Connect with us

Uncategorized

ಮುಸ್ಲಿಂ ಯುವಕನ ಕಿರುಕುಳದಿಂದ ನೊಂದು ಆತ್ಮಹತ್ಯೆಗೈದ ಕನ್ಯಾನದ ಬಾಲಕಿಯ ಕುಟುಂಬಕ್ಕೆ ಶಾಸಕರು ಘೋಷಿಸಿದ 10 ಲ. ರೂ. ಪರಿಹಾರ ಧನ, ಮನೆ ಇನ್ನೂ ಕೊಟ್ಟಿಲ್ಲ : ದಸೇಸ

Published

on

Ad Widget

Ad Widget

Ad Widget

Ad Widget

ಪುತ್ತೂರು: ಫೆ 22 :” ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಂಚೆ ವಿಟ್ಲ ಹಾಗೂ ಪುತ್ತೂರಿನಲ್ಲಿ ಅಂಬೇಡ್ಕರ್ ಭವನಕ್ಕೆ ಮಂಜೂರಾದ ಜಾಗದಲ್ಲಿ ಶಂಕು ಸ್ಥಾಪನೆಯಾಗಬೇಕು  ಹಾಗೂ ಮುಸ್ಲಿಂ ಯುವಕನ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಅಪ್ರಾಪ್ತ ಬಾಲಕಿ  ಆತ್ಮಿಕಾಳ ಮನೆಯವರಿಗೆ ಪ್ರತಿಭಟನಾ ಸಭೆಗಳಲ್ಲಿ ಘೋಷಿಸಿದಂತೆ ಪರಿಹಾರ ಧನ, ಮನೆ ಹಾಗೂ ಜಾಗ ನೀಡಬೇಕೆಂದು ಆಗ್ರಹಿಸಿ ಫೆ.27ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಿದ್ದೇವೆ ” ಎಂದು ಎಂದು ದ. ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ. ಸೇಸಪ್ಪ ಬೆದ್ರಕಾಡು  ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು “ವಿದ್ಯಾರ್ಥಿನಿಯಾಗಿದ್ದ ವಿಟ್ಲ ಸಮೀಪದ  ಕನ್ಯಾನ ಕಣಿಯೂರು ನಿವಾಸಿ ಆತ್ಮಿಕಾ ಮುಸ್ಲಿಂ ಯುವಕನ  ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಳು.  ಆಗ ಆಕೆಯ ಮನೆಗೆ ಭೇಟಿ ನೀಡಿದ ಶಾಸಕರು ಹತ್ತು ಲಕ್ಷ ರೂಪಾಯಿ ಪರಿಹಾರ ನೀಡುವ ಭರವಸೆ ನೀಡಿದ್ದರು. ಇದನ್ನು ಬೆಂಬಲಿಸಿ ಬಿಜೆಪಿ ಮುಖಂಡರು ಹಾಗೂ  ಹಿಂದೂ ಮುಖಂಡರುಗಳು ವಿವಿಧ ಸಭೆಗಳಲ್ಲಿ 10 ಲಕ್ಷ ರೂ ಪರಿಹಾರ ಕೊಡಿಸುವ ಭರವಸೆಯನ್ನು ನೀಡಿದ್ದರು. ಇವರು ನೀಡಿದ ಭರವಸೆಯಂತೆ ಸರಕಾರ ಇವರೆಗೆ ಚಿಕ್ಕಾಸಿನ ಪರಿಹಾರ ನೀಡಿಲ್ಲ. ಸರ್ಕಾರ ದಲಿತ ದೌರ್ಜನ್ಯ ಪ್ರಕರಣದಡಿ ಬರುವ ಹಣ 1 ಲಕ್ಷ ಮಾತ್ರ ನೀಡಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದರು

Ad Widget

Ad Widget alt="Ad Widget"/>

Ad Widget

ಶಾಸಕರು  ಸರಕಾರದಿಂದ ಕೊಡಿಸುವುದಾಗಿ ಹೇಳಿದ 10 ಲಕ್ಷ ರೂಪಾಯಿ ಪರಿಹಾರವನ್ನು ಚುನಾವಣೆಗೆ ಮೊದಲು  ನೀಡಬೇಕು. ಇನ್ನೂ ಆಕೆಯ ಮೇಲೆ ನಡೆದ ದೌರ್ಜನ್ಯ ಖಂಡಿಸಿ ನಡೆದ ಪ್ರತಿಭಟನೆ ಸಭೆಯಲ್ಲಿ ಮನೆ ಕಟ್ಟಿಸಿಕೊಡುವ ಅಶ್ವಾಸನೆಯನ್ನು ಕೂಡ ಇದೇ ನಾಯಕರು ಕೊಟ್ಟಿದ್ದರು. ಆದರೇ ಈವರೆಗೆ ಅದು ಕಾರ್ಯ ರೂಪಕ್ಕೆ ಬಂದಿಲ್ಲ. ಆತ್ಮಿಕಾಳ ಹೆತ್ತವರು ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಗ್ರಾ. ಪಂ ಸದಸ್ಯರೊಬ್ಬರು ಮಾನವೀಯ ನೆಲೆಯಲ್ಲಿ ಅನೇಕಲ್ಲು ಎಂಬಲ್ಲಿ ತಾತ್ಕಲಿಕವಾಗಿ ನೀಡಿರುವ ಸಣ್ಣ ಮನೆಯಲ್ಲಿ ವಾಸಿಸುತ್ತಿದ್ದಾರೆ.  ನಾಡಿದ್ದು ನಡೆಯುವ ಈ ಉಪವಾಸ ಸತ್ಯಾಗ್ರಹದಲ್ಲಿ ಆ ಕುಟುಂಬವೂ ಭಾಗವಹಿಸಲಿದೆ ಎಂದರು.

Ad Widget

Ad Widget <> Ad Widget

ಅಂಬೇಡ್ಕರ್ ಭವನಕ್ಕೆ ವಿಟ್ಲದಲ್ಲಿ 2 ಕೋಟಿ ಹಾಗೂ ಪುತ್ತೂರಿನಲ್ಲಿ 10 ಕೋಟಿ ನೀಡಬೇಕೆಂದು ಆಗ್ರಹಿಸಿ 2022  ನವೆಂಬರ್ 14 ರಂದು ಪುತ್ತೂರಿನ ಶಾಸಕರ ಕಛೇರಿ ವರೆಗೆ ಪಾದಯಾತ್ರೆಯಲ್ಲಿ ಸಾಗಿ ಮನವಿ ಸಲ್ಲಿಸಲಾಗಿತ್ತು. ಈ ಸಂದರ್ಭದಲ್ಲಿ  ಬೇಡಿಕೆ ಈಡೇರಿಸಲು ಪೂರ್ಣ ಪ್ರಯತ್ನ ನಡೆಸುವುದಾಗಿ ಅಶ್ವಾಸನೆ ಕೊಟ್ಟಿದ್ದರು. ಆದರೆ ಯಾವುದೇ ಪ್ರಯೋಜನವಾಗದಿರುವುದು ಬೇಸರದ ಸಂಗತಿ. ಹೀಗಾಗಿ ನಾಡಿದ್ದು ನಡೆಸಲುದ್ದೇಶಿಸಿರುವ ಪ್ರತಿಭಟನೆಯಲ್ಲಿ  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲಿಸುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಫೆ. 27 ರಂದು ಬೆಳಗ್ಗೆ 11  ಗಂಟೆಯಿಂದ ಸಾಯಂಕಾಲ 4ಗಂಟೆಯವರೆಗೆ ಪುತ್ತೂರು ಅಮರ್ ಜವಾನ್ ಸ್ಮಾರಕದ  ಬಳಿ ಉಪವಾಸ ಸತ್ಯಾಗ್ರಹ  ನಡೆಸಲಿದ್ದೇವೆ” ಎಂದರು.

Ad Widget

Ad Widget

ದ. ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಯು, ಪುತ್ತೂರು ಪ್ರಧಾನ ಕಾರ್ಯದರ್ಶಿ ಸುಂದರ ನರಿಮೊಗರು, ಬಂಟ್ವಾಳ ಮಾಜಿ ಅಧ್ಯಕ್ಷ ಗಣೇಶ್ ಸೀಗೆಬಲ್ಲೆ ಉಪಸ್ಥಿತರಿದ್ದರು.

Ad Widget
Click to comment

Leave a Reply

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

Uncategorized

Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು

Published

on

Ad Widget

Ad Widget

Ad Widget

Ad Widget

ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.

Ad Widget

Ad Widget <> Ad Widget

ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.

ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.

Ad Widget

Ad Widget

ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.

ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget
Continue Reading

Uncategorized

Soujanya case-Big Breaking: ಸೌಜನ್ಯ ಪ್ರಕರಣ: ಎಸ್‌ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget

Ad Widget <> Ad Widget

ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.

ಇಂದು ಐವರ ಹೇಳಿಕೆಗಳನ್ನು ಎಸ್‌ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.

Ad Widget

Ad Widget

ಈ ನಡುವೆ ತನಿಖಾಧಿಕಾರಿ ಲೋಕೇಶ್ ಹಾಗೂ ಸಹ ತನಿಖಾಧಿಕಾರಿ ಮನೋಜ್ ನಾಯ್ಕ್ ಅವರು ಕೂಡ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!