Connect with us

ಬಿಗ್ ನ್ಯೂಸ್

ಮಂಗಳೂರು : ಟೈಲ್ಸ್ ಫ್ಯಾಕ್ಟರಿಯ ಮೋರಿಯ ಒಳಗಡೆ ಬಾಲಕಿಯ ಶವ – ಅತ್ಯಾಚಾರ ಎಸಗಿ ಕೊಲೆ ನಡೆಸಿರುವ ಶಂಕೆ | ಹದಿನೈದಕ್ಕೂ ಅಧಿಕ ಪ್ಯಾಕ್ಟರಿ ಕೆಲಸಗಾರರನ್ನು ವಶಕ್ಕೆ ಪಡೆದು ತನಿಖೆ – ಅಮಲು ಪದಾರ್ಥ ಸೇವಿಸಿ ಕೃತ್ಯ?

Published

on



Ad Widget

Ad Widget

Ad Widget

Ad Widget

ಮಂಗಳೂರು ತಾಲೂಕಿನ ಉಳಾಯಿಬೆಟ್ಟು ಸಮೀಪದ ಪರಾರಿ ಎಂಬಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್‌ ಟೈಲ್ಸ್ ಫ್ಯಾಕ್ಟರಿಯ ಆವರಣದ ಮೋರಿಯಲ್ಲಿ 8 ವರ್ಷದ ಬಾಲಕಿಯ ಮೃತದೇಹ ಭಾನುವಾರ ಸಂಜೆ ಪತ್ತೆಯಾಗಿದೆ.  ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿ ಕೊಲೆ ಮಾಡಿ ಚರಂಡಿಗೆ ಎಸೆದಿರುವಂತೆ ಮೆಲ್ನೋಟಕ್ಕೆ ಕಂಡುಬಂದಿದ್ದು  ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ದುಷ್ಕರ್ಮಿಗಳ ಕೃತ್ಯ ಎಂಬ ಶಂಕೆ ವ್ಯಕ್ತವಾಗಿದೆ.

Ad Widget

Ad Widget

Ad Widget

Ad Widget

 ಟೈಲ್ಸ್ ಫ್ಯಾಕ್ಟರಿಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಅಸ್ಸಾಂ ಮೂಲದ  ದಂಪತಿಯ ಹಿರಿಯ  ಪುತ್ರಿ ಮೃತ ಬಾಲಕಿ. ಈ ನತದೃಷ್ಟ  ಕುಟುಂಬ ಟೈಲ್ಸ್ ಫ್ಯಾಕ್ಟರಿಯಲ್ಲಿ ದುಡಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲೇ ವಾಸಿಸುತ್ತಿದ್ದರು.

Ad Widget

Ad Widget

Ad Widget alt="Ad Widget"/>

Ad Widget

ಗುರುಪುರ ಸೇತುವೆಯ ಪರಾರಿ ಕ್ರಾಸ್‌ ನಲ್ಲಿ ರಾಜ್‌ ಟೈಲ್ಸ್ ಕಾರ್ಖಾನೆ ಕಾರ್ಯ ನಿರ್ವಹಿಸುತ್ತಿದೆ. ಇಲ್ಲಿ ಕರ್ನಾಟಕದ 10 ಜನ ಹಾಗೂ ಉತ್ತರ ಭಾರತ ಮೂಲದ ಹಲವು ಯುವಕರು , ನಾಲಕೈದು ಮಹಿಳೆಯರ ಸಹಿತ 30ಕ್ಕೂ ಅಧಿಕ ಮಂದಿ ಕೆಲಸ ಮಾಡುತ್ತಿದ್ದಾರೆ.

Ad Widget

Ad Widget <> Ad Widget

  ನ. 21 ರಂದು ಭಾನುವಾರವಾದ ಕಾರಣ ಫ್ಯಾಕ್ಟರಿಗೆ ರಜೆ ಇತ್ತು. ಹಾಗಾಗಿ ಕಾರ್ಮಿಕರೆಲ್ಲರು ವಿರಾಮದಲ್ಲಿದ್ದರು. ಈ ಸಂದರ್ಭ ಸಂಜೆ 4 ಗಂಟೆ ಸುಮಾರಿಗೆ ಬಾಲಕಿ ವಾಸ್ತವ್ಯ ಸ್ಥಳದಿಂದ ನಾಪತ್ತೆಯಾಗಿರುವುದನ್ನು ಗಮನಿಸಿದ ಪೋಷಕರು ಆಕೆಯನ್ನು ಹುಡುಕಲು ಶುರು ಮಾಡಿದ್ದರು.



Ad Widget

ಬಾಲಕಿ ಸುಳಿವು ಸಿಗದೇ ಇದ್ದಾಗ ಬಾಲಕಿಯ ಪೋಷಕರು ಅಲ್ಲೇ ಆವರಣದಲ್ಲಿ ಕ್ರಿಕೆಟ್ ಆಡುತ್ತಿದ್ದ ಹುಡುಗರ ಗಮನಕ್ಕೆ ತಂದರು. ಬಳಿಕ ಪೋಷಕರು ಅವರೊಂದಿಗೆ ಪರಿಸರದಲ್ಲೆಲ್ಲ ಹುಡುಕಾಡಲು ಆರಂಭಿಸಿದರು. ೨ ಗಂಟೆಯ ನಿರಂತರ ಶೋಧದ ಬಳಿಕ ಸಂಜೆ 6 ಗಂಟೆ ಸುಮಾರಿಗೆ ಟೈಲ್ಸ್ ಫ್ಯಾಕ್ಟರಿಯ ಕೊಳಚೆ ನೀರು ಹರಿಯುವ ಚರಂಡಿಯಲ್ಲಿ ಬಾಲಕಿಯ ಮೃತದೇಹ ಬಿದ್ದಿರುವುದು ಕಂಡು ಬಂದಿತ್ತು.

