ಚಿನ್ನ-ಬೆಳ್ಳಿ ದರ
Gold and Silver Price Today: ಇಳಿಕೆಯತ್ತ ಚಿನ್ನ ಬೆಳ್ಳಿ ದರ – ಇಂದಿನ ರೇಟ್ ಎಷ್ಟು ಗೊತ್ತಾ?
ಬೆಂಗಳೂರು: ಪ್ರಸ್ತುತ
ದೇಶದಲ್ಲಿ ಈಗ ಶುಭ ಸಮಾರಂಭಗಳ ಸೀಸನ್. ಮದುವೆ, ಮುಂಜಿ, ಹರಿದಿನ ಹೀಗೆ ತರಹವೇರಿ ಕಾರ್ಯಕ್ರಮಗಳು ನಡೆಯುತ್ತಿದ್ದು , ಹೀಗಾಗಿ ಚಿನ್ನಾಭರಣಗಳಿಗೂ ಬೇಡಿಕೆ ಹೆಚ್ಚಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ (Gold and Silver price) ಇಂದು (ಫೆ.28, ಮಂಗಳವಾರ) ಅಲ್ಪ ಇಳಿಕೆಯಾಗಿದೆ. ಬೆಳ್ಳಿಯ ಧಾರಣೆಯಲ್ಲೂ ಇಳಿಕೆ ಕಂಡು ಬಂದಿದೆ.
Today Gold Rate : ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ – Gold and Silver Rate in Bangalore
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price)ಯಲ್ಲಿ 160 ರೂಪಾಯಿ ಇಳಿಕೆಯಾಗಿದ್ದು, 56,070 ರೂಪಾಯಿಗೆ ತಲುಪಿದೆ. ನಿನ್ನೆ ಅದು 56,230 ರೂಪಾಯಿಯಾಗಿತ್ತು. ಅದೇ ರೀತಿಯಾಗಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂಪಾಯಿ ತಗ್ಗಿದ ನಂತರ 51,400 ರೂಪಾಯಿಗೆ ತಲುಪಿದೆ. ನಿನ್ನೆ 51,550 ರೂಪಾಯಿ ಇತ್ತು.
ಒಂದು ಕೆಜಿ ಬೆಳ್ಳಿ ಬೆಲೆ ಇಂದು 69,000 ರೂಪಾಯಿ ಇದೆ. ಬೆಳ್ಳಿ ಬೆಲೆಯಲ್ಲಿ ಇವತ್ತು 1,000 ರೂಪಾಯಿ ಕಡಿಮೆಯಾಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬಹುತೇಕ ಎಲ್ಲಾ ಕಡೆ ಇಂದು ಇದೇ ದರಗಳಲ್ಲಿ ಮಾರಾಟವಾಗುತ್ತಿವೆ.
ದೇಶದ ಇತರೆ ಪ್ರಮುಖ ನಗರಗಲ್ಲಿನ ಚಿನ್ನ, ಬೆಳ್ಳಿ ದರಗಳು:
Gold and silver rate in india: ಹೈದರಾಬಾದ್ ನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಮೇಲೆ 160 ರೂಪಾಯಿ ತಗ್ಗಿದ ನಂತರ 56,020 ರೂಪಾಯಿ ಇದೆ. ನಿನ್ನೆ 56,180 ರೂಪಾಯಿ ಇತ್ತು. ಅದೇ ರೀತಿಯಾಗಿ 22 ಕ್ಯಾರೆಟ್ ಚಿನ್ನದ ದರದಲ್ಲಿ 150 ರೂಪಾಯಿ ಇಳಿಕೆಯ ನಂತರ 51,350 ರೂಪಾಯಿಯಲ್ಲಿ ಮಾರಾಟವಾಗುತ್ತಿದೆ. ಈ ಬೆಲೆ ನಿನ್ನೆ 51,500 ರೂಪಾಯಿ ಇತ್ತು.
ಹೈದರಾಬಾದ್ ಮಾರುಕಟ್ಟೆಯಲ್ಲೂ ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ 1,000 ರೂಪಾಯಿ ಇಳಿಕೆಯಾಗಿದೆ. ಪ್ರಸ್ತುತ 69,000 ರೂಪಾಯಿಗೆ ವ್ಯಾಪಾರ ಆಗುತ್ತಿದೆ. ವಿಜಯವಾಡದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 51,350 ಆಗಿದೆ. 24 ಕ್ಯಾರೆಟ್ ಚಿನ್ನಕ್ಕೆ 56,020 ರೂಪಾಯಿ ಇದೆ. ಇಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ 69,000 ರೂಪಾಯಿ ಇದೆ. ವಿಶಾಖಪಟ್ಟಣಂ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 51,350 ರೂಪಾಯಿ ಆಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ 56,020 ರೂಪಾಯಿಗೆ ಬಂದು ನಿಂತಿದೆ.
ದೇಶದ ಇತರ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ವ್ಯತ್ಯಾಸವಿದೆ. ಬೆಂಗಳೂರು, ಹೈದರಾಬಾದ್ ಗಿಂತ ಚೆನ್ನೈನಲ್ಲಿ ಚಿನ್ನದ ಬೆಲೆ ಸ್ವಲ್ಪ ಕಡಿಮೆಯಾಗಿದೆ. 22 ಕ್ಯಾರೆಟ್ ಆಭರಣ ಚಿನ್ನದ ಬೆಲೆಯಲ್ಲಿ 90 ರೂಪಾಯಿ ತಗ್ಗಿದ ನಂತರ 52,010 ರೂಪಾಯಿಗೆ ತಲುಪಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 100 ರೂಪಾಯಿ ಇಳಿಕೆಯಾದ ಬಳಿಕ 56,740 ರೂಪಾಯಿ ಇದೆ, ನಿನ್ನೆ 56,840 ರೂಪಾಯಿಯಲ್ಲಿ ವಹಿವಾಟು ನಡೆಸಿತ್ತು. ಚೆನ್ನೈನಲ್ಲೂ ಕೆಜಿ ಬೆಳ್ಳಿ 69,000 ರೂಪಾಯಿ ಇದೆ.
ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 51,350 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 56,020 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಬೆಳ್ಳಿ ಬೆಲೆಯಲ್ಲಿ 700 ರೂಪಾಯಿ ಇಳಿಕೆಯಾಗಿದೆ. ಪ್ರಸ್ತುತ ಅಲ್ಲಿ ಕೆಜಿ ಬೆಳ್ಳಿ ಬೆಲೆ 66,800 ರೂಪಾಯಿ ಇದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 51,500 ರೂ., 24 ಕ್ಯಾರೆಟ್ ಚಿನ್ನದ ಬೆಲೆ 56,170 ರೂಪಾಯಿ ಆಗಿದೆ.
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!
ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.
ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.
-
ಬಿಗ್ ನ್ಯೂಸ್20 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್13 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ18 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು21 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized20 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್21 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ19 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್19 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















