Connect with us

ಬಂಟ್ವಾಳ

High Court Rare Judgment ಬಂಟ್ವಾಳದ  ಹಲ್ಲೆ ಆರೋಪಿಗೆ ಜೈಲಿನ ಬದಲು ಅಂಗನವಾಡಿಯಲ್ಲಿ ವೇತನ ರಹಿತ ಸೇವೆಗೆ ಹೈ ಕೋರ್ಟು ಆದೇಶ – ಅಪರೂಪದ ತೀರ್ಪಿಗೆ ಕಾರಣವೇನು ಗೊತ್ತೆ?

Published

on



Ad Widget

Ad Widget

Ad Widget

Ad Widget
High Court Rare Judgment : ಮಂಗಳೂರು Mangalore: ಹಲ್ಲೆ ನಡೆಸಿದ ಅಪರಾಧಿಯ ವಯಸ್ಸು, ಸನ್ನಡತೆ, ಸಾಮಾಜಿಕ ಸ್ಥಿತಿ ಗತಿಯನ್ನು ಗಮನಿಸಿ ನ್ಯಾಯಾಲಯ ಶಿಕ್ಷೆಯಲ್ಲಿ ಔದಾರ್ಯ ತೋರಿಸಿದ ಅಪರೂಪದ ವಿದ್ಯಮಾನವೊಂದು ರಾಜ್ಯ ಹೈಕೋರ್ಟಿನಲ್ಲಿ (High Court)  ನಡೆದಿದೆ. ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ನಿವಾಸಿ ಐತಪ್ಪ ನಾಯ್ಕ್ ಔದಾರ್ಯಕ್ಕೆ ಪಾತ್ರರಾದ ಆರೋಪಿ.

ಐತಪ್ಪ ನಾಯ್ಕ್ ರವರು 15 ವರ್ಷಗಳ ಹಿಂದೆ 2008ರಲ್ಲಿ ನರೆ ಮನೆಯ ನಿವಾಸಿಗೆ ಹಲ್ಲೆ ನಡೆಸಿದ್ದರು. ಈ ಪ್ರಕರಣ ಹೈ ಕೋರ್ಟು ಮೆಟ್ಟೀಲೆರಿತ್ತು. ನ್ಯಾಯಾಲಯದಲ್ಲಿ ಆರೋಪಿಯು ತನ್ನ ತಪ್ಪನ್ನು ಒಪ್ಪಿಕೊಂಡು ಪಶ್ಚತಾಪ ವ್ಯಕ್ತಪಡಿಸುವ ಮೂಲಕ ಪ್ರಾಮಾಣಿಕತೆ ಪ್ರದರ್ಶಿಸಿದ್ದರು. ಅಲ್ಲದೇ ಆರೋಪಿಯು ಮಕ್ಕಳಿಲ್ಲದ ವೃದ್ದನಾಗಿದ್ದು, ವಯಸ್ಸಾದ ಪತ್ನಿಯು ಮನೆಯಲ್ಲಿರುವುದನ್ನು ಪರಿಗಣಿಸಿ ಕರ್ನಾಟಕ ಉಚ್ಚ ನ್ಯಾಯಾಲಯ ಅಚ್ಚರಿಯ ತೀರ್ಪು ನೀಡಿದೆ. ತೀರ್ಪಿನ ಪ್ರಕಾರ ಐತಪ್ಪರವರು ಸ್ಥಳೀಯ ಅಂಗನವಾಡಿಯಲ್ಲಿ ಒಂದು ವರ್ಷ ವೇತನ ಇಲ್ಲದಂತೆ ಸೇವೆ ಸಲ್ಲಿಸಬೇಕಿದೆ. ಈ ಮೂಲಕ ಜೈಲು ಸೇರಬೇಕಾಗಿದ್ದ ಅವರು ಕರೋಪಾಡಿಯ ಅಂಗನವಾಡಿಯಲ್ಲಿ ಶುಚಿತ್ವದ ಕೆಲಸದಲ್ಲಿ ತೊಡಗಿದ್ದಾರೆ.

Ad Widget

Ad Widget

Ad Widget

Ad Widget

ಏನಿದು ಪ್ರಕರಣ ?

Ad Widget

Ad Widget

Ad Widget alt="Ad Widget"/>

Ad Widget

2008ರಲ್ಲಿ ಜಾಗದ ವಿಚಾರದಲ್ಲಿ ಕಿರುಕುಳ ನೀಡಿದ ನೆರೆಮನೆಯ ವ್ಯಕ್ತಿಯೊಬ್ಬರಿಗೆ ಐತಪ್ಪ ನಾಯ್ಕ ಹಲ್ಲೆ ಮಾಡಿದ್ದರು. ಪ್ರಕರಣದಲ್ಲಿ ಬಂಟ್ವಾಳದ ಕೋರ್ಟ್, ಆರೋಪಿ ಐತಪ್ಪ ನಾಯ್ಕರಿಗೆ ಮೂರು ದಿನಗಳ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ರೂ. ದಂಡ ವಿಧಿಸಿತ್ತು. ಆದರೆ ದೂರುದಾರ ವ್ಯಕ್ತಿ ಆರೋಪಿಗೆ ಶಿಕ್ಷೆಯ ಪ್ರಮಾಣ ಹೆಚ್ಚಿಸಬೇಕೆಂದು ಮಂಗಳೂರಿನ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 2014ರಲ್ಲಿ ಆರೋಪಿ ಐತಪ್ಪ ನಾಯ್ಕನಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿ ತೀರ್ಪು ಕೊಟ್ಟಿತ್ತು.

Ad Widget

Ad Widget <> Ad Widget

ಮಂಗಳೂರಿನ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಐತಪ್ಪ ನಾಯ್ಕ್ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಮಕ್ಕಳಿಲ್ಲದ ವೃದ್ಧ ಮತ್ತು ಮನೆಯಲ್ಲಿ ಪತ್ನಿ ಒಬ್ಬಂಟಿಯಾಗಿರುವುದರಿಂದ ವಯಸ್ಸನ್ನು ನೋಡಿ ಶಿಕ್ಷೆಗೆ ವಿನಾಯ್ತಿ ನೀಡಬೇಕೆಂದು ವಕೀಲರು ಕೋರಿದ್ದರು. ಆರೋಪಿ ಐತಪ್ಪ ನಾಯ್ಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಲ್ಲದೆ, ಪಶ್ಚಾತ್ತಾಪ ವ್ಯಕ್ತಪಡಿಸಿದ್ದರಿಂದ ನ್ಯಾಯಾಧೀಶರು ಕೆಳಗಿನ ಕೋರ್ಟಿನ ಶಿಕ್ಷೆಯನ್ನು ರದ್ದುಗೊಳಿಸಿದ್ದಾರೆ. ಅದರ ಬದಲಿಗೆ ಒಂದು ವರ್ಷ ಕಾಲ ಸ್ಥಳೀಯ ಅಂಗನವಾಡಿಯಲ್ಲಿ ವೇತನ ಇಲ್ಲದೆ ಸೇವೆ ಮಾಡುವಂತೆ ಆದೇಶ ಮಾಡಿದ್ದಾರೆ.



Ad Widget

ಅದರಂತೆ, ಕರೋಪಾಡಿ ಗ್ರಾಮದ ಅಂಗನವಾಡಿಯಲ್ಲಿ ಬಡಪಾಯಿ ವೃದ್ಧ ಐತಪ್ಪ ನಾಯ್ಕ ಈಗ ಶುಚಿತ್ವದ ಕೆಲಸ ಆರಂಭಿಸಿದ್ದಾರೆ. “ಹೀಗೆ.. ಕೋರ್ಟ್ ಹೇಳಿದೆ.. ನಂಗ್ ಯಾರೂ ಗತಿಯಿಲ್ಲ.. ದುಡಿಯದೇ ನಂಗ್ ಹೊಟ್ಟೆ ತುಂಬುವುದಿಲ್ಲ.. ಆದರೆ, ಈಗ ಕಷ್ಟ ಆಗಿದೆ ಅಂತಾ ಮಾಧ್ಯಮವೊಂದರ ಮುಂದೆ ಐತಪ್ಪ ನಾಯ್ಕ್ ಅಳಲು ತೋಡಿಕೊಂಡಿದ್ದಾರೆ.

Ad Widget

Ad Widget
ಹಣ ಉಳ್ಳವರು ಶಿಕ್ಷೆಯಾದರೂ, ನಾನಾ ದಾರಿ ಹುಡುಕಿ ಬಚಾವು ಆಗುತ್ತಾರೆ. ಆದರೆ ಬಡ ಐತಪ್ಪ ನಾಯ್ಕರಿಗೆ ಬಂಟ್ವಾಳದ ವಕೀಲರೊಬ್ಬರು ಸಹಾಯ ಹಸ್ತ ನೀಡಿದ ಪರಿಣಾಮ ಹೈಕೋರ್ಟಿನಲ್ಲಿ ಕಠಿಣಶಿಕ್ಷೆಯಿಂದ ಪಾರಾಗಿದ್ದಾರೆ. ಆದರೇ ಈ ಇಳಿ ವಯಸ್ಸಿನಲ್ಲೂ ದುಡಿದು ತಿನ್ನುವ ಅನಿವಾರ್ಯತೆಯಲ್ಲಿರುವ ಅವರು ಉಚಿತವಾಗಿ ಅಂಗನವಾಡಿಯಲ್ಲಿ ಸೇವೆ ಸಲ್ಲಿಸುವ ಮೂಲಕ ಬದುಕಿನ ಬುತ್ತಿ ತುಂಬಿಸಲು ಹರ ಸಾಹಸ ಪಡುತ್ತಿರುವುದು ವಿಪರ್ಯಾಸವೇ ಸರಿ

Ad Widget
Click to comment

Leave a Reply

ಬಿಗ್ ನ್ಯೂಸ್

Bantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದಲ್ಲಿ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದಲ್ಲಿ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ ಮುಂಜಾನೆ ಸುಮಾರು 4 ಗಂಟೆ ವೇಳೆಗೆ ನಾಗೇಶ್ ಕುಲಾಲ್ ಎಂಬುವವರ ಮನೆಗೆ ಸಿಡಿಲು ಬಡಿದಿದೆ.

Ad Widget

Ad Widget <> Ad Widget

ಸಿಡಿಲಿನ ತೀವ್ರ ಹೊಡೆತಕ್ಕೆ ಮನೆಯ ಹಂಚು, ಗೋಡೆ ಹಾಗೂ ಕಿಟಕಿಗಳ ಗಾಜುಗಳು ಹಾನಿಗೊಂಡಿದ್ದು, ಮನೆ ಸಂಪೂರ್ಣ ಜಖಂಗೊಂಡಿದೆ. ಘಟನೆಯ ವೇಳೆ ಮನೆಯಲ್ಲಿದ್ದ ನಾಗೇಶ್ ಕುಲಾಲ್ ಅವರ ಪತ್ನಿ ಕುಶಲ ಅವರು ಅಸ್ವಸ್ಥರಾಗಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.



Ad Widget

ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲಿನ ಆರ್ಭಟದಿಂದ ವಿವಿಧೆಡೆ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

Continue Reading

ಬಿಗ್ ನ್ಯೂಸ್

Prabhakar Bhat-ಭರತ್ ಕುಮ್ಡೇಲ್ ಗೆ ಮೊದಲು ಎಸ್ಪಿ ಮಂಪರು ಪರೀಕ್ಷೆ ಮಾಡಿಕೊಳ್ಳಲಿ : ಕಲ್ಲಡ್ಕ ಪ್ರಭಾಕರ ಭಟ್‌

Published

on



Ad Widget

Ad Widget

Ad Widget

Ad Widget

ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಹಾಗೂ ಇತರ ಆರೋಪಿಗಳ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಆರೋಪಪಟ್ಟಿ ಬಿಡುಗಡೆ ಮಾಡಿರುವ ವಿಚಾರಕ್ಕೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಹಾಗೂ ಇತರ ಆರೋಪಿಗಳ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಆರೋಪಪಟ್ಟಿ ಬಿಡುಗಡೆ ಮಾಡಿರುವ ವಿಚಾರಕ್ಕೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಆರೋಪಪಟ್ಟಿ ಕುರಿತು ಪ್ರತಿಕ್ರಿಯಿಸಿದ ಅವರು, ಒಟ್ಟು 17 ಪ್ರಕರಣಗಳ ಪೈಕಿ 15 ಪ್ರಕರಣಗಳು ಬಿದ್ದುಹೋಗಿವೆ. ಇನ್ನುಳಿದ ಎರಡು ಪ್ರಕರಣಗಳಿಗೆ ಗೂಂಡಾ ಕಾಯ್ದೆ ಅನ್ವಯಿಸುವುದು ಸರಿಯೇ ಎಂದು ಪ್ರಶ್ನಿಸಿದರು. ನ್ಯಾಯಾಲಯದ ಸೂಚನೆಗಳಿಗೂ ಪೊಲೀಸರಿಗೆ ಒಪ್ಪಿಗೆ ಇಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

