Connect with us

ಮೈಸೂರು

Vijaya Sankalpa Yatra | ವಿಜಯಸಂಕಲ್ಪ ಯಾತ್ರೆಗೆ ಬಂದವರಿಗೆ ಹಣ ಕೊಡದ ಹಿನ್ನೆಲೆ ಬಿಜೆಪಿ ಧ್ವಜಕ್ಕೆ ಬೆಂಕಿ : ಆಕ್ರೋಶಕ್ಕೆ ಮಣಿದು ಚಿನ್ನ ಅಡವಿಟ್ಟು ಹಣ ಕೊಟ್ಟ ಮೈಸೂರಿನ ನಾಯಕ

Published

on



Ad Widget

Ad Widget

Ad Widget

Ad Widget

ಮೈಸೂರು: ವಿಜಯ ಸಂಕಲ್ಪ ಯಾತ್ರೆಗೆ (Vijaya Sankalpa Yatra) ಬಂದ ಜನರಿಗೆ ಹಣ ಕೊಡದ ಹಿನ್ನೆಲೆ ಬಿಜೆಪಿ ಬಾವುಟಕ್ಕೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮೈಸೂರು (Mysuru) ಜಿಲ್ಲೆಯ ಕೆ.ಆರ್ ನಗರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಶುಕ್ರವಾರ ಕೆ.ಆರ್ ನಗರದಲ್ಲಿ (KR Nagar) ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K. S. Eshwarappa) ನೇತೃತ್ವದ ವಿಜಯ ಸಂಕಲ್ಪ ಯಾತ್ರೆ ನಡೆದಿತ್ತು. ಯಾತ್ರೆಯಲ್ಲಿ ಮಾಜಿ ಸಿಎಂ ಸದಾನಂದ ಗೌಡ (D. V. Sadananda Gowda), ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ಕೆ.ಆರ್ ನಗರ ತಾಲೂಕಿನ ಬಿಜೆಪಿ (BJP) ಟಿಕೆಟ್ ಆಕಾಂಕ್ಷಿಗಳು ರೋಡ್ ಶೋನಲ್ಲಿ ಭಾಗಿಯಾಗಿದ್ದರು. ಅಕ್ಕಪಕ್ಕದ ಗ್ರಾಮಗಳಿಂದ ನೂರಾರು ಬಿಜೆಪಿ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು.

Ad Widget

Ad Widget

Ad Widget alt="Ad Widget"/>

Ad Widget

ಯಾತ್ರೆಗೆ ಬಂದ ಜನರಿಗೆ ಆಯೋಜಕರು ಹಣ ನೀಡಿರಲಿಲ್ಲ.
80 ಬೈಕ್‌ಗಳಿಗೆ ಪೆಟ್ರೋಲ್‌ಗೆ ದುಡ್ಡು ಕೊಡಲಿಲ್ಲ ಎಂದು ರೊಚ್ಚಿಗೆದ್ದ ಕಾರ್ಯಕರ್ತರು ಬಿಜೆಪಿ ಬಾವುಟಕ್ಕೆ (BJP Flag) ಬೆಂಕಿ ಹಚ್ಚಿ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡರ (Mirle Srinivas Gowda) ವಿರುದ್ಧ ಆಕ್ರೋಶ ಹೊರಹಾಕಿದರು.

Ad Widget

Ad Widget <> Ad Widget

ಜನರ ಅಕ್ರೋಶಕ್ಕೆ ತತ್ತರಿಸಿ ಕೆ.ಆರ್ ನಗರದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್, ಚಿನ್ನ ಗಿರವಿಯಿಟ್ಟು ಕಾರ್ಯಕರ್ತರಿಗೆ ಹಣ ನೀಡಿದರು.



Ad Widget
Ad Widget
Click to comment

Leave a Reply

ಸಿನೆಮಾ

Rajinikanth-ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ತಲೈವಾ: ರಜಿನಿಕಾಂತ್ ನೋಡಲು ಮುಗಿಬಿದ್ದ ಅಭಿಮಾನಿಗಳು

Published

on



Ad Widget

Ad Widget

Ad Widget

Ad Widget

‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಮೈಸೂರು: ‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೈಸೂರಿನ ಸುತ್ತಮುತ್ತ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ರಜಿನಿಕಾಂತ್ ಅವರು ನಗರದಲ್ಲಿರುವ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ʻತಲೈವಾʼನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಶೂಟಿಂಗ್ ಸ್ಥಳಗಳು ಹಾಗೂ ಅವರು ಭೇಟಿ ನೀಡುವ ಪ್ರದೇಶಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.

Ad Widget

Ad Widget <> Ad Widget

ಚಾಮುಂಡೇಶ್ವರಿ ದೇವಾಲಯಕ್ಕೆ ರಜಿನಿಕಾಂತ್ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಅವರನ್ನು ನೋಡಲು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳನ್ನು ಕಂಡ ರಜಿನಿಕಾಂತ್ ಅವರು ಪ್ರೀತಿಯಿಂದ ಕೈಬೀಸಿ ಅಭಿಮಾನಿಗಳ ಖುಷಿಗೆ ಕಾರಣರಾದರು.



Ad Widget

ಇದಕ್ಕೂ ಮುನ್ನ ಮಂಗಳವಾರ (ಸೆ.29) ಸೋಮನಾಥಪುರದಲ್ಲಿ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ವಿಷ್ಣುವರ್ಧನ್ ಅವರ ಕುಟುಂಬದ ಸದಸ್ಯರು ರಜಿನಿಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

Ad Widget

Ad Widget

ಕರ್ನಾಟಕದಲ್ಲಿ ರಜಿನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ರಾಜ್ಯಕ್ಕೆ ಆಗಮಿಸಿದಾಗಲೆಲ್ಲ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯುತ್ತದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಹಿನ್ನೆಲೆಯಲ್ಲಿ ತಲೈವಾ ನಗರದಲ್ಲಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.

ರಜಿನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ‘ಜೈಲರ್-2’ ಕೂಡ ಸದ್ಯ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಕನ್ನಡದ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ. ‘ಜೈಲರ್-2’ ಅಕ್ಟೋಬರ್ 15ರಂದು ತೆರೆಗೆ ಬರಲಿದೆ.

Ad Widget
Continue Reading

ಅಪರಾಧ

Case filed-ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮೈಸೂರು, ಸೆ. 23: ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾ ಕಲಾ ಸಂಘದ ಅಧ್ಯಕ್ಷ ಮಧು ಕೆ.ಟಿ. ಅವರು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪ್ರತಾಪ್ ಸಿಂಹ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

Ad Widget

Ad Widget <> Ad Widget

ದೂರಿನಲ್ಲಿ ತಿಳಿಸಿರುವಂತೆ, ಸೆಪ್ಟೆಂಬರ್ 18ರಂದು ಟಿ.ನರಸೀಪುರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಪ್ರತಾಪ್ ಸಿಂಹ ನೂರಾರು ಜನರ ಸಮ್ಮುಖದಲ್ಲಿ ಮತ್ತು ಮಾಧ್ಯಮಗಳ ಕ್ಯಾಮೆರಾ-ಮೈಕ್‌ಗಳ ಮುಂದೆ ನಿಂತು ದಲಿತ ಸಮುದಾಯವನ್ನು ಹೀಯಾಳಿಸುವ ಮತ್ತು ಕೀಳಾಗಿ ಚಿತ್ರಿಸುವ ಉದ್ದೇಶದಿಂದ ಅತ್ಯಂತ ಅವಹೇಳನಕಾರಿ ಹಾಗೂ ನಿಂದನಾತ್ಮಕ ಭಾಷಣ ಮಾಡಿದ್ದಾರೆ.



Ad Widget

ತಮ್ಮ ಭಾಷಣದಲ್ಲಿ ದಲಿತ ಸಮುದಾಯದ ಕಾರ್ಯಕರ್ತರನ್ನು ನೇರವಾಗಿ ಗುರಿಯಾಗಿಸಿ, “ನೀವು ಕೇವಲ ನೀಲಿ ಶಾಲು ಹೊದ್ದು ನಾವು ಏನೇ ಮಾಡಿದರೂ ಅಡ್ಡ ಬಂದು ನಿಲ್ಲುತ್ತೀರಿ. ನಿಮಗೆ ಅಂಬೇಡ್ಕರ್ ಅವರ ಬಗ್ಗೆ ಏನೂ ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಓದಿ” ಎಂದು ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಈ ಮೂಲಕ ದಲಿತ ಸಮುದಾಯದ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲಿನ ಗೌರವವನ್ನು ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಸಾರ್ವಜನಿಕವಾಗಿ ಹೀಯಾಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

Ad Widget

Ad Widget

ಆರೋಪಿತರು ಕೇವಲ ಒಂದು ರಾಜಕೀಯ ಪಕ್ಷದ ವಿರುದ್ಧ ಮಾತನಾಡುತ್ತಿಲ್ಲ. ಬದಲಿಗೆ ಶೋಷಿತರ ಹಕ್ಕುಗಳಿಗಾಗಿ ಹೋರಾಡುವ ದಲಿತ ಸಂಘಟನೆಯ ಪದಾಧಿಕಾರಿಗಳನ್ನು “ಹಣದ ಆಸೆಗಾಗಿ ಅಥವಾ ವೈಯಕ್ತಿಕ ಲಾಭಕ್ಕಾಗಿ ಹೋರಾಟ ಮಾಡುವವರು” ಎಂದು ಸಾರಾಸಗಟಾಗಿ ಸುಳ್ಳು ಆರೋಪ ಮಾಡಿದ್ದಾರೆ. ಇದು ಸಂಘಟನೆಯ ನೈತಿಕತೆಯನ್ನು ಸಾರ್ವಜನಿಕವಾಗಿ ಹತ್ಯೆ ಮಾಡುವ ಉದ್ದೇಶಪೂರ್ವಕ ಜಾತಿ ನಿಂದನೆ ಎಂದು ದೂರುದಾರರು ತಿಳಿಸಿದ್ದಾರೆ.

ಇದಲ್ಲದೆ, ಅವರು ಒಬ್ಬ ಪೊಲೀಸ್ ಅಧಿಕಾರಿಯ ಜಾತಿಯನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ, “ನಿಮ್ಮ ಜಾತಿಯ ಅಧಿಕಾರಿ ಎಂಬ ಒಂದೇ ಕಾರಣಕ್ಕೆ ನೀವು ಅವರನ್ನು ಬೆಂಬಲಿಸುತ್ತೀರಿ ಮತ್ತು ರಕ್ಷಣೆಗೆ ನಿಲ್ಲುತ್ತೀರಿ. ಆತ ಒಬ್ಬ ಕ್ಷುಲ್ಲಕ, ಕಳಪೆ ವ್ಯಕ್ತಿತ್ವದ ಇನ್ಸ್‌ಪೆಕ್ಟರ್” ಎಂದು ಹೇಳುವ ಮೂಲಕ ಪರಿಶಿಷ್ಟ ಜಾತಿಗೆ ಸೇರಿದ ಧನಂಜಯರನ್ನು ಜಾತಿ ಹೆಸರಿನಲ್ಲಿ ನಿಂದಿಸಿ, ಬೆದರಿಕೆ ಹಾಗೂ ತುಚ್ಛವಾಗಿ ಮಾತನಾಡಿದ್ದಾರೆ. ಆ ಮೂಲಕ ಸಾರ್ವಜನಿಕವಾಗಿ ಅಪಮಾನಗೊಳಿಸಿ, ಜಾತಿ ವ್ಯವಸ್ಥೆಯನ್ನು ಕೆರಳಿಸುವ ಮತ್ತು ಸಮಾಜದಲ್ಲಿ ವಿವಿಧ ಜಾತಿಗಳ ನಡುವೆ ತಾರತಮ್ಯ, ದ್ವೇಷ ಹಾಗೂ ನಾಗರಿಕ ಸಂಘರ್ಷದ ವಾತಾವರಣವನ್ನು ಸೃಷ್ಟಿಸುವ ತೀವ್ರ ಪ್ರಯತ್ನ ಮಾಡಿದ್ದಾರೆ ಎಂದು ದೂರಲಾಗಿದೆ.

ಈ ಇಡೀ ಕೃತ್ಯವು ಆಕಸ್ಮಿಕವಾಗಿ ನಡೆದದ್ದಲ್ಲ. ಮುಖ್ಯ ಆರೋಪಿತರು ಹಾಗೂ ಶೋಭಾ ಯಾತ್ರೆಯ ಮುಖ್ಯ ಆಯೋಜಕರು (ಸಹ ಆರೋಪಿಗಳು) ಒಟ್ಟಾಗಿ ಸೇರಿ, ಪಟ್ಟಣದ ಸಾಮಾಜಿಕ ಶಾಂತಿ ಮತ್ತು ಸೌಹಾರ್ದ ಕೆಡಿಸುವ ಹಾಗೂ ದಲಿತ ಸಮುದಾಯವನ್ನು ಸಾರ್ವಜನಿಕವಾಗಿ ಅಪಮಾನಿಸುವ ಉದ್ದೇಶದಿಂದಲೇ ಮೊದಲೇ ಯೋಜಿತ ಸಂಚು ರೂಪಿಸಿ ಈ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ಪ್ರಚೋದನಾತ್ಮಕ ಹೇಳಿಕೆ ನೀಡಲು ಮುಕ್ತವಾಗಿ ಅವಕಾಶ ಮಾಡಿಕೊಟ್ಟು, ಅದಕ್ಕೆ ಕುಮ್ಮಕ್ಕು ನೀಡಿ ಸಹಕರಿಸಿರುವ ಆಯೋಜಕರು ಸಹ ಈ ಅಪರಾಧದಲ್ಲಿ ಸಮಾನ ಭಾಗಿಗಳು ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Ad Widget
Continue Reading

ಮೈಸೂರು

Pramodadevi-ದಸರಾ ವೇಳೆ ಕಂಬಳ ಆಯೋಜನೆ ಅಗತ್ಯವಿಲ್ಲ; ಕರಾವಳಿಯ ಕ್ರೀಡೆಗೆ ಪ್ರತ್ಯೇಕ ಮಹತ್ವ ಸಿಗಲಿ: ಪ್ರಮೋದಾದೇವಿ

Published

on



Ad Widget

Ad Widget

Ad Widget

Ad Widget

ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮೈಸೂರು: ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕಂಬಳಕ್ಕೆ ಕರಾವಳಿ ಭಾಗದಲ್ಲಿ ತನ್ನದೇ ಆದ ವಿಶಿಷ್ಟ ಪರಂಪರೆ ಹಾಗೂ ಮಹತ್ವವಿದೆ. ಹೀಗಾಗಿ ದಸರಾ ಉತ್ಸವದೊಂದಿಗೆ ಕಂಬಳವನ್ನು ಸೇರಿಸುವುದು ಸೂಕ್ತವಲ್ಲ ಎಂಬುದು ತಮ್ಮ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.

Ad Widget

Ad Widget <> Ad Widget

ಕಂಬಳವನ್ನು ಪ್ರತ್ಯೇಕವಾಗಿ ಆಯೋಜಿಸಿದರೆ ಕ್ರೀಡೆಗೆ ಇನ್ನಷ್ಟು ಮಹತ್ವ ಹಾಗೂ ಗಮನ ಸಿಗಲಿದೆ. ಆದರೆ ದಸರಾ ಉತ್ಸವದ ಭಾಗವಾಗಿ ಆಯೋಜಿಸಿದರೆ ಕಂಬಳಕ್ಕೆ ಸಿಗಬೇಕಾದ ಪ್ರತ್ಯೇಕ ಗಮನ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಪ್ರಮೋದಾದೇವಿ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading