Connect with us

ದಕ್ಷಿಣ ಕನ್ನಡ

ವಿಟ್ಲ : ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತ ಪ್ರವಚನ ಆರೋಪಿಸಿ ವಿದ್ಯಾರ್ಥಿಗಳನ್ನು ಹೊರ ಕಳುಹಿಸಿದ ಪ್ರಕರಣ – ಠಾಣೆ ಮುಂದೆ ಹಿಂದೂ ಕಾರ್ಯಕರ್ತರು ಜಮಾಯಿಸಿ ಪ್ರತಿಭಟಿಸಿದ ಬಳಿಕ ಪ್ರಾಂಶುಪಾಲರು ಹಾಗೂ ಸಂಘಟಕರ ವಿರುದ್ದ ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ವಿಟ್ಲ:  ಖಾಸಗಿ ಶಾಲೆಯೊಂದರ ವಿಧ್ಯಾರ್ಥಿಗಳು ಮುಸಲ್ಮಾನ ಸಂಘಟನೆಯೊಂದು ಆಯೋಜಿಸಿದ ಶೈಕ್ಷಣಿಕ ಕಾರ್ಯಾಗಾರದಲ್ಲಿ,  ಭಾಗಿಯಾದ ಘಟನೆಯೂ ವಿವಾದದ ಸ್ವರೂಪ ಪಡೆದು ಪ್ರಕರಣ ದಾಖಲಾದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿ ಫೆ 18 ರಂದು ನಡೆದಿದೆ.

Ad Widget

Ad Widget

Ad Widget

Ad Widget

 ಶೈಕ್ಷಣಿಕ ಕಾರ್ಯಾಗಾರದ ನೆಪದಲ್ಲಿ ರಾಜಕಮಲ್‌ ಎಂಬ ಖಾಸಗಿ ಹಾಲ್‌ಗೆ  ಕರೆಸಿಕೊಂಡು ಅಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿ ಪ್ರಚೋದನಾಕಾರಿ ಭಾಷಣ ಮಾಡಿ ವಿಧ್ಯಾರ್ಥಿಗಳ ಭಾವನೆಗೆ ಧಕ್ಕೆ ತಂದ ಹಾಗೂ  ಮಾನಸಿಕವಾಗಿ ಕಿರುಕುಳ ನೀಡಿರುವ ಬಗ್ಗೆ ವಿಟ್ಲ ಠಾಣೆ ದೂರು ನೀಡಿದ್ದು, ಶಾಲೆಯ ಮುಖ್ಯೋಪಾಧ್ಯಯರ ಸಹಿತ ಮೂವರ ವಿರುದ್ದ ಪೊಲೀಸರು     ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

 ಜನತಾ ವಿದ್ಯಾ ಸಂಸ್ಥೆಯ ಮುಖ್ಯೋಪಾದ್ಯಯರಾದ  ಟಿ  ಆರ್ ನಾಯಕ್‌ , ರಫೀಕ್‌ ಮಾಸ್ಟರ್ ಆತೂರ್ ಹಾಗೂ ನುಸ್ರುತುಲ್‌ ಇಸ್ಲಾಂ ಯಂಗ್‌ ಮೆನ್ಸ್ ಅಸೋಸಿಯಷನ್‌ ಸಂಘಟನಾಕಾರರು  ಆರೋಪಿಗಳಾಗಿದ್ದು , ಅವರ ವಿರುದ್ದ ಐಪಿಸಿ ಕಲಂ: 505 (2) ಜೊತೆಗೆ 34 ರಂತೆ ಪ್ರಕರಣ ದಾಖಲಾಗಿದೆ.  ಬಂಟ್ವಾಳ ತಾಲೂಕು ಕೇಪು ಗ್ರಾಮದ ನೆಕ್ಕರೆ ಮನೆ ನಿವಾಸಿ ಮಾಧವ ಮೂಲ್ಯ ಎಂಬವರು ದೂರುದಾರರು.

Ad Widget

Ad Widget <> Ad Widget

ಏನಿದು ಪ್ರಕರಣ ?



Ad Widget

ಫೆ 18 ರಂದು ನುಸ್ತುತುಲ್ ಇಸ್ಲಾಮಿಕ್ ಯಂಗ್ ಮೆನ್ಸ್ ಅಸೋಸಿಯೇಷನ್ (NIA) ವತಿಯಿಂದ ಅಡ್ಯನಡ್ಕದಲ್ಲಿ ಶೈಕ್ಷಣಿಕ ಕಾರ್ಯಾಗಾರ ನಡೆದಿತ್ತು. ಇದಕ್ಕೆ ಅಡ್ಯನಡ್ಕ ಜನತಾ ಹೈಸ್ಕೂಲ್ ನ ವಿದ್ಯಾರ್ಥಿಗಳು ತೆರಳಿದ್ದರು. ಇದರಲ್ಲಿ  ಇಸ್ಲಾಂ ಮತದ ಬಗ್ಗೆ ಪ್ರವಚನ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ ಹಿಂದೂ ವಿದ್ಯಾರ್ಥಿಗಳನ್ನು ಅಲ್ಲಿಂದ ಹೊರಕ್ಕೆ ಕಳುಹಿಸಿದ್ದಾರೆ . ಈ ಬಗೆಗಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ,    

Ad Widget

Ad Widget

. ಇದಾದ ಬಳಿಕ ವಿಟ್ಲ ಠಾಣೆಗೆ ತೆರಳಿದ ಬಿಜೆಪಿ ಹಾಗೂ ಹಿಂದೂ ಮುಖಂಡರು ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್‌ ಭೇಟಿಯಾಗಿ, ವಿದ್ಯಾರ್ಥಿಗಳನ್ನು ಮಾಹಿತಿ ಕಾರ್ಯಾಗಾರಕ್ಕೆ ಕಳುಹಿಸಿ ಮಕ್ಕಳ ಹಾದಿ ತಪ್ಪಿಸುತ್ತಿರುವ ಪ್ರಾಂಶುಪಾಲರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.  

  ದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ವಿಟ್ಲ ಮಹಾಶಕ್ತಿಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ, ದಯಾನಂದ ಉಜಿರೆಮಾರ್, ಶ್ರೀಕೃಷ್ಣ ವಿಟ್ಲ, ಅಕ್ಷಯ್ ರಜಪೂತ್, ಗಣೇಶ್‌ ಅಡ್ಯನಡ್ಕ, ಹರಿಪ್ರಸಾದ್ ಯಾದವ್, ಕೇವು ಗ್ರಾಮಪಂಚಾಯತ್ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರೀ, ಮಾಜಿ ಅಧ್ಯಕ್ಷ ತಾರಾನಾಥ್ ಆಳ್ವ, ಪುರುಷೋತ್ತಮ ಕಲ್ಲಂಗಳ, ಉಪಾಧ್ಯಕ್ಷ ರಾಘವ ಮಣಿಯಾಣಿ ಸೇರಿದಂತೆ ಹಲವು ಕಾರ್ಯಕರ್ತರು ಠಾಣೆಗೆ ತೆರಳಿ ಪೊಲೀಸರೊಂದಿಗೆ ಮಾತಕತೆ ನಡೆಸಿದರು.

 ದೂರು ನೀಡಿದ ಬಳಿಕವು ಪೊಲೀಸರು ಪ್ರಕರಣ ದಾಖಲಿಸಿಲ್ಲ ತಕ್ಷಣ   ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ  ಶನಿವಾರ ರಾತ್ರಿ 8 ಗಂಟೆಯ ಸುಮಾರಿಗೆ ಠಾಣೆಯ ಮುಂಭಾಗ ನೂರಾರು ಮಂದಿ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದಾರೆ.  ಈ ವೇಳೆ ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರುರವರು ಆಗಮಿಸದ ಹಿನ್ನೆಲೆಯಲ್ಲಿ ಅವರಿಗೆ ಕರೆ ಮಾಡಿ ಮಾಹಿತಿ ನೀಡಲಾಯಿತು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ಜಿಲ್ಲಾಧಿಕಾರಿಯವರ ಬಳಿ ಮಾತನಾಡುವುದಾಗಿ ತಿಳಿಸಿರುವುದಾಗಿ ಮಾಹಿತಿ ಲಭಿಸಿದೆ. ಇದಾದ ಬಳಿಕ ಪೊಲೀಸರು ಮೂವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶೈಕ್ಷಣಿಕ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು ವಿನಃ ಅದರಲ್ಲಿ ಯಾವುದೇ ದುರುದ್ದೇಶವಿಲ್ಲ

ಸಂಘಟಕರ ಮಾಧ್ಯಮ ಪ್ರತಿಕ್ರಿಯೆ

ಪ್ರಾಂಶುಪಾಲರ ನಿರ್ದೇಶನದಂತೆ ಅಲ್ಲಿಗೆ ತೆರಳಿದ ವಿದ್ಯಾರ್ಥಿಗಳಿಗೆ ಅಲ್ಲಿ ಇಸ್ಲಾಂ ಮತದ ಬಗ್ಗೆ ಮತ ಪ್ರವಚನ ಮಾಡಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಹಿಂದೂ ಜಾಗರಣ ವೇದಿಕೆಗೆ ಮಾಹಿತಿ ನೀಡಿದ್ದು ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ

ಹಿಂದೂ ಸಂಘಟನೆ ಪ್ರಮುಖರು
Ad Widget
Click to comment

Leave a Reply

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಅಪರಾಧ

Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?

Published

on



Ad Widget

Ad Widget

Ad Widget

Ad Widget

ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್‌ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.

Ad Widget

Ad Widget

Ad Widget alt="Ad Widget"/>

Ad Widget

ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.

Ad Widget

Ad Widget <> Ad Widget

ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.



Ad Widget

ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.

ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್‌ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Ad Widget
Continue Reading

ಮಂಗಳೂರು

MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ

Published

on



Ad Widget

Ad Widget

Ad Widget

Ad Widget

MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.

Ad Widget

Ad Widget <> Ad Widget

ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.



Ad Widget

ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Ad Widget

Ad Widget

ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.

EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading