Connect with us

ಬಂಟ್ವಾಳ

ಮಾ.10ರಿಂದ ‘ಬಂಟ್ವಾಳ ಪ್ರಜಾಧ್ವನಿ ಯಾತ್ರೆ’ ಆರಂಭ: ಪೊಳಲಿ ಕ್ಷೇತ್ರದಲ್ಲಿ ಪೂಜೆಯ ಸಲ್ಲಿಸಿ 14 ದಿನ ಕಾಲ ಕ್ಷೇತ್ರದಲ್ಲಿ ಸಂಚಾರ – ಇನ್ನೊಬ್ಬರು ಮಾಡಿದ್ದನ್ನು ನಾನು ನನ್ನದೆಂದು ಹೇಳೋದಿಲ್ಲ, 5000 ಕೋಟಿಯ ಪ್ರಗತಿ ಕಾರ್ಯ 5 ವರ್ಷದಲ್ಲಿ ಮಾಡಿದ್ದೇನೆ – ರಮಾನಾಥ ರೈ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಗ್ರಾಮಗಳನ್ನು ತಲುಪುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಮಾರ್ಚ್ 10ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

Ad Widget

Ad Widget

Ad Widget

Ad Widget


ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಐದು ವರ್ಷಗಳ ಶಾಸಕತ್ವದ ಅವಧಿಯಲ್ಲಿ ಸಿದ್ಧರಾಮಯ್ಯ ಸರಕಾರ ಮೂಲಕ ಕ್ಷೇತ್ರದಾದ್ಯಂತ ಕೈಗೊಳ್ಳಲಾದ 5 ಸಾವಿರ ಕೋಟಿ ರೂಗಳ ಪ್ರಗತಿಕಾರ್ಯಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಯಾತ್ರೆ ಮೂಲಕ ಮಾಡಲಾಗುವುದು. ಒಂದೇ ದಿನ ಮೂರು ಗ್ರಾಮ ಪಂಚಾಯಿತಿಗಳನ್ನು ಒಳಗೊಂಡು ಯಾತ್ರೆಯನ್ನು ನಡೆಸಲಾಗುವುದು.

Ad Widget

Ad Widget alt="Ad Widget"/>

Ad Widget

ಪ್ರತಿ ದಿನ ಸಂಜೆ ಸಭೆ ನಡೆಸಲಾಗುತ್ತದೆ. ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಯಾತ್ರೆ ಆರಂಭಗೊಳ್ಳಲಿದೆ. ಪ್ರಮುಖ ಮುಖಂಡರು ಪ್ರತಿದಿನದ ಯಾತ್ರೆಯಲ್ಲಿ ಭಾಷಣಕಾರರಾಗಿ ಆಗಮಿಸಲಿದ್ದಾರೆ ಎಂದು ಹೇಳಿದರು.

Ad Widget

Ad Widget <> Ad Widget


ಇನ್ನೊಬ್ಬರು ಮಾಡಿದ್ದನ್ನು ಹೇಳೋದಿಲ್ಲ:
ಇನ್ನೊಬ್ಬರು ಮಾಡಿದ ಕೆಲಸವನ್ನು ನಾನು ಮಾಡಿದ್ದು ಎಂದು ಎಲ್ಲೂ ಹೇಳುವುದಿಲ್ಲ ಎಂದು ಹೇಳಿದ ರಮಾನಾಥ ರೈ, ಬಂಟ್ವಾಳದ ಒಳಚರಂಡಿ ಯೋಜನೆ ಮಂಜೂರಾತಿಯನ್ನು 2017ರ ಅಕ್ಟೋಬರ್ 10ರಂದು ನಾನು ಮಾಡಿಸಿದ್ದೇನೆ. ಇದಕ್ಕೆ ದಾಖಲಾತಿ ಇದೆ. ಆರು ವರ್ಷಗಳಾದರೂ ಕೆಲಸವಾಗಿಲ್ಲ ಎಂದು ಹೇಳಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ತನ್ನ ಅವಧಿಯಲ್ಲಿ ಆಗಿದ್ದು ಎಂದು ನೆನಪಿಸಿದ ಅವರು, ಬಂಟ್ವಾಳ ತಾಲೂಕಿನ ಹೆಮ್ಮೆ ಎನಿಸಿದ ಪಂಜೆ ಮಂಗೇಶರಾಯರ ಸ್ಮಾರಕ ಭವನ ನಿರ್ಮಾಣಕ್ಕೆ ಎಂಟು ಕೋಟಿಗಳನ್ನು ಮಂಜೂರುಗೊಳಿಸಿ ಕೆಲಸ ಆರಂಭಿಸಲಾಗಿತ್ತು. ಇದುವರೆಗೂ ಈಗಿನ ಶಾಸಕರ ಅವಧಿಯಲ್ಲಿ ಮುಗಿಸಿಲ್ಲ ಎಂದರು.

Ad Widget

Ad Widget


ಈಗ ಬಂಟ್ವಾಳ ಶಾಂತಿಯುತವಾಗಿದೆ ಎನ್ನುತ್ತಾರೆ. ಹಿಂದೆ ಮತೀಯ ಹೆಸರಲ್ಲಿ ಹತ್ಯೆಯನ್ನು ಕಾಂಗ್ರೆಸ್ ಮಾಡಿರಲಿಲ್ಲ. ಹತ್ಯೆ ಆರೋಪಿಗಳೊಂದಿಗೆ ತಿರುಗಾಟ ಮಾಡಿದವರು ಯಾರು ಎಂದು ಪ್ರಶ್ನಿಸಿದ ರೈ, ಮರಳು ಮಾಫಿಯಾ, ಇಸ್ಪೀಟ್ ಕ್ಲಬ್ ನವರ ಬ್ಯಾನರ್ ಕಟೌಟ್ ಗಳು ಈಗ ರಾರಾಜಿಸುತ್ತಿವೆ ಎಂದರು.


ಯಾತ್ರೆ ಕುರಿತು ಮುಖಂಡ ಪಿಯೂಸ್ ಎಲ್. ರೋಡ್ರಿಗಸ್ ಮಾಹಿತಿ ನೀಡಿದರು. ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಪದ್ಮಪ್ರಸಾದ್ ಜೈನ್, ಸುದರ್ಶನ ಜೈನ್, ಮಧುಸೂಧನ ಶೆಣೈ, ಅಬ್ಬಾಸ್ ಆಲಿ ಬಿ.ಎಂ., ಮಾಯಿಲಪ್ಪ ಸಾಲಿಯಾನ್. ಸುರೇಶ್ ಜೋರ, ಚಂದ್ರಶೇಖರ ಪೂಜಾರಿ, ಚಂದ್ರಶೇಖರ ಭಂಡಾರಿ, ಸುಧಾಕರ ಶೆಣೈ ಖಂಡಿಗ ಉಪಸ್ಥಿತರಿದ್ದರು

Ad Widget
Click to comment

Leave a Reply

ಅಪರಾಧ

Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget alt="Ad Widget"/>

Ad Widget

ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget <> Ad Widget

ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Bantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.23: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ. ಇವರು ಬಿ.ಸಿ.ರೋಡಿನ ಬ್ಯಾಂಕ್‌ವೊಂದರಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು.

Ad Widget

Ad Widget <> Ad Widget

ನವೆಂಬರ್ 20ರಂದು ಕವಿತಾ ಅವರು ನಾಪತ್ತೆಯಾಗಿದ್ದು, ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಗದರಿಸಿದ್ದರಿಂದ ಅಜ್ಜಿಯ ಮನೆಗೆ ಹೋಗುವುದಾಗಿ ತೆರಳಿದ್ದ ಕವಿತಾ ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!