ದಕ್ಷಿಣ ಕನ್ನಡ
Puttur Bjp ಪಕ್ಷದ ಎಲ್ಲೇ ಮೀರಿದರೆ ಎಷ್ಟೇ ದೊಡ್ಡ ನಾಯಕನಾದರೂ ಶಿಸ್ತು ಕ್ರಮ – ಪುತ್ತೂರು ಶಾಸಕರ ಕಾರ್ಯವೈಖರಿಗೆ ಜನರ ಮೆಚ್ಚುಗೆ – ಮುಂದಿನ ಬಾರಿ 30 ಸಾವಿರ ಮತಗಳಿಂದ ಗೆಲುವು : ಬಿಜೆಪಿ ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ
Puttur Bjp Election preparation ಪುತ್ತೂರು : ಮಾ 2 : ಶಾಸಕ ಸಂಜೀವ ಮಠಂದೂರು ( Sanjeeva Matanduru) ಕಾರ್ಯ ವೈಖರಿ ಪುತ್ತೂರು ಕ್ಷೇತ್ರದ ಜನತೆಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಖುಷಿ ತಂದಿದ್ದು ಮುಂದಿನ ಬಾರಿ ಮತ್ತೆ ಇಲ್ಲಿ ಗೆದ್ದು ಬರಲಿದ್ದು ಅಂತರ 30 ಸಾವಿರಕ್ಕೆ ಹಿಗ್ಗಲಿದೆ ಎಂದು ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಮಾ 2 ರಂದು ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.
ಮುಂದಿನ ವಿಧಾನ ಸಭೆ ಚುನಾವಣೆಗೆ ಪಕ್ಷ ಸಂಪೂರ್ಣ ಸಜ್ಜಾಗಿದ್ದು, ಸಿದ್ದತೆಯ ಬಾಗವಾಗಿ ಮಾ.11ರಂದು ಪುತ್ತೂರಿಗೆ ವಿಜಯಸಂಕಲ್ಪ ಯಾತ್ರೆ ಆಗಮಿಸಲಿದ್ದು, ಸಾರ್ವಜನಿಕ ಸಭೆ ನಡೆಯಲಿದೆ. ಇದರಲ್ಲಿ ರಾಜ್ಯದ ನಾಯಕರು ಭಾಗವಹಿಸಲಿದ್ದಾರೆ. ಮಾ 5 ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರಿನ ಒಕ್ಕಲಿಗ ಭವನದಲ್ಲಿ ಜಿಲ್ಲಾ ಮಟ್ಟದ ಎಸ್ಟಿ ಸಮಾವೇಶ ನಡೆಯಲಿದೆ ಎಂದರು.
ನವೆಂಬರ್ ನಲ್ಲಿ ಮಂಗಳೂರಿನಲ್ಲಿ ನಡೆದ ಪ್ರಧಾನಿ ಮೋದಿ ಕಾರ್ಯಕ್ರಮ ಹಾಗೂ ಜನವರಿಯಲ್ಲಿ ಪುತ್ತೂರಿನಲ್ಲಿ ಜರುಗಿದ ಅಮಿತ್ ಷಾ ಕಾರ್ಯಕ್ರಮದಲ್ಲಿ ಪುತ್ತೂರಿನ 220 ಮತಗಟ್ಟೆಗಳ ಸರಿ ಸುಮಾರು 20 ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗಿದ್ದರು. ಡಿಸೆಂಬರ್ ತಿಂಗಳಿನಲ್ಲಿ ಬೂತ್ ವಿಜಯಿ ಅಭಿಯಾನ ನಡೆದಿತ್ತು. ಈ ಸಂದರ್ಭ ಪ್ರತಿ ಬೂತ್ ನಲ್ಲಿ ಪೇಜ್ ಪ್ರಮುಖ್ ರಚನೆ , ವಾಟ್ಸಾಪ್ ಗ್ರೂಪ್ ರಚನೆ, ಮನ್ ಕಿ ಬಾತ್ ಪ್ರದರ್ಶನ, ಕಾರ್ಯಕರ್ತನ ಮನೆಯಲ್ಲಿ ಪಕ್ಷದ ದ್ವಜ ಹಾರಿಸುವ ಕಾರ್ಯಕ್ರಮ ಮಾಡಲಾಗಿತ್ತು. ಜನವರಿಯಲ್ಲಿ ವಿಜಯ ಸಂಕಲ್ಪ ಅಭಿಯಾನ ನಡೆಸಲಾಗಿದ್ದು, ಬೂತ್ಮಟ್ಟದಲ್ಲಿ ಜನ ಸಂಪರ್ಕ, ಫಲಾನುಭವಿಗಳ ಸಂಪರ್ಕ, ಶಾಸಕರ ಸಾಧನೆಯ ಕರ ಪತ್ರ ಹಂಚಿಕೆ, ಮನೆಯ ಗೋಡೆಗಳಿಗೆ ಸ್ಟಿಕರ್ ಅಂಟಿಸುವ ಕಾರ್ಯ ನಡೆಸಲಾಗಿತ್ತು.
ಮಾರ್ಚ್ ಎಫ್ರಿಲ್ ತಿಂಗಳಿನಲ್ಲಿ ರಾಜ್ಯದಾದ್ಯಂತ ವಿಜಯ ಸಂಕಲ್ಪ ಯಾತ್ರೆ, ಮೋರ್ಚಾಗಳ ಯಾತ್ರೆ, ಫಲಾನುಭವಿಗಳ ಸಮಾವೇಶ, ರಾಜ್ಯ ಹಾಗೂ ಕೇಂದ್ರಗಳ ಸಾಧನೆಗಳನ್ನು ಪ್ರದರ್ಶಿಸುವ ಪ್ರಗತಿ ರಥ ಡಿಸ್ಪ್ಲೇ ವಾಹನ, ಪ್ರಣಾಳಿಕೆಗೆ ಸಲಹೆ ಪಡೆಯುವ ಅಭಿಯಾನ ಹೀಗೆ ಒಟ್ಟು 5 ಅಂಶಗಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಪುತ್ತೂರಿನಲ್ಲಿ ಮಾರ್ಚ್ ತಿಂಗಳ ಮೊದಲೆರಡು ವಾರದಲ್ಲಿ ವಿಜಯ ಸಂಕಲ್ಪ ಯಾತ್ರೆ ಹಾಗೂ ಎಸ್ಟಿ ಮೋರ್ಚಾ ಸಮಾವೇಶ ನಡೆಯಲಿದೆ ಎಂದರು.
ಇನ್ನು ಪುತ್ತೂರಿನ ಶಾಶಕ ಮಠಂದೂರುರವರು ಕಳೆದ 5 ವರ್ಷಗಳಲ್ಲಿ ಮಾಡಿದ ಕಾರ್ಯಗಳು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ವಿಶೇ಼ಷವಾಗಿ ಇಲ್ಲಿನ ಅರ್ಥಿಕತೆಗೆ ಒತ್ತು ಕೊಡುವ ನಿಟ್ಟಿನಲ್ಲಿ ಅಡಿಕೆಯ ಕನಿಷ್ಟ ಆಮದು ಬೆಲೆಯನ್ನು ಹೆಚ್ಚಳಗೊಳಿಸುವಲ್ಲಿ ಮಾಡಿದ ಪ್ರಯತ್ನ ಮತ್ತು ಒಂದು ಸಾವಿರ ಕ್ಕೂ ಅಧಿಕ ಅಕ್ರಮ ಸಕ್ರಮ ಕಡತಗಳನ್ನು ವಿಲೇವಾರಿಗೊಳಿಸಿದ್ದು ಜನಮಾನಸಕ್ಕೆ ಸಂತಸ ತಂದಿದೆ ಎಂದರು
ಪುತ್ತೂರು ಬಿಜೆಪಿಯ ಭದ್ರಕೋಟೆ. ಇಲ್ಲಿ ಹಾಗೂ ಸುಳ್ಯದಲ್ಲಿನ ಪಕ್ಷದ ಸಂಘಟನೆ ರಾಷ್ಟ್ರೀಯ ಮಟ್ಟದಲ್ಲಿ ಮಾದರಿ ಎನಿಸಿದೆ. ಪಕ್ಷವು ಶಿಸ್ತುಬದ್ದವಾಗಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದ್ದು ಕಾರ್ಯಶೈಲಿಯಲ್ಲಿ ಹಾಗೂ ಬದ್ದತೆಯಲ್ಲಿ ರಾಜಿ ಮಾಡಿಕೊಳ್ಳದ ಕಾರಣ ಮುಂದಿನ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಲಿದೆ.ಮುಂದಿನ ದಿನಗಳಲ್ಲಿಯೂ ಕೂಡ ಪುತ್ತೂರು ಬಿಜೆಪಿಯ ಭದ್ರ ಕೋಟೆಯಾಗಿಯೇ ಮುಂದುವರಿಯಲಿದೆ ಎಂದರು.
ಅಭ್ಯರ್ಥಿ ಬದಲಾವಣೆ ಬಗ್ಗೆ :
ಈ ಬಾರಿ ಅಭ್ಯರ್ಥಿ ಬದಲಾಗುವ ಸಾಧ್ಯತೆಯಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು “ ಈಗ ನಮ್ಮ ಶಾಸಕರು ಸಂಜೀವ ಮಠಂದೂರು. ಅವರ ಅವಧಿ ಮೇಯವರೆಗಿದ್ದು ಅಲ್ಲಿಯವರೆಗೆ ಅವರೇ ನಮ್ಮ ಅಭ್ಯರ್ಥಿ. ನಮ್ಮದು ರಾಷ್ಟ್ರೀಯ ಪಕ್ಷ .ಹೀಗಾಗಿ ಅಭ್ಯರ್ಥಿ ಆಯ್ಕೆಯ ನಿಟ್ಟಿನಲ್ಲಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರವನ್ನು ಅದು ತಕ್ಕೊಳುತ್ತದೆ. ಅಭ್ಯರ್ಥಿಗಳ ಆಯ್ಕೆಯ ಕುರಿತಂತೆ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಚರ್ಚೆಗಳು ಆರಂಭವಾಗಿಲ್ಲ ” ಎಂದರು.
ಸಾಮಾಜಿಕ ಜಾಲತಾಣದಲ್ಲಿ ನಡೆಯುವ ಚರ್ಚೆಗಳ ಕುರಿತು
ಶಾಸಕರ ಹೇಳಿಕೆಯೊಂದರ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕಾರ್ಯಕರ್ತರು ಅಭ್ಯರ್ಥಿ ಕುರಿತಾಗಿ ನಡೆಸುತ್ತಿರುವ ಚರ್ಚೆ ಹಾಗೂ ಬೂತ್ ಮಟ್ಟದ ಕಾರ್ಯಕರ್ತರೊಬ್ಬರನ್ನು ಆಶಿಸ್ತಿನ ಕಾರಣಕ್ಕಾಗಿ ಪಕ್ಷದ ಜವಬ್ದಾರಿಯಿಂದ ವಿಮುಕ್ತಗೊಳಿಸಿದ ಬಗ್ಗೆ ಗಮನ ಸೆಳೆದಾಗ ಉತ್ತರಿಸಿದ ಅವರು “ ಪುತ್ತೂರಿನ ಪಕ್ಷದ ಉನ್ನತ ಸಮಿತಿಯಿಂದ ಹಿಡಿದು ಬೂತ್ ಮಟ್ಟದವರೆಗೆ ಯಾರಲ್ಲಿಯೂ ಯಾವುದೇ ಗೊಂದಲಗಳಿಲ್ಲ. ಬಿಜೆಪಿಯ ಕಾರ್ಯಕರ್ತ ಪಕ್ಷದ ಶಿಸ್ತಿಗೆ ಒಳಪಟ್ಟು ಕಾರ್ಯಗಳನ್ನು ಮಾಡುತ್ತಾನೆ. ಶಿಸ್ತನ್ನು ಉಲ್ಲಂಘಿಸಿದ ಸಂದರ್ಭದಲ್ಲಿ ಹಿಂದೆಯೂ ಕೂಡ ಶಿಸ್ತು ಕ್ರಮಗಳನ್ನು ತೆಗೆದುಕೊಂಡ ಉದಾಹರಣೆ ಇಲ್ಲಿದೆ. ಮುಂದೆಯೂ ಕೂಡ ಎಷ್ಟೇ ದೊಡ್ಡ ನಾಯಕನಾದರೂ ಪಕ್ಷದ ಚೌಕಟ್ಟು ಮೀರಿ ವರ್ತಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು” ಎಂದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚಣಿಲ ತಿಮ್ಮಪ್ಪ ಶೆಟ್ಟಿ, ನಗರ ಮಂಡಲ ಅಧ್ಯಕ್ಷ ಪಿ. ಜಿ. ಜಗನ್ನಿವಾಸ್ ರಾವ್, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಟ ಆಳ್ವ, ನಗರ ಸಭೆ ಅಧ್ಯಕ್ಷ ಜೀವಂಧರ ಜೈನ್ ಉಪಸ್ಥಿತರಿದ್ದರು.
ಶಿಕ್ಷಣ
Sanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಸಾನಿಧ್ಯ ಎಸ್. ರಾವ್ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ
ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಪುತ್ತೂರು: ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಪ್ರತಿಸ್ಪರ್ಧಿಗಳಿಗೆ ತೀವ್ರ ಪೈಪೋಟಿ ನೀಡಿದ ಸಾನಿಧ್ಯ, ತಮ್ಮ ಚೆಸ್ ಕೌಶಲ್ಯ ಮತ್ತು ಅತ್ಯುತ್ತಮ ಪ್ರದರ್ಶನದ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಯೊಂದಿಗೆ ಅವರು ಮುಂದಿನ ಹಂತದ ಎಸ್ಜಿಎಫ್ಐ (School Games Federation of India) ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.
ಸುದೇಶ್ ಮತ್ತು ಶ್ರುತಿ ದಂಪತಿಯ ಪುತ್ರಿಯಾದ ಸಾನಿಧ್ಯ, ನಿರಂತರ ಪರಿಶ್ರಮ, ಏಕಾಗ್ರತೆ ಹಾಗೂ ಕ್ರೀಡಾ ಕೌಶಲ್ಯದ ಮೂಲಕ ಈ ಮಹತ್ವದ ಯಶಸ್ಸು ಸಾಧಿಸಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಮುಂದಿನ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.
ಕಾರ್ಯಕ್ರಮಗಳು
‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಪುತ್ತೂರು: ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ.

ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಹ್ಯಾವೆಲ್ಸ್ ಕಂಪನಿಯ ವಿದ್ಯುತ್ ಉಪಕರಣಗಳು ಹಾಗೂ ಗೃಹ ಬಳಕೆಯ ವಿವಿಧ ಉತ್ಪನ್ನಗಳು ಮತ್ತು ಪರಿಹಾರಗಳ ಸಂಪೂರ್ಣ ಶ್ರೇಣಿಯನ್ನು ಗ್ರಾಹಕರು ವೀಕ್ಷಿಸಿ, ಮಾಹಿತಿ ಪಡೆಯಲು ಇಲ್ಲಿ ಅವಕಾಶವಿರಲಿದೆ.

1997ರಿಂದ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯು ಈ ನೂತನ ಕೇಂದ್ರದ ಮೂಲಕ ಗ್ರಾಹಕರಿಗೆ ಹ್ಯಾವೆಲ್ಸ್ ಉತ್ಪನ್ನಗಳ ಪರಿಚಯ ಹಾಗೂ ಉತ್ತಮ ಖರೀದಿ ಅನುಭವ ಒದಗಿಸುವ ಉದ್ದೇಶ ಹೊಂದಿದೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ‘ಬಿಜ್ಫೆಸ್ಟ್ 2K26’
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಪುತ್ತೂರು, ಅ. 7: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಪಿಯು ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ, ವ್ಯವಹಾರಿಕ ಸೃಜನಶೀಲತೆ, ಸಂವಹನ ಕೌಶಲ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಿದ ಮೇಳದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.
ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೆರೋ ಅಧ್ಯಕ್ಷತೆ ವಹಿಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಫಿನ್ಸ್ಟ್ರಾಟ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ನ ಸೀನಿಯರ್ ಅಸೋಸಿಯೇಟ್ ಜೋಸ್ವಿತಾ ಲೊರೇನ್ ಲೋಬೊ ಉದ್ಘಾಟಕರಾಗಿ ಭಾಗವಹಿಸಿದರು.
ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಕಲಿಕೆ, ನವೀನ ಚಿಂತನೆ, ಉದ್ಯಮಶೀಲತೆ ಹಾಗೂ ಕೌಶಲಾಭಿವೃದ್ಧಿಯನ್ನು ಬೆಳೆಸುವ ಅಗತ್ಯವನ್ನು ಗಣ್ಯರು ಒತ್ತಿಹೇಳಿದರು. ಸಾಂಪ್ರದಾಯಿಕ ತರಗತಿ ಕಲಿಕೆಯನ್ನು ಮೀರಿ, ನೈಜ ಜಗತ್ತಿನ ವ್ಯವಹಾರಿಕ ಸನ್ನಿವೇಶಗಳಲ್ಲಿ ತಮ್ಮ ಜ್ಞಾನ ಮತ್ತು ಕೌಶಲಗಳನ್ನು ಅನ್ವಯಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವುದು ಬಿಜ್ಫೆಸ್ಟ್ನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಲಾಯಿತು.

ಮೇಳದಲ್ಲಿ ವಾಣಿಜ್ಯ ಹಾಗೂ ವ್ಯವಹಾರಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳು ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ಸಾಮರ್ಥ್ಯ, ಉದ್ಯಮಶೀಲ ಚಿಂತನೆ, ಸೃಜನಶೀಲತೆ, ಹಣಕಾಸು ಅರಿವು, ಸಂವಹನ ಕೌಶಲ, ನಾಯಕತ್ವ, ತಂಡಭಾವನೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸುವಂತಿದ್ದವು. ವಿವಿಧ ಶಿಕ್ಷಣ ಸಂಸ್ಥೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಆರೋಗ್ಯಕರ ಸ್ಪರ್ಧೆ ಹಾಗೂ ಸಹಕಾರದ ವಾತಾವರಣ ನಿರ್ಮಿಸಿದರು.
ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಪಿಯು ಕಾಲೇಜು, ಪುತ್ತೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ಪಡೆದುಕೊಂಡಿತು. ಅಂಬಿಕಾ ಪಡವಿ ಪೂರ್ವ ವಿದ್ಯಾಲಯ, ಪುತ್ತೂರು ಸಮಗ್ರ ರನ್ನರ್ಅಪ್ ಸ್ಥಾನ ಗಳಿಸಿತು.
ಪದವಿ ವಿಭಾಗದಲ್ಲಿ ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರೆ, ತ್ರಿಶಾ ಕಾಲೇಜು, ಮಂಗಳೂರು ಸಮಗ್ರ ರನ್ನರ್ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತೋರಿದ ಸತತ ಸಾಧನೆ, ಸಿದ್ಧತೆ, ತಂಡಕಾರ್ಯ ಹಾಗೂ ಪ್ರತಿಭೆಗೆ ಈ ಫಲಿತಾಂಶ ಸಾಕ್ಷಿಯಾಯಿತು.
ವಿಜೇತರಿಗೆ ಪ್ರಶಸ್ತಿ ಪ್ರದಾನ
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ವಹಿಸಿದ್ದರು. ಪುತ್ತೂರಿನ ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೊದ ಮಾಲೀಕ ಇಶಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳ ವಿಜೇತರು ಹಾಗೂ ರನ್ನರ್ಅಪ್ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೇಳದಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಣ ಸಂಸ್ಥೆಗಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.
-
ದಕ್ಷಿಣ ಕನ್ನಡ19 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ16 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಕಾರ್ಯಕ್ರಮಗಳು11 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಸುಳ್ಯ18 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized17 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ನಿಧನ ವಾರ್ತೆ17 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಕಾರ್ಯಕ್ರಮಗಳು11 hours agoPuttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
-
ಬಿಗ್ ನ್ಯೂಸ್18 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ



















