ ಹಿಡಿದು ಬಂದರು.
                            ಜೈಕಾರ!

ಅಮಿತ್ ಷಾ ವಾಹನ ಮುಖ್ಯ ರಸ್ತೆಯಿಂದ ಒಳಗೆ ಬರುತ್ತಿದ್ದಂತೆ, ಜನರ ಜೈಕಾರ ಮುಗಿಲು ಮುಟ್ಟಿತ್ತು. ಯಡಿಯೂರಪ್ಪ ಅವರು ಮಾತನಾಡಲು ಆಗಮಿಸುವ ಸಂದರ್ಭದಲ್ಲಿ ಜನರು ಜೈಕಾರ ಹಾಕಿದರು. ಶಾಸಕ, ಸಂಜೀವ ಮಠಂದೂರು ಅವರಿಗೂ ಜೈಕಾರ ಮೊಳಗಿತು. 
Ad Widget
Click to comment

Leave a Reply

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಅಪರಾಧ

Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ

Published

on



Ad Widget

Ad Widget

Ad Widget

Ad Widget

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್‌ ಅಧಿಕಾರಿ ಸಂದೀಪ್‌ ರಾವ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್‌ ಗೋಯಲ್‌ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.

Ad Widget

Ad Widget <> Ad Widget

ಬಳಿಕ ಮತ್ತೊಂದು ಮೊಬೈಲ್‌ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್‌ ಪವಾರ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್‌ ಸೀಕ್ರೆಸಿ ಆ್ಯಕ್ಟ್‌’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.



Ad Widget

ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್‌ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.

Ad Widget

Ad Widget

ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್‌ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್‌ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್‌ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.

ಸೈಬರ್‌ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್‌ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.

Ad Widget
Continue Reading

ಮಂಗಳೂರು

Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್‌ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ

Published

on



Ad Widget

Ad Widget

Ad Widget

Ad Widget

ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.

Ad Widget

Ad Widget <> Ad Widget

ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್‌ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.



Ad Widget

ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading