Connect with us

ದಕ್ಷಿಣ ಕನ್ನಡ

ಪುತ್ತೂರು ಹಿಟ್‌ ಅಂಡ್‌ ರನ್‌ – ದಂಪತಿಗಳು ಪ್ರಯಾಣಿಸುತ್ತಿದ್ದ ಸ್ಕೂಟರ್‌́ಗೆ ಮಂಗಳೂರು ಮೂಲದ ಬೆಂಝ್‌ ಕಾರು ಢಿಕ್ಕಿಯಾಗಿ ಪರಾರಿ

Published

on

Ad Widget

Ad Widget

Ad Widget

Ad Widget

ಪುತ್ತೂರು :  ದಂಪತಿಗಳು ಪ್ರಯಾಣಿಸುತ್ತಿದ್ದ ಸ್ಕೂಟರಿಗೆ ಪಾಂಡಿಚೇರಿ ರಿಜಿಸ್ಟ್ರೇಷನ್‌ ನ ಬೆಂಜ್‌ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಮಾಣಿ ಮೈಸೂರು ಹೆದ್ದಾರಿಯಲ್ಲಿ ಕಾವು ಸಮೀಪದ ಕಂಟ್ರಮಜಲು   ಎಂಬಲ್ಲಿ .ಫೆ 26 ರಂದು ನಡೆದಿದ್ದು, ತಡವಾಗಿ ವರದಿಯಾಗಿದೆ. ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಹಿಟ್‌ ಅಂಡ್‌ ರನ್‌ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೂಂದ್ರುಕೋಡಿ ನಿವಾಸಿ ಗಂಗಾಧರ ಗೌಡ ಹಾಗೂ ಹೇಮಾಲತಾ ಅಪಘಾತದಲ್ಲಿ  ಗಾಯಗೊಂಡವರು. ಇವರಿಬ್ಬರು ಸುಳ್ಯದಲ್ಲಿ ನಡೆದ ವಿವಾಹ ಸಮಾರಂಭಕ್ಕೆ ತೆರಳಿ ಮನೆಗೆ  ಸ್ಕೂಟರ್‌ ನಲ್ಲಿ ವಾಪಸ್ಸು ಬರುತ್ತಿದ್ದಾಗ, ಹಿಂದಿನಿಂದ  ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದ ಬಿಳಿ ಬಣ್ಣದ ಬೆಂಝ್‌ ಕಾರೊಂದು (PY 05 A 3789 )  ಒವರ್‌ ಟೆಕ್‌ ಮಾಡುವ ಭರದಲ್ಲಿ ಸ್ಕೂಟರ್‌ ಗೆ  ಢಿಕ್ಕಿ ಹೊಡೆದಿರುವುದಾಗಿ ಆರೋಪಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಅಪಘಾತದ ತೀವ್ರತೆಗೆ ದಂಪತಿಗಳು  ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುತ್ತಾರೆ.  ಗಂಗಾಧರ ಗೌಡರ  ತಲೆ, ಮುಖ, ಎದೆ  ಮತ್ತು  ಕಾಲಿಗೆ  ಗಾಯವಾಗಿದ್ದು, ಹೇಮಲತಾರವರ ತಲೆ, ಮುಖ, ಕೈ ಮತ್ತು ದೇಹದ ಇತರ ಕಡೆಗಳಲ್ಲಿ ಗಾಯವಾಗಿರುತ್ತದೆ. ಈ ವೇಳೆ ಅಪಘಾತಕ್ಕೆ ಕಾರಣವಾದ ಕಾರನ್ನು  ಅದರ ಚಾಲಕನು ನಿಲ್ಲಿಸದೇ, ಗಾಯಾಳುಗಳನ್ನು ಉಪಚರಿಸದೆ ಪುತ್ತೂರು ಕಡೆಗೆ ಪರಾರಿಯಾಗಿದ್ದಾನೆ.     

Ad Widget

Ad Widget <> Ad Widget

ಸ್ತಳೀಯರ ನೆರವಿನಿಂದ ಗಾಯಾಳುಗಳನ್ನು ಮೊದಲು ಸುಳ್ಯದ ಖಾಸಗಿ ಆಸ್ಫತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಫತ್ರೆಗೆ ದಾಖಲಿಸಲಾಗಿರುತ್ತದೆ. ಗಾಯಗೊಂಡ ವೇಳೆ ಕೋಮಾಕ್ಕೆ  ಜಾರಿದ್ದ ಗಂಗಾಧರ ಗೌಡರವರು ಸದ್ಯ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿ ಕಾರು ಚಾಲಕನ ವಿರುದ್ದ ಐಪಿಸಿ  ಕಲಂ 279, 337 ಐ ಪಿ ಸಿ. IMV ACT,1988 (U/s:134(a&b)) ರಂತೆ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ಕಾರಣವಾದ ಬೆಂಜ್‌ ಕಾರು ಮಂಗಳೂರಿನ ಖ್ಯಾತ ವಕೀಲರೊಬ್ಬರಿಗೆ ಸೇರಿದ್ದು ಎಂದು ಹೇಳಲಾಗುತ್ತಿದೆ.

Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ: ಸಂವಿಧಾನದ ಆಶಯಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಿ-– ಡಾ. ನಾರ್ಬರ್ಟ್ ಮಸ್ಕರೇನ್ಹಸ್

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನಲ್ಲಿ ನವೆಂಬರ್ 26ರಂದು ಆಯೋಜಿಸಲಾದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಕಲಾ ವಿಭಾಗದ ಡೀನ್ ಹಾಗೂ ಶೈಕ್ಷಣಿಕ ವಿಭಾಗದ ಕುಲಸಚಿವರಾದ ಡಾ. ನಾರ್ಬರ್ಟ್ ಮಸ್ಕರೇನ್ಹಸ್ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಹಕ್ಕುಗಳನ್ನು ನೀಡುವುದರ ಜೊತೆಗೆ ಕರ್ತವ್ಯಗಳನ್ನೂ ವಿಧಿಸಿದೆ. ಮೂಲಭೂತ ಹಕ್ಕುಗಳನ್ನು ಕೇಳುವ ಮೊದಲು, ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಕರ್ತವ್ಯಗಳನ್ನು ಪಾಲಿಸುವ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂದು ಸಂತ ಫಿಲೋಮಿನಾ ಕಾಲೇಜಿನ ಕಲಾ ವಿಭಾಗದ ಡೀನ್ ಹಾಗೂ ಶೈಕ್ಷಣಿಕ ವಿಭಾಗದ ಕುಲಸಚಿವರಾದ ಡಾ. ನಾರ್ಬರ್ಟ್ ಮಸ್ಕರೇನ್ಹಸ್ ಹೇಳಿದರು.

Ad Widget

Ad Widget alt="Ad Widget"/>

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನಲ್ಲಿ ನವೆಂಬರ್ 26ರಂದು ಆಯೋಜಿಸಲಾದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

Ad Widget

Ad Widget <> Ad Widget

ಭಾರತದ ಸಂವಿಧಾನವು ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಉದಾತ್ತ ಆಶಯಗಳನ್ನು ಒಳಗೊಂಡಿದೆ. ಸಂವಿಧಾನವು ಕೇವಲ ಕಾನೂನುಗಳ ಸಂಕಲನವಲ್ಲ; ಅದು ವೈವಿಧ್ಯಮಯ ಸಂಸ್ಕೃತಿ, ಭಾಷೆ ಮತ್ತು ಧರ್ಮಗಳನ್ನು ಹೊಂದಿರುವ ಭಾರತೀಯರನ್ನು ಒಗ್ಗೂಡಿಸುವ ಪ್ರಜಾಪ್ರಭುತ್ವದ ಬುನಾದಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಂವಿಧಾನದ ಪ್ರಸ್ತಾವನೆಯ ಮಹತ್ವವನ್ನು ವಿವರಿಸಿದ ಅವರು, ಪ್ರಜಾಪ್ರಭುತ್ವವೆಂದರೆ ಕೇವಲ ಚುನಾವಣೆಗಳಲ್ಲಿ ಮತ ಚಲಾಯಿಸುವುದಲ್ಲ. ಕಾನೂನಿನ ಆಳ್ವಿಕೆಯನ್ನು ಗೌರವಿಸುವುದು, ವ್ಯಕ್ತಿ ಸ್ವಾತಂತ್ರ್ಯವನ್ನು ಕಾಪಾಡುವುದು, ಸಮಾನತೆಯನ್ನು ಎತ್ತಿಹಿಡಿಯುವುದು ಮತ್ತು ಅಧಿಕಾರದಲ್ಲಿರುವವರನ್ನು ಹೊಣಗಾರರನ್ನಾಗಿಸುವುದೂಪ್ರಜಾಪ್ರಭುತ್ವ ದ ಪ್ರಮುಖ ಲಕ್ಷಣಗಳಾಗಿವೆ ಎಂದರು.

Ad Widget

Ad Widget

ಜಾತಿ ಮತ್ತು ಧರ್ಮದ ಆಧಾರದ ಮೇಲಿನ ತಾರತಮ್ಯ, ಕೋಮುವಾದ, ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿನ ಸುಳ್ಳು ಸುದ್ದಿಗಳು ಸಂವಿಧಾನದ ಮೌಲ್ಯಗಳಿಗೆ ಸವಾಲಾಗಿವೆ. ವಿದ್ಯಾರ್ಥಿಗಳು ಯಾವುದೇ ಮಾಹಿತಿಯನ್ನು ನಂಬುವ ಅಥವಾ ಹಂಚಿಕೊಳ್ಳುವ ಮೊದಲು ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಯುವಜನತೆ ವಿಮರ್ಶಾತ್ಮಕ ಚಿಂತನೆ, ವೈಜ್ಞಾನಿಕ ಮನೋಭಾವ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿಗಳು ಜಾತಿ, ಧರ್ಮ, ಭಾಷೆ ಮತ್ತು ಲಿಂಗದ ಭೇದವಿಲ್ಲದೆ ಪರಸ್ಪರ ಗೌರವದಿಂದ ನಡೆದುಕೊಳ್ಳಬೇಕು. ತಮ್ಮ ಮತದಾನದ ಹಕ್ಕನ್ನು ಜವಾಬ್ದಾರಿಯುತವಾಗಿ ಚಲಾಯಿಸುವುದರ ಜೊತೆಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿಯೂ ತೊಡಗಿಸಿಕೊಳ್ಳಬೇಕು. ಸಂವಿಧಾನದ ಆಶಯಗಳು ನಮ್ಮ ದೈನಂದಿನ ನಡವಳಿಕೆಯಲ್ಲಿ ಪ್ರತಿಫಲಿಸಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಅವರು ಮಾತನಾಡಿ, ಮೂಲಭೂತ ಹಕ್ಕುಗಳನ್ನು ಪ್ರತಿಪಾದಿಸುವುದರ ಜೊತೆಗೆ ಪ್ರತಿಯೊಬ್ಬರೂ ತಮ್ಮ ಮೂಲಭೂತ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ಪಾಲಿಸಬೇಕು. ಹಕ್ಕುಗಳು ಮತ್ತು ಕರ್ತವ್ಯಗಳ ನಡುವಿನ ಸಮತೋಲನವೇ ಜವಾಬ್ದಾರಿಯುತ ನಾಗರಿಕತ್ವದ ಆಧಾರವಾಗಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಸಂವಿಧಾನ ದಿನದ ಪ್ರತಿಜ್ಞಾ ವಿಧಿಯನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಎ. ಪಿ. ಮೊಂತೆರೊ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳು ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೌಲ್ಯಗಳು ಮತ್ತು ಆದರ್ಶಗಳನ್ನು ಎತ್ತಿಹಿಡಿದು, ಜವಾಬ್ದಾರಿಯುತ ನಾಗರಿಕರಾಗಿ ಕರ್ತವ್ಯಗಳನ್ನು ಪಾಲಿಸುವ ಪ್ರತಿಜ್ಞೆ ಕೈಗೊಂಡರು.

ಕಾರ್ಯಕ್ರಮದ ನಿರೂಪಣೆಯನ್ನು ಸಹಾಯಕ ಪ್ರಾಧ್ಯಾಪಕರಾದ ಪೃಥ್ವಿ ಕೆ. ನಿರ್ವಹಿಸಿದರು. ಪ್ರತೀಕ್ಷಾ ಸ್ವಾಗತಿಸಿ, ಶ್ರೀಮಣಿ ವಂದಿಸಿದರು. ದ್ವಿತೀಯ ಎಂ.ಎಸ್ಸಿ. ವಿದ್ಯಾರ್ಥಿನಿ ಸೌಪರ್ಣಿಕಾ ಮತ್ತು ತಂಡದವರು ಪ್ರಾರ್ಥನೆ ಸಲ್ಲಿಸಿದರು.

Ad Widget
Continue Reading

ನಿಧನ ವಾರ್ತೆ

Kankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್‌ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ಎರಡನೇ ತರಗತಿ ವಿದ್ಯಾರ್ಥಿಗೆ ಖಾಸಗಿ ಬಸ್‌ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಬಾಲಕ ಮೃತಪಟ್ಟ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ರೋಣ ಮೂಲದ ಮಂಗಳೂರಿನಲ್ಲಿ ಕೂಲಿ ಕಾರ್ಮಿಕರಾಗಿರುವ ಲಕ್ಷ್ಮೀ – ಅಶೋಕ್ ಎಂಬ ದಂಪತಿಯ ಮಗ ವಿಶ್ವಾಸ್ (8) ಮೃತ ಬಾಲಕ.

Ad Widget

Ad Widget

Ad Widget

Ad Widget

ಶಾಲೆಯಿಂದ ಮನೆ ಕಡೆಗೆ ನಡೆದುಕೊಂಡು ರಸ್ತೆ ದಾಟುತ್ತಿದ್ದ ಎರಡನೇ ತರಗತಿ ವಿದ್ಯಾರ್ಥಿ ಬಾಲಕನಿಗೆ ಖಾಸಗಿ ಬಸ್‌ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಬಾಲಕ ಮೃತಪಟ್ಟ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಗದಗ ಜಿಲ್ಲೆಯ ರೋಣ ಮೂಲದ ಮಂಗಳೂರಿನಲ್ಲಿ ಕೂಲಿ ಕಾರ್ಮಿಕರಾಗಿರುವ ಲಕ್ಷ್ಮೀ – ಅಶೋಕ್ ಎಂಬ ದಂಪತಿಯ ಮಗ ವಿಶ್ವಾಸ್ (8) ಮೃತ ಬಾಲಕ.

Ad Widget

Ad Widget <> Ad Widget

ಕಂಕನಾಡಿಯಲ್ಲಿ ಸೈಂಟ್ ಜೋಸೆಫ್ ಅನುದಾನಿತ ಶಾಲೆಯಲ್ಲಿ ಎರಡನೇ ಕ್ಲಾಸ್ ಕಲಿಯುತ್ತಿದ್ದ ಬಾಲಕ ಬುಧವಾರ ಸಂಜೆ ಶಾಲೆ ಬಿಟ್ಟ ನಂತರ ಹೊರಗೆ ಬಂದಿದ್ದ. ಯಾವಾಗಲೂ ತಾಯಿ ಕರೆದೊಯ್ಯಲು ಬರುತ್ತಿದ್ದು ತಾಯಿ ಬರದೇ ಇದ್ದುದರಿಂದ ಶಾಲೆಯಿಂದ ಹೊರಗೆ ಬಂದಿದ್ದ ಹುಡುಗ ಕಂಕನಾಡಿ- ಫಳೀರ್ ರಸ್ತೆ ಬದಿಯಲ್ಲಿ ಮನೆ ಕಡೆಗೆ ನಡೆದು ಹೋಗಲು ರಸ್ತೆ ದಾಟಿದ್ದ. ಈ ವೇಳೆ, ಸ್ಟೇಟ್‌ ಬ್ಯಾಂಕ್‌ ಕಡೆಗೆ ತೆರಳುತ್ತಿದ್ದ ರಾಜಲಕ್ಷ್ಮಿ ಎನ್ನುವ 4 ನಂಬರಿನ ಬಸ್ ಡಿಕ್ಕಿಯಾಗಿದ್ದು ಅದರ ಎಡಬದಿಯ ಹಿಂಭಾಗದ ಚಕ್ರ ಹರಿದು ಬಾಲಕ ತೀವ್ರ ಗಾಯಗೊಂಡಿದ್ದಾನೆ.

ಕೂಡಲೇ ಬಾಲಕನನ್ನು ಬಸ್ಸಿನ ಸಿಬಂದಿ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಒಯ್ದಿದ್ದು ಸಂಜೆಯ ವೇಳೆಗೆ ಬಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಬಸ್ ತಾಗಿದ ರಭಸಕ್ಕೆ ವಿದ್ಯಾರ್ಥಿ ರಸ್ತೆಗೆ ಎಸೆಯಲ್ಪಟ್ಟಿದ್ದು ದೇಹದ ಒಂದು ಬದಿಗೆ ತೀವ್ರ ಪೆಟ್ಟು ಬಿದ್ದಿತ್ತು. ಬಸ್‌ ಚಾಲಕನ ನಿರ್ಲಕ್ಷ್ಯದ ಬಗ್ಗೆ ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಬಿಗ್ ನ್ಯೂಸ್

Vitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ

Published

on

Ad Widget

Ad Widget

Ad Widget

Ad Widget

ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget

Ad Widget

Ad Widget

Ad Widget

ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget

Ad Widget alt="Ad Widget"/>

Ad Widget

ಚೆನ್ನಯ್ಯ ಪೂಜಾರಿ ಮದ್ಯಪಾನ ಮಾಡಿ ತನ್ನ ಅಣ್ಣನ ಮಗಳಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಯುವತಿ ಕತ್ತಿಯಿಂದ ಬೀಸಿದಾಗ ಅದು ಚೆನ್ನಯ್ಯ ಪೂಜಾರಿ ಅವರ ಎದೆಗೆ ತಾಗಿ ಗಂಭೀರ ಗಾಯಗೊಂಡಿದ್ದರು.

Ad Widget

Ad Widget <> Ad Widget

ಗಾಯಗೊಂಡ ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಶಿಕಾಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!