ರಾಜಕೀಯ
Siddaramaiah : ದಲಿತರು ಬಿಜೆಪಿ ಪಕ್ಷದ ಕಡೆ ತಿರುಗಿಯೂ ನೋಡಬಾರದು : ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ದಲಿತರು (Dalit Community) ಬಿಜೆಪಿ ( bjp) ಪಕ್ಷದ ಕಡೆ ತಿರುಗಿಯೂ ನೋಡಬಾರದು. ಅವರು ಮನುವಾದಿಗಳು( Manuvadi) ಮಾತ್ರವಲ್ಲದೇ ಸಾಮಾಜಿಕ ನ್ಯಾಯದ ವಿರೋಧಿಗಳು. ಮನುವಾದ, ಪುರೋಹಿತಶಾಹಿಗೆ ಯಾರು ಬೆಂಬಲ ನೀಡುತ್ತಾರೋ ಅವರು ಈ ದೇಶಕ್ಕೆ ಶಾಪ ಎಂದು ವಿವೇಕಾನಂದರು ( swamy Vivekananda) ಹೇಳಿದ್ದು ಅದರಂತೆ ಬಿಜೆಪಿ ದೇಶಕ್ಕಂಟಿದ ಶಾಪ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಜಿ ಶಾಸಕರಾದ ನಂಜುಂಡಸ್ವಾಮಿ, ಮನೋಹರ್ ಐನಾಪುರ, ಮೈಸೂರಿನ ಮಾಜಿ ಮೇಯರ್ ಪುರುಷೋತ್ತಮ್ ಹಾಗೂ ಅವರ ಬೆಂಬಲಿಗರು ಮಂಗಳವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸೇರ್ಪಡೆ ಕಾರ್ಯಕ್ರಮದ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು, ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ , 2018-19ರಲ್ಲಿ ಬಜೆಟ್ ಮಂಡಿಸಿದ ಸಂದರ್ಭ ಬಜೆಟ್ ಗಾತ್ರ 2.2 ಲಕ್ಷ ಕೋಟಿಯಷ್ಟಿತ್ತು. ಈಗ ಅದು 3.10 ಲಕ್ಷ ಕೋಟಿಯಾಗಿದೆ. ನನ್ನ ಆಡಳಿತಾವಧಿಯಲ್ಲಿ ಎಸ್ ಸಿ ಪಿ ಟಿಎಸ್ ಪಿ ಹಣ ಸಾವಿರ ಇತ್ತು, ಈಗ ಅದು 45 ಸಾವಿರ ಕೋಟಿ ಆಗಬೇಕಿತ್ತು. ಆದರೆ ಕೇವಲ 30 ಸಾವಿರ ಕೋಟಿ ಮಾತ್ರ ನೀಡಿದ್ದು ಈ ಸರ್ಕಾರದಲ್ಲಿ 15 ಸಾವಿರ ಕೋಟಿ ಅನ್ಯಾಯ ಮಾಡಿದ್ದಾರೆ. ಇವರು ಸಾಮಾಜಿಕ ನ್ಯಾಯ ನೀಡಲು ಸಾಧ್ಯವೇ? ನನ್ನ ಕಡೇ ಬಜೆಟ್ ನಲ್ಲಿ 1 ಕೋಟಿ ವರೆಗಿನ ಗುತ್ತಿಗೆಯಲ್ಲಿ ದಲಿತರಿಗೆ ಮೀಸಲಾತಿ ನೀಡಬೇಕು ಎಂದು ಹೇಳಿದ್ದೆ. ಅದು ಜಾರಿ ಆಯಿತಾ? ಈ ರೀತಿ ದಲಿತರಿಗೆ ಅಯಾಯವನ್ನು ಕಣ್ಣಾರೆ ನೋಡಿಕೊಂಡು ಅಲ್ಲಿ ಇರಲು ಹೇಗೆ ಸಾಧ್ಯ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದವರನ್ನು ಸ್ವಾಗತಿಸುತ್ತೇನೆ. ಈ ನಾಯಕರು ಬೇಷರತ್ ಆಗಿ ಪಕ್ಷ ಸೇರುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ 138 ವರ್ಷಗಳ ಇತಿಹಾಸವಿದ್ದು, ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟಿರುವ ಪಕ್ಷವಾಗಿದೆ. ದೇಶದಲ್ಲಿರುವ ಎಲ್ಲ ಧರ್ಮ, ಜಾತಿಯವರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಏಕೈಕ ಪಕ್ಷ. ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಪಕ್ಷ ಸಂವಿಧಾನಕ್ಕೆ ಗೌರವ ನೀಡಿ ಅದರ ಧ್ಯೇಯೋದ್ದೇಶಗಳನ್ನು ಪ್ರಾಮಾಣಿಕವಾಗಿ ಈಡೇರಿಸಿದೆ ಎಂದರು.
ಈ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲೇ ಬೇಕು. ನಂಂಜುಂಡ ಸ್ವಾಮಿ, ಮನೋಹರ ಅವರು ಬಿಜೆಪಿ ಬಿಟ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಇವರ ಸೇರ್ಪಡೆಯಿಂದ ಪಕ್ಷಕ್ಕೆ ಶಕ್ತಿ ಬಂದಿದೆ. ದಲಿತರು ಬಿಜೆಪಿ ಪಕ್ಷದ ಕಡೆ ತಿರುಗಿಯೂ ನೋಡಬಾರದು ಎಂದರು.
ಬಿಜೆಪಿ ಅಥವಾ ಜೆಡಿಎಸ್ ಗೆ ಸಂವಿಧಾನದ ಬಗ್ಗೆ ಗೌರವವಿಲ್ಲ. ನೀವು ಈ ಹಿಂದೆ ಗೋಲ್ವಾಲ್ಕರ್, ಸಾರ್ವಕರ್ ಅವರ ಭಾಷಣ ಹಾಗೂ ಬರವಣಿಗೆ ನೋಡಿದರೆ ಅವರು ಎಂದಿಗೂ ಸಂವಿಧಾನಕ್ಕೆ ಗೌರವ ನೀಡಿಲ್ಲ. ಎನ್ನುವುದು ಸ್ಪಷ್ಟವಾಗುತ್ತದೆ. ಬಿಜೆಪಿ ಮೇಲ್ಜಾತಿಯವರ ಪಕ್ಷ. ಶ್ರೀಮಂತ ವರ್ಗದ ಪಕ್ಷ. ಅವರು ತಳಸಮುದಾಯಗಳ ಶ್ರೇಯೋಭಿವೃದ್ಧಿ, ನಾಡಿನ ಅಭಿವೃದ್ಧಿ ಬಗ್ಗೆ ಯಾವತ್ತೂ ಆಲೋಚನೆ ಮಾಡಿಲ್ಲ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಕಾರ್ಯಕರ್ತರ ಸಭೆಯಲ್ಲಿ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಬೇಡಿ, ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಫರ್ಮಾನು ಹೊರಡಿಸಿದ್ದಾರೆ. ಆ ಮೂಲಕ ದೇಶದಲ್ಲಿ ಧರ್ಮ, ಜಾತಿಯ ಅಧಾರದಲ್ಲಿ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶ ಅವರದಾಗಿದೆ. ಅವರು ಭಾವನಾತ್ಮಕ ವಿಚಾರದ ಮೇಲೆ ಮತ ಕೇಳುತ್ತಿದ್ದು, ಜನ ರಾಜಕೀಯವಾಗಿ ಪ್ರಬುದ್ಧವಾಗಿದ್ದಾರೆ. ರಾಜ್ಯದಲ್ಲಿ ಹಿಂದುತ್ವದ ಅಧಾರದಲ್ಲಿ ಮತ ಯಾಚನೆ ಕಷ್ಟವಾಗಿರುವುದರಿಂದ ಹಣ ಬಳಸಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆ. ಅವರ ಬಳಿ ಅಕ್ರಮದಿಂದ ಸಂಪಾದಿಸಿದ ಟನ್ ಗಟ್ಟಲೆ ಹಣವಿದೆ ಎಂದು ಆರೋಪಿಸಿದರು.
ಭ್ರಷ್ಟಾಚಾರದ ಬಗ್ಗೆ ದಾಖಲೆ ಕೇಳುತ್ತಿದ್ದ ಬಿಜೆಪಿಯವರು ಅವರ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆಯಲ್ಲಿ 8 ಕೋಟಿ ಹಣ ಸಿಕ್ಕಿದೆ ಎಂದರೆ ಎಷ್ಟು ಪ್ರಮಾಣದಲ್ಲಿ ಲಂಚ ಹೊಡೆದಿರಬೇಕು? ಈಗ ಸರ್ಕಾರದ 40% ಕಮಿಷನ್ ಸಾಬೀತಾಗಿದೆ. ಇದಕ್ಕಿಂತ ಯಾವ ಸಾಕ್ಷಿ ಬೇಕು ಬೊಮ್ಮಾಯಿ ಅವರೇ? ನಿಮಗೆ ನೈತಿಕತೆ ಇದ್ದರೆ ನೀವು ರಾಜೀನಾಮೆ ನೀಡಬೇಕು. ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ, ಈಶ್ವರಪ್ಪ ರಾಜೀನಾಮೆ ನೀಡಿದ. ಮತ್ತೊಬ್ಬ ಗುತ್ತಿಗೆದಾರ ದಯಾಮರಣಕ್ಕೆ ರಾಷ್ಟ್ರಪತಿಗಳಿಗೆ ಪತ್ರ ಬರೆದ. ರುಪ್ಸಾ ಸಂಸ್ಥೆ ಪ್ರಧಾನಿಗಳಿಗೆ ಪತ್ರ ಬರೆದರು. ಕೆಂಪಣ್ಣ ಪತ್ರ ಬರೆದರು. ಇದಕ್ಕಿಂತ ದಾಖಲೆ ಬೇಕಾ? ಈ ಸರ್ಕಾರ ಈಗ ಶಾಸಕ ವಿರೂಪಾಕ್ಷಪ್ಪ ಅವರಿಗೆ ರಕ್ಷಣೆ ನೀಡುತ್ತಿದೆ. ಅವರನ್ನು ತಕ್ಷಣೆವೇ ಬಂಧನ ಮಾಡಲಿಲ್ಲ. ಅವರು ರಾಜೀನಾಮೆ ನೀಡಲು ಬಂದ ದಿನವೇ ಬಂಧಿಸಬೇಕಿತ್ತು. ಆ ಶಾಸಕ ಬೆಂಗಳೂರಿನಲ್ಲೇ ಇದ್ದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಇಂತಹ ಭ್ರಷ್ಟ ಸರ್ಕಾರ ರಾಜ್ಯದ ಇತಿಹಾಸದಲ್ಲೇ ಕಂಡಿಲ್ಲ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು.
ರಾಜಕೀಯ
Kumaraswamy-ಹಾಸನ ಡಿಸಿ ವಿರುದ್ಧ ಭ್ರಷ್ಟಾಚಾರ ಆರೋಪ: ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್
ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಹಾಸನದಿಂದ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾಗಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಏನಿದು ಪ್ರಕರಣ?
ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಿಗೆ ಸಂಬಂಧಿಸಿದ್ದು ಎನ್ನಲಾದ ವಾಟ್ಸಾಪ್ ಚಾಟ್‌ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು.
ಆರೋಪ ನಿರಾಕರಿಸಿದ್ದ ಜಿಲ್ಲಾಧಿಕಾರಿ
ಕುಮಾರಸ್ವಾಮಿ ಅವರ ಆರೋಪವನ್ನು ಜಿಲ್ಲಾಧಿಕಾರಿ ಲತಾ ಕುಮಾರಿ ಸಂಪೂರ್ಣವಾಗಿ ತಳ್ಳಿಹಾಕಿದ್ದರು. ತಮ್ಮ ವಿರುದ್ಧ ಮಾಡಿರುವ ಲಂಚದ ಆರೋಪಗಳು ಸುಳ್ಳು. ವಾಟ್ಸಾಪ್ ಚಾಟ್‌ಗಳನ್ನು ಎಡಿಟ್ ಮಾಡಲಾಗಿದೆ ಎಂದು ತಮ್ಮ ಆಪ್ತ ಸಹಾಯಕರು ತಿಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ. ತಾವು ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡುವುದಾಗಿ ಹೇಳಿದ್ದರು.
ಇನ್ನೊಂದೆಡೆ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಯನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಾಪ್ ಚಾಟ್‌ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿದ್ದರು.
ಎಫ್‌ಐಆರ್ ದಾಖಲು, ಕುಮಾರಸ್ವಾಮಿಗೆ ನೋಟಿಸ್
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 335 ಮತ್ತು 336(4) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನಕಲಿ ವಾಟ್ಸಾಪ್ ಚಾಟ್‌ಗಳ ಮೂಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ಸಂಬಂಧ ಮಾಹಿತಿ ಪಡೆಯುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಅಂತರ ರಾಜ್ಯ
Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!
ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಟೋಬರ್‌ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.
ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.
ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.
ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.
ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.
ಅಂತರ ರಾಜ್ಯ
Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.
ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.
-
ಕ್ರೈಂ17 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ17 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು15 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ15 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಸ್ಥಳೀಯ10 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಬಿಗ್ ನ್ಯೂಸ್17 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ11 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ15 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















