ದಕ್ಷಿಣ ಕನ್ನಡ
Rohith Chakrathirtha | ಬ್ರಹ್ಮಕಲಶ ಸಂಭ್ರಮದಲ್ಲಿರುವ ವೇಣೂರು ದೇವಸ್ಥಾನಕ್ಕೆ ಉಪನ್ಯಾಸ ನೀಡಲು ರೋಹಿತ್ ಚಕ್ರತೀರ್ಥ ಆಹ್ವಾನ – ಬಿಲ್ಲವ ಸಂಘದಿಂದ ತೀವ್ರ ವಿರೋಧ : ಅಜಿಲ ಸೀಮೆಯ ಅರಸರ ಭೇಟಿ ಮಾಡಿದ ಬಿಲ್ಲವ ನಿಯೋಗ
ವೇಣೂರು: ಉಡುಪಿ ಯಕ್ಷಗಾನ ಸಮ್ಮೇಳನಕ್ಕೆ ರೋಹಿತ್ ಚಕ್ರತೀರ್ಥರನ್ನು ಕರೆದು ಬಿಲ್ಲವರ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ ಅಜಿಲ ಸೀಮೆಯ ಪಟ್ಟದ ದೇವರಾದ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ರೋಹಿತ್ ಚಕ್ರತೀರ್ಥರನ್ನು (Rohith Chakrathirtha) ಆಹ್ವಾನಿಸಿರುವುದು ಬಿಲ್ಲವರ ಆಕ್ರೋಶಕ್ಕೆ ಕಾರಣವಾಗಿದೆ.
ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಹತ್ತನೇ ತರಗತಿ ಪಠ್ಯದಿಂದ ತೆಗೆದು ಹಾಕಿದ ಪುಸ್ತಕ ಪರಿಷ್ಕರಣ ಸಮಿತಿಯ ಮುಖ್ಯಸ್ಥರಾದ ರೋಹಿತ್ ಚಕ್ರತೀರ್ಥರನ್ನು ‘ಶಿಕ್ಷಣ ಮತ್ತು ಧರ್ಮ’ ಎನ್ನುವ ವಿಚಾರದಲ್ಲಿ ಉಪನ್ಯಾಸ ನೀಡಲು ಸಮಿತಿಯವರು ಕರೆದಿರುವುದು ಬಿಲ್ಲವರ ಆಕ್ರೋಶಕ್ಕೆ ಕಾರಣವಾಗಿದೆ.
ವಿಚಾರದಲ್ಲಿ ಉಂಟಾಗಿರುವ ವಿವಾದದ ಕುರಿತಂತೆ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ| ಪದ್ಮ ಪ್ರಸಾದ್ ಅಜಿಲರವರ ಆಹ್ವಾನದ ಮೇರೆಗೆ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾದ ಚಿದಾನಂದ ಪೂಜಾರಿ ಎಲ್ಲಡ್ಕ ರವರ ನೇತ್ರತ್ವದಲ್ಲಿ ಬಿಲ್ಲವ ಸಮಾಜದ ಪ್ರಮುಖರ ನಿಯೋಗ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪಪ್ರಸಾದ್ ಅಜಿಲರವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ರೋಹಿತ್ ಚಕ್ರತೀರ್ಥ ಉಪನ್ಯಾಸಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.
ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರುಗಳು ಸೇರಿದಂತೆ ಭಗವಾನ್ ಮಹಾವೀರ, ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್, ಕುವೆಂಪು, ರಾಣಿ ಅಬ್ಬಕ್ಕ ಮತ್ತು ಕಯ್ಯಾರ ಕಿಂಇಣ್ಣ ರೈ ಮುಂತಾದ ದಾರ್ಶನಿಕರ ವ್ಯಕ್ತಿತ್ವಕ್ಕೆ ಕುಂದು ಬರುವ ರೀತಿಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ನಡೆಸಿ ಕೊನೆಗೆ ಸರಕಾರದ ಆದೇಶದಂತೆ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯಿಂದ ಪದಚ್ಯುತಗೊಂಡ ವಿಕೃತ ವಿಚಾರಧಾರೆಗಳನ್ನು ಹೊಂದಿರುವ ರೋಹಿತ್ ಚಕ್ರತೀರ್ಥರನ್ನು ಬ್ರಹ್ಮಕಲಶೋತ್ಸವದ ಸಭಾ ಕಾರ್ಯಕ್ರಮಕ್ಕೆ ಆಹ್ವಾನಿಸಬಾರದು ಎಂದು ಒಕ್ಕೊರಲಿನಿಂದ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಾ| ಪದ್ಮಪ್ರಸಾದ್ ಅಜಿಲರವರು ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಗಳ ವಿರೋಧವನ್ನು ದಿಕ್ಕರಿಸಿ ವಿವಾದಿತ ವ್ಯಕ್ತಿಗಳನ್ನು ಆಹ್ವಾನಿಸುವ ಯಾವುದೇ ಉದ್ದೇಶ ನಮಗಿಲ್ಲ. ನಿಮ್ಮ ಭಾವನೆಯನ್ನು ಗೌರವಿಸಿ ವಿವಿಧ ಸಮಿತಿಯವರೊಂದಿಗೆ ಚರ್ಚಿಸಿ ನಿರ್ಧಾರ ತಿಳಿಸುವುದಾಗಿ ಭರವಸೆಯಿತ್ತರು.
ಭೇಟಿಯ ಸಮಯದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಪಿ.ಕೆ ರಾಜು ಪೂಜಾರಿ, ಗುರಿಕಾರರಾದ ವಸಂತ ಕೋಟ್ಯಾನ್, ಪುತ್ತಿಲ, ಮಾಜಿ ಪ್ರಧಾನ ಕಾರ್ಯದರ್ಶಿ ಎಚ್. ಧರ್ಣಪ್ಪ ಪೂಜಾರಿ, ಬಳಂಜ, ಉಪಾದ್ಯಕ್ಷರಾದ ಶೇಖರ ಬಂಗೇರ, ಅಳದಂಗಡಿ ವಲಯಾದ್ಯಕ್ಷರಾದ ಕೊಡಂಗೆ ಸಂಜೀವ ಪೂಜಾರಿ, ವೇಣೂರು ವಲಯಾದ್ಯಕ್ಷರಾದ ಹರೀಶ ಪೂಜಾರಿ ಪೊಕ್ಕಿ, ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾದ ನಿತೇಶ್ ಕೋಟ್ಯಾನ್, ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಮನೋಹರ್ ಕುಮಾರ್, ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಅಶ್ವಥ್ ಕುಮಾರ್, ವೇಣೂರು ಘಟಕದ ಅಧ್ಯಕ್ಷರಾದ ಶ್ರೀಮತಿ ಹರಿಣಿ ಕರುಣಾಕರ ಪೂಜಾರಿ, ಸಂಘದ ನಿರ್ದೇಶಕರಾದ ರಮೇಶ್ ಪೂಜಾರಿ, ಪಡ್ಡಾಯಿ ಮಜಲು, ವಿಶ್ವನಾಥ ಪೂಜಾರಿ, ಕುದ್ಯಾಡಿ, ಸತೀಶ್ ಕಾಶಿಪಟ್ನ, ರವೀಂದ್ರ ಅಮೀನ್, ಬಳಂಜ, ನ್ಯಾಯವಾದಿ ಸತೀಶ್ ಪೂಜಾರಿ, ಪಿ. ಎನ್, ಯುವ ವಾಹಿನಿ ಕೇಂದ್ರ ಸಮಿತಿಯ ಪದಾಧಿಕಾರಿಗಳಾದ ಎಂ.ಕೆ ಪ್ರಸಾದ್, ನವೀನ್ ಪೂಜಾರಿ, ಪಚ್ಚೇರಿ, ನಾರಾವಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅದ್ಯಕ್ಷರಾದ ಯೋಗೀಶ ಪೂಜಾರಿ, ಐಸಿರಿ, ಕಾರ್ಯದರ್ಶಿ ಪ್ರಕಾಶ್ ಕೋಟ್ಯಾನ್, ಡೊಂಕಬೆಟ್ಟು, ಹರೀಶ್ಚಂದ್ರ ಪೂಜಾರಿ ಮತ್ತಿರರು ಉಪಸ್ಥಿತರಿದ್ದರು.
ನಿಧನ ವಾರ್ತೆ
Mangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ. ಕಂಕನಾಡಿಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಮೃತಪಟ್ಟ ದುರ್ದೈವಿ.
ಮಂಗಳೂರು: ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ.
ಕಂಕನಾಡಿಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಮೃತಪಟ್ಟ ದುರ್ದೈವಿ.
ನ.25ರಂದು ಸಂಜೆ ಸುಮಾರು 4.15ರ ವೇಳೆಗೆ ಶಾಲೆ ಮುಗಿದ ಬಳಿಕ ಬಾಲಕ ಮನೆಗೆ ತೆರಳಲು ಶಾಲೆಯ ಮುಂಭಾಗದಲ್ಲಿರುವ ಕಂಕನಾಡಿ–ಫಳ್ನೀರ್ ರಸ್ತೆಯನ್ನು ದಾಟುತ್ತಿದ್ದ. ಈ ವೇಳೆ ಫಳ್ನೀರ್ ಕಡೆಗೆ ತೆರಳಲು ನಿಂತಿದ್ದ ಖಾಸಗಿ ಬಸ್ ಚಾಲಕ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ಏಕಾಏಕಿ ಬಸ್ಸನ್ನು ಬಲಕ್ಕೆ ತಿರುಗಿಸಿ ಚಲಾಯಿಸಿದ್ದಾನೆ ಎನ್ನಲಾಗಿದೆ.
ಬಸ್ಸಿನ ಬಲಭಾಗ ಬಾಲಕನಿಗೆ ಡಿಕ್ಕಿಯಾದ ಪರಿಣಾಮ ಆತ ರಸ್ತೆಗೆ ಎಸೆಯಲ್ಪಟ್ಟಿದ್ದು, ಬಸ್ಸಿನ ಬಲ ಹಿಂಬದಿಯ ಚಕ್ರ ಬಾಲಕನ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಬಸ್ ಚಾಲಕ ಹಾಗೂ ಸ್ಥಳೀಯರು ತಕ್ಷಣವೇ ಸಮೀಪದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಂಜೆ 5.50ರ ಸುಮಾರಿಗೆ ಬಾಲಕ ಮೃತಪಟ್ಟಿದ್ದಾನೆ.
ಶಿಕ್ಷಣ
Philomena-ನ 27 ಮತ್ತು 28 ರಂದು ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ
ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ಡಿ 27 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಡಬ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರೆ. ಫಾ. ಸುನಿಲ್ ಪಿಂಟೋ ವಹಿಸಲಿದ್ದಾರೆ. ನ 28 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗ (ಪೀಡಿಯಾಟ್ರಿಕ್ಸ್) ನ
ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರೀತಮ್ ಫಿಲಿಪ್ ತಾವ್ರೋ ವಹಿಸಲಿದ್ದಾರೆ.

