ಕಾರ್ಯಕ್ರಮಗಳು
ಮುಂದಿನ ತಿಂಗಳು ಬ್ರಹ್ಮಕಲಶೋತ್ಸವ ನಡೆಯಲಿರುವ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ- ಆಮಂತ್ರಣ ಪತ್ರ ಬಿಡುಗಡೆ
ಪುತ್ತೂರು: ಕೋಡಿಬಾಂಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಮುಂದಿನ ತಿಂಗಳು ನಡೆಯಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅದರ ಪೂರ್ವಭಾವಿಯಾಗಿ ನಡೆಯುವ ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವೂ ನ.11ರಂದು ದೇಗುಲದಲ್ಲಿ ನಡೆಸಲಾಯಿತು.
ದೇವಸ್ಥಾನದ ಅವರಣದಲ್ಲಿ ನಡೆದ ಚಪ್ಪರ ಮುಹೂರ್ತ ಕಾರ್ಯಕ್ರಮದಲ್ಲಿ ದೇಗುಲದ ಪ್ರಧಾನ ಅರ್ಚಕರಾದ ರಾಮಕೃಷ್ಣ ಭಟ್ ಧಾರ್ಮಿಕ ವಿಧಿ ವಿದಾನಗಳನ್ನು ನಡೆಸಿದರು. ಪ್ರಗತಿಪರ ಕೃಷಿಕ ಕೇಶವ ಭಂಡಾರಿ ಕೈಪರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗೋಪಾಲ ಶೆಟ್ಟಿ ಕಳೆಂಜರವರು ಚಪ್ಪರದ ಕಂಬವನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಈ ಸಂದರ್ಭ ಚಪ್ಪರ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಹಕರಿಸಿದರು.
ಬಳಿಕ ಬ್ರಹ್ಮಕಲಶೋತ್ಸವದ ಮುದ್ರಿತ ಅಮಂತ್ರಣ ಪತ್ರಿಕೆಯನ್ನು ದೇಗುಲದ ಸತ್ಯ ಧರ್ಮ ನಡೆಯಲ್ಲಿಟ್ಟು ಪೂಜೆ ಸಲ್ಲಿಸಲಾಯಿತು .ಈ ವೇಳೆ .ಬ್ರಹ್ಮಕಲಶೋತ್ಸವ ಸಾಂಗವಾಗಿ ನೆರವೇರಲು ದೇವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವೂ ಚಿನ್ಮಯಿ ಸಂಭಾಗಣದಲ್ಲಿ ನಡೆಸಲಾಯಿತು.

ಆಮಂತ್ರಣ ಪತ್ರಿಕೆಯನ್ನು ಧಾರ್ಮಿಕ ಮುಖಂಡ ಸೀತಾರಾಮ ರೈ ಬೆಳೆಯೂರುಗುತ್ತು, ಉಪ್ಪಿನಂಗಡಿ ಯುವವಾಹಿನಿ ಘಟಕದ ಅಧ್ಯಕ್ಷ ಚಂದ್ರಶೇಖರ ಸನಿಲ್ ಬಿಡುಗಡೆಗೊಳಿಸಿದರು. ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಉದ್ಯಮಿ ಅಶೋಕ್ ಕುಮಾರ್ ರೈ, ಕಾರ್ಯಾಧ್ಯಕ್ಷ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ತು, ಸಂಚಾಲಕ ಗಂಗಾಧರ ಶೆಟ್ಟಿ ಮಠಂತಬೆಟ್ಟು, ಕೋಶಾಧಿಕಾರಿ ನಿರಂಜನ ರೈ ಮಠಂತಬೆಟ್ಟು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕರುಣಾಕರ ಸಾಮಾನಿ ಸಂಪಿಗೆದು ಕಾರ್ಯಕ್ರಮ ನಿರೂಪಿಸಿ, ಜಗನ್ನಾಥ ಶೆಟ್ಟಿ ನಡುಮನೆ ವಂದಿಸಿದರು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.
ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.
ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.
ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.
ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.
ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.
ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.
ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
-
ನಿಧನ ವಾರ್ತೆ11 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು10 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು7 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ11 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ11 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ11 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ11 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ12 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?






















