ಸುಳ್ಯ
ಸುಳ್ಯದ ಪಯಸ್ವಿನಿ ನದಿಯಲ್ಲಿ ಮುಳುಗಿ ಪುತ್ತೂರಿನ ಇಬ್ಬರು ಹದಿ ಹರೆಯದ ಯುವಕರು ಮೃತ್ಯು – 6 ಗೆಳೆಯರು ಜತೆಯಾಗಿ ತೆರಳಿದ ವೇಳೆ ದುರಂತ
ಪುತ್ತೂರು: ಪುತ್ತೂರು ಸಮೀಪದ ಕೌಡಿಚ್ಚಾರ್ ಅಸುಪಾಸಿನ ಆರು ಮಂದಿ ಹದಿ ಹರೆಯದ ಯುವಕರು ಫೆ 11 ರಂದು ಸುಳ್ಯದ ಪಯಸ್ವಿನಿ ನದಿಗೆ ತೆರಳಿದ್ದು, ಅದರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ದೇರ್ಲದ ಜಿತೇಶ್ ಪಾಟಾಳಿ (19) ಮತ್ತು ಅಂಬಟೆಮೂಲೆ ನಿವಾಸಿ ಪ್ರವೀಣ್ (19) ಮೃತಪಟ್ಟವರು
ಪ್ರವೀಣ್ ಪಡುವನ್ನೂರು ಗ್ರಾಮದ ಅಂಬಟೆಮೂಲೆ ಕೃಷ್ಣ ನಾಯ್ಕ-ದೇವಕಿ ದಂಪತಿಯ ಏಕೈಕ ಮಗ . ನೀರಿನಲ್ಲಿ ಮುಳುಗುತ್ತಿದ್ದ ಈತನನ್ನು ರಕ್ಷಿಸಲು ಹೋಗಿ ಮೃತಪಟ್ಟ ಜಿತೇಶ್ ಕೆಯ್ಯೂರು ಗ್ರಾಮದ ದೇರ್ಲ ನಾರಾಯಣ ಪಾಟಾಳಿ ಮತ್ತು ಗೀತಾ ದ೦ಪತಿಯ ಕಿರಿಯ ಪುತ್ರ
ತಂಡವಾಗಿ ಯಂತ್ರದ ಮೂಲಕ ಹುಲ್ಲು ಕತ್ತರಿಸುವ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಕೌಡಿಚ್ಚರಿನ ಯುವಕರಾದ ಸ೦ತೋಷ್ ಅಂಬಟೆಮೂಲೆ, ಸತ್ಯಾನಂದ ಚಂದುಕೊಡು, ಯುವರಾಜ ಅಂಬಟೆಮೂಲೆ, ನಿತೀಶ್ ಬಳ್ಳಿಕಾನ, ಜಿತೇಶ್ ದೇರ್ಲ ಮತ್ತು ಪ್ರವೀಣ್ ಅಂಬಟೆಮೂಲೆಯವರು ಕೆಲಸಕ್ಕೆ ರಜೆಯಿದ್ದ ಹಿನ್ನಲೆಯಲ್ಲಿ ಮಧ್ಯಾಹ್ನ ಸುಳ್ಯದ ಪಯಸ್ವಿನಿ ನದಿ ಬಳಿ ತೆರಳಿದ್ದರು.
ಪ್ರವೀಣ್ ಮತ್ತು ಜಿತೇಶ್ ನದಿಯ ಮಧ್ಯ ಭಾಗದಲ್ಲಿ ತೆರಳಿದ್ದು, ಉಳಿದ ಯುವಕರು ನದಿಯ ಬದಿಯಿಂದ ತೆರಳಿದ್ದರು ಎನ್ನಲಾಗಿದೆ. ನದಿಯಲ್ಲಿ ಅಲ್ಲಲ್ಲಿ ದೊಡ್ಡ ಗುಂಡಿಗಳಿದ್ದು, ಈ ಗುಂಡಿಯ ಬಗ್ಗೆ ಗೊತ್ತಿಲ್ಲದ ಪ್ರವೀಣ್ ಅವರು ಅದರಲ್ಲಿ ಕಾಲಿಟ್ಟು ಮುಳುಗಿದ್ದಾರೆ. ಇವರನ್ನು ರಕ್ಷಿಸಲು ಹೋದ ಪಕ್ಕದಲ್ಲಿದ್ದ ಜಿತೇಶ್ ಕೂಡ ಮುಳುಗಿದ್ದಾರೆ. ಆಗ ಉಳಿದ ನಾಲ್ವರು ಅವರನ್ನು ರಕ್ಷಿಸಲು ಯತ್ನಿಸಿದರಾದರೂ, ವಿಫಲರಾದಾಗ ಜೋರಾಗಿ ಬೊಬ್ಬೆ ಹೊಡೆದಿದ್ದಾರೆ ಎನ್ನಲಾಗಿದೆ.
ಈ ವೇಳೆ ಸ್ಥಳೀಯ ನಿವಾಸಿ ಜಯ ಪ್ರಕಾಶ್ ಅವರು ಮನೆಯಿಂದ ಓಡಿ ಬಂದು ನದಿಗೆ ಇಳಿದು. ನೀರಿನಲ್ಲಿ ಪೂರ್ಣವಾಗಿ ಮುಳುಗಿದ್ದ ಇಬ್ಬರು ಯುವಕರನ್ನು ಮೇಲಕ್ಕೆತ್ತಿದ್ದರು. ಆದರೇ ಇಬ್ಬರನ್ನು ರಕ್ಷಿಸುವ ಯತ್ನ ವಿಫಲವಾಗಿದ್ದು, ಅಷ್ಟರಲ್ಲಿ ಅವರ ಉಸಿರು ನಿಂತು ಹೋಗಿತ್ತು. ಸ್ನೇಹಿತರಿಬ್ಬರು ಪರಸ್ಪರ ಹಿಡಿದುಕೊಂಡ ಭಂಗಿಯಲ್ಲೆ ಮೃತಪಟ್ಟಿದ್ದರು.
ಸುಳ್ಯ
Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.
ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.