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಲಾಸ್ರಾದೋ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಅ್ಯಂಟೋನಿ ಒಲಿವೆರಾ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀಪ್ರಕಾಶ್ ಬಿ, ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ ಪ್ರಕಾಶ್ ಸಿ. ಎಚ್, ಕವಿತಾ ಕೆ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಾಯಕ್ ಗುಣಿಕ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ ಎ, ಹಾಗೂ ಜೊತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು
Priyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಮಂಗಳೂರು, ನ.26: ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಂಗಳೂರಿನ ತಣ್ಣೀರ್‌ಭವಿಯಲ್ಲಿರುವ ಪ್ರಸ್ತಾವಿತ ಸ್ಥಳವನ್ನು ಪರಿಶೀಲಿಸಿದರು. ಇಲ್ಲಿ ಸುಮಾರು 49 ಎಕರೆ ಭೂಮಿಯನ್ನು ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗಾಗಿ ಗುರುತಿಸಲಾಗಿದೆ.
ಈ ಉಪಕ್ರಮದ ಕುರಿತು ಮಾತನಾಡಿದ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು, “ನಾವು ಒಪ್ಪಿಕೊಂಡರೂ, ಒಪ್ಪಿಕೊಳ್ಳದಿದ್ದರೂ ಎಐ (AI) ಈಗ ನಮ್ಮ ಬದುಕಿನ ಭಾಗವಾಗಿದೆ. ಎಐ ಯುಗದಲ್ಲಿ ಡೇಟಾ ಸೆಂಟರ್‌ಗಳು ಅತ್ಯಗತ್ಯ ಮೂಲಸೌಕರ್ಯಗಳಾಗಿವೆ. ಆದರೆ, ನೀರು ಮತ್ತು ವಿದ್ಯುತ್‌ನ್ನು ಸಮರ್ಥವಾಗಿ ಬಳಸಿಕೊಂಡು, ಪರಿಸರದ ಮೇಲಿನ ನಮ್ಮ ಜವಾಬ್ದಾರಿಗಳಿಗೆ ಯಾವುದೇ ಧಕ್ಕೆಯಾಗದಂತೆ ಈ ಮಹತ್ವದ ಮೂಲಸೌಕರ್ಯವನ್ನು ಸುಸ್ಥಿರ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ತಂತ್ರಜ್ಞಾನ ಆಧಾರಿತ ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಎರಡೂ ಪರಸ್ಪರ ಪೂರಕವಾಗಿ ಸಾಗಬಲ್ಲವು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ” ಎಂದರು.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ ಈ ಉಪಕ್ರಮವನ್ನು ಪರಿಶೀಲಿಸಲಾಗುತ್ತಿದ್ದು, ನವೀಕರಿಸಬಹುದಾದ ಇಂಧನ ಬಳಕೆ, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಪರಿಸರ ಸ್ನೇಹಿ ಡಿಜಿಟಲ್ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.
ಒಟ್ಟು 49 ಎಕರೆ ಭೂಮಿಯಲ್ಲಿ, ಅನ್ವಯವಾಗುವ ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳ ಪ್ರಕಾರ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ನಿರ್ಮಾಣ ಕೈಗೊಳ್ಳಲು ಅವಕಾಶವಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸ್ಥಳದ ಕಾರ್ಯಸಾಧ್ಯತೆ, ಮೂಲಸೌಕರ್ಯದ ಅಗತ್ಯತೆಗಳು ಹಾಗೂ ಪರಿಸರ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು.
ಸ್ಥಳದ ಸೂಕ್ತತೆ, ಅಗತ್ಯ ಮೂಲಸೌಕರ್ಯಗಳ ಗುರುತಿಸುವಿಕೆ ಮತ್ತು ಸಮಗ್ರ ಶ್ವೇತಪತ್ರ ಸಿದ್ಧಪಡಿಸುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಪಾಲುದಾರರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. ಈ ಶ್ವೇತಪತ್ರದಲ್ಲಿ ಸ್ಥಳದ ಅವಕಾಶಗಳು, ಮಿತಿಗಳು ಮತ್ತು ಅಭಿವೃದ್ಧಿಯ ಸಾಧ್ಯತೆಗಳನ್ನು ವಿವರಿಸಲಾಗುವುದು. ಖಾಸಗಿ ವಲಯದ ಕಂಪನಿಗಳು ಹಾಗೂ ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ ನಡೆಸಲು ಇದು ಆಧಾರವಾಗಲಿದೆ.
ಎಐ ಯುಗಕ್ಕೆ ಸುಸ್ಥಿರ ಡಿಜಿಟಲ್ ಮೂಲಸೌಕರ್ಯ
ಕೃತಕ ಬುದ್ಧಿಮತ್ತೆ ಮತ್ತು ಇತರ ಉದಯೋನ್ಮುಖ ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯೊಂದಿಗೆ ಡೇಟಾ ಸೆಂಟರ್‌ಗಳು ಡಿಜಿಟಲ್ ಆರ್ಥಿಕತೆಯ ಅತ್ಯಗತ್ಯ ಮೂಲಸೌಕರ್ಯಗಳಾಗಿ ಹೊರಹೊಮ್ಮುತ್ತಿವೆ. ಈ ಬೆಳವಣಿಗೆಯ ಜೊತೆಗೆ ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಪರಿಸರ ಸಂರಕ್ಷಣಾ ಕ್ರಮಗಳಿಗೂ ಆದ್ಯತೆ ನೀಡುವುದು ಕರ್ನಾಟಕದ ಉದ್ದೇಶವಾಗಿದೆ.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ, ಪರಿಸರದ ಜವಾಬ್ದಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿಯ ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲಿ 1 GW ಸಾಮರ್ಥ್ಯದ ಡೇಟಾ ಸೆಂಟರ್ ಮೂಲಸೌಕರ್ಯವನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ.
ತಣ್ಣೀರ್‌ಭವಿಯಲ್ಲಿ ಪ್ರಸ್ತಾವಿತವಾಗಿರುವ ಡೇಟಾ ಸೆಂಟರ್‌ನಲ್ಲಿ ನವೀಕರಿಸಬಹುದಾದ ಇಂಧನ, ಇಂಧನ ದಕ್ಷತೆಯ ಕಾರ್ಯಾಚರಣೆಗಳು, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಜವಾಬ್ದಾರಿಯುತ ನೀರಿನ ನಿರ್ವಹಣೆಗೆ ಒತ್ತು ನೀಡುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಮೂಲಕ ಕರಾವಳಿ ಪರಿಸರಕ್ಕೆ ಪೂರಕವಾಗಿ ಬೃಹತ್ ಡಿಜಿಟಲ್ ಮೂಲಸೌಕರ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದನ್ನು ತೋರಿಸುವುದು ಉದ್ದೇಶವಾಗಿದೆ.
ಮಂಗಳೂರು, ಮಣಿಪಾಲ ಮತ್ತು ಉಡುಪಿ: ಉದಯೋನ್ಮುಖ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರಗಳು
ಪ್ರಸ್ತಾವಿತ ಡೇಟಾ ಸೆಂಟರ್ ಕರ್ನಾಟಕದ ಕರಾವಳಿ ಭಾಗವನ್ನು ಸಮೃದ್ಧ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ರೂಪಿಸುವ ರಾಜ್ಯದ ವಿಶಾಲ ದೂರದೃಷ್ಟಿಯ ಭಾಗವಾಗಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs), ಸ್ಟಾರ್ಟ್‌ಅಪ್‌ಗಳು, ಡೀಪ್‌ಟೆಕ್, ಸಾಗರ ಜೈವಿಕ ತಂತ್ರಜ್ಞಾನ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಆದ್ಯತೆ ನೀಡುವ ಮೂಲಕ ಮಂಗಳೂರು, ಮಣಿಪಾಲ ಮತ್ತು ಉಡುಪಿಯನ್ನು ಪರಸ್ಪರ ಪೂರಕವಾದ ತಂತ್ರಜ್ಞಾನ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಪ್ರತಿಭಾ ವಿಕಸನಕ್ಕೂ ಒತ್ತು ನೀಡಲಾಗುತ್ತಿದೆ.
ಈ ಪ್ರದೇಶವು ಈಗಾಗಲೇ ಸುಮಾರು ₹5,000 ಕೋಟಿ ಮೌಲ್ಯದ ಐಟಿ ರಫ್ತುಗಳನ್ನು ದಾಖಲಿಸಿದ್ದು, ಕರ್ನಾಟಕದ ತಂತ್ರಜ್ಞಾನ ಆರ್ಥಿಕತೆಗೆ ತನ್ನ ಕೊಡುಗೆಯನ್ನು ಹೆಚ್ಚಿಸುತ್ತಿದೆ. ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ನ್ಯಾನೋ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಗೆ ಉತ್ತೇಜನ ನೀಡುವುದು ಮತ್ತು ಸ್ಥಳೀಯ ಪ್ರತಿಭೆಗಳಿಗೆ ಉನ್ನತ ಮೌಲ್ಯದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಬೆಳವಣಿಗೆಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಹೆಚ್ಚಿನ ಅವಕಾಶಗಳನ್ನು ಕಾಣುತ್ತಿದೆ.
ಬಿಯಾಂಡ್ ಬೆಂಗಳೂರು ಎಂಬ ದೂರದೃಷ್ಟಿಯ ಮೂಲಕ ರಾಜ್ಯದಾದ್ಯಂತ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ತಂತ್ರಜ್ಞಾನ ಕ್ಲಸ್ಟರ್‌ಗಳನ್ನು ನಿರ್ಮಿಸಲು ಕರ್ನಾಟಕ ಬದ್ಧವಾಗಿದೆ. ಈ ಮೂಲಕ ನಾವೀನ್ಯತೆ, ಹೂಡಿಕೆ ಮತ್ತು ಉದ್ಯೋಗಾವಕಾಶಗಳು ಬೆಂಗಳೂರು ಮಹಾನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.
ಪ್ರಸ್ತಾವಿತ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಮುಂದಿನ ತಲೆಮಾರಿನ ಡಿಜಿಟಲ್ ಮೂಲಸೌಕರ್ಯ, ಖಾಸಗಿ ವಲಯದ ಸಹಭಾಗಿತ್ವ ಮತ್ತು ಪರಿಸರ ಜವಾಬ್ದಾರಿಯನ್ನು ಒಂದೆಡೆ ತರುವ ಮಹತ್ವದ ಅವಕಾಶವಾಗಿದೆ. ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಒಟ್ಟೊಟ್ಟಿಗೆ ಸಾಗಬಲ್ಲವು ಎಂಬುದನ್ನು ತೋರಿಸುವ ಮೂಲಕ ಸದೃಢ ಹಾಗೂ ಭವಿಷ್ಯದ ಅಗತ್ಯಗಳಿಗೆ ಸನ್ನದ್ಧವಾಗಿರುವ ತಂತ್ರಜ್ಞಾನ ಆರ್ಥಿಕತೆಯನ್ನು ನಿರ್ಮಿಸುವುದು ಕರ್ನಾಟಕದ ವಿಶಾಲ ಉದ್ದೇಶವಾಗಿದೆ.
-
ಅಪರಾಧ24 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ಸುಳ್ಯ19 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ22 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ಅಂತರ ರಾಜ್ಯ22 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ನಿಧನ ವಾರ್ತೆ23 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಸ್ಥಳೀಯ19 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ನಿಧನ ವಾರ್ತೆ24 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
-
ಬಿಗ್ ನ್ಯೂಸ್22 hours agoTulu language-ತುಳು ಭಾಷೆ ಅನುಷ್ಠಾನಕ್ಕೆ ಸರ್ಕಾರದಿಂದ ಅಧಿಕೃತ ಆದೇಶ; ಸರ್ಕಾರಿ ಕಚೇರಿಗಳಲ್ಲೂ ತುಳುವಿಗೆ ಮನ್ನಣೆ..!















