Connect with us

ದಕ್ಷಿಣ ಕನ್ನಡ

ಪುತ್ತೂರು ಕಾಂಗ್ರೆಸ್‌ʼನ ಒಗ್ಗಟ್ಟಿಗೆ ಸಾಕ್ಷಿಯಾದ ಬೂತ್ ಅಧ್ಯಕ್ಷರ ಹಾಗೂ ಬಿಎಲ್ಎಗಳ ತರಬೇತಿ ಕಾರ್ಯಗಾರ – ವೇದಿಕೆಯಲ್ಲಿ ಒಟ್ಟಾಗಿ ಕಾಣಿಸಿಕೊಂಡ ಆಕಾಂಕ್ಷಿಗಳು – ಕಾರ್ಯಕರ್ತರಿಗೆ ಚುನಾವಣೆ ಎದುರಿಸಲು ಟಿಪ್ಸ್‌

Published

on



Ad Widget

Ad Widget

Ad Widget

Ad Widget

ಪುತ್ತೂರು:   ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್‌ ಬೂತ್‌ ಅಧ್ಯಕ್ಷರ ಹಾಗೂ  ಬಿಎಲ್‌ಎಗಳ ತರಬೇತಿ ಸಮಾರಂಭವು ಮತ್ತೊಮ್ಮೆಪುತ್ತೂರು ಕಾಂಗ್ರೆಸ್‌ ನ ಒಗ್ಗಟ್ಟಿನ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಿತ್ತು. ಕಳೆದ ವಿಧಾನ ಸಭಾ ಚುನಾವಣೆಗೂ ತುಸು ಮುಂಚೆ ಪಕ್ಷದಲ್ಲಿನ ಭಿನಮತ ಬಹಿರಂಗಗೊಂಡು ಪಕ್ಷ ಹಿನ್ನಡೆ ಅನುಭವಿಸಿತ್ತು. ಈ ಬಾರಿಯೂ 14 ಆಕಾಂಕ್ಷಿಗಳು ಟಿಕೆಟ್‌ ಗಾಗಿ ರೂ. 2 ಲಕ್ಷ ಪಾವತಿಸಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಮತ್ತೆ ಈ ಬಾರಿಯೂ ಪಕ್ಷದಲ್ಲಿ ಭಿನ್ನಮತ ತಾರಕಕ್ಕೆರಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದರು.

Ad Widget

Ad Widget

Ad Widget

Ad Widget

ಆದರೇ ರಾಜಕೀಯ ಪಂಡಿತರ ಅನುಮಾನಗಳು ತಲೆ ಕೆಳಗಾಗುವಂತೆ ಕಳೆದೆರಡು ವಾರಗಳಿಂದ ಪುತ್ತೂರು ಕಾಂಗ್ರೆಸ್‌ ನಲ್ಲಿ ಒಗ್ಗಟ್ಟಿನ ವಾತಾವರಣ ಸೃಷ್ಟಿಯಾಗಿದೆ.  ಫೆ.14ರಂದು ಆಯೋಜಿಸಲಾಗಿದ್ದ ಕಾಂಗ್ರೆಸ್‌ ಬೂತ್‌ ಅಧ್ಯಕ್ಷರ ಹಾಗೂ  ಬಿಎಲ್‌ಎಗಳ ತರಬೇತಿ ಕಾರ್ಯಗಾರಕ್ಕೆ ಪೂರ್ವಭಾವಿಯಾಗಿ ನಡೆದ ಬೂತ್‌  ಭೇಟಿಯ ವೇಳೆಯೂ ಬಹುತೇಕ ಟಿಕೆಟ್‌ ಆಕಾಂಕ್ಷಿಗಳು ಜತೆ ಜತೆಯಾಗಿಯೇ  ಪ್ರವಾಸ ಕೈಗೊಂಡಿದ್ದರು . ಇದಾದ ಬಳಿಕ ಫೆ.14ರಂದು ನಡೆದ ತರಭೇತಿ ಕಾರ್ಯಗಾರದಲ್ಲೂ 14 ಟಿಕೆಟ್‌  ಆಕಾಂಕ್ಷಿಗಳ ಪೈಕಿ 12 ಆಕಾಂಕ್ಷಿಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಇನ್ನಿಬ್ಬರು ಆಕಾಂಕ್ಷಿಗಳು ವೈಯುಕ್ತಿಕ ಕಾರಣಗಳಿಂದ ಸಭೆಗೆ ಬರಲು ಅನಾನುಕೂಲತೆ ಉಂಟಾದ ಹಿನ್ನಲೆಯಲ್ಲಿ ಕಾರ್ಯಗಾರಕ್ಕೆ ಗೈರು ಹಾಜರಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅದರಲ್ಲೂ ರಾಜಕೀಯವಾಗಿ ಹಾವು – ಮುಂಗುಸಿಯಂತಾಡುತ್ತಿದ್ದ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಹಾಗೂ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿಯವರು ಕಾರ್ಯಾಗಾರದ ಉದ್ಘಾಟನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು . ಜತೆಗೆ ಪುತ್ತೂರು ಕೈ ಟಿಕೆಟಿನ ಪ್ರಭಲ ಆಕಾಂಕ್ಷಿಗಳಾದ ಇತ್ತೀಚೆಗಷ್ಟೆ ಪಕ್ಷಕ್ಕೆ ಸೇರ್ಪಡೆಗೊಂಡ ಉದ್ಯಮಿ ಅಶೋಕ್ ಕುಮಾರ್ರೈ ಕೋಡಿಂಬಾಡಿ, ರಾಜ್ಯಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ  ದಿವ್ಯಪ್ರಭಾ ಚಿಲ್ತಡ್ಕ ಕೂಡ ಕಾರ್ಯಾಗಾರದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಸ್ವತ: ಟಿಕೆಟ್‌ ಆಕಾಂಕ್ಷಿಗಳಾಗಿರುವ ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ. ಬಿ. ವಿಶ್ವನಾಥ ರೈ , ಉಪ್ಪಿನಂಗಡಿ – ವಿಟ್ಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ. ಎಲ್ಲ ಆಕಾಂಕ್ಷಿಗಳನ್ನು ಒಂದೇ ವೇದಿಕೆಯಲ್ಲಿ ತರಲು ಶ್ರಮಿಸಿರುವುದು ವಿಶೇಷವಾಗಿದೆ. ಇವರೆಲ್ಲರೂ ಜತೆಯಾಗಿ ಕಾಣಿಸಿಕೊಂಡು  ‘ನಮ್ಮಲ್ಲಿ ಯಾವುದೇ ಬಣವಿಲ್ಲ ನಾವೆಲ್ಲರೂ ಕಾಂಗ್ರೆಸ್’ ಎಂದು ಬಿಂಬಿಸುವ ಪ್ರಯತ್ನ ನಡೆಸಿಸಿದ್ದಾರೆ.

Ad Widget

Ad Widget <> Ad Widget

 ತರಬೇತಿ ಕಾರ್ಯಗಾರವನ್ನು  ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ದೀಪ ಬೆಳಗಿಸುವ ಮೂಲಕ  ಉದ್ಘಾಟಿಸಿದರು. ಕಾಂಗ್ರೆಸ್‌ ವಕ್ತಾರ ಎಂ.ಜಿ.ಹೆಗ್ಡೆ, ಕೊಪ್ಪಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಜ್ಯ ಮಟ್ಟದ ತರಬೇತುದಾರ ಸುಧೀರ್ ಕುಮಾರ್ ಮರೋಳಿ ಹಾಗೂ ಮುಹಮ್ಮದ್ ಬಡಗನ್ನೂರುರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.



Ad Widget

ಎಂ.ಜಿ.ಹೆಗ್ಡೆಯವರು ಕಾಂಗ್ರೆಸ್ ಕಾರ್ಯಕರ್ತರು ಸೈದ್ದಾಂತಿಕಾವಗಿ ಯಾವ ರೀತಿ ಬಿಜೆಪಿಯನ್ನು ಎದುರಿಸಬೇಕು ಎನ್ನುವ ಬಗ್ಗೆ ಬೂತ್‌ ಅಧ್ಯಕ್ಷರು ಹಾಗೂ ಬಿಎಲ್‌ ಎ ಗಳಿಗೆ ಮಾಹಿತಿ ನೀಡಿದ್ದರು. ಕಾಂಗ್ರೆಸ್ ಸೋಲಿಗೆ ಬಿಜೆಪಿಯ ಹಿಂದುತ್ವ ಮಾತ್ರ  ಕಾರಣವಲ್ಲ..ಪಕ್ಷದಲ್ಲಿ  ಕಾರ್ಯಕರ್ತರು, ಮುಖ೦ಡರು ಇದ್ದರೂ ಜನರೊಂದಿಗೆ ನಿರಂತರ ಸಂಪರ್ಕ ಸಾಧಿಸದಿರುವುದು , ಬಿಜೆಪಿಯ ಅಪಪ್ರಚಾರ ಹಾಗೂ ಆರೋಪಗಳಿಗೆ ಸಮರ್ಪಕ ಉತ್ತರ ನೀಡದಿರುವುದು ಸೋಲಿಗೆ ಪ್ರಮುಖ ಕಾರಣ ಎಂದರು. ಕೊಪ್ಪಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಜ್ಯ ಮಟ್ಟದ ತರಬೇತುದಾರ ಸುಧೀರ್ ಕುಮಾರ್ ಮರೋಳಿ ಹಾಗೂ ಮುಹಮ್ಮದ್ ಬಡಗನ್ನೂರುರವರು ಪಕ್ಷ ಸಂಘಟನೆ, ಬಲಪಡಿಸುವ ಬಗ್ಗೆ ಮಾಹಿತಿ ನೀಡಿದರು.

Ad Widget

Ad Widget

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ,  ರಾಜ್ಯಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ಉದ್ಯಮಿ ಅಶೋಕ್  ಕುಮಾರ್ ರೈ ಕೋಡಿಂಬಾಡಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಅಮರ್ ಆಳ್ವ, ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಭಟ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷಕಾವು ಹೇಮನಾಥ ಶೆಟ್ಟಿ, ಜಿ.ಪಂ.ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಲಿ, ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್‌ ಅಧ್ಯಕ್ಷ ಫಾರೂಕ್  ಪೆರ್ನೆ, ಮಹಿಳಾ ಘಟಕ ರಾಜ್ಯ ನಾಯಕಿ ಶಾಹಿರಾ ಝುಬೈರ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಅರಸ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಿ.ಎಚ್.ಎ ಶಕೂರ್ ಹಾಜಿ, ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪುತ್ತೂರು ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್‌ನ ಘಟಕಗಳ ವಿವಿಧ ಪದಾಧಿಕಾರಿಗಳು, ವಿವಿಧ ಬೂತ್ ಅಧ್ಯಕ್ಷರು, ಬಿ.ಎಲ್.ಎಗಳು ತರಬೇತಿಯಲ್ಲಿ ಭಾಗವಹಿಸಿದ್ದರು.  ಕಾಂಗ್ರೆಸ್ ಸೇವಾ ದಳದ ಜಿಲ್ಲಾಧ್ಯಕ್ಷ ಜೋಕಿಂ ಡಿ’ಸೋಜ ಹಾಗೂ ನಗರ ಸಭಾಸದಸ್ಯ ರಿಯಾಝ್ ವಂದೇ ಮಾತರಂ ಹಾಡಿದರು.ವಿ ಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ. ಸ್ವಾಗತಿಸಿದರು.ಜಿಲ್ಲಾ ಕಾಂಗ್ರೆಸ್‌ ವಕ್ತಾರ ಮಹಮ್ಮದ್ ಬಡಗನ್ನೂರು ಕಾರ್ಯಕ್ರಮ ನಿರೂಪಿಸಿದರು.

ಇದನ್ನೂ ಓದಿ : Puttur Congress | ಎಲ್ಲಾ ಆಕಾಂಕ್ಷಿಗಳು ಜತೆಯಾಗಿ ಬೂತ್‌ ಗೆ ತೆರಳುವ ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದೆ ಪುತ್ತೂರು ಕಾಂಗ್ರೆಸ್ – ಒಡೆದ ಮನೆಯಾಗಿದ್ದ ಪಕ್ಷದಲ್ಲೀಗ ಒಗ್ಗಟ್ಟಿನ ಮಂತ್ರ‌ | ಅಶೋಕ್ ಕುಮಾರ್ ರೈ ಅವರನ್ನು ಆತ್ಮೀಯವಾಗಿ ಕಛೇರಿಗೆ ಬರಮಾಡಿಕೊಂಡ ಕೈ ನಾಯಕರು

Ad Widget
Click to comment

Leave a Reply

ಮಂಗಳೂರು

D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ

Published

on



Ad Widget

Ad Widget

Ad Widget

Ad Widget

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

Ad Widget

Ad Widget <> Ad Widget

ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಬಿಗ್ ನ್ಯೂಸ್

G.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ವಿಶೇಷ ಕೊಡುಗೆ

Published

on



Ad Widget

Ad Widget

Ad Widget

Ad Widget

ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ವಜ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲೇ ನೀಡುವುದರ ಜೊತೆಗೆ, ಪ್ರತಿ ಕ್ಯಾರೆಟ್ ಗೆ ರೂ.8000 ವಿಶೇಷ ರಿಯಾಯಿತಿ ನೀಡಲಾಗುವುದು ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಆಭರಣ ಖರೀದಿಗೆ ಈ ಕೊಡುಗೆ ವಿಶೇಷ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಇತರೆ ಮಳಿಗೆಯ ಹಳೆಯ ಚಿನ್ನವನ್ನು 0% ರೇಟ್ ಡಿಡಕ್ಷನ್ನೊಂದಿಗೆ ಎಕ್ಸ್‌ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ.



Ad Widget

ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget

ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಪುತ್ತೂರಿನಲ್ಲಿ ಆರಂಭಗೊಂಡಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು -ಮುನ್ನಡೆಯುತ್ತಿದೆ.ಗುಣಮಟ್ಟ,ಸೊಬಗು, ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ -ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.

Ad Widget
Continue Reading

ಸುಳ್ಯ

ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget alt="Ad Widget"/>

Ad Widget

ನವದೆಹಲಿ: ನಿಷೇಧಿತ ಪ್ರದೇಶವಾದ ಜಂತರ್ ಮಂತರ್ ಪ್ರವೇಶಿಸಿ, ಪೊಲೀಸ್ ಬ್ಯಾರಿಕೇಡ್ ಉಲ್ಲಂಘಿಸಿದ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget <> Ad Widget


ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಾಯಕರು ಮಂಗಳವಾರ ಮುಂಜಾನೆ ಜಂತರ್ ಮಂತರ್ ಬಳಿ ಪ್ರತಿಭಟನೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ಭೇದಿಸಿ ಒಳಪ್ರವೇಶಿಸಿದ ಅವರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿತ್ತು.



Ad Widget


ಬಂಧಿತ ನಾಯಕರನ್ನು ಇಂದು (ಬುಧವಾರ) ವಿಶೇಷ ಕಾರ್ಯಕಾರಿ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಬಳಿಕ ಅವರನ್ನು ತಿಹಾರ್ ಜೈಲಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ad Widget

Ad Widget


ಪೊಲೀಸರ ವಿರುದ್ಧ ಸಿಜೆಪಿ ಆರೋಪ:
ಸಿಜೆಪಿ ಕಾನೂನು ಘಟಕದ ಮುಖ್ಯಸ್ಥೆ ರತ್ನಾ ಸಿಂಗ್ ಅವರು ‘ಎಕ್ಸ್’ (ಟ್ವಿಟರ್) ಮೂಲಕ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.


“ಜಂತರ್ ಮಂತರ್ ಘಟನೆಗೆ ಸಂಬಂಧಿಸಿದಂತೆ ನಮ್ಮ ನಾಯಕರಾದ ಸೌರವ್ ದಾಸ್, ಅಶುತೋಷ್ ಹಾಗೂ ಅಜಿಂಕ್ಯ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಅವರ ಮೇಲೆ ಅಕ್ರಮ ಪ್ರವೇಶ, ಬಾಂಡ್ ಉಲ್ಲಂಘನೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ತಡರಾತ್ರಿಯವರೆಗೂ ವಕೀಲರನ್ನು ಭೇಟಿ ಮಾಡಲು ಪೊಲೀಸರು ಅವಕಾಶ ನೀಡಿರಲಿಲ್ಲ.

ಮುಂಜಾನೆ 3 ಗಂಟೆ ಸುಮಾರಿಗೆ ಖಾಸಗಿ ವ್ಯಾನ್ ಮೂಲಕ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆಗೆ ಕರೆತರಲಾಗಿದೆ. ಈ ಎಲ್ಲ ಕಾನೂನುಬಾಹಿರ ಕ್ರಮಗಳ ನಡುವೆಯೂ ನಮ್ಮ ನಾಯಕರ ನೈತಿಕ ಸ್ಥೈರ್ಯ ಕುಗ್ಗಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಹಿನ್ನೆಲೆ ಏನು?
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಿಜೆಪಿ ಹಾಗೂ ಇತರ ಕೆಲವು ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆಗಳನ್ನು ತೀವ್ರಗೊಳಿಸಿವೆ. ಈ ಹಿನ್ನೆಲೆಯಲ್ಲಿ ರಾಜಧಾನಿಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.


ಕಳೆದ ಅಕ್ಟೋಬರ್ 11ರಂದು ನೂತನ ಆದೇಶ ಹೊರಡಿಸಿದ್ದ ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಅವರು, ಯಾವುದೇ ಧರಣಿ ಮತ್ತು ಪ್ರತಿಭಟನೆಗಳಿಗೆ ಕೇವಲ ರಾಮ್‌ಲೀಲಾ ಮೈದಾನ, ಬುರಾರಿ ಗ್ರೌಂಡ್ ಹಾಗೂ ಸಿಬಿಡಿ ಗ್ರೌಂಡ್‌ಗಳನ್ನು ಮಾತ್ರ ನಿಗದಿಪಡಿಸಿದ್ದರು. ಈ ಆದೇಶದ ಅನ್ವಯ ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಡಲಾಗಿದ್ದು, ಅಲ್ಲಿ ಜಮಾವಣೆಯನ್ನು ನಿಷೇಧಿಸಲಾಗಿದೆ. ನಿಷೇಧದ ನಡುವೆಯೂ ಪ್ರತಿಭಟನೆ ನಡೆಸಿದ್ದರಿಂದ ಈ ಬಂಧನ ಕಾರ್ಯಾಚರಣೆ ನಡೆದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading