Connect with us

ಅಪರಾಧ

ಮಂಗಳೂರು ಬಾಂಬ್ ಸ್ಪೋಟ ಪ್ರಕರಣ : ಉಗ್ರ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್, ಎನ್ಐಎ ವಶಕ್ಕೆ ನೀಡಿ ಆದೇಶಿಸಿದ ಕೋರ್ಟ್

Published

on



Ad Widget

Ad Widget

Ad Widget

Ad Widget

ಬೆಂಗಳೂರು, ಮಾ 6 : ಮಂಗಳೂರು ಕುಕ್ಕಲ್ ಬಾಂಬ್ ಸ್ಟೋಟದ ರೂವಾರಿ, ಉಗ್ರ ಶಾರೀಕ್ ಗೆ ಹತ್ತು ದಿನ ಎನ್ಐಎ ವಶಕ್ಕೆ ನೀಡಿ ವಿಶೇಷ ಕೋರ್ಟ್ ಆದೇಶಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರಿನ ನಾಗುರಿ ಬಳಿ ಕುಕ್ಕರ್ ಬ್ಲಾಸ್ಟ್ ಆಗಿತ್ತು. ಶಾರಿಕ್ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಸಂಪೂರ್ಣ ಗುಣಮುಖನಾಗಿ ಡಿಸ್ಚಾರ್ಜ್ ಮಾಡಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ತಕ್ಷಣವೇ ಆತತನ್ನು ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಯಿತು. ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಎನ್‌ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

Ad Widget

Ad Widget <> Ad Widget

ಈ ಕುರಿತಂತೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿ ಎನ್‌ಐಎ ವಿಶೇಷ ನ್ಯಾಯಾಲಯವು, ಉಗ್ರ ಶಾರಿಕ್ ನನ್ನು ಮಾರ್ಚ್ 15ರವರೆಗೆ ಎನ್‌ಐಎ ಅಧಿಕಾರಿಗಳ ವಶಕ್ಕೆ ನೀಡಿ ಆದೇಶಿಸಿದೆ.



Ad Widget

Ad Widget

Ad Widget

ನೂತನ ರಿಕ್ಷಾ ಹಸ್ತಾಂತರ : ನವೆಂಬರ್ 19ರಂದು ಕಂಕನಾಡಿ ಗರೋಡಿ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದೀಗ ಅವರಿಗೆ ನೂತನ ಆಟೋ ರಿಕ್ಷಾ ಮತ್ತು ಬಿಜೆಪಿ ವತಿಯಿಂದ 5 ಲಕ್ಷ ರೂ. ಮೌಲ್ಯದ ಚೆಕ್ ನೀಡಲಾಗಿದೆ.

ಹೊಣೆ ಹೊತ್ತ ಐಸಿಸ್: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಹೊಣೆಯನ್ನು ಉಗ್ರ ಸಂಘಟನೆ ಐಸಿಸ್ (ISIS) ಹೊತ್ತುಕೊಂಡಿದೆ.

ತಮಿಳುನಾಡಿನ ಕೊಯಂಬತ್ತೂರು ಮತ್ತು ಕರ್ನಾಟಕದ ಮಂಗಳೂರಿನಲ್ಲಿ ನಡೆದ ಸ್ಫೋಟವನ್ನೂ ಐಸಿಸ್ ಗೆ ಸೇರಿದ ಉಗ್ರರು ನಡೆಸಿದ್ದರು ಎಂದು ಹೇಳಿಕೊಂಡಿದೆ.

ಇಸ್ಲಾಮಿಕ್ ಸ್ಟೇಟ್ ವಿಲಾಯಾ ಖೋರಾಸಾನ್ ತನ್ನ ವಾಯ್ಸ್ ಆಫ್ ಖೋರಾಸಾನ್ ನಿಯತಕಾಲಿಕೆಯ 23ನೇ ಸಂಚಿಕೆಯಲ್ಲಿ, ಮಂಗಳೂರಿನಲ್ಲಿ ನಡೆದ ಸ್ಫೋಟವನ್ನು ಐಸಿಸ್ ಅಂಗಸಂಸ್ಥೆ ಉಗ್ರಗಾಮಿಗಳು ನಡೆಸಿದೆ ಎಂದು ಹೇಳಿಕೊಂಡಿದೆ.

ಮೊದಲು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ತನ್ನದೇ ಕೃತ್ಯ ಎಂದು ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಎಂಬ ಉಗ್ರ ಸಂಘಟನೆ ಹೊಣೆ ಹೊತ್ತುಕೊಂಡಿತ್ತು. ಇದೀಗ ಐಸಿಸ್ ಈ ರೀತಿ ಹೇಳಿಕೊಂಡಿದೆ.

ಇದೀಗ ತಮ್ಮ ವಶಕ್ಕೆ ಪಡೆಯುತ್ತಿರುವ ಎನ್‌ಐಎ ಅಧಿಕಾರಿಗಳು ಹೆಚ್ಚಿನ ವಿಚಾರಣೆಯನ್ನು ನಡೆಸಿ, ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣದ ಸಂಬಂಧಿಸಿದ ಮಾಹಿತಿಯನ್ನು ಪಡೆಯಲಿದ್ದಾರೆ.

Ad Widget
Click to comment

Leave a Reply

ಸ್ಥಳೀಯ

Yatnal-ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿದ ಆರೋಪ : ಯತ್ನಾಳ್ ವಿರುದ್ಧ ಎಫ್‌ಐಆರ್

Published

on



Ad Widget

Ad Widget

Ad Widget

Ad Widget

ಜೀವಂತವಾಗಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೇ ರೀತಿಯ ಆರೋಪದಡಿ ಬಿಜೆಪಿ ಪಾಲಿಕೆ ಸದಸ್ಯ ಗಿರೀಶ ಪಾಟೀಲ ಹಾಗೂ ತಿಕೋಟಾದ ಆರು ಮಂದಿ ವಿರುದ್ಧವೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Ad Widget

Ad Widget

Ad Widget

Ad Widget

ವಿಜಯಪುರ: ಜೀವಂತವಾಗಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೇ ರೀತಿಯ ಆರೋಪದಡಿ ಬಿಜೆಪಿ ಪಾಲಿಕೆ ಸದಸ್ಯ ಗಿರೀಶ ಪಾಟೀಲ ಹಾಗೂ ತಿಕೋಟಾದ ಆರು ಮಂದಿ ವಿರುದ್ಧವೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Ad Widget

Ad Widget

Ad Widget alt="Ad Widget"/>

Ad Widget

ಯತ್ನಾಳ್ ವಿರುದ್ಧ ದೂರು
ವಿಜಯಪುರ ನಗರದ ಬಾಗವಾನ ಕಾಲೊನಿ ನಿವಾಸಿ ಅಬ್ದುಲ ರಜಾಕ ಬಾಗವಾನ್ (50) ಅವರು ಗುರುವಾರ ಜಲನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget <> Ad Widget

ತಾನು ಜೀವಂತವಾಗಿದ್ದು, ತರಕಾರಿ ವ್ಯಾಪಾರ ಮಾಡಿಕೊಂಡಿದ್ದೇನೆ. ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರನಾಗಿದ್ದು, ಮತದಾರರ ಗುರುತಿನ ಚೀಟಿಯನ್ನೂ ಹೊಂದಿದ್ದೇನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.



Ad Widget

ಆದರೆ, ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ತಾನು ಮೃತಪಟ್ಟಿರುವುದಾಗಿ ನಕಲಿ ಮರಣ ಪ್ರಮಾಣಪತ್ರವನ್ನು ಲಗತ್ತಿಸಿ, ತನ್ನ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಸೆಪ್ಟೆಂಬರ್ 3ರಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಿಗೆ ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮೂಲಕ ವಂಚನೆ ಎಸಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Ad Widget

Ad Widget

ಪಾಲಿಕೆ ಸದಸ್ಯ ಗಿರೀಶ ಪಾಟೀಲ ವಿರುದ್ಧವೂ ಪ್ರಕರಣ
ವಿಜಯಪುರ ನಗರದ ನಿಸಾರಮಡ್ಡಿ ನಿವಾಸಿ ಜಾವೀದ್ ಇಂಡಿಕರ್ (32) ಅವರು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಹಾಗೂ ಶಾಸಕ ಯತ್ನಾಳ್ ಅವರ ಬೆಂಬಲಿಗ ಗಿರೀಶ ಪಾಟೀಲ ವಿರುದ್ಧ ಗಾಂಧಿಚೌಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾನು ನಿಸಾರಮಡ್ಡಿಯಲ್ಲಿ ವಾಸವಿಲ್ಲ ಎಂಬುದಾಗಿ ಸುಳ್ಳು ದಾಖಲೆ ಸೃಷ್ಟಿಸಿ, ತನ್ನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವಂತೆ ಗಿರೀಶ ಪಾಟೀಲ ಅವರು ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ್ದಾರೆ ಎಂದು ಜಾವೀದ್ ಆರೋಪಿಸಿದ್ದಾರೆ. ಈ ಸಂಬಂಧ ಅಕ್ಟೋಬರ್ 6ರಂದು ದೂರು ದಾಖಲಿಸಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ತಿಕೋಟಾದ ಆರು ಮಂದಿ ವಿರುದ್ಧ ಎಫ್‌ಐಆರ್
ತಿಕೋಟಾ ಪಟ್ಟಣದ ನಿವಾಸಿ ಹಾಜಿಲಾಲ ಕೊಟ್ಟಲಗಿ (68) ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಮು ಗೊಳಸಂಗಿ, ವಿನಾಯಕ ಮಮದಾಪುರ, ಮಹೇಶ ಮುಕರ್ತಿಹಾಳ, ಆನಂದ ಅಂಬಿಗೇರ, ಹುಚ್ಚಪ್ಪ ಗಾಣಿಗೇರ ಹಾಗೂ ಗೋವಿಂದ ಮುದನೂರ ವಿರುದ್ಧ ಹಾಜಿಲಾಲ ಕೊಟ್ಟಲಗಿ ಅಕ್ಟೋಬರ್ 6ರಂದು ದೂರು ನೀಡಿದ್ದಾರೆ.

ತಾನು ಮುಸ್ಲಿಂ ಎಂಬ ಕಾರಣಕ್ಕೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಉದ್ದೇಶದಿಂದ ನಕಲಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Ad Widget
Continue Reading

ಅಪರಾಧ

Udupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ಅ.8: ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕೊಲೆಯಾದ ಉದ್ಯಮಿ ಡೇವಿಡ್ ಡಿಸೋಜಾ ಅವರ ಪುತ್ರನಿಗೆ ವಾಟ್ಸಾಪ್ ಕರೆ ಮಾಡಿರುವ ಅಪರಿಚಿತ ವ್ಯಕ್ತಿಯೊಬ್ಬ, ₹5 ಕೋಟಿ ನೀಡುವಂತೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

Ad Widget

Ad Widget <> Ad Widget

“ನಿನ್ನ ತಂದೆಯಿಂದ ನನ್ನ ಸಹೋದರನಿಗೆ ಸಾಕಷ್ಟು ನಷ್ಟವಾಗಿತ್ತು. ಆ ಕಾರಣಕ್ಕೆ ನಾನೇ ಕೊಲೆ ಮಾಡಿಸಿದ್ದೆ. ನಮಗಾಗಿರುವ ನಷ್ಟವನ್ನು ತುಂಬಿಕೊಡಲು ₹5 ಕೋಟಿ ನೀಡಬೇಕು” ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Ad Widget

ಇನ್ನೊಬ್ಬ ಉದ್ಯಮಿ ಹಾಗೂ ಖಾಸಗಿ ಸಂಸ್ಥೆಯ ವ್ಯಕ್ತಿಗೂ ಹೇಮಂತ್ ಪೂಜಾರಿ ಹೆಸರಿನಲ್ಲಿ ವಾಟ್ಸಾಪ್ ಕರೆಗಳು ಬಂದಿದ್ದು, ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿವೆ.

Ad Widget

Ad Widget

25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಆರೋಪಿ
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಹೇಮಂತ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಆತನ ಸಹೋದರ ಹಾಗೂ ಇತರ ಸಹಚರರ ನೆರವಿನಿಂದ ಹೊರರಾಜ್ಯದ ಶೂಟರ್‌ಗಳನ್ನು ಕರೆಸಿ ಕೊಲೆ ಮಾಡಿಸಲಾಗಿದೆ ಎಂಬ ಆರೋಪ ಪ್ರಕರಣದಲ್ಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಪೂಜಾರಿಯನ್ನು ಹೊರತುಪಡಿಸಿ ಉಳಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಕಳೆದ 25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಹೇಮಂತ್ ಪೂಜಾರಿ ಬಗ್ಗೆ ಇದುವರೆಗೂ ಸ್ಪಷ್ಟ ಸುಳಿವು ಲಭ್ಯವಾಗಿಲ್ಲ. ಈ ನಡುವೆ ಆತನ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬಂದಿರುವುದು ಪೊಲೀಸರ ಗಮನ ಸೆಳೆದಿದೆ.

ಕರೆ ಮಾಡುತ್ತಿರುವವರು ಯಾರು?
ಹೇಮಂತ್ ಪೂಜಾರಿಯೇ ಕರೆ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಬೇರೆಯವರು ಬೆದರಿಕೆ ಹಾಕುತ್ತಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕರೆಗಳ ಮೂಲ, ಹಣದ ಬೇಡಿಕೆಯ ಹಿಂದಿನ ಉದ್ದೇಶ ಹಾಗೂ ಪ್ರಕರಣಗಳ ನಡುವಿನ ಸಂಬಂಧದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಸ್ಥಳೀಯ

Ganja-ಸಾಗರದ ಲಾಡ್ಜ್‌ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!

Published

on



Ad Widget

Ad Widget

Ad Widget

Ad Widget

ಸಾಗರದ ಜೋಗ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಗಾಂಜಾ ಸೇವಿಸುತ್ತಿದ್ದ ಆರೋಪದ ಮೇಲೆ ಯುವತಿ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಾಗರ ಟೌನ್ ಪೊಲೀಸರು, ಮೂವರು ಯುವಕರು ಹಾಗೂ ಓರ್ವ ಯುವತಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಶಿವಮೊಗ್ಗ, ಅ. 8: ಸಾಗರದ ಜೋಗ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಗಾಂಜಾ ಸೇವಿಸುತ್ತಿದ್ದ ಆರೋಪದ ಮೇಲೆ ಯುವತಿ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಾಗರ ಟೌನ್ ಪೊಲೀಸರು, ಮೂವರು ಯುವಕರು ಹಾಗೂ ಓರ್ವ ಯುವತಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತ ಆರೋಪಿಗಳನ್ನು ಶಿವಮೊಗ್ಗದ ಕಾರ್ತಿಕ್ (19), ಬೆಂಗಳೂರಿನ ಶಶಾಂಕ್ (26), ಸಾಗರದ ನಿಶಾಂತ್ (25) ಹಾಗೂ ಯುವತಿ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಲಾಡ್ಜ್ ಮೇಲೆ ದಿಢೀರ್ ದಾಳಿ
ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನಿರ್ದೇಶನದಂತೆ ಪಿಎಸ್‌ಐ ಶಾಂತರಾಜ್ ಎಚ್.ಜಿ. ಹಾಗೂ ಸಿಬ್ಬಂದಿ ಲಾಡ್ಜ್ ಮೇಲೆ ದಾಳಿ ನಡೆಸಿದರು. ಕೊಠಡಿಯನ್ನು ಪರಿಶೀಲಿಸಿದಾಗ ಮೂವರು ಯುವಕರು ಹಾಗೂ ಯುವತಿಯು ಸಿಗರೇಟ್‌ನಲ್ಲಿ ಗಾಂಜಾ ತುಂಬಿಕೊಂಡು ಸೇವಿಸುತ್ತಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



Ad Widget

ಬಳಿಕ ನಾಲ್ವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಕಾರ್ತಿಕ್, ಶಶಾಂಕ್ ಹಾಗೂ ಯುವತಿ ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ವರದಿಯಾಗಿದೆ.

Ad Widget

Ad Widget

ವಿಚಾರಣೆ ವೇಳೆ ಸಾಗರದ ಮನು ಹೆಗಡೆ ಎಂಬಾತ ಗಾಂಜಾ ಪೂರೈಸಿದ್ದಾನೆ ಎಂದು ಯುವತಿ ಹೇಳಿಕೆ ನೀಡಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading