ಬಂಟ್ವಾಳ
ಬಂಟ್ವಾಳ : ಡೈನಿಂಗ್ ಟೇಬಲ್ ಸಾಗಾಟದ ವಿಚಾರದಲ್ಲಿ ಗಲಾಟೆ – ಯುವಕನಿಗೆ ಇರಿತ ..!
ಬಂಟ್ವಾಳ : ಕ್ಷುಲ್ಲಕ ಕಾರಣಕ್ಕೆ ಪರಿಚಿತರಿಬ್ಬರ ನಡುವೆ ಗಲಾಟೆ ನಡೆದು ಓರ್ವ ಯುವಕ ಇರಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ಫೆ.18 ರಂದು ಮಧ್ಯಾಹ್ನ ನಡೆದಿದೆ. ಪಾಣೆಮಂಗಳೂರು ಜೈನರ ಪೇಟೆ ನಿವಾಸಿ ಸುಲೈಮಾನ್ ಇರಿತಕ್ಕೆ ಒಳಗಾದವರು. ಸ್ಥಳೀಯ ನಿವಾಸಿ ನಿಸಾರ್ ಇರಿದು ಗಾಯಗೊಳಿಸಿದಾತ.
ಡೈನಿಂಗ್ ಟೇಬಲ್ ಸಾಗಾಟ ಮಾಡಲು ವಾಹನ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಲೇಮಾನ್ ಹಾಗೂ ನಿಸಾರ್ ಮಧ್ಯೆ ಇಂದು ಮಧ್ಯಾಹ್ನ ಜಗಳವಾಗಿದೆ. ಈ ವೇಳೆ ನಿಸಾರ್ ಕತ್ತರಿಯಿಂದ ಸುಲೇಮಾನ್‌ನ ಬಲ ಭುಜಕ್ಕೆ ಇರಿದಿದ್ದಾನೆ.
ಗಾಯಗೊಂಡ ಸುಲೈಮಾನ್ ನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು, ಆತನ ಆರೋಗ್ಯ ಸ್ಥಿರವಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.
ಬಿಗ್ ನ್ಯೂಸ್
Bantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ.
ಮಂಗಳೂರು, ನ.23: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ. ಇವರು ಬಿ.ಸಿ.ರೋಡಿನ ಬ್ಯಾಂಕ್‌ವೊಂದರಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು.
ನವೆಂಬರ್ 20ರಂದು ಕವಿತಾ ಅವರು ನಾಪತ್ತೆಯಾಗಿದ್ದು, ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಗದರಿಸಿದ್ದರಿಂದ ಅಜ್ಜಿಯ ಮನೆಗೆ ಹೋಗುವುದಾಗಿ ತೆರಳಿದ್ದ ಕವಿತಾ ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಪರಾಧ
Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ
ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.
ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.
ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್‌ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
-
ಅಪರಾಧ24 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ಸುಳ್ಯ19 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ22 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ಅಂತರ ರಾಜ್ಯ22 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ನಿಧನ ವಾರ್ತೆ23 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಸ್ಥಳೀಯ19 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ನಿಧನ ವಾರ್ತೆ24 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
-
ಬಿಗ್ ನ್ಯೂಸ್22 hours agoTulu language-ತುಳು ಭಾಷೆ ಅನುಷ್ಠಾನಕ್ಕೆ ಸರ್ಕಾರದಿಂದ ಅಧಿಕೃತ ಆದೇಶ; ಸರ್ಕಾರಿ ಕಚೇರಿಗಳಲ್ಲೂ ತುಳುವಿಗೆ ಮನ್ನಣೆ..!















