ಪುತ್ತೂರು
Koila Farm | ಕೊಯಿಲ ಫಾರ್ಮ್ ನಲ್ಲಿ ಎರಡನೇ ದಿನವೂ ಭಾರಿ ಬೆಂಕಿ ಅವಘಡ : ಬೆಂಕಿ ನಂದಿಸಲು ಹರಸಾಹಸ ಪಡುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು
ಕಡಬ: ಕಡಬ ತಾಲೂಕಿನ ರಾಮಕುಂಜ ಸಮೀಪದ ಕೊಯಿಲ ಪಶು ಸಂಗೋಪನ ಮತ್ತು ತರಬೇತಿ ಕೇಂದ್ರದಲ್ಲಿ ಎರಡನೇ ದಿನವೂ ಬೆಂಕಿ ಅವಘಡ (Koila Farm) ಸಂಭವಿಸಿದೆ.
ಪ್ರಕೃತಿ ರಮಣೀಯವಾದ ಹಸಿರು ಹುಲ್ಲುಗಾವಲಿಗೆ ಪ್ರಸಿದ್ದಿ ಪಡೆದಿದ್ದ ಕೇಂದ್ರದಲ್ಲಿ ಈ ಕೇಂದ್ರದಲ್ಲಿ ಸದ್ಯ ಬೇಸಿಗೆ ಕಾಲವಾದುದರಿಂದ ಒಣ ಹುಲ್ಲುಗಳಿಂದ ಆವೃತ್ತವಾಗುವುದು ಪ್ರತಿ ವರ್ಷವೂ ನಡೆಯುತ್ತದೆ. ಕೆಲವು ಕಿಡಿಗೇಡಿಗಳ ಕೃತ್ಯ ಎನ್ನುವ ಆರೋಪ ಕೇಳಿಬಂದಿದೆ.
ನಿನ್ನೆ ಮಧ್ಯಾಹ್ನದ ಸುಮಾರಿಗೆ ಈ ಒಣಹುಳ್ಳುಗಳಿಗೆ ಬೆಂಕಿ ತಗುಲಿದ್ದು ಕೆಲವೇ ನಿಮಿಷಗಳಲ್ಲಿ ಬೆಂಕಿಯ ಕೆನ್ನಾಲಿಗೆ ಎಕರೆಗಟ್ಟಲೆ ದೂರ ಆವರಿಸಿತ್ತು. ಬೆಂಕಿಯಿಂದ ಸೃಷ್ಟಿಯಾದ ದಟ್ಟ ಹೊಗೆ ಮುಗಿಲೆತ್ತರಕ್ಕೆ ಚಾಚಿದ್ದು ಈ ದೃಶ್ಯ ನೋಡಲು ಭಯನಕವಾಗಿತ್ತು .
ಇಂದು ಬೆಳಗ್ಗೆ 10 ಗಂಟೆಯಿಂದಲೇ ಬೆಂಕಿ ಅನಾಹುತ ಸಂಭವಿಸಿದೆ. ಬಾರಿ ವೇಗವಾಗಿ ಬೆಂಕಿ ನೂರಾರು ಎಕರೆ ಜಾಗಕ್ಕೆ ಆವರಿಸಿದೆ.
ಅಲ್ಲಿ ನೂರಾರು ಮಲೆನಾಡ ಗಿಡ್ಡ ದೇಶಿ ಗೋವುತಳಿ ಸಂರಕ್ಷಿಸಪಡುತಿದ್ದವೆ. ಬೆಂಕಿಯ ತೀವ್ರತೆಗೆ ತೆಂಗಿನ ಮರಗಳಿಗೂ ಹಾನಿ ಮಾಡಿವೆ.
ಬೆಳಗ್ಗೆಯಿಂದಲೇ ಜಾನುವಾರು ಸಂವರ್ಧನ ಮತ್ತು ತರಬೇತಿ ಕೇಂದ್ರದ ನಿರ್ದೇಶಕ ಡಾ.ಧರ್ಮಪಾಲ ಕರಂದ್ಲಾಜೆ ಹಾಗೂ ಸಿಬ್ಬಂದಿವರ್ಗ ಅಲ್ಲಿರುವ ಟ್ರ್ಯಾಕ್ಟರ್ ನಲ್ಲಿ ನೀರು ಸಾಗಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಪಡುತಿದ್ದಾರೆ.
ಮಧ್ಯಾಹ್ನ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಬೆಂಕಿ ನಂದಿಸಲು ಶ್ರಮವಹಿಸುತಿದ್ದಾರೆ. ನಿನ್ನೆ ಹಾಗೂ ಇಂದು ಅಂದಾಜು 200 ಎಕರೆಯಷ್ಟು ಪ್ರದೇಶ ಬೆಂಕಿಗಾಹುತಿಯಾಗಿದೆ.
ಶಿಕ್ಷಣ
Sanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಸಾನಿಧ್ಯ ಎಸ್. ರಾವ್ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ
ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಪುತ್ತೂರು: ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಪ್ರತಿಸ್ಪರ್ಧಿಗಳಿಗೆ ತೀವ್ರ ಪೈಪೋಟಿ ನೀಡಿದ ಸಾನಿಧ್ಯ, ತಮ್ಮ ಚೆಸ್ ಕೌಶಲ್ಯ ಮತ್ತು ಅತ್ಯುತ್ತಮ ಪ್ರದರ್ಶನದ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಯೊಂದಿಗೆ ಅವರು ಮುಂದಿನ ಹಂತದ ಎಸ್ಜಿಎಫ್ಐ (School Games Federation of India) ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.
ಸುದೇಶ್ ಮತ್ತು ಶ್ರುತಿ ದಂಪತಿಯ ಪುತ್ರಿಯಾದ ಸಾನಿಧ್ಯ, ನಿರಂತರ ಪರಿಶ್ರಮ, ಏಕಾಗ್ರತೆ ಹಾಗೂ ಕ್ರೀಡಾ ಕೌಶಲ್ಯದ ಮೂಲಕ ಈ ಮಹತ್ವದ ಯಶಸ್ಸು ಸಾಧಿಸಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಮುಂದಿನ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.
ಕಾರ್ಯಕ್ರಮಗಳು
‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಪುತ್ತೂರು: ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ.

ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಹ್ಯಾವೆಲ್ಸ್ ಕಂಪನಿಯ ವಿದ್ಯುತ್ ಉಪಕರಣಗಳು ಹಾಗೂ ಗೃಹ ಬಳಕೆಯ ವಿವಿಧ ಉತ್ಪನ್ನಗಳು ಮತ್ತು ಪರಿಹಾರಗಳ ಸಂಪೂರ್ಣ ಶ್ರೇಣಿಯನ್ನು ಗ್ರಾಹಕರು ವೀಕ್ಷಿಸಿ, ಮಾಹಿತಿ ಪಡೆಯಲು ಇಲ್ಲಿ ಅವಕಾಶವಿರಲಿದೆ.

1997ರಿಂದ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯು ಈ ನೂತನ ಕೇಂದ್ರದ ಮೂಲಕ ಗ್ರಾಹಕರಿಗೆ ಹ್ಯಾವೆಲ್ಸ್ ಉತ್ಪನ್ನಗಳ ಪರಿಚಯ ಹಾಗೂ ಉತ್ತಮ ಖರೀದಿ ಅನುಭವ ಒದಗಿಸುವ ಉದ್ದೇಶ ಹೊಂದಿದೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ‘ಬಿಜ್ಫೆಸ್ಟ್ 2K26’
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಪುತ್ತೂರು, ಅ. 7: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಪಿಯು ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ, ವ್ಯವಹಾರಿಕ ಸೃಜನಶೀಲತೆ, ಸಂವಹನ ಕೌಶಲ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಿದ ಮೇಳದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.
ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೆರೋ ಅಧ್ಯಕ್ಷತೆ ವಹಿಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಫಿನ್ಸ್ಟ್ರಾಟ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ನ ಸೀನಿಯರ್ ಅಸೋಸಿಯೇಟ್ ಜೋಸ್ವಿತಾ ಲೊರೇನ್ ಲೋಬೊ ಉದ್ಘಾಟಕರಾಗಿ ಭಾಗವಹಿಸಿದರು.
ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಕಲಿಕೆ, ನವೀನ ಚಿಂತನೆ, ಉದ್ಯಮಶೀಲತೆ ಹಾಗೂ ಕೌಶಲಾಭಿವೃದ್ಧಿಯನ್ನು ಬೆಳೆಸುವ ಅಗತ್ಯವನ್ನು ಗಣ್ಯರು ಒತ್ತಿಹೇಳಿದರು. ಸಾಂಪ್ರದಾಯಿಕ ತರಗತಿ ಕಲಿಕೆಯನ್ನು ಮೀರಿ, ನೈಜ ಜಗತ್ತಿನ ವ್ಯವಹಾರಿಕ ಸನ್ನಿವೇಶಗಳಲ್ಲಿ ತಮ್ಮ ಜ್ಞಾನ ಮತ್ತು ಕೌಶಲಗಳನ್ನು ಅನ್ವಯಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವುದು ಬಿಜ್ಫೆಸ್ಟ್ನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಲಾಯಿತು.

ಮೇಳದಲ್ಲಿ ವಾಣಿಜ್ಯ ಹಾಗೂ ವ್ಯವಹಾರಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳು ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ಸಾಮರ್ಥ್ಯ, ಉದ್ಯಮಶೀಲ ಚಿಂತನೆ, ಸೃಜನಶೀಲತೆ, ಹಣಕಾಸು ಅರಿವು, ಸಂವಹನ ಕೌಶಲ, ನಾಯಕತ್ವ, ತಂಡಭಾವನೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸುವಂತಿದ್ದವು. ವಿವಿಧ ಶಿಕ್ಷಣ ಸಂಸ್ಥೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಆರೋಗ್ಯಕರ ಸ್ಪರ್ಧೆ ಹಾಗೂ ಸಹಕಾರದ ವಾತಾವರಣ ನಿರ್ಮಿಸಿದರು.
ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಪಿಯು ಕಾಲೇಜು, ಪುತ್ತೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ಪಡೆದುಕೊಂಡಿತು. ಅಂಬಿಕಾ ಪಡವಿ ಪೂರ್ವ ವಿದ್ಯಾಲಯ, ಪುತ್ತೂರು ಸಮಗ್ರ ರನ್ನರ್ಅಪ್ ಸ್ಥಾನ ಗಳಿಸಿತು.
ಪದವಿ ವಿಭಾಗದಲ್ಲಿ ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರೆ, ತ್ರಿಶಾ ಕಾಲೇಜು, ಮಂಗಳೂರು ಸಮಗ್ರ ರನ್ನರ್ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತೋರಿದ ಸತತ ಸಾಧನೆ, ಸಿದ್ಧತೆ, ತಂಡಕಾರ್ಯ ಹಾಗೂ ಪ್ರತಿಭೆಗೆ ಈ ಫಲಿತಾಂಶ ಸಾಕ್ಷಿಯಾಯಿತು.
ವಿಜೇತರಿಗೆ ಪ್ರಶಸ್ತಿ ಪ್ರದಾನ
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ವಹಿಸಿದ್ದರು. ಪುತ್ತೂರಿನ ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೊದ ಮಾಲೀಕ ಇಶಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳ ವಿಜೇತರು ಹಾಗೂ ರನ್ನರ್ಅಪ್ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೇಳದಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಣ ಸಂಸ್ಥೆಗಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.
-
ದಕ್ಷಿಣ ಕನ್ನಡ19 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ17 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಕಾರ್ಯಕ್ರಮಗಳು11 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಸುಳ್ಯ19 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized18 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ನಿಧನ ವಾರ್ತೆ17 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಕಾರ್ಯಕ್ರಮಗಳು11 hours agoPuttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
-
ಬಿಗ್ ನ್ಯೂಸ್18 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ



