Ad Widget

Ad Widget

 ತಕ್ಷಣ ಸ್ಥಳೀಯರ ನೆರವಿನಿಂದ ಈ ವಿಷಯವನ್ನು ಪೋಲೀಸರ ಗಮನಕ್ಕೆ ತರಲಾಯಿತು. ಮಂಗಳೂರು ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ತೆರಳಿ ಪ್ರಾಥಮಿಕ ತನಿಖೆ ನಡೆಸಿ ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್‍ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಭಾನುವಾರ ರಜಾ ಆದ ಕಾರಣ ಕಾರ್ಮಿಕ ವಲಯದಲ್ಲೇ ಯಾರೋ ಅಮಲು ಪದಾರ್ಥ ಸೇವಿಸಿ ಈ ಕೃತ್ಯ ಎಸಗಿರಬೇಕು ಎಂದು ಶಂಕಿಸಲಾಗಿದೆ. ಟೈಲ್ಸ್ ಫ್ಯಾಕ್ಟರಿಯ ಒಳಗಡೆಯೇ ಈ ಘಟನೆ ನಡೆದಿರುವುದರಿಂದ ಇಲ್ಲಿ ವಾಸವಿದ್ದವರದೇ ಕೃತ್ಯ ಇದಾಗಿರುವ ಸಾಧ್ಯತೆ ದೆ ಎಂದು ಪೋಲೀಸರು ಶಂಕಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪೋಲೀಸರು ಈಗಾಗಲೇ ಅಲ್ಲಿ ವಾಸವಿದ್ದ ಸುಮಾರು 15 ಮಂದಿ ಪುರುಷರನ್ನು ವಿಚಾರಣೆಗೆ ಕರೆದೊಯ್ದಿದ್ದಾರೆ. ಯಾವಾಗ ಈ ಕೃತ್ಯ ನಡೆದಿದೆ, ಮತ್ತು ಇದರಲ್ಲಿ ಒಬ್ಬನೇ ಅಥವಾ ತಂಡ ಈ ಕೃತ್ಯ ನಡೆಸಿದೆಯೇ ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಕೆಲಸಗಾರರ ಪೈಕಿ ಮೂವರು ಪರಾರಿಯಾಗಿದ್ದು ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಾಕ್ಷ್ಯ ನಾಶಕ್ಕೆ ಯತ್ನ: 

ಬಾಲಕಿಯನ್ನು ಕೊಲೆ ಮಾಡಿ ವ್ಯಕ್ತಿ ಅಥವಾ ತಂಡ ಪ್ರಕರಣ ಯಾರ ಗಮನಕ್ಕೂ ಬರಬಾರದು ಎಂಬ ಉದ್ದೇಶದಿಂದ ಮೃತದೇಹವನ್ನು ಕೊಳಚೆ ನೀರು ಹರಿಯುವ ಚರಂಡಿಗೆ ಎಸೆದು ಹೋಗಿದ್ದಾರೆ. ಅಲ್ಲದೆ ಚರಂಡಿಯಲ್ಲಿರುವ ಬೃಹತ್ ಪೈಪ್‍ನ ಒಳಗಡೆ ಮೃತದೇಹವನ್ನು ತುರುಕಿಸಿ ಯಾರ ಗಮನಕ್ಕೂ ಬಾರದಂತೆ ಮಾಡುವ ವಿಕೃತಿ ಮೆರೆದಿರುವುದು ಗಮನಕ್ಕೆ ಬಂದಿದೆ.

ಮೃತಪಟ್ಟ ಕುಟುಂಬದ ದಂಪತಿಗೆ ಮೂವರು ಮಕ್ಕಳಿದ್ದು, ಈಗ ಕೊಲೆಯಾದ ಬಾಲಕಿ ಹಿರಿಯ ಪುತ್ರಿಯಾಗಿದ್ದಾಳೆ. ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ನೇತೃತ್ವದಲ್ಲಿ ಗ್ರಾಮಾಂತರ ಠಾಣೆ ಇನ್‍ಸ್ಪೆಕ್ಟರ್ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ಬಗ್ಗೆ ಮಂಗಳೂರು ಪೊಲೀಸ್‌ ಆಯುಕ್ತ ಎನ್‌ ಶಶಿಕುಮಾರ್‌ ವಿವರಣೆ :

“ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪರಾರಿ ಎಂಬಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆ ಆವರಣದಲ್ಲಿ ಈ ಘಟನೆ ನಡೆದಿದ್ದು, ಯಾರೋ ಎಂಟು ವರ್ಷದ ಬಾಲಕಿಯನ್ನು ಕೊಲೆ ಮಾಡಿ ಎಸೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪೊಷಕರು ಕೂಡಾ ಈ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಲೇ ಕೆಲಸ ಮಾಡುತ್ತಿದ್ದ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಶೀಘ್ರದಲ್ಲಿ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಬಂಧಿಸಲಿದ್ದೇವೆ.”
-ಎನ್.ಶಶಿಕುಮಾರ್, ಮಂಗಳೂರು ಪೊಲೀಸ್ ಆಯುಕ್ತ.

Ad Widget
Click to comment

Leave a Reply

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಅಂತರ ರಾಜ್ಯ

Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ

Published

on



Ad Widget

Ad Widget

Ad Widget

Ad Widget

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.

Ad Widget

Ad Widget <> Ad Widget

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.



Ad Widget

ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.

Ad Widget

Ad Widget

ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.

ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.

ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.

ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading