ದಕ್ಷಿಣ ಕನ್ನಡ
Puttur Congres : ಯುವಕರನ್ನು ಸಮಾಜ ಒಡೆಯುವ ಕೆಲಸಕ್ಕೆ ಬಳಸಿ ಚುನಾವಣೆ ಗೆಲ್ಲುವ ಬಿಜೆಪಿ, ಅಧಿಕಾರ ಸಿಕ್ಕ ಕೊಡಲೇ ಅವರನ್ನು ಮೂಲೆಗುಂಪು ಮಾಡುತ್ತದೆ : ಅರಿಯಡ್ಕ ʼಕಾಂಗ್ರೆಸ್ ಉತ್ಸಾಹʼದಲ್ಲಿ ಎಂ. ಜಿ. ಹೆಗಡೆ
ಪುತ್ತೂರು : ಫೆ 5 : ಯುವಕರ ಮನಸ್ಸಿನಲ್ಲಿ ವಿಷ ಬೀಜ ಬಿತ್ತಿ ಅವರನ್ನು ಸಮಾಜ ಒಡೆಯುವ ಕೆಲಸಕ್ಕೆ ಬಳಸಿಕೊಂಡು ಭಾವನಾತ್ಮಕ ಬ್ಲ್ಯಾಕ್ ಮೇಲ್ ತಂತ್ರ ಬಳಸಿ ಬಿಜೆಪಿ ಅಧಿಕಾರ ಪಡೆಯುತ್ತಿದೆ. ಒಮ್ಮೆ ಅಧಿಕಾರ ಸಿಕ್ಕ ಮೇಲೆ ಅದೇ ಯುವಕರನ್ನು ಬಿಜೆಪಿ ನಾಯಕತ್ವ ಮರೆತು ತಾನು ಮಾತ್ರ ಅಧಿಕಾರ ಅನುಭವಿಸುತ್ತದೆ. ಮತ್ತೆ ಚುನಾವಣೆ ಬಂದಾಗ ಹಿಂದಿನ ತಂತ್ರವನ್ನೆ ಬಳಸಿ ಜನರ ಭಾವನೆಗಳ ಜತೆ ಚೆಲ್ಲಾಟವಾಡುತ್ತದೆ ಎಂದು ಕಾಂಗ್ರೆಸ್ ಮುಖಂಡ ಎಂ.ಜಿ. ಹೆಗಡೆ ಹೇಳಿದರು.
ಅರಿಯಡ್ಕ ವಲಯ ಕಾಂಗ್ರೆಸ್ ಅಶ್ರಯದಲ್ಲಿ ಕೌಡಿಚ್ಚಾರಿನಲ್ಲಿ ನಡೆದ ಕಾಂಗ್ರೆಸ್ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಿಜೆಪಿಗೆ ಅಭಿವೃದ್ದಿ ವಿಚಾರ ಬೇಕಿಲ್ಲ ಹೇಳಿಕೊಳ್ಳುವಂಥ ಯಾವ ಅಭಿವೃದ್ದಿ ಕಾರ್ಯವನ್ನು ಅವರು ಮಾಡಿಯೂ ಇಲ್ಲ. ಆದರೆ ಹಸಿ ಹಸಿ ಸುಳ್ಳುಗಳನ್ನೇ ಹೇಳುತ್ತಾ, ಜನರ ಹಾದಿ ತಪ್ಪಿಸುವ ಕೆಲಸ ಮಾಡುತ್ತದೆ. ಸಮಾಜದಲ್ಲಿ ಅಶಾಂತಿ, ದ್ವೇಷ ಹುಟ್ಟುವಂಥ ಕೆಲಸ ಮಾಡಿ ಅದರ ಅಧಾರದಲ್ಲಿ ಧ್ರುವಿಕರಣ ರಾಜಕೀಯ ಮಾಡಿ ಓಟು ಗಳಿಸುತ್ತದೆ.ಇದನ್ನು ವಿಶೇಷವಾಗಿ ಯುವ ಜನ ಅರ್ಥ ಮಾಡಿಕೊಳ್ಳುತ್ತದೆ ಎಂದು ಕರೆ ನೀಡಿದರು.
ಬಿಜೆಪ ಅಡಳಿತದಲ್ಲಿ ಜನ ಸಾಮಾನ್ಯರ ಬದುಕು ದುಸ್ತರವಾಗಿದೆ. ಎಲ್ಲ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆರಿದೆ. ಆದರೆ ಅಭಿವೃದ್ದಿ ವಿಚಾರ ಕೇಳಬೇಡಿ, ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷರೇ ಹೇಳುತ್ತಾರೆ ಎಂದರೆ ಇದಕ್ಕಿಂತ ದೊಡ್ಡ ನಾಚಿಕೆಗೇಡಿನ ವಿಚಾರ ಬೇರೇನಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರು “ಅಚ್ಚೇದಿನ್ ಕೊಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ದೇಶದಲ್ಲಿ ಬೆಲೆ ಏರಿಕೆ ಹೆಚ್ಚು ಆಗುವಂತೆ ಮಾಡಿದ್ದಾರೆ, ರಸಗೊಬ್ಬರದ ಬೆಲೆಯೂ ಏರಿಕೆಯಾಗಿದೆ. ಮೋದಿ ಸರಕಾರ ಕಾಂಗ್ರೆಸ್ ಸರಕಾರ 70 ವರ್ಷದಲ್ಲಿ ಮಾಡಿಟ್ಟದನ್ನು, ಒಂದೊಂದಾಗಿ ಮಾರಾಟ ಮಾಡುತ್ತಿದ್ದಾರೆ ಎಂದರು
ಕಾಂಗ್ರೆಸ್ ಸರಕಾರವಿದ್ದಾಗ ದಿನಬಳಕೆ ವಸ್ತುಗಳ ಬೆಲೆ ಎಷ್ಟಿತ್ತು? ಈಗ ಎಷ್ಟಿದೆ ಎಂಬುದನ್ನು ದರ ಪಟ್ಟಿ ಮಾಡಿ, ಗ್ರಾಮಗಳ ಪ್ರತಿ ಮನೆಗೂ ಹಂಚುವ ಕೆಲಸ ಪಕ್ಷದ ಕಾರ್ಯಕರ್ತರು ಮಾಡಬೇಕು. ರಾಜ್ಯದ ಬಿಜೆಪಿ ಸರಕಾರ 40% ಭ್ರಷ್ಟಚಾರದಲ್ಲಿ ಮುಳುಗಿ ಹೋಗಿದೆ ಎಂದು ಕಾಂಗ್ರೆಸ್ ಮುಖಂಡ ಆಶೋಕ್ ಕುಮಾರ್ ರೈ ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದರೆ ಮಾತ್ರ ಜನ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಾಧ್ಯ. ನಮ್ಮ ಅಭ್ಯರ್ಥಿ ಕೈ ಚಿಹ್ನೆಯಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ. ವಿಶ್ವನಾಥ ರೈ ತಿಳಿಸಿದರು.
ಮುಖಂಡರಾದ ಎಂ ಎಸ್ ಮಹಮ್ಮದ್, ಕಾವು ಹೇಮನಾಥ ಶೆಟ್ಟಿ, ಕೃಪಾ ಅಮರ ಆಳ್ವಾ, ದಿವ್ಯಪ್ರಭಾ ಚಿಲ್ತಡ್ಕ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಅರಿಯಡ್ಕ ವಲಯದ ಹಿರಿಯ ನಾಯಕರು, ಸಾಧಕರನ್ನು ಸನ್ಮಾನಿಸಲಾಯಿತು.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.
ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.
ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ಗೆ ಆಯ್ಕೆ
ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಗುಜರಾತ್‌ನಲ್ಲಿ ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್ ನಡೆಯುತ್ತಿದ್ದು, ಈ ಕ್ಯಾಂಪ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ನವೆಂಬರ್ ೧ರಂದು ನಡೆಯುವ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗಣ್ಯ ವ್ಯಕ್ತಿಯಾಗಿ ಆಗಮಿಸಲಿದ್ದಾರೆ.
ಇವರಿಗೆ ಎನ್.ಸಿ.ಸಿ ಘಟಕದ ಮುಖ್ಯಸ್ಥ ಲೆ. ಭಾಮಿ ಅತುಲ್ ಶೆಣೈ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್.ಸಿ.ಸಿ ಘಟಕ, ಐಕ್ಯೂಎಸಿ ಘಟಕ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದ ಶುಭಾಶಯಗಳನ್ನು ಕೋರುತ್ತಾರೆ.
-
ಬಿಗ್ ನ್ಯೂಸ್21 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
Uncategorized22 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ21 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized21 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಮಂಗಳೂರು10 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ8 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ರಾಜಕೀಯ9 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ
-
ಸ್ಥಳೀಯ7 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು


