Ad Widget

Ad Widget <> Ad Widget

ತಮಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂದು ತಿಳಿಸಿದ ಪ್ರಭಾಕರ್ ಭಟ್, ತಮ್ಮ ಮೇಲೂ ಗೂಂಡಾ ಕಾಯ್ದೆ ಜಾರಿಗೊಳಿಸುವ ಯೋಚನೆ ಇರಬಹುದೇ ಎಂಬ ಅನುಮಾನ ವ್ಯಕ್ತಪಡಿಸಿದರು. ದೇಶವಿರೋಧಿ ಅಥವಾ ಸಮಾಜವಿರೋಧಿ ಚಟುವಟಿಕೆಗಳಲ್ಲಿ ಯಾರಾದರೂ ತೊಡಗಿದ್ದರೆ ಪ್ರಕರಣ ದಾಖಲಿಸಲಿ ಎಂದು ಹೇಳಿದರು.



Ad Widget

“ಹಿಂದೂಗಳ ಮೇಲೆ ದಾಳಿ ಮಾಡುವುದು ಶಾಂತಿಯೇ? ಪೊಲೀಸರು ಅಶಾಂತಿ ನಿರ್ಮಾಣ ಮಾಡುತ್ತಿದ್ದಾರೆಯೇ? ಪೊಲೀಸರು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು” ಎಂದು ಅವರು ಹೇಳಿದರು. ಪ್ರಕರಣದ ವಿಚಾರಣೆಯಲ್ಲಿ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಪೊಲೀಸರಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದೂ ಅವರು ಹೇಳಿದರು.

Ad Widget

Ad Widget

“ನಾವು ಶಾಂತಿಯಿಂದ ಜೀವನ ನಡೆಸುತ್ತಿದ್ದೇವೆ. ಅವರ ಕ್ರಮಕ್ಕೆ ನಮ್ಮ ಸಣ್ಣ ಪ್ರತಿಕ್ರಿಯೆ” ಎಂದು ಪ್ರಭಾಕರ್ ಭಟ್ ಹೇಳಿದರು.

ಭರತ್ ಕುಮ್ಡೇಲ್ ಗೆ ಮಂಪರು ಪರೀಕ್ಷೆ
ಭರತ್ ಕುಮ್ಡೇಲ್ ಅವರಿಗೆ ಮಂಪರು ಪರೀಕ್ಷೆ ನಡೆಸುವ ಪ್ರಸ್ತಾಪದ ಬಗ್ಗೆಯೂ ಪ್ರಭಾಕರ್ ಭಟ್ ಪ್ರಶ್ನೆ ಎತ್ತಿದರು. “ಮಂಪರು ಪರೀಕ್ಷೆಗೆ ಏಕೆ ಒಪ್ಪಿಕೊಳ್ಳಬೇಕು? ಅದಕ್ಕೆ ಏನು ಆಧಾರವಿದೆ?” ಎಂದು ಪ್ರಶ್ನಿಸಿದ ಅವರು, ಮೊದಲು ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಅವರೇ ಮಂಪರು ಪರೀಕ್ಷೆಗೆ ಒಳಗಾಗಲಿ ಎಂದು ಹೇಳಿದರು.

ತಾವು ಭರತ್ ಕುಮ್ಡೇಲ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿರುವುದನ್ನು ಉಲ್ಲೇಖಿಸಿದ ಅವರು, ಕೇವಲ ಫೋನ್‌ನಲ್ಲಿ ಮಾತನಾಡಿದ್ದಕ್ಕೆ ತಮ್ಮನ್ನು ವಿಚಾರಣೆಗೆ ಕರೆಯಲಾಗುತ್ತದೆಯೇ ಎಂದು ಪ್ರಶ್ನಿಸಿದರು. “ಮಾಧ್ಯಮದವರೂ ಫೋನ್ ಮಾಡುತ್ತೀರಿ; ನಿಮಗೂ ವಿಚಾರಣೆಗೆ ಕರೆಯುತ್ತಾರೆಯೇ?” ಎಂದು ಪ್ರಶ್ನಿಸಿದರು.

ಈ ಹಿಂದೆ ತಾವು ಜೈಲಿಗೆ ಹೋಗಿದ್ದು, ತಮ್ಮ ಪತ್ನಿಯನ್ನೂ ಜೈಲಿಗೆ ಕಳುಹಿಸಲಾಗಿದೆ ಎಂದು ಹೇಳಿದ ಅವರು, “ಇನ್ನು ಏನಿದ್ದರೂ ಗಲ್ಲಿಗೆ ಹಾಕುವುದು ಮಾತ್ರ ಬಾಕಿ. ತಾಕತ್ತಿದ್ದರೆ ನನ್ನನ್ನು ಗಲ್ಲಿಗೆ ಹಾಕಲಿ” ಎಂದು ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Ad Widget
Continue Reading

ಬಿಗ್ ನ್ಯೂಸ್

Prabhakar Bhat-ನನ್ನ ಮೇಲೆ ಹಾಕಿದ ಕೇಸ್ ನನ್ನ ಕೂದಲಿಗೂ ಸಮ ಅಲ್ಲ : ಗುಡುಗಿದ ಕಲ್ಲಡ್ಕ ಪ್ರಭಾಕರ ಭಟ್

Published

on



Ad Widget

Ad Widget

Ad Widget

Ad Widget

ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ವೈಯಕ್ತಿಕ ಕಾರಣಗಳಿಂದ ನಡೆದಿದ್ದು, ಅದನ್ನು ಸಂಘಟನೆಯ ಮೇಲೆ ಹೊರಿಸುವುದು ಏಕೆ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಶ್ನಿಸಿದ್ದಾರೆ. ಬಿ.ಸಿ.ರೋಡ್ ಚಲೋ ಪ್ರತಿಭಟನೆಯ ಬಳಿಕ ಮಾತನಾಡಿದ ಅವರು, ಅಬ್ದುಲ್ ರೆಹಮಾನ್ ಹಾಗೂ ಹತ್ಯೆ ಆರೋಪಿಗಳ ನಡುವಿನ ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ವೈಯಕ್ತಿಕ ಕಾರಣಗಳಿಂದ ನಡೆದಿದ್ದು, ಅದನ್ನು ಸಂಘಟನೆಯ ಮೇಲೆ ಹೊರಿಸುವುದು ಏಕೆ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಶ್ನಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಿ.ಸಿ.ರೋಡ್ ಚಲೋ ಪ್ರತಿಭಟನೆಯ ಬಳಿಕ ಮಾತನಾಡಿದ ಅವರು, ಅಬ್ದುಲ್ ರೆಹಮಾನ್ ಹಾಗೂ ಹತ್ಯೆ ಆರೋಪಿಗಳ ನಡುವಿನ ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದೆ ಎಂದು ಹೇಳಿದ್ದಾರೆ. ಈ ಕುರಿತು ಹೆಚ್ಚಿನ ವಿವರಣೆ ನೀಡುವುದಿಲ್ಲ. ಸಂಬಂಧಪಟ್ಟ ಊರಿಗೆ ಹೋದರೆ ಅಲ್ಲಿನವರೇ ವಿಚಾರವನ್ನು ಹೇಳುತ್ತಾರೆ ಎಂದರು.

Ad Widget

Ad Widget <> Ad Widget

“ವೈಯಕ್ತಿಕ ದ್ವೇಷವನ್ನು ಸಂಘಟನೆಯ ಮೇಲೆ ಹಾಕುವುದು ಏಕೆ? ಬೇರೆ ತಪ್ಪು ನಡೆದಿದ್ದರೆ ಪ್ರಕರಣ ದಾಖಲಿಸಿ” ಎಂದು ಅವರು ಹೇಳಿದರು.



Ad Widget

ಹತ್ಯೆಯನ್ನು ತಾವು ಪ್ರತಿಪಾದಿಸುವುದಿಲ್ಲ ಎಂದ ಪ್ರಭಾಕರ್ ಭಟ್, ಪ್ರಕರಣದಲ್ಲಿ ಸಂಬಂಧವಿಲ್ಲದ ಭರತ್ ಕುಮ್ಡೇಲ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಆರೋಪಿಸಿದರು. ಭರತ್ ಕುಮ್ಡೇಲ್ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿರುವುದನ್ನೂ ಅವರು ಪ್ರಶ್ನಿಸಿದರು.

Ad Widget

Ad Widget

ಭರತ್ ಕುಮ್ಡೇಲ್ ಬಂಧನದ ಬಳಿಕ ಅವರ ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಭರತ್ ಅವರ ಮಗುವಿಗೆ ಅನಾರೋಗ್ಯವಾದಾಗ ರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದೊಯ್ದ ವ್ಯಕ್ತಿಯ ಮೇಲೂ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದರು.

ಕುಟುಂಬಕ್ಕೆ ಸಹಾಯ ಮಾಡಿದವರ ಮೇಲೆಯೂ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಹೇಳಿದ ಅವರು, ಕಾನೂನು ಪ್ರಕ್ರಿಯೆ ಬಿಟ್ಟು ಗೃಹ ಸಚಿವರು ಅಥವಾ ಮುಖ್ಯಮಂತ್ರಿಗಳು ಹೇಳುತ್ತಾರೆ ಎಂಬ ಕಾರಣಕ್ಕೆ ಪ್ರಕರಣ ದಾಖಲಿಸಬಾರದು ಎಂದು ಹೇಳಿದರು.

ತಮ್ಮ ಮೇಲೂ ಪ್ರಕರಣ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ ಎಂದು ಹೇಳಿದ ಪ್ರಭಾಕರ್ ಭಟ್, “ಇದು ನನಗೆ ದೊಡ್ಡ ವಿಷಯವಲ್ಲ. ಈ ಪ್ರಕರಣ ನನ್ನ ಕೂದಲಿಗೆ ಸಮ” ಎಂದು ಪ್ರತಿಕ್ರಿಯಿಸಿದರು.

ಭರತ್ ಕುಮ್ದೇಲ್ ಅವರೊಂದಿಗೆ ತಾವು ದೂರವಾಣಿಯಲ್ಲಿ ಮಾತನಾಡಿರುವುದನ್ನು ಒಪ್ಪಿಕೊಂಡ ಅವರು, ʻʻನಾನು ಯಾರ ಹತ್ರ ಬೇಕಾದರೂ ಫೋನ್ ನಲ್ಲಿ ಮಾತನಾಡುತ್ತೇನೆ. ನನಗೆ ಅಂಬೇಡ್ಕರ್ ಕೊಟ್ಟ ಸಂವಿಧಾನ . ಭರತ್ ಜೊತೆ ನಾನು ಫೋನ್ ನಲ್ಲಿ ಮಾತನಾಡಿದ್ದೇನೆ. ನಾನು ಯಾರಿಗಾದರೂ ಹೊಡಿ ಅಥವಾ ಕೊಲ್ಲು ಎಂದು ಹೇಳಿದ್ದೇನಾ? ಅಂತಹ ಸಂಭಾಷಣೆ ಪೊಲೀಸರಿಗೆ ಸಿಕ್ಕಿದೆಯೇ?” ಎಂದು ಪ್ರಶ್ನಿಸಿದರು.

ಪೊಲೀಸರು ಈ ರೀತಿಯ ಕ್ರಮಗಳನ್ನು ಕೈಗೊಳ್ಳುವ ಮುನ್ನ ವಾಸ್ತವಾಂಶಗಳನ್ನು ಪರಿಶೀಲಿಸಬೇಕು. ಪೊಲೀಸರ ಈ ರೀತಿಯ ಹುಚ್ಚು ಸ್ವಲ್ಪ ಇಳಿಯಬೇಕು ಎಂದು ಅವರು ಆಗ್ರಹಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading