ರಾಜಕೀಯ
BJP MLA Madal Virupakshappa: ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕಾ? ಹಾಗಾದ್ರೆ ಮಾಡಾಳ್ ತಳಿಯ ಅಡಿಕೆ ಗಿಡಗಳನ್ನು ಬೆಳಸಿ : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಾಲೆಳೆಯುತ್ತಿರುವ ನೆಟ್ಟಿಗರು ಹಾಗೂ ವಿಪಕ್ಷಗಳು
BJP MLA Madal Virupakshappa : ಕೋಟ್ಯಾಂತರ ರೂಪಾಯಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಿಗೆ ಹೈ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ದೊರಕುತ್ತಲೇ, ನೀಡಿದ ಹೇಳಿಕೆಯೊಂದು ವ್ಯಂಗ್ಯ ಹಾಗೂ ಅಪಹಾಸ್ಯಕ್ಕೆ ಕಾರಣವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮೀಮ್ಸ್ ಟ್ರೋಲ್ ಗಳ ಪ್ರವಾಹವೇ ಹರಿಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಅನಾಯಸವಾಗಿ ದೊರಕಿರುವ ಈ ಅಸ್ತ್ರವನ್ನು ಕಳೆದುಕೊಳ್ಳಲು ವಿಪಕ್ಷಗಳು ಕೂಡ ತಯಾರಿಲ್ಲ . ಅವರು ಕೂಡ ಭರ್ಜರಿಯಾಗಿಯೇ ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚುತ್ತಿದ್ದಾರೆ.
‘ತಮ್ಮ ಪುತ್ರನ ಮನೆಯಲ್ಲಿ ದೊರೆತಿರುವ ಎಂಟು ಕೋಟಿ ರೂಪಾಯಿ ತಮ್ಮದೇ. ಅಡಿಕೆ ಮಾರಿ ಗಳಿಸಿದ ಹಣ ಎಂದು ಅವರು ಹೈಕೋರ್ಟಿನಿಂದ ರಿಲೀಫ್ ಸಿಗುತ್ತಲೇ ಹೇಳಿಕೆ ನೀಡಿದರು. ಈ ಹೇಳಿಕೆ ಟ್ರೋಲಿಗರಿಗೆ ಆಹಾರವಾಗಿದೆ . ಅಡಿಕೆ ಬೆಳೆ ಬೆಳೆಯುವ ಮೂಲಕ ಕೋಟಿ ಸಂಪಾದಿಸುವುದು ಅಸಾಧ್ಯ ಎಂದು ಅರಿತಿರುವ ಅವರು ನೆಟ್ಟಿಗರು ವಿರೂಪಾಕ್ಷಪ್ಪ ಹೇಳಿಕೆಯನ್ನು ಟೀಕಿಸುತ್ತಿದ್ದಾರೆ. ಇದಕ್ಕೆ ತುಪ್ಪ ಸುರಿದಿರುವ ಜೆಡಿಎಸ್ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಮೂಲಕ ವಯಂಗ್ಯ ಚಿತ್ರವೊಂದನ್ನು ಪೋಸ್ಟ್ ಮಾಡಿ ಕೆಣಕಿದೆ.
ವಿರೂಪಾಕ್ಷಪ್ಪ ಅವರಿಗೆ ಬುಧವಾರ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಪ್ರಕರಣ ವರದಿಯಾದ ಬಳಿಕ ತಲೆ ಮರೆಸಿಕೊಂಡಿದ್ದ ವಿರೂಪಾಕ್ಷಪ್ಪರವರು ಜಾಮೀನು ದೊರಕುತ್ತಲೇ ತವರು ಕ್ಷೇತ್ರದಲ್ಲಿ ಪ್ರತ್ಯಕ್ಷರಾಗಿ ಅಭಿಮಾನಿಗಳು ಮತ್ತು ಬೆಂಬಲಿಗರೊಂದಿಗೆ ಬೃಹತ್ ಮೆರವಣಿಗೆ ನಡೆಸಿದ್ದರು.
ಅದಾದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಅವರು, ‘ಲೋಕಾಯುಕ್ತರಿಗೆ ಸಿಕ್ಕ ಹಣ ತಮ್ಮ ಅಡಿಕೆ ತೋಟದಿಂದಬಂದಿದ್ದು’ ಎಂದು ಸಮರ್ಥಿಸಿಕೊಂಡಿದ್ದರು. ಅಡಿಕೆ ತೋಟದಲ್ಲಿ ಇಷ್ಟೆಲ್ಲಾ ಹಣ ಗಳಿಸಬಹುದೇ ಎನ್ನುವ ಟೀಕೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮಾರ್ಪಡಿಸಿದ ಚಿತ್ರವೊಂದನ್ನು ಜೆಡಿಎಸ್ ಟೀಟ್ ಮಾಡಿದ್ದು, ವಿರೂಪಾಕ್ಷಪ್ಪ ಅವರ ಕಾಲೆಳೆದಿದೆ.
ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕಾ? ಹಾಗಾದ್ರೆ ಮಾಡಾಳ್ ತಳಿಯ ಅಡಿಕೆ ಗಿಡಗಳನ್ನು ಬೆಳಸಿ ಕೋಟ್ಯಾಂತರ ರೂಪಾಯಿ ಸಂಪಾದಿಸಿ ಎಂದು ಜೆಡಿಎಸ್ ಟ್ವೀಟ್ ನಲ್ಲಿ ವಿರೂಪಾಕ್ಷಪ್ಪಅವರಿಗೆ ಟಾಂಗ್ ನೀಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಜೆಡಿಎಸ್, ಲಂಚ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕನನ್ನು ಬಿಜೆಪಿ ಕಾರ್ಯಕರ್ತರು ‘ಭಾರತ್ ಮಾತಾ ಕಿ ಜೈ’ ಎಂದು ಕೂಗುತ್ತಾ ಅದ್ದೂರಿ ಮೆರವಣಿಗೆ ಮಾಡಿದ್ದಾರೆ. ಭ್ರಷ್ಟರಿಗೆ ಜೈಕಾರ ಹಾಕುವುದೆ ಬಿಜೆಪಿ ಹೇಳುವ ದೇಶ ಪ್ರೇಮ. ನಿಮ್ಮ ನಾಚಿಕೆಯಿಲ್ಲದ ನಡೆಯನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಎಂದು ಅದು ಛೀಮಾರಿ ಹಾಕಿದೆ.
ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ನಾಪತ್ತೆಯಾಗಿದ್ದ ಶಾಸಕ ಜಾಮೀನು ಸಿಗುತ್ತಿದ್ದಂತೆ ಪ್ರತ್ಯಕ್ಷರಾಗಿದ್ದಾರೆ. ಅರಗ ಜ್ಞಾನೇಂದ್ರ ಅವರೇ ನಾಪತ್ತೆಯಾಗಿದ್ದ ವೇಳೆ ಅವರು ಎಲ್ಲಿದ್ದರು ಎಂದು ನಿಮಗೆ ಗೊತ್ತಿರಲಿಲ್ಲವೆ? ಜನರಿಗೆ ಎಷ್ಟು ಮಂಕುಬೂದಿ ಎರಚಬಲ್ಲಿರಿ?ಈ ಬಾರಿ ನಿಮ್ಮೆಲ್ಲರನ್ನೂ ಮನೆಯಲ್ಲಿ ಕೂರುವಂತೆ ಜನತೆ ಮಾಡಲಿದ್ದಾರೆ ನೆನಪಿರಲಿ ಎಂದು ಎಚ್ಚರಿಕೆ ನೀಡಿದೆ.
ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರೆ ನೀವು ಪದೇ ಪದೇ ರಾಜ್ಯಕ್ಕೆ ಬರುತ್ತಿರುವುದು ಮಾಡಾಳು ವಿರೂಪಾಕ್ಷ ಅವರ ಮನೆಯಲ್ಲಿ ಸಿಕ್ಕ ಹಣಕ್ಕಾಗಿ ಎಂದು ಜನರು ಮಾತನಾಡುತ್ತಿದ್ದಾರೆ. ಈ ಬಗ್ಗೆ ಮುಂದಿನ ಬಾರಿ ಬಂದಾಗ ಸ್ಪಷ್ಟೀಕರಣ ನೀಡಿ ಎಂದು ಜೆಡಿಎಸ್ ಒತ್ತಾಯಿಸಿದೆ.
ಪ್ರಕರಣದ ಹಿನ್ನೆಲೆ :
ದಾವಣಗೆರೆಯಚನ್ನಗಿರಿ ವಿಧಾನಸಭೆ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕೆಎಸ್ಡಿಎಲ್ನ ಅಧ್ಯಕ್ಷರಾಗಿದ್ದರು. ಕೆಎಸ್ಡಿಎಲ್ಗೆ ರಾಸಾಯನಿಕ ಕಚ್ಚಾವಸ್ತುಗಳ ಪೂರೈಕೆಗಾಗಿ ಗುತ್ತಿಗೆ ಪಡೆದಿದ್ದ ಗುದ್ದಿಗೆದಾರರಿಗೆ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಗುರುತರ ಆರೋಪವನ್ನು ಇವರು ಎದುರಿಸುತ್ತಿದ್ದಾರೆ. ಇದೇ ಪ್ರಕರಣದಲ್ಲಿ ಇವರ ಮಗ BWSSBಯಲ್ಲಿ ಅಧಿಕಾರಿಯಾಗಿರುವ ಮಾಡಾಳ್ ಪ್ರಶಾಂತ್ ತಮ್ಮ ಕಚೇರಿಯಲ್ಲೇ 40 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ್ದರು.
ಇದಾದ ನಂತರ ವಿರೂಪಾಕ್ಷಪ್ಪ ಮತ್ತು ಪುತ್ರನ ಬೆಂಗಳೂರಿನ ಕಛೇರಿಗಳು, ಮನೆಗಳು ಹಾಗೂ ಚನ್ನಗಿರಿಯ ಮನೆಗಳ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತರು ಅಪಾರ ಪ್ರಮಾಣದ ನಗದು ಜಪ್ತಿ ಮಾಡಿ ತನಿಖೆ ಮುಂದುವರೆಸಿದ್ದರು. ಈ ಎಲ್ಲ ಬೆಳವಣೆಗೆಗಳ ಮಧ್ಯೆ ಕೆಎಸ್ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಳ್ ವಿರೂಪಾಕ್ಷಪ್ಪ ರಾಜೀನಾಮೆ ಸಲ್ಲಿಸಿದ್ದರು. ನಿನ್ನೆ ಕೋರ್ಟ್ ಶಾಸಕರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಇಂದು ಶಾಸಕರು ಲೋಕಾಯುಕ್ತ ತನಿಖಾಧಿಕಾರಿಗಳ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಂಡುಬಂದಿದೆ
ರಾಜಕೀಯ
Kumaraswamy-ಹಾಸನ ಡಿಸಿ ವಿರುದ್ಧ ಭ್ರಷ್ಟಾಚಾರ ಆರೋಪ: ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್
ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಹಾಸನದಿಂದ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾಗಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಏನಿದು ಪ್ರಕರಣ?
ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಿಗೆ ಸಂಬಂಧಿಸಿದ್ದು ಎನ್ನಲಾದ ವಾಟ್ಸಾಪ್ ಚಾಟ್ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು.
ಆರೋಪ ನಿರಾಕರಿಸಿದ್ದ ಜಿಲ್ಲಾಧಿಕಾರಿ
ಕುಮಾರಸ್ವಾಮಿ ಅವರ ಆರೋಪವನ್ನು ಜಿಲ್ಲಾಧಿಕಾರಿ ಲತಾ ಕುಮಾರಿ ಸಂಪೂರ್ಣವಾಗಿ ತಳ್ಳಿಹಾಕಿದ್ದರು. ತಮ್ಮ ವಿರುದ್ಧ ಮಾಡಿರುವ ಲಂಚದ ಆರೋಪಗಳು ಸುಳ್ಳು. ವಾಟ್ಸಾಪ್ ಚಾಟ್ಗಳನ್ನು ಎಡಿಟ್ ಮಾಡಲಾಗಿದೆ ಎಂದು ತಮ್ಮ ಆಪ್ತ ಸಹಾಯಕರು ತಿಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ. ತಾವು ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡುವುದಾಗಿ ಹೇಳಿದ್ದರು.
ಇನ್ನೊಂದೆಡೆ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಯನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಾಪ್ ಚಾಟ್ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿದ್ದರು.
ಎಫ್ಐಆರ್ ದಾಖಲು, ಕುಮಾರಸ್ವಾಮಿಗೆ ನೋಟಿಸ್
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 335 ಮತ್ತು 336(4) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದರು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನಕಲಿ ವಾಟ್ಸಾಪ್ ಚಾಟ್ಗಳ ಮೂಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ಸಂಬಂಧ ಮಾಹಿತಿ ಪಡೆಯುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಅಂತರ ರಾಜ್ಯ
Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!
ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಟೋಬರ್ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.
ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.
ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.
ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.
ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.
ಅಂತರ ರಾಜ್ಯ
Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.
ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.
-
ಕ್ರೈಂ18 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ17 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು16 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಸ್ಥಳೀಯ11 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಅಪರಾಧ16 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಬಿಗ್ ನ್ಯೂಸ್18 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ12 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ16 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















