ರಾಷ್ಟ್ರೀಯ
ಭಾರತದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ ಕಂಪನಿಗಳಾಗಿ ಬದಲಾಗಿವೆ : ವಿಷಾದ ವ್ಯಕ್ತಪಡಿಸಿದ RSS ಮುಖ್ಯಸ್ಥ ಭಾಗ್ವತ್
ನವದೆಹಲಿ: ಇತ್ತೀಚಿಗಿನ ದಿನಗಳಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧ ಎಂಬಂತಹ ಪರಿಸ್ಥಿತಿ ನಮ್ಮ ದೇಶದಲ್ಲಿ ಇದೆ. ಯಾಕೆಂದರೆ ಆ ಎರಡೂ ಕ್ಷೇತ್ರಗಳು ತುಂಬಾ ದುಬಾರಿಯಾಗಿವೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಮೋಹನ್ ಭಾಗ್ವತ್ ತಿಳಿಸಿದ್ದಾರೆ.
ಅವರು ಆತ್ಮ ಮನೋಹರ ಜೈನ್ ದೇವಸ್ಥಾನದ ಕರ್ನಾಲ್ ಸಂಕೀರ್ಣದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ ವ್ಯವಹಾರದಂತೆ ನಡೆಯುತ್ತಿದೆ. ಶಿಕ್ಷಣ ಮತ್ತು ಆರೋಗ್ಯ ಪ್ರತಿಯೊಬ್ಬರಿಗೂ ತಲುಪುವಂತಾಗಬೇಕು. ಈ ಹಿಂದೆ ಈ ಕ್ಷೇತ್ರಗಳು ವ್ಯಾಪಾರೀಕರಣಗೊಂಡಿಲ್ಲವಾಗಿತ್ತು ಎಂದರು.
ಭಾರತದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ ಕಂಪನಿಗಳಾಗಿ ಬದಲಾಗಿವೆ ಎಂದು ವಿಷಾದಿಸಿದ ಭಾಗ್ವತ್ ಅವರು, ಎಲ್ಲರಿಗೂ ಆರೋಗ್ಯ ಮತ್ತು ಶಿಕ್ಷಣ ಸಿಗುವಂತಾಗಬೇಕು ಎಂದು ಈ ಸಂದರ್ಭದಲ್ಲಿ ಪ್ರತಿಪಾದಿಸಿದರು.
ಅಷ್ಟೇ ಅಲ್ಲ ನಮ್ಮ ದೇಶವನ್ನು ಬ್ರಿಟಿಷರು ಆಕ್ರಮಣ ಮಾಡುವ ಮೊದಲೇ ಶೇ.70ರಷ್ಟು ಭಾರತೀಯರು ಶಿಕ್ಷಣ ಪಡೆದಿದ್ದರು. ನಂತರ ಅವರು ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಲು ದೂಷಿಸಿದ್ದರು ಎಂದು ಭಾಗ್ವತ್ ಹೇಳಿದರು.
ನಮ್ಮ ದೇಶದ ಶೇ.70ರಷ್ಟು ಜನರು ವಿದ್ಯಾವಂತರಾಗಿದ್ದರು. ಅಂದು ನಿರುದ್ಯೋಗ ಇರಲಿಲ್ಲವಾಗಿತ್ತು. ಆದರೆ ಇಂಗ್ಲೆಂಡ್ ನಲ್ಲಿ ಕೇವಲ 17 ಪ್ರತಿಶತ ಜನರು ಮಾತ್ರ ವಿದ್ಯಾವಂತರಾಗಿದ್ದರು. ಆದರೆ ಇಂದು ಅವರ ಶಿಕ್ಷಣದ ಮಾದರಿ ನಮ್ಮ ದೇಶದಲ್ಲಿದೆ ಎಂದರು.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.
-
Uncategorized19 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized22 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ23 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
Uncategorized8 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಸ್ಥಳೀಯ24 hours agoKalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
-
Uncategorized6 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ7 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ಮಂಗಳೂರು5 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ


















