ದಕ್ಷಿಣ ಕನ್ನಡ
ಗೇರು ಕೃಷಿಕರಿಗೆ ವರದಾನವಾಗಲಿದೆ cashew protect ವೆಬ್ ಸೈಟ್ ಹಾಗೂ ಕಿರುತಂತ್ರಾಂಶ – ವಿಶ್ವದಲ್ಲೇ ಮೊದಲ ಬಾರಿಗೆ ಅಭಿವೃದ್ಧಿಪಡಿಸಿದೆ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ
Cashew protect ಪುತ್ತೂರು : ಫೆ 15 : ಗೇರು ಕೃಷಿಗೆ ಭಾದಿಸುವ ಕೀಟ, ರೋಗ ಮತ್ತು ಪೋಷಕಾಂಶ ಕೊರತೆ ಪತ್ತೆ ಹಚ್ಚುವ, ಕೃತಕ ಬುದ್ಧಿಮತ್ತೆ ಆಧಾರಿತ ವೆಬ್ ಸೈಟ್ ಹಾಗೂ ಕಿರುತಂತ್ರಾಂಶ – cashew protectನ್ನು ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ ಅಭಿವೃದ್ಧಿಪಡಿಸಿದೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ ಮೊದಲ ಬಾರಿಗೆ ಗೇರು ಕೃಷಿಗೆ ಸಂಬಂಧಪಟ್ಟು ತಂತ್ರಾಂಶವೊಂದನ್ನು ಅಭಿವೃದ್ದಿಪಡಿಸಲಾಗಿದೆ
ಈ ತಂತ್ರಾಂಸದಿಂದ ಆಸಕ್ತ ಕೃಷಿಕರಿಗೆ ಅಥವಾ ಪ್ರಕೃತಿ ಪ್ರೇಮಿಗಳಿಗೆ ಬೇಕಾಗುವ ಸಸ್ಯ/ಪ್ರಾಣಿ/ಕೀಟ/ಪಕ್ಷಿಗಳ ಪತ್ತೆ ಕೆಲಸಕ್ಕೆ ಈಗ ಪುಸ್ತಕ/ತಜ್ಞ/ಗೂಗಲ್ ಗುರು ಇತ್ಯಾದಿಗಳನ್ನು ಎಡತಾಕುವ ಅವಶ್ಯಕತೆಯಿಲ್ಲ . ಎಲ್ಲವೂ ಅಂಗೈಯಲ್ಲಿ ದೊರಕಲಿದೆ. ಈವರೆಗೆ ಗೇರುಬೆಳೆಯ ಕೀಟ/ರೋಗ/ಪೋಷಕಾಂಶ ಕೊರತೆ ಪತ್ತೆಹಚ್ಚುವ ಕಿರುತಂತ್ರಾಂಶ ಲಭ್ಯವಿರಲಿಲ್ಲ . ಆ ಕೊರತೆ ಇದೀಗ ನೀಗಿದೆ. ಜಾಲತಾಣದ ವಿಳಾಸ – https://cashewprotect.icar.gov.in. ಗೂಗಲ್ ಪ್ಲೇಸ್ಟೋರ್ ಮತ್ತು ಆಪಲ್ ಪ್ಲೇಸ್ಟೋರಿನಲ್ಲಿ Cashew Protect ಹೆಸರಿನಲ್ಲಿ ಕಿರುತಂತ್ರಾಂಶ ಲಭ್ಯ. ಇದು ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನಡಿಯಲ್ಲಿ ಬರುವ ಎಲ್ಲ ಬೆಳೆ ಸಂಶೋಧನಾ ಕೇಂದ್ರಗಳಲ್ಲಿ ಮೊದಲ ಪ್ರಯತ್ನ ಎಂದು ಹೇಳಲಾಗುತ್ತಿದೆ
ಗೇರು ಸಂಶೋಧನಾ ಕೇಂದ್ರದ ವಿಜ್ಞಾನಿಗಳಿಗೆ ಸಾಕಷ್ಟು ಕೃಷಿಕರು ವಾಟ್ಸಪ್ಪಿನಲ್ಲಿ ಛಾಯಾಚಿತ್ರಗಳನ್ನು ಕಳುಹಿಸಿ ಪರಿಹಾರ ಕೇಳುತ್ತಾರೆ. ಆದರೆ ಈ ವ್ಯವಸ್ಥೆಯನ್ನು ನಿರಂತರವಾಗಿ ನಿರ್ವಹಣೆ ಮಾಡುವುದು ಕಷ್ಟಸಾಧ್ಯ. ಹೀಗಾಗಿ ಬಳಕೆದಾರರನ್ನು ಸಬಲೀಕರಣ ಮಾಡುವ ಉದ್ದೇಶದಿಂದ ಇದನ್ನು ಅಭಿವೃದ್ದಿ ಪಡಿಸಲಾಗಿದೆ.

ಈ ಕಿರು ತಂತ್ರಾಂಶದ ಮೂಲಕ ತೆಗೆದ ಫೋಟೊ ಅಥಾವ ರೈತ ಈಗಾಗಲೇ ತೆಗೆದಿರುವ ಫೋಟೋಗಳನ್ನು ಅಪ್ಲೋಡ್ ಮಾಡಿದರೆ, ಸಮಸ್ಯೆಗಳನ್ನು ಪತ್ತೆಹಚ್ಚಿ ಪರಿಹಾರ ಪಡೆಯಬಹುದು. ಅಪ್ಲೋಡ್ ಮಾಡಿರುವ ಫೋಟೋದಲ್ಲಿರುವ ಬಾಧೆಯನ್ನು ಹೋಲುವ ಅಥವಾ ಅತ್ಯಂತ ಹತ್ತಿರ ಇರುವ ಬಾಧೆಯನ್ನು ತಂತ್ರಾಂಶ ಫೋಟೋ ಸಮೇತ ನೀಡಿ ಶೇಕಡಾ ಎಷ್ಟು ಹೋಲುತ್ತದೆ ಎಂಬುದನ್ನೂ ತಿಳಿಸುತ್ತದೆ. ಇದರಿಂದ ಫಲಿತಾಂಶ ಸರಿ ಇದೆಯೋ ಇಲ್ಲವೋ ತಿಳಿಯುತ್ತದೆ. ಜೊತೆಗೆ ಬಾಧೆಯ ಗುಣಲಕ್ಷಣಗಳನ್ನು ಹಾಗೂ ಪರಿಹಾರೋಪಾಯಗಳನ್ನೂ ಸೂಚಿಸುತ್ತದೆ. ಫಲಿತಾಂಶ ತಪ್ಪಾಗಿದ್ದರೆ/ಸಮಾಧಾನ ಕೊಡದಿದ್ದರೆ ಸಂಬಂಧಪಟ್ಟ ತಜ್ಞರಿಗೆ ತಂತ್ರಾಂಶದ ಮೂಲಕ ಫೋಟೋಗಳನ್ನು ಕಳುಹಿಸಬಹುದು. ಜತೆಗೆ ಸೋಷಿಯಲ್ ಮೀಡಿಯಾದ ಮೂಲಕ ಅನುಭವಸ್ಥರಿಂದ ಉತ್ತರಗಳನ್ನು ಪಡೆಯುವ ಅವಕಾಶವನ್ನು ನೀಡಲಾಗಿದೆ.
ಇದು ಗೇರಿಗೆ ಬಾಧೆ ನೀಡುವ 60 ಕೀಟ, 20 ರೋಗ ಹಾಗೂ ಹತ್ತು ಪೋಷಕಾಂಶಗಳ ಕೊರತೆಯನ್ನು ಪತ್ತೆ ಹಚ್ಚಿ ಪರಿಹಾರ ನೀಡುವ ಉದ್ದೇಶ ಹೊಂದಿದೆ. ಸದ್ಯಕ್ಕೆ 6 ಕೀಟಗಳು (ಚಹಾ ಸೊಳ್ಳೆ, ಕಾಂಡ ಹಾಗೂ ಬೇರು ಕೊರಕ, ಹಿಟ್ಟು ತಿಗಣೆ, ಎಲೆಕೊರಕ, ರಸ ಹೀರುವ ಕೀಟ, ಹಣ್ಣು ಮತ್ತು ಕಾಯಿಕೊರಕ) ಹಾಗೂ 1 ರೋಗವನ್ನು (ಲೀಫ್ ಬ್ಲೈಟ್) ಮಾತ್ರ ಪತ್ತೆಹಚ್ಚುತ್ತದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿಯಾಗಲಿದೆ. ಗೇರು ಬೆಳೆಯುವ ಎಲ್ಲಾ ಪ್ರದೇಶಗಳ ರೈತರನ್ನು ತಲುಪುವಂತೆ ಹನ್ನೊಂದು ಭಾಷೆಗಳಲ್ಲಿ (ಇಂಗ್ಲೀಷ್, ಹಿಂದಿ, ಕನ್ನಡ, ಗುಜರಾತಿ, ಬೆಂಗಾಲಿ, ತಮಿಳು, ತೆಲುಗು, ಮಲಯಾಳಂ, ಒಡಿಯಾ, ಮರಾಠಿ, ಗಾರೋ (ಮೇಘಾಲಯದ್ದು)) ಪ್ರತ್ಯೇಕವಾಗಿ ಮಾಹಿತಿಯನ್ನು ಅಳವಡಿಸಿದ್ದಾರೆ.
ವಿಶೇಷವೆಂದರೆ ’ಅನಲಿಟಿಕ್ಸ್’ವಿಭಾಗದಲ್ಲಿ ಬಳಕೆದಾರರು ಕೊಟ್ಟ ಫೋಟೋಗಳ ಆಧಾರದ ಮೇಲೆ ವಿಶ್ವದ ವಿವಿಧ ಪ್ರದೇಶಗಳಲ್ಲಿ, ವಿವಿಧ ಕಾಲಘಟ್ಟಗಳಲ್ಲಿ ಕಂಡುಬರುವ ಕೀಟ, ರೋಗ ಹಾಗೂ ಪೋಷಕಾಂಶ ಕೊರತೆಯ ಸಂಖ್ಯೆ ಮತ್ತು ವಿಧಗಳ ವಿಶ್ಲೇಷಣೆ ಸಿಗುತ್ತದೆ. ಇದರ ಮೂಲಕ ಆಯಾ ಪ್ರದೇಶದ ಕೃಷಿಕರನ್ನು ಸಂಭಾವ್ಯ ಹಾನಿಯ ಬಗ್ಗೆ ಎಚ್ಚರಿಸಬಹುದು. ಆದರೆ ಇದು ಸಾಧ್ಯವಾಗುವುದು ಹೆಚ್ಚು ಬಳಕೆದಾರರು ಹೆಚ್ಚೆಚ್ಚು ಬಳಸಿದಾಗ ಮಾತ್ರ.
ಇದರ ಪರಿಕಲ್ಪನೆ, ವಿನ್ಯಾಸ ಹಾಗೂ ನಿರ್ವಹಣೆ ಪುತ್ತೂರಿನ ಐಸಿಆರ್, ಡಿಸಿಆರ್ ಹಿರಿಯ ವಿಜ್ಞಾನಿ ಡಾ ಮೋಹನ್ ತಲಕಾಲುಕೊಪ್ಪ. ಫೋಟೋ ಮತ್ತು ತಾಂತ್ರಿಕ ಮಾಹಿತಿಯುನ್ನು ಗೇರಿಗೆ ಸಂಬಂಧಪಟ್ಟ ದೇಶದ ಹದಿನಾಲ್ಕು ವಿಜ್ಞಾನಿಗಳು ಕೊಟ್ಟಿದ್ದಾರೆ. ಸುಮಾರು ಒಂದೂವರೆ ವರ್ಷದ ಶ್ರಮ. ಕೇಂದ್ರ ಸರ್ಕಾರ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕರ್ನಾಟಕ ಸರಕಾರದ ಮೂಲಕ ಒದಗಿಸಿದ ಅರ್ಥಿಕ ಸಹಾಯದಲ್ಲಿ ಈ ಆಯಪ್ ಅನ್ನು ಅಭಿವೃದ್ದಿಪಡಿಸಲಾಗಿದೆ
ಈ ತಂತ್ರಾಂಶ ಗೇರು ವಿಜ್ಞಾನಿಗಳಿಗೆ ಪರ್ಯಾಯವೇ? ಸದ್ಯಕ್ಕಂತೂ ಅಲ್ಲ. ಯಾಕೆಂದರೆ ವಿವಿಧ ರೋಗ/ಕೀಟಗಳನ್ನು ಪತ್ತೆಹಚ್ಚಲು ಹಾಗೂ ಪರಿಹಾರೋಪಾಯಗಳನ್ನು ಕಂಡುಹಿಡಿದು ಅದನ್ನು ಪತ್ತೆಹಚ್ಚುವಂತೆ ತಂತ್ರಾಂಶಕ್ಕೆ ಕಲಿಸಲು ವಿಜ್ಞಾನಿಗಳೇ ಬೇಕು. ಆದರೆ ದಾಪುಗಾಲಿಡುತ್ತಿರುವ ತಂತ್ರಜ್ಞಾನದಲ್ಲಿ ಮುಂದೆ ಆಗುವ ಬದಲಾವಣೆಯನ್ನು ಊಹಿಸಲೂ ಅಸಾಧ್ಯ!
ರಾಜಕೀಯ
Sanjeev Mathandur-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ; ‘ಷಡ್ಯಂತ್ರ, ಭ್ರಷ್ಟಾಚಾರದ ಶಂಕೆ’ – ಸಂಜೀವ ಮಠಂದೂರು
ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಅ.8ರಂದು ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ತಾಲೂಕುಗಳ ರೈತರು ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಸುಮಾರು ₹840 ಕೋಟಿ ಪರಿಹಾರ ಬರಬೇಕಿದ್ದು, ವಾಸ್ತವವಾಗಿ ರೈತರಿಗೆ ಎಷ್ಟು ಮೊತ್ತ ವಿತರಿಸಲಾಗಿದೆ ಎಂಬುದನ್ನು ಸರಕಾರ ಹಾಗೂ ವಿಮಾ ಕಂಪನಿಗಳು ಅಂಕಿ-ಅಂಶಗಳ ಸಹಿತ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ರೈತರು ಪಾವತಿಸಿದ ವಿಮಾ ಮೊತ್ತಕ್ಕೆ ಅನುಗುಣವಾಗಿ ಎಷ್ಟು ಪರಿಹಾರ ನೀಡಲಾಗಿದೆ? ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಮೊತ್ತದಲ್ಲಿ ವ್ಯತ್ಯಾಸವಾಗಲು ಕಾರಣವೇನು? ಯಾವ ವೈಜ್ಞಾನಿಕ ಮಾನದಂಡದ ಆಧಾರದಲ್ಲಿ ಪರಿಹಾರ ನಿಗದಿಪಡಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.
ಟರ್ಮ್‌ಶೀಟ್ ಬದಲಾದ ಬಳಿಕ ಸಮಸ್ಯೆ
2023-24ನೇ ಸಾಲಿನವರೆಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಪರಿಹಾರ ವಿತರಣೆಯಲ್ಲಿ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಸಮಸ್ಯೆ ಇರಲಿಲ್ಲ. ಆದರೆ ಬಳಿಕ ಟರ್ಮ್‌ಶೀಟ್ ಬದಲಾವಣೆಯಾದ ನಂತರ ಸಮಸ್ಯೆಗಳು ಆರಂಭವಾಗಿವೆ ಎಂದು ಮಠಂದೂರು ಆರೋಪಿಸಿದರು.
ಒಂದೇ ತಾಲೂಕು, ಹೋಬಳಿ ಹಾಗೂ ಒಂದೇ ರೀತಿಯ ಭೌಗೋಳಿಕ ಪರಿಸ್ಥಿತಿಯಲ್ಲಿರುವ ಗ್ರಾಮಗಳ ನಡುವೆ ಪರಿಹಾರ ಮೊತ್ತದಲ್ಲಿ ಭಾರಿ ವ್ಯತ್ಯಾಸ ಕಂಡುಬರುತ್ತಿದೆ. ಕೆಲವೆಡೆ ಕೇವಲ 100 ಮೀಟರ್ ಅಂತರದಲ್ಲಿರುವ ರೈತರಿಗೂ ₹10 ಸಾವಿರದಿಂದ ₹15 ಸಾವಿರದವರೆಗೆ ವ್ಯತ್ಯಾಸವಾಗುತ್ತಿದೆ. ಪಂಚಾಯಿತಿಯಿಂದ ಪಂಚಾಯಿತಿಗೆ, ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಬದಲಾಗುತ್ತಿರುವುದರ ಹಿಂದಿನ ಕಾರಣವನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರಕಾರವೂ ವಿಮಾ ಮೊತ್ತದ ಶೇ.20ರಷ್ಟು ಪಾಲು ಪಾವತಿಸುತ್ತಿರುವುದರಿಂದ ವಿಮಾ ಕಂಪನಿಗಳ ಕಾರ್ಯವೈಖರಿ ಕುರಿತು ರಾಜ್ಯ ಸರಕಾರವೇ ತನಿಖೆ ನಡೆಸಬೇಕು. ರೈತರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ಕಣ್ಮುಚ್ಚಿ ಕುಳಿತಿದೆ ಎಂದು ಅವರು ಆರೋಪಿಸಿದರು.
274 ಗ್ರಾಮ ಪಂಚಾಯಿತಿಗಳ ಪೈಕಿ 231 ಮಳೆ ಮಾಪಕ ಮಾತ್ರ ಕಾರ್ಯನಿರ್ವಹಣೆ
ಬಿಜೆಪಿ ಸತ್ಯಶೋಧನ ಸಮಿತಿ ಜಿಲ್ಲೆಯ ಒಂಬತ್ತು ತಾಲೂಕುಗಳಲ್ಲಿ ನಡೆಸಿದ ಅಧ್ಯಯನದಲ್ಲಿ ಹಲವು ಕಡೆ ಮಳೆ ಮಾಪಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಬಳಿಕ ಕೆಲವು ಮಳೆ ಮಾಪಕಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ 274 ಗ್ರಾಮ ಪಂಚಾಯಿತಿಗಳಲ್ಲಿ ಮಳೆ ಮಾಪಕಗಳನ್ನು ಅಳವಡಿಸಲಾಗಿದ್ದು, 231 ಮಾತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. 20 ಹೋಬಳಿ ಮಟ್ಟದಲ್ಲಿ ಉಷ್ಣಾಂಶ ಮಾಪಕಗಳಿವೆ. ಮಳೆ ಹಾಗೂ ಉಷ್ಣಾಂಶದ ದಾಖಲೆಗಳ ಆಧಾರದಲ್ಲಿ ಟರ್ಮ್‌ಶೀಟ್ ಪ್ರಕಾರ ವಿಮಾ ಪರಿಹಾರ ನಿರ್ಧರಿಸಲಾಗುತ್ತದೆ ಎಂದು ವಿವರಿಸಿದರು.
‘ಗ್ರಾಮಕ್ಕೊಂದು ಮಾನದಂಡ ಸಲ್ಲ’
ತಾಲೂಕಿನ ಎಲ್ಲ ಗ್ರಾಮಗಳ ರೈತರಿಗೆ ಒಂದೇ ಮಾನದಂಡದಲ್ಲಿ ವಿಮಾ ಪರಿಹಾರ ನೀಡಬೇಕು. ಒಂದು ಗ್ರಾಮಕ್ಕೆ ಗರಿಷ್ಠ ಪರಿಹಾರ ನೀಡಲು ಅನ್ವಯಿಸುವ ಮಾನದಂಡವಿದ್ದರೆ, ಅದೇ ಮಾನದಂಡವನ್ನು ಇತರ ಗ್ರಾಮಗಳಿಗೂ ಅನ್ವಯಿಸಬೇಕು. ಪಂಚಾಯಿತಿ, ಹೋಬಳಿ ಹಾಗೂ ಗ್ರಾಮವಾರು ಪ್ರತ್ಯೇಕ ಮಾನದಂಡಗಳಿಂದ ಪರಿಹಾರ ನೀಡಿದರೆ ರೈತರು ಬೆಳೆ ವಿಮಾ ಯೋಜನೆಯ ಮೇಲಿನ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಮಠಂದೂರು ಹೇಳಿದರು.
2025-26ನೇ ಸಾಲಿನಲ್ಲಿ ರೈತರು ಶೇ.5, ರಾಜ್ಯ ಸರಕಾರ ಶೇ.20 ಹಾಗೂ ಕೇಂದ್ರ ಸರಕಾರ ಶೇ.10ರಷ್ಟು ಪಾಲನ್ನು ಪಾವತಿಸಿವೆ. ಜಿಲ್ಲೆಯ ರೈತರಿಂದ ₹42.03 ಕೋಟಿ, ಕೇಂದ್ರದಿಂದ ₹84.07 ಕೋಟಿ ಹಾಗೂ ರಾಜ್ಯದಿಂದ ₹168.14 ಕೋಟಿ ಸೇರಿದಂತೆ ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಯಾಗಿದೆ ಎಂದರು.
ರೈತರು ಪ್ರತಿ ಹೆಕ್ಟೇರ್ ಅಡಿಕೆಗೆ ₹6,475 ಹಾಗೂ ಕಾಳುಮೆಣಸಿಗೆ ₹2,377ರಂತೆ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಬಜತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ₹45 ಸಾವಿರ ವಿಮಾ ಮೊತ್ತ ಪಾವತಿಸಿದ್ದರೂ ಕೆಲ ರೈತರಿಗೆ ಪ್ರತಿ ಹೆಕ್ಟೇರ್‌ಗೆ ಕನಿಷ್ಠ ₹10,800 ಮಾತ್ರ ಪರಿಹಾರ ದೊರೆತಿದೆ. ಅದೇ ಪ್ರದೇಶದ ಕೆಲವು ರೈತರ ಖಾತೆಗೆ ₹51,824 ಪರಿಹಾರ ಜಮೆಯಾಗಿರುವುದಾಗಿ ಅವರು ತಿಳಿಸಿದರು.
‘ರಾಜ್ಯ ಸರಕಾರ ರೈತ ವಿರೋಧಿ’
ಅಡಿಕೆ ಬೆಳೆಗಾರರು ವಿಮಾ ಮೊತ್ತ ಪಾವತಿಸಿದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಮತ್ತೊಂದೆಡೆ ಅಡಿಕೆ ಧಾರಣೆಯಲ್ಲೂ ಕುಸಿತವಾಗಿದೆ. ಹಿಂದಿನ ಅವಧಿಯಲ್ಲಿ ರೈತರಿಗೆ ದೊರೆಯುತ್ತಿದ್ದ ಕಿಸಾನ್ ಸನ್ಮಾನ್ ಹಾಗೂ ವಿದ್ಯಾನಿಧಿ ಯೋಜನೆಗಳನ್ನು ಈಗಿನ ಸರಕಾರ ಸ್ಥಗಿತಗೊಳಿಸಿದೆ. ರೈತರಿಗೆ ಒಂದಲ್ಲೊಂದು ರೀತಿಯಲ್ಲಿ ತೊಂದರೆ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಠಂದೂರು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಹಾಗೂ ರೈತ ಮೋರ್ಚಾ ಅಧ್ಯಕ್ಷ ಶರತ್ನಂದ ಬೈಪಾಡಿತ್ತಾಯ ಉಪಸ್ಥಿತರಿದ್ದರು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.
-
Uncategorized17 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್11 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು15 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized16 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ15 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ16 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ15 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್16 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















